Connect with us

ದೇಶ

ವಕ್ಫ್‌ ತಿದ್ದುಪಡಿ ಮಸೂದೆಯಲ್ಲಿ ಏನು ಬದಲಾವಣೆಯಾಗಿದೆ? ಹಿಂದೆ ಏನಿತ್ತು?

ನವದೆಹಲಿ: ವಿಪಕ್ಷಗಳು ಮತ್ತು ಮುಸ್ಲಿಮರ (Muslims) ವಿರೋಧದ ನಡುವೆ ಲೋಕಸಭೆಯಲ್ಲಿ (Lokasabha) ಇಂದು ವಕ್ಫ್ ತಿದ್ದುಪಡಿ ಮಸೂದೆ (Waqf Act Amendment Bill ಮಂಡನೆ ಆಗಲಿದೆ. ಮಧ್ಯಾಹ್ನ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಮಸೂದೆ ಮಂಡಿಸಲಿದ್ದಾರೆ.

ಮಸೂದೆಯನ್ನು ಎನ್‌ಡಿಎ (NDA) ಒಕ್ಕೂಟದ 298 ಸಂಸದರು ಬೆಂಬಲಿಸಿದ್ದಾರೆ. ಇಂದೆ ವೋಟಿಂಗ್ ನಡೆಯೋ ಸಾಧ್ಯತೆ ಹೆಚ್ಚಿರುವ ಕಾರಣ ಎನ್‌ಡಿಎಯ ಎಲ್ಲಾ ಸಂಸದರು ಕಡ್ಡಾಯವಾಗಿ ಕಲಾಪಕ್ಕೆ ಬರಬೇಕೆಂದು ಆಯಾ ಪಕ್ಷಗಳು ವಿಪ್‌ ಜಾರಿ ಮಾಡಿದೆ. ಇದೇ ರೀತಿ ಕಾಂಗ್ರೆಸ್‌ ಸದಸ್ಯರು ಕಡ್ಡಾಯವಾಗಿ ಹಾಜರಾಗಬೇಕೆಂದು ವಿಪ್‌ ಜಾರಿ ಮಾಡಲಾಗಿದೆ.

ವಕ್ಫ್ ತಿದ್ದುಪಡಿ ಬಿಲ್‌ನಲ್ಲೇನಿದೆ?
ವಕ್ಫ್ ಆಸ್ತಿಗಳ ಸರ್ವೆ ಮತ್ತು ನಿಯಂತ್ರಣ
* ಹಿಂದಿನ ಕಾನೂನು : ಸರ್ವೆಯನ್ನು ರಾಜ್ಯ ಸರ್ಕಾರ ನೇಮಿಸಿದ ಸರ್ವೆ ಆಯುಕ್ತರು ನಡೆಸ್ತಿದ್ದರು. ಈ ಪ್ರಕ್ರಿಯೆಯಲ್ಲಿ ಸರ್ಕಾರದ ನೇರ ಹಸ್ತಕ್ಷೇಪ ಕಡಿಮೆ ಇತ್ತು.
* ಹೊಸ ತಿದ್ದುಪಡಿ : ಸರ್ವೆಗಳನ್ನು ಡಿಸಿಗಳಿಗೆ ವರ್ಗಾಯಿಸಲಾಗಿದೆ. ಡಿಸಿಗಳ ಮೇಲ್ವಿಚಾರಣೆಯಲ್ಲಿ ರಾಜ್ಯದ ಕಂದಾಯ ಕಾನೂನುಗಳಿಗೆ ಅನುಗುಣವಾಗಿ ಸರ್ವೆ ನಡೆಯಲಿದೆ. ಇದರಿಂದ ಸರ್ಕಾರಕ್ಕೆ ವಕ್ಫ್ ಆಸ್ತಿಗಳ ಮೇಲೆ ಹೆಚ್ಚಿನ ನಿಯಂತ್ರಣ ಸಿಗಲಿದೆ.

ವಕ್ಫ್ ಘೋಷಣೆಗೆ ಷರತ್ತುಗಳು
* ಹಿಂದಿನ ಕಾನೂನು: ವಕ್ಫ್ ಘೋಷಿಸಲು ಯಾವುದೇ ನಿರ್ದಿಷ್ಟ ಅವಧಿಯ ಷರತ್ತು ಇರಲಿಲ್ಲ. ಯಾರಾದರೂ ಮುಸ್ಲಿಂ ವ್ಯಕ್ತಿ ತಮ್ಮ ಆಸ್ತಿಯನ್ನು ವಕ್ಫ್ ಆಗಿ ಘೋಷಿಸಬಹುದಿತ್ತು.
* ಹೊಸ ತಿದ್ದುಪಡಿ: ಇಸ್ಲಾಂ ಧರ್ಮವನ್ನು ಕನಿಷ್ಠ 5 ವರ್ಷ ಪಾಲಿಸಿದ ವ್ಯಕ್ತಿಯೊಬ್ಬರಿಗೆ ಮಾತ್ರ ವಕ್ಫ್ ಘೋಷಿಸುವ ಅಧಿಕಾರ ನೀಡಲಾಗಿದೆ. ಇದರಿಂದ ದುರುಪಯೋಗ ತಡೆಗಟ್ಟುವ ಉದ್ದೇಶವಿದೆ.

ಮಹಿಳೆಯರಿಗೆ ಆಸ್ತಿ ಹಕ್ಕು
* ಹಿಂದಿನ ಕಾನೂನು: ಮಹಿಳೆಯರಿಗೆ ಹಕ್ಕುಗಳನ್ನು ಸ್ಪಷ್ಟವಾಗಿ ಖಾತ್ರಿಪಡಿಸುವ ನಿರ್ದಿಷ್ಟ ಉಲ್ಲೇಖ ಇರಲಿಲ್ಲ.
* ಹೊಸ ತಿದ್ದುಪಡಿ: ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಖಾತ್ರಿಪಡಿಸುವ ನಿಬಂಧನೆ ಸೇರಿಸಲಾಗಿದೆ. ಇದು ಲಿಂಗ ಸಮಾನತೆಯತ್ತ ಒಂದು ಹೆಜ್ಜೆ ಎಂದು ಪರಿಗಣನೆ.

ವಕ್ಫ್ ಮಂಡಳಿಯ ರಚನೆ
* ಹಿಂದಿನ ಕಾನೂನು: ಕೇಂದ್ರ, ರಾಜ್ಯ ವಕ್ಫ್ ಮಂಡಳಿಗಳಲ್ಲಿ ಮಹಿಳೆಯರು ಅಥವಾ ಮುಸ್ಲಿಮೇತರ ಸದಸ್ಯರನ್ನು ಸೇರಿಸುವ ಕಡ್ಡಾಯ ನಿಯಮ ಇರಲಿಲ್ಲ.
* ಹೊಸ ತಿದ್ದುಪಡಿ: ಕೇಂದ್ರ ವಕ್ಫ್ ಮಂಡಳಿಯಲ್ಲಿ ಕನಿಷ್ಠ ಇಬ್ಬರು ಮಹಿಳೆಯರು, ಇಬ್ಬರು ಮುಸ್ಲಿಮೇತರ ಸದಸ್ಯರನ್ನು ನೇಮಿಸುವುದು ಕಡ್ಡಾಯ. ಇದೇ ರೀತಿ ರಾಜ್ಯ ವಕ್ಫ್ ಮಂಡಳಿಗಳಲ್ಲಿಯೂ ಈ ಬದಲಾವಣೆ ತರಲಾಗಿದೆ.

ಲೆಕ್ಕಪರಿಶೋಧನೆ
* ಹಿಂದಿನ ಕಾನೂನು: ವಕ್ಫ್ ಮಂಡಳಿಗಳ ಖಾತೆಗಳ ಲೆಕ್ಕಪರಿಶೋಧನೆಯನ್ನು ಮಂಡಳಿಯೇ ನೇಮಿಸಿದ ಲೆಕ್ಕಪರಿಶೋಧಕರು ಮಾಡುತ್ತಿದ್ದರು. ರಾಜ್ಯ ಸರ್ಕಾರಕ್ಕೂ ಆಡಿಟ್ ಮಾಡುವ ಅವಕಾಶ ಇತ್ತು.
* ಹೊಸ ತಿದ್ದುಪಡಿ: ರಾಜ್ಯ ಸರ್ಕಾರವು ರಚಿಸುವ ಲೆಕ್ಕಪರಿಶೋಧಕರ ಸಮಿತಿಯೇ ಆಡಿಟ್ ನಡೆಸಬೇಕು. ಇದರಿಂದ ಸರ್ಕಾರದ ಮೇಲ್ವಿಚಾರಣೆ ಹೆಚ್ಚಾಗಲಿದೆ.

ಆಸ್ತಿ ನೋಂದಣಿ ಮತ್ತು ಪಾರದರ್ಶಕತೆ
* ಹಿಂದಿನ ಕಾನೂನು: ವಕ್ಫ್ ಆಸ್ತಿಗಳ ನೋಂದಣಿ ಮತ್ತು ವಿವರಗಳ ಸಲ್ಲಿಕೆಗೆ ಕಡ್ಡಾಯ ಸಮಯ ಮಿತಿ ಇರಲಿಲ್ಲ.
* ಹೊಸ ತಿದ್ದುಪಡಿ: ಎಲ್ಲ ವಕ್ಫ್ ಆಸ್ತಿಗಳನ್ನು ಕಾಯಿದೆಯಡಿ ನೋಂದಾಯಿಸುವುದು ಕಡ್ಡಾಯ. 6 ತಿಂಗಳೊಳಗೆ ವಿವರ ಸಲ್ಲಿಸಬೇಕು. ಪ್ರತಿ 5 ವರ್ಷಕ್ಕೊಮ್ಮೆ ಸರ್ವೆ ನಡೆಸಬೇಕು.

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending