ಆರೋಗ್ಯ
ಎಲ್ಲಾ ಮಂತ್ರಗಳ ರಾಜ: ಓಂಕಾರ
ಭಾರತೀಯ ಸಂಸ್ಕೃತಿಯಲ್ಲಿ ಓಂಕಾರಕ್ಕೆ ಅತೀ ಹೆಚ್ಚು ಮಹತ್ವವನ್ನು ನೀಡಲಾಗುತ್ತದೆ. ಓಂಕಾರವನ್ನು ಎಲ್ಲಾ ಮಂತ್ರಗಳ ರಾಜ ಎಂದು ಕರೆಯಲಾಗುತ್ತದೆ ಯಾಕೆಂದರೆ ಎಲ್ಲಾ ಮಂತ್ರಗಳ ಮೂಲವೇ ಓಂ. ಓಂಕಾರವು ಪರಬ್ರಹ್ಮನನ್ನು ಪ್ರತಿನಿಧಿಸುತ್ತದೆ, ವಾಸ್ತವಿಕವಾಗಿ ಓಂ ಪವಿತ್ರವಾದ ಪದವಾಗಿದ್ದು ಅನಂತವಾದ ಶಕ್ತಿಯನ್ನುಪ್ರತಿನಿಧಿಸುತ್ತದೆ.ಓಂ ಎನ್ನುವುದು ಒಂದು ಅಕ್ಷರವಲ್ಲ. ಅದು ಅ ಉ ಮ ಎಂಬ ಮೂರು ಅಕ್ಷರಗಳ ಸಂಗಮ. ಅ ಎಂದರೆ ಸೃಷ್ಟಿ, ಉ ಎಂದರೆ ವಿಕಸನ, ಮ ಎಂದರೆ ಮೌನ ಹಾಗೂ ವಿನಾಶ. ಹಾಗಾಗಿ ಈ ಒಂದೇ ಪದವು ಸೃಷ್ಟಿಯ ಆದಿ ಮತ್ತು ಅಂತ್ಯವನ್ನು ಪ್ರತಿಬಿಂಬಿಸುತ್ತದೆ.ಓಂಕಾರವನ್ನು ಪ್ರತಿದಿನ ಪಠಿಸಿದರೆ ನಿಮ್ಮ ಒತ್ತಡಗಳೆಲ್ಲಾ ನಿವಾರಣೆಯಾಗಿ ಮನಸ್ಸು ಆಹ್ಲಾದಕರವಾಗಿರುತ್ತದೆ.ಓಂಕಾರ ಪದವನ್ನು ಉಚ್ಚರಿಸುವಾಗ ನಿಮ್ಮ ದೇಹದಲ್ಲಿ ಉಂಟಾಗುವ ಕಂಪನವನ್ನು ಗಮನಿಸಬಹುದು, ಈ ಕಂಪನವು ಬೆನ್ನು ಮೂಳೆಗೆ ಒಳ್ಳೆಯದು. ಇದರಿಂದಾಗಿ ಬೆನ್ನುಮೂಳೆಯ ಕರ್ಯಕ್ಷಮತೆ ಹೆಚ್ಚಾಗುವುದು.
ಮ್ಯಾಟ್ ಮೇಲೆ ಕುಳಿತುಕೊಂಡು, ನಿಮ್ಮ ಕಣ್ಣುಗಳನ್ನು ಮುಚ್ಚಿ, ನಿಮ್ಮ ಎರಡೂ ಹುಬ್ಬಿನ ಮಧ್ಯಭಾಗವನ್ನು ಕೇಂದ್ರೀಕರಿಸಿ, ಓಂಕಾರವನ್ನು ನಿಧಾನವಾಗಿ ಪಠಿಸಿ. 21 ಬಾರಿ ಪಠಿಸುವುದು ಒಳ್ಳೆಯದು, ನಿಮ್ಮ ಉಸಿರಾಟದ ಮೂಲಕ ಪಠಣವನ್ನು ಲೆಕ್ಕಹಾಕಬಹುದು. ಓಂಕಾರವನ್ನು ಗಟ್ಟಿಧ್ವನಿಯಲ್ಲಿ ಅಥವಾ ಮೆಲುಧ್ವನಿಯಲ್ಲೂ ಪಠಿಸಬಹುದು. ಇದರಿಂದಾಗಿ ಮಾನಸಿಕ ಒತ್ತಡವು ನಿಧಾನವಾಗಿ ಕಡಿಮೆಯಾತ್ತದೆ ಎಂದು ಹೇಳಲಾಗುತ್ತದೆ.ಇದು ಮನಸ್ಸಿನಲ್ಲಿರುವ ಭಯ, ಅಸಮಾಧಾನವನ್ನು ನಿವಾರಣೆಗೊಳಿಸುತ್ತದೆ. ಓಂಕಾರದ ಪಠಣವು ನಿಮ್ಮ ಸುತ್ತಲಿನ ವಾತಾವರಣವನ್ನು ಶುದ್ಧಗೊಳಿಸಿ,ಧನಾತ್ಮಕ ಕಂಪನವನ್ನು ಉಂಟುಮಾಡುತ್ತದೆಓಂಕಾರದ ಉಚ್ಛಾರಣೆಯು ದೇಹದಲ್ಲಿರುವ ಎಲ್ಲಾ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆಓಂಕಾರದ ಪಠಣದಿಂದ ನಿಮ್ಮ ಹೃದಯದ ಆರೋಗ್ಯ ವೃದ್ಧಿಯಾಗುವುದು ಹಾಗೂ ರಕ್ತಸಂಚಾರವೂ ಆರೋಗ್ಯಕರವಾಗುವುದು.ಜರ‍್ಣಾಂಗವ್ಯವಸ್ಥೆಯನ್ನು ಸುಧಾರಿಸುತ್ತದೆ,ಓಂಕಾರವು ನಿಮ್ಮಲ್ಲಿರುವ ಉದಾಸೀನತೆಯನ್ನು ಬದಿಗೆ ಸರಿಸಿ, ಉತ್ಸಾಹವನ್ನು ಹೆಚ್ಚಿಸುತ್ತದೆ.ನಿದ್ರಾಹೀನತೆ ಸಮಸ್ಯೆಯಿಂದ ಬಳಲುತ್ತಿದ್ದಲ್ಲಿ, ಮಲಗುವ ಮುನ್ನ 5ನಿಮಿಷ ಓಂಕಾರವನ್ನು ಪಠಿಸಿ,ಓಂಕಾರದ ಪಠಣದಿಂದ ಶ್ವಾಸಕೋಶದ ಸಾರ‍್ಥ್ಯ ಹೆಚ್ಚುವುದು.ಮನುಷ್ಯನ ಮಾನಸಿಕ ಹಾಗೂ ದೈಹಿಕ ಸ್ವಾಸ್ಥ್ಯವನ್ನು ಹೆಚ್ಚಿಸುವುದು,ಓಂಕಾರದ ಉಚ್ಚಾರಣೆಯು ಗಂಟಲಿನ ಆರೋಗ್ಯಕ್ಕೂ ಒಳ್ಳೆಯದು, ಇದು ಥೈರಾಯ್ಡ್ ಗ್ರಂಥಿಯನ್ನು ಆರೋಗ್ಯವಾಗಿಡುವುದು.ಓಂಕಾರ ಪದವು ನಿಮ್ಮ ದೇಹದಲ್ಲಿ ಹೊಸ ಶಕ್ತಿಯನ್ನು ಪ್ರವಹಿಸಿ, ಯಾವುದೇ ಕೆಲಸದಲ್ಲೂ ನಿಮ್ಮ ಆತ್ಮವಿಶ್ವಾಸ ವೃದ್ಧಿಯಾಗುವಂತೆ ಮಾಡುತ್ತದೆ.
ಏಕಾಗ್ರತೆಯು ವೃದ್ಧಿಯಾಗಿ, ನಿಮ್ಮ ಗುರಿಯನ್ನು ಸಾಧಿಸಲು ಓಂಕಾರವು ಸಹಕರಿಸುವುದು. ಓಂಕಾರವನ್ನು ಪಠಿಸುವವರಿಗೆ ಮಾತ್ರವಲ್ಲದೇ, ಅವರ ಸುತ್ತಮುತ್ತಲಿನವರೂ ಓಂಕಾರದ ಕಂಪನವನ್ನು ಅನುಭವಿಸುವುದರಿಂದ ಇತರರಿಗೂ ಉಪಯೋಗವಾಗುವುದು
“ಓಂಕಾರವನ್ನು ಕಣ್ಣುಗಳನ್ನು ಮುಚ್ಚಿಕೊಂಡು ಜಪಿಸಬೇಕು”….
ನೀವು ಮೊದಲ ಬಾರಿ ಓಂಕಾರ ಪಠಣ ಆರಂಭಿಸುತ್ತಿದ್ದಲ್ಲಿ ಪ್ರತಿದಿನ 5 ನಿಮಿಷ ಮಾತ್ರ ಮಾಡಿ. ಪ್ರತಿದಿನ ಅಭ್ಯಾಸ ಮಾಡುತ್ತಾ ಹಿಡಿತ ಬಂದಂತೆ ಸಮಯವನ್ನು ನಿಧಾನವಾಗಿ ವಿಸ್ತರಿಸುತ್ತಾ ಬನ್ನಿ. ಆರಂಭದಲ್ಲೇ 5 ನಿಮಿಷಕ್ಕಿಂತ ಹೆಚ್ಚು ಅಭ್ಯಾಸ ಮಾಡಿದರೆ ದೇಹದಲ್ಲಿ ಉಂಟಾಗುವ ಶಕ್ತಿಯ ಕಂಪನದಿಂದ ಬಾಧೆಗೊಳಗಾಗಬಹುದು, ಯಾಕೆಂದರೆ ಓಂ ಜಪವು ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ. ಮುಖ್ಯವಾಗಿ ಮಹಿಳೆಯರು ಹೆಚ್ಚು ಓಂಕಾರವನ್ನು ಜಪಿಸುವುದರಿಂದ ಕಿಬ್ಬೊಟ್ಟೆಯ ಕುಹರದ ಮೇಲೆ ಕಂಪನಗಳು ಹೆಚ್ಚಾಗಿ ಸಂತಾನೋತ್ಪತ್ತಿಯ ಅಂಗಗಳಿಗೆ ಹಾನಿಯಾಗಬಹುದು.
ಓಂ’ ನ ಉಚ್ಛಾರಣೆ ಮಾಡುವುದರಿಂದ ಗಂಟಲಿನಲ್ಲಿ ಕಂಪನ ಉಂಟಾಗುತ್ತದೆ. ಇದರಿಂದ ಥೈರಾಯ್ಡ್ ಗ್ರಂಥಿಗಳ ಮೇಲೆ ಸಕಾರಾತ್ಮಕ ಪ್ರಭಾವ ಉಂಟಾಗುತ್ತದೆ. ನಿಮಗೆ ಭಯವಾಗುತ್ತಿದ್ದರೆ ಕಣ್ಣನ್ನು ಮುಚ್ಚಿಕೊಂಡು ಐದು ಬಾರಿ ದರ‍್ಘ ಶ್ವಾಸ ತೆಗೆದುಕೊಂಡು ‘ಓಂ’ ಎಂದು ಉಚ್ಛರಿಸಿ. ಶರೀರದ ವಿಷ ಅಂಶಗಳನ್ನು ದೂರ ಮಾಡುತ್ತದೆ.
ಇದನ್ನು ಉಚ್ಛಾರ ಮಾಡುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಹೃದಯವನ್ನು ಆರೋಗ್ಯವಾಗಿಡಲು ಸಹಕಾರಿಯಾಗಿದೆ. ‘ಓಂ’ ಎಂದು ಹೇಳುವುದರಿಂದ ರಕ್ತ ಸಂಚಾರ ಸುಗಮವಾಗುತ್ತದೆ. ಇದನ್ನು ಉಚ್ಛಾರ ಮಾಡುವುದರಿಂದ ಪಚನ ಕ್ರಿಯೆ ಸರಿಯಾಗುತ್ತದೆ. ಇದರಿಂದ ಶರೀರದಲ್ಲಿ ಯುವಾವಸ್ಥೆಯ ಸ್ಫರ‍್ತಿ ಹರಿದಾಡುತ್ತದೆ.ಆಯಾಸವನ್ನು ದೂರ ಮಾಡಲು ಸುಲಭ ಉಪಾಯ ‘ಓಂ’ ಉಚ್ಛಾರ ಮಾಡುವುದು.ಸರಿಯಾಗಿ ನಿದ್ರೆ ಬರದೇ ಇದ್ದ ಸಮಯದಲ್ಲಿ ಓಂ ಎಂದು ಪಠಣ ಮಾಡಿ. ಇದರಿಂದ ಮನಸ್ಸು ಶಾಂತವಾಗಿ ನಿದ್ರೆ ಚೆನ್ನಾಗಿ ಬರುತ್ತದೆ.ಓಂ’ ಉಚ್ಛಾರ ಮಾಡುವುದರಿಂದ ಉಂಟಾಗುವ ಕಂಪನದಿಂದ ಬೆನ್ನೆಲುಬು ಗಟ್ಟಿಯಾಗುತ್ತದೆ ಹಾಗೂ ಮುಂದೆ ಇದರಿಂದ ಯಾವುದೇ ಸಮಸ್ಯೆ ಕಾಣಿಸುವುದಿಲ್ಲ..
ಆರೋಗ್ಯ
ಮೂತ್ರಪಿಂಡದ ಕಲ್ಲು: ಮೂತ್ರಕೋಶದಲ್ಲಿ ಸಿಲುಕಿದರೆ ಏನಾಗುತ್ತದೆ?
ಬೆಂಗಳೂರು: ಮೂತ್ರಪಿಂಡದ ಕಲ್ಲು (Kidney Stone) ಮೂತ್ರಕೋಶಕ್ಕೆ ತಲುಪಿದ ಬಳಿಕ ಸುಲಭವಾಗಿ ಹೊರಹೋಗುತ್ತದೆ ಎಂಬುದು ಸಾಮಾನ್ಯ ನಂಬಿಕೆ. ಆದರೆ ಕೆಲವೊಮ್ಮೆ ಈ ಕಲ್ಲುಗಳು ಮೂತ್ರಕೋಶದಲ್ಲೇ ಸಿಲುಕಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.
ಸಾಮಾನ್ಯವಾಗಿ 4–5 ಮಿಮೀ ಗಾತ್ರದ ಕಲ್ಲುಗಳು ಸಹಜವಾಗಿ ಮೂತ್ರದ ಮೂಲಕ ಹೊರಹೋಗುತ್ತವೆ. ಆದರೆ 7 ಮಿಮೀಗಿಂತ ದೊಡ್ಡದಾದ ಅಥವಾ ಅಸಮ ಆಕಾರ ಹೊಂದಿರುವ ಕಲ್ಲುಗಳು ಮೂತ್ರನಾಳದಲ್ಲಿ ಸಿಲುಕಿಕೊಳ್ಳಬಹುದು. ಇದರಿಂದ ಕೆಳ ಹೊಟ್ಟೆ ನೋವು, ಮೂತ್ರ ವಿಸರ್ಜನೆ ವೇಳೆ ಉರಿ, ಮೂತ್ರದಲ್ಲಿ ರಕ್ತ ಹಾಗೂ ದುರ್ವಾಸನೆ ಕಾಣಿಸಬಹುದು.
ಮೂತ್ರಕೋಶ ಸರಿಯಾಗಿ ಖಾಲಿಯಾಗದಿರುವುದು ಕೂಡ ಪ್ರಮುಖ ಕಾರಣ. ಮೂತ್ರದ ಹರಿವು ಕಡಿಮೆಯಾಗುವ ಸ್ಥಿತಿ ಅಥವಾ ವೃದ್ಧರಾದ ಪುರುಷರಲ್ಲಿ ಕಾಣಿಸುವ ಪ್ರಾಸ್ಟೇಟ್ ವಿಸ್ತರಣೆ (BPH) ಸಮಸ್ಯೆಯಿಂದ ಕಲ್ಲುಗಳು ಸಿಲುಕಿಕೊಳ್ಳಬಹುದು. ಜೊತೆಗೆ ಮಧುಮೇಹ ಅಥವಾ ನರ ಸಮಸ್ಯೆಗಳೂ ಪರಿಣಾಮ ಬೀರುತ್ತವೆ.
ಕಲ್ಲುಗಳು ಹೆಚ್ಚು ಕಾಲ ಸಿಲುಕಿಕೊಂಡಿದ್ದರೆ ಸೋಂಕು (UTI), ಮೂತ್ರ ಧಾರಣ ತೊಂದರೆ ಹಾಗೂ ಮೂತ್ರಕೋಶದ ಉರಿಯೂತದಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಜ್ವರ, ತೀವ್ರ ನೋವು, ಮೂತ್ರವಿಸರ್ಜನೆ ಅಸಾಧ್ಯತೆ ಕಂಡುಬಂದರೆ ತಕ್ಷಣ ವೈದ್ಯಕೀಯ ಚಿಕಿತ್ಸೆ ಅಗತ್ಯ.
ತಜ್ಞರ ಪ್ರಕಾರ, ಸಾಕಷ್ಟು ನೀರು ಕುಡಿಯುವುದು, ಮೂತ್ರಕೋಶವನ್ನು ಸಂಪೂರ್ಣ ಖಾಲಿ ಮಾಡುವುದು ಹಾಗೂ ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ಈ ಸಮಸ್ಯೆಯನ್ನು ತಪ್ಪಿಸಬಹುದು. “ಡಬಲ್ ವಾಯ್ಡ್” ಎಂಬ ವಿಧಾನವು ಮೂತ್ರಕೋಶ ಸಂಪೂರ್ಣ ಖಾಲಿಯಾಗಲು ಸಹಕಾರಿಯಾಗುತ್ತದೆ.
ಒಟ್ಟಿನಲ್ಲಿ, ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯನ್ನು ನಿರ್ಲಕ್ಷಿಸದೇ ಆರಂಭಿಕ ಲಕ್ಷಣಗಳಲ್ಲೇ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ.
Note: This information is provided by Dr. Venkatswamy and the Hosasuddi.in health team. Before publishing, Hosasuddi.in follows medical guidelines and expert advice.
ಆರೋಗ್ಯ
ಮಧುಮೇಹ-ಬೊಜ್ಜಿಗೆ GLP-1 ಔಷಧ: ಪ್ರಯೋಜನದ ಜೊತೆ ಅಪಾಯವೂ!
ನವದೆಹಲಿ: ಟೈಪ್ 2 ಮಧುಮೇಹ ಮತ್ತು ಸ್ಥೂಲಕಾಯತೆಗೆ ಚಿಕಿತ್ಸೆ ನೀಡಲು ಬಳಸಲಾಗುತ್ತಿರುವ GLP-1 ಔಷಧಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಎಚ್ಚರಿಕೆ ನೀಡಿದೆ. ಈ ಔಷಧಗಳು ಪರಿಣಾಮಕಾರಿ ಆಗಿದ್ದರೂ, ಅವುಗಳನ್ನು ವೈದ್ಯರ ಸಲಹೆಯಿಲ್ಲದೆ ಬಳಸುವುದು ಅಪಾಯಕಾರಿ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.
ಆರೋಗ್ಯ ಇಲಾಖೆ ಹೇಳುವಂತೆ, GLP-1 ಔಷಧಗಳು ರಕ್ತದಲ್ಲಿನ ಸಕ್ಕರೆ ನಿಯಂತ್ರಣ ಮತ್ತು ತೂಕ ಇಳಿಕೆಗೆ ಸಹಕಾರಿ. ಆದರೆ ವಾಕರಿಕೆ, ವಾಂತಿ ಮುಂತಾದ ಸಾಮಾನ್ಯ ಅಡ್ಡಪರಿಣಾಮಗಳಿಂದ ಹಿಡಿದು ಮೂತ್ರಪಿಂಡ ಹಾನಿ, ಮೇದೋಜ್ಜೀರಕ ಗ್ರಂಥಿಯ ಉರಿಯೂತ, ಕರುಳಿನ ಅಡಚಣೆಗಳಂತಹ ಗಂಭೀರ ಸಮಸ್ಯೆಗಳಿಗೂ ಕಾರಣವಾಗಬಹುದು.
Type 2 Diabetes ಮತ್ತು Obesity ಹೊಂದಿರುವವರು ಈ ಔಷಧಗಳನ್ನು ಕಡ್ಡಾಯವಾಗಿ ನೋಂದಾಯಿತ ವೈದ್ಯರ ಮೇಲ್ವಿಚಾರಣೆಯಲ್ಲೇ ಬಳಸಬೇಕು ಎಂದು ಸೂಚಿಸಲಾಗಿದೆ. ಅನಧಿಕೃತ ಮಾರಾಟ ಮತ್ತು ಮೇಲ್ವಿಚಾರಣೆಯಿಲ್ಲದ ಬಳಕೆಯನ್ನು ತಡೆಯಲು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಗಿದೆ.
ಸಚಿವಾಲಯದ ಪ್ರಕಾರ, ಹೆಚ್ಚಿನ ತೂಕ, ವ್ಯಾಯಾಮದ ಕೊರತೆ ಮತ್ತು ಹೆಚ್ಚು ಸಕ್ಕರೆ ಸೇವನೆ ಟೈಪ್ 2 ಮಧುಮೇಹದ ಪ್ರಮುಖ ಕಾರಣಗಳಾಗಿವೆ. ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮದ ಮೂಲಕ ಈ ರೋಗವನ್ನು ತಡೆಗಟ್ಟಬಹುದು.
ಆರೋಗ್ಯ
ಜಂಕ್ ಫುಡ್ ಬೇಡ! ಹಣ್ಣುಗಳಿಂದ ಆರೋಗ್ಯಕರವಾಗಿ ತೂಕ ಹೆಚ್ಚಿಸಿಕೊಳ್ಳಿ
ಬೆಂಗಳೂರು: ಇಂದಿನ ಜೀವನಶೈಲಿಯಲ್ಲಿ ತೂಕ ಇಳಿಸುವುದು ಎಷ್ಟು ಕಷ್ಟವೋ, ಅತಿಯಾಗಿ ಸಪೂರ ಮೈಕಟ್ಟು ಹೊಂದಿರುವವರಿಗೆ ಆರೋಗ್ಯಕರವಾಗಿ ತೂಕ ಹೆಚ್ಚಿಸಿಕೊಳ್ಳುವುದು ಕೂಡ ಅಷ್ಟೇ ಸವಾಲಾಗಿದೆ. ತೂಕ ಹೆಚ್ಚಿಸುವುದು ಎಂದರೆ ಕೇವಲ ಕೊಬ್ಬು ಹೆಚ್ಚಿಸುವುದಲ್ಲ; ಬದಲಾಗಿ ದೇಹದಲ್ಲಿ ಸದೃಢ ಸ್ನಾಯುಗಳ (ಮಸಲ್ಸ್) ವೃದ್ಧಿ ಮುಖ್ಯ.
ಜಂಕ್ ಫುಡ್‌ಗಳಿಗೆ ಅವಲಂಬನೆ ಕಡಿಮೆ ಮಾಡಿ, ನೈಸರ್ಗಿಕ ಹಣ್ಣುಗಳನ್ನು ದಿನನಿತ್ಯದ ಆಹಾರದಲ್ಲಿ ಸೇರಿಸುವುದು ಉತ್ತಮ ವಿಧಾನವಾಗಿದೆ. ಕೆಲವು ಹಣ್ಣುಗಳು ದೇಹಕ್ಕೆ ಅಗತ್ಯ ಕ್ಯಾಲರಿ, ಪೋಷಕಾಂಶಗಳನ್ನು ನೀಡುವುದರ ಮೂಲಕ ತೂಕ ಹೆಚ್ಚಿಸಲು ಸಹಾಯ ಮಾಡುತ್ತವೆ.
ಬಾಳೆಹಣ್ಣು (Banana): ಕಾರ್ಬೋಹೈಡ್ರೇಟ್ ಮತ್ತು ಕ್ಯಾಲರಿಗಳಿಂದ ಸಮೃದ್ಧವಾಗಿರುವ ಬಾಳೆಹಣ್ಣು ತೂಕ ಹೆಚ್ಚಿಸಲು ಪರಿಣಾಮಕಾರಿ. ದಿನಕ್ಕೆ 2–3 ಬಾಳೆಹಣ್ಣು ತಿನ್ನುವುದು ಅಥವಾ ಹಾಲಿನೊಂದಿಗೆ ಬನಾನಾ ಶೇಕ್ ಸೇವಿಸುವುದು ವೇಗವಾಗಿ ಫಲ ನೀಡುತ್ತದೆ.
ಅವಕಾಡೋ (Avocado): ಆರೋಗ್ಯಕರ ಕೊಬ್ಬಿನ ಮೂಲವಾಗಿರುವ ಈ ಹಣ್ಣು ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನು ಒದಗಿಸಿ, ತೂಕವನ್ನು ಸಮತೋಲನದಿಂದ ಹೆಚ್ಚಿಸುತ್ತದೆ.
ಮಾವಿನ ಹಣ್ಣು (Mango): ನೈಸರ್ಗಿಕ ಸಕ್ಕರೆ ಮತ್ತು ಹೆಚ್ಚಿನ ಕ್ಯಾಲರಿಗಳಿಂದ ಕೂಡಿದ ಮಾವಿನ ಹಣ್ಣು ತೂಕ ಹೆಚ್ಚಿಸುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನೂ ವೃದ್ಧಿಸುತ್ತದೆ.
ಒಣಹಣ್ಣುಗಳು (Dry Fruits): ಅಂಜೂರ, ಖರ್ಜೂರ, ಒಣ ದ್ರಾಕ್ಷಿ ಮುಂತಾದವು ತೂಕ ಹೆಚ್ಚಿಸಲು ಅತ್ಯುತ್ತಮ. ರಾತ್ರಿ ನೆನೆಸಿಟ್ಟು ಬೆಳಗ್ಗೆ ಸೇವಿಸಿದರೆ ಹೆಚ್ಚು ಲಾಭಕರ.
ಇದಲ್ಲದೆ ಸಪೋಟ, ಹಲಸಿನ ಹಣ್ಣುಗಳೂ ಸಹ ಸಹಾಯಕ. ಆದರೆ ಕೇವಲ ಆಹಾರ ಸೇವನೆ ಸಾಕಾಗುವುದಿಲ್ಲ; ಲಘು ವ್ಯಾಯಾಮ ಮತ್ತು ಯೋಗಾಭ್ಯಾಸದಿಂದ ಆಹಾರ ಸ್ನಾಯುವಾಗಿ ಪರಿವರ್ತನೆಗೊಳ್ಳಲು ಸಹಾಯವಾಗುತ್ತದೆ.
ನಿಯಮಿತ ಆಹಾರ ಮತ್ತು ತಾಳ್ಮೆಯೊಂದಿಗೆ ಈ ಕ್ರಮ ಪಾಲಿಸಿದರೆ ಆರೋಗ್ಯಕರ ತೂಕ ಹೆಚ್ಚಿಸಿಕೊಳ್ಳುವುದು ಸಾಧ್ಯ. ಈ ಮಾಹಿತಿಯನ್ನು ಆರೋಗ್ಯ ತಜ್ಞರು ಹಂಚಿಕೊಂಡಿದ್ದು, ಅದರ ಆಧಾರದ ಮೇಲೆ ಹೊಸ ಸುದ್ದಿ (Hosasuddi) ತಂಡವು ಈ ಲೇಖನವನ್ನು ಪ್ರಕಟಿಸಿದೆ.
-
ಚುನಾವಣೆ14 hours agoDavangere By Election 2026 : 25 ಅಭ್ಯರ್ಥಿಗಳ ಕಣ: ಮುಸ್ಲಿಂ ಅಭ್ಯರ್ಥಿಗಳೇ ಗೇಮ್ಚೇಂಜರ್?
-
ದೇಶ15 hours agoX ನಲ್ಲಿ ವೈರಲ್ ಆದ CA ಕಥೆ: ನಂಬಲೇಬೇಕಾ ಅಥವಾ ಕೇವಲ ಕಥೆಯಾ?
-
ಚುನಾವಣೆ15 hours agoಎಐಎಡಿಎಂಕೆ vs ಡಿಎಂಕೆ: ಸೀಟ್ ಶೇರಿಂಗ್ನಲ್ಲಿ ಭಾರಿ ಪೈಪೋಟಿ
-
ದೇಶ14 hours agoಗಡಿಯಲ್ಲಿ ಹಾವು-ಮೊಸಳೆ ಕಾವಲು?: ಬಿಎಸ್ಎಫ್ ಹೊಸ ಯೋಜನೆ ಚರ್ಚೆಯಲ್ಲಿ
-
ದೇಶ16 hours agoತಾಲಿಬಾನ್ ವಿರುದ್ಧ ಪಾಕಿಸ್ತಾನದ ಆಪರೇಷನ್: ನೂರಾರು ಉಗ್ರರು ಸಾವು
-
ದೇಶ17 hours agoಇರಾನ್ಗೆ ಟ್ರಂಪ್ ಮತ್ತೊಂದು ಗಡುವು: 24 ಗಂಟೆ ವಿಸ್ತರಣೆ ಘೋಷಣೆ
-
ದೇಶ12 hours agoವೀರಕುಮಾರರ ತಪಸ್ಸು, ಭಕ್ತಿಯ ತೇಜಸ್ಸು: ಕೆಂಗೇರಿ ಕರಗದ ವೈಶಿಷ್ಟ್ಯ
-
ದೇಶ12 hours agoಬಾಹ್ಯಾಕಾಶದಲ್ಲಿ ಡೇಟಾ ಸೆಂಟರ್?: AI ರೇಸ್ನಲ್ಲಿ ಟೆಕ್ ದೈತ್ಯರ ಹೊಸ ಹೆಜ್ಜೆ
