ರಾಜಕೀಯ
ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ: ಸಿಎಂ ಘೋಷಣೆ – PERMANENT SERVICE FOR POURAKARMIKAS
ಬೆಂಗಳೂರು: “ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.
ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು ಪೌರ ಕಾರ್ಮಿಕ ಸಮುದಾಯದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, “ಬಸವಣ್ಣನವರ ವಚನದಂತೆ ಕಾಯಕವೇ ಕೈಲಾಸ ಎಂದು ಶ್ರಮಿಸುತ್ತಿದ್ದೀರಿ. ಪೌರ ಕಾರ್ಮಿಕರು ಮಾಡುವ ಕೆಲಸಕ್ಕೆ ಇತರರು ಬರುವುದು ಕಡಿಮೆ. ಹೀಗಾಗಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿ, ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿ ಮತ್ತು ಕರ್ತವ್ಯ” ಎಂದರು.
“ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಲಿ, ಪೌರ ಕಾರ್ಮಿಕರಾಗಲಿ ಯಾವುದೇ ವ್ಯತ್ಯಾಸವಿಲ್ಲ. ಎಲ್ಲ ಸೇವಗಳೂ ಪವಿತ್ರವೇ. ನಿಮ್ಮನ್ನು ಅವಮಾನಕಾರಿಯಾಗಿ ನಡೆಸಿಕೊಳ್ಳುವುದು ಸರಿಯಲ್ಲ. ನಿಮಗೂ ವೃತ್ತಿಗೌರವ, ಘನತೆ ಸಿಗಬೇಕು. ಇದಕ್ಕಾಗಿ ಸೇವೆ ಕಾಯಂ ಮಾಡಲಾಗುವುದು” ಎಂದರು.
ವಾಹನ ಚಾಲಕರಿಗೂ ಕಾಯಂ: “ಪೌರ ಕಾರ್ಮಿಕರ ಜೊತೆಗೆ ವಾಹನ ಚಾಲಕರ ಸೇವೆಯನ್ನೂ ಗುತ್ತಿಗೆಯಿಂದ ತೆಗೆದು ಕಾಯಂ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಘೋಷಿಸಿದರು. ಪೌರ ಕಾರ್ಮಿಕರ ಮಕ್ಕಳು ವಿದ್ಯಾವಂತರಾಗಬೇಕು. ವಿದ್ಯಾವಂತರಾದರೆ ಮಾತ್ರ ಸ್ವಾಭಿಮಾನಿಗಳಾಗಲು ಸಾಧ್ಯ. ಮಕ್ಕಳಿಗೆಲ್ಲಾ ಶಿಕ್ಷಣ ಕೊಡಿಸಿ. ಪ್ರತಿಯೊಬ್ಬರೂ ಪ್ರತಿಭಾವಂತರೇ. ಅವಕಾಶ ಸಿಗುವುದಷ್ಟೆ ಮುಖ್ಯ. ಅವಕಾಶ ಸಿಕ್ಕರೆ ಎಲ್ಲರೊಳಗಿನ ಪ್ರತಿಭೆ ಹೊರಗೆ ಬರುತ್ತದೆ ಎಂದರು.
ನಗದು ರಹಿತ ಆರೋಗ್ಯ ಕಾರ್ಡ್: “ಪೌರ ಕಾರ್ಮಿಕ ಸಮುದಾಯಕ್ಕೆ ನಗದು ರಹಿತ ಆರೋಗ್ಯ ಕಾರ್ಡ್ ನೀಡಲಾಗುವುದು. ಕಾರ್ಮಿಕರ ಸಿಂಧುತ್ವದ ಸಮಸ್ಯೆ ಬಗೆಹರಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಿಎಂ ಭರವಸೆ ನೀಡಿದರು. ಪೌರ ಕಾರ್ಮಿಕರ ಸಂಘಟನೆ ಮತ್ತು ಹೋರಾಟದಲ್ಲಿ ನಾರಾಯಣ್ ಅವರ ಪಾತ್ರ ದೊಡ್ಡದಿದೆ. ಪೌರ ಕಾರ್ಮಿಕ ಸಮುದಾಯದಿಂದ ಬಂದು ಮೇಯರ್ ಆದವರಲ್ಲಿ ನಾರಾಯಣ್ ಅವರು ಮೊದಲಿಗರು” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
“ನಾರಾಯಣ್ ಅವರು ಸರ್ಕಾರದ ಮುಂದೆ ಇಟ್ಟ ಪೌರ ಕಾರ್ಮಿಕರ ಸಮಸ್ಯೆಗಳಲ್ಲಿ ಹಲವನ್ನು ನಮ್ಮ ಸರ್ಕಾರ ಬಗೆಹರಿಸಿದೆ. ಪೌರ ಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದು ಪಡಿಸಿ ಪಾಲಿಕೆಗಳಿಂದಲೇ ಸಂಬಳ ಪಾವತಿಸುವ ವ್ಯವಸ್ಥೆ ಜಾರಿಗೆ ಮಾಡಿದ್ದು ನಮ್ಮ ಸರ್ಕಾರ. ಮೈಸೂರಿನಲ್ಲಿ 524 ಮನೆಗಳನ್ನು ಕೊಡಿಸುವಲ್ಲಿ, ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಕಲ್ಪಿಸಿ ಒಂದು ಮನೆಗೆ 6.5 ಲಕ್ಷ ರೂಪಾಯಿ ಹಣ ಕೊಡ್ತಾ ಇರುವುದು ನಮ್ಮ ಸರ್ಕಾರ ಮಾತ್ರ ಎಂದರು.
ಪೌರ ಕಾರ್ಮಿಕರ ಸಂಬಳವನ್ನು 7 ಸಾವಿರದಿಂದ 17 ಸಾವಿರಕ್ಕೆ ಏರಿಸಿದ್ದು ಇದೇ ಸಿದ್ದರಾಮಯ್ಯ. ನೀವೆಲ್ಲಾ ಈಗ ಕಷ್ಟ ಪಟ್ಟು ಶುಚಿತ್ವದ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಮಕ್ಕಳೂ ಇದೇ ಕೆಲಸ ಮಾಡಬಾರದು. ನಿಮ್ಮ ಮಕ್ಕಳು ಇತರ ಕೆಲಸಗಳಿಗೆ ಹೋಗಬೇಕು. ಆ ರೀತಿ ನೀವು ಬೆಳೆಯಬೇಕು. ಸಮಾಜದ ಮುಖ್ಯವಾಹಿನಿಗೆ ಬರಬೇಕು. ಪ್ರತೀ ವರ್ಷ ಒಂದು ಸಾವಿರ ಪೌರ ಕಾರ್ಮಿಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸಲಾಗುತ್ತಿದೆ. ಪೌರ ಕಾರ್ಮಿಕ ಸಮುದಾಯವೂ ವಿಶ್ವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ದೇಶ
ಶಾಸಕರಿಗೆ ಡಿಕೆಶಿ ಎಚ್ಚರಿಕೆ – ಮಾಧ್ಯಮ ಎದುರು ಜಾಗ್ರತೆ ಇರಲಿ
ಬೆಂಗಳೂರು: ಪಕ್ಷದ ಹಿತದೃಷ್ಟಿಯಿಂದ ತೆಗೆದುಕೊಳ್ಳಲಾದ ತೀರ್ಮಾನಗಳ ಹಿಂದೆ ಸಂಪೂರ್ಣ ಮಾಹಿತಿ ಸಂಗ್ರಹವೇ ಕಾರಣ ಎಂದು ಉಪ ಮುಖ್ಯಮಂತ್ರಿ D. K. Shivakumar ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ Naseer Ahmed ಅವರನ್ನು ಬಿಡುಗಡೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಅವರು ಪ್ರತಿಕ್ರಿಯೆ ನೀಡಿದರು.
ಸದಾಶಿವನಗರದ ನಿವಾಸ ಹಾಗೂ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವಕುಮಾರ್, “ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯನ್ನು ಹಿಂದೆ ಸರಿಸಲು ಪಕ್ಷ ನಜೀರ್ ಅವರಿಗೆ ಜವಾಬ್ದಾರಿ ನೀಡಿತ್ತು. ಆದರೆ ಅವರು ಆ ಕಾರ್ಯದಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಇನ್ನಷ್ಟು ವಿವರವಾದ ವರದಿ ಬರಬೇಕಿದೆ” ಎಂದು ಹೇಳಿದರು.
ಪಕ್ಷದಲ್ಲಿ ಶಿಸ್ತು ಅತ್ಯಂತ ಮುಖ್ಯ ಎಂದು ಒತ್ತಿ ಹೇಳಿದ ಅವರು, “ಯಾವುದೇ ಪಕ್ಷವಾಗಿರಲಿ, ಶಿಸ್ತು ಇಲ್ಲದೆ ಸಂಘಟನೆ ಬಲವಾಗುವುದಿಲ್ಲ. ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ಎಲ್ಲ ನಾಯಕರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿದ್ದೇವೆ. ನಂತರವೂ ನಿರಂತರ ಸಂಪರ್ಕದಲ್ಲಿದ್ದೇವೆ. ನಾಯಕರು ನೀಡಿದ ವರದಿಗಳ ಆಧಾರದ ಮೇಲೆ ಮುಖ್ಯಮಂತ್ರಿ ತೀರ್ಮಾನ ಕೈಗೊಂಡಿದ್ದಾರೆ” ಎಂದರು.
ಜಮೀರ್ ವಿರುದ್ಧವೂ ಶಿಸ್ತು ಕ್ರಮ ಕೈಗೊಳ್ಳಲಾಗುವುದೇ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರ ನೀಡದೇ, “ಈ ಕುರಿತು ನನಗೆ ಮಾಹಿತಿ ಇಲ್ಲ” ಎಂದು ಹೇಳಿದರು.
ಶಾಸಕರಿಗೆ ಸಂದೇಶ ನೀಡಿದ ಶಿವಕುಮಾರ್, “ದೆಹಲಿ ಭೇಟಿ ನೀಡಿ ಮಂತ್ರಿ ಸ್ಥಾನ ಕೇಳುವುದು ತಪ್ಪಲ್ಲ. ಆದರೆ ಪಕ್ಷದ ನಿಯಮಗಳನ್ನು ಪಾಲಿಸುವುದು ಮುಖ್ಯ. ಎಲ್ಲರೂ ನಮ್ಮ ಸಹೋದ್ಯೋಗಿಗಳೇ ಆಗಿದ್ದಾರೆ. ಹೀಗಾಗಿ ಶಿಸ್ತನ್ನು ಕಾಪಾಡಿ, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ ಎಚ್ಚರಿಕೆಯಿಂದ ಇರಬೇಕು” ಎಂದು ಸಲಹೆ ನೀಡಿದರು.
ಈ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಶಿಸ್ತು ಮತ್ತು ಸಂಘಟನಾ ನಿಯಂತ್ರಣದ ಮಹತ್ವವನ್ನು ಮತ್ತೆ ಒತ್ತಿ ಹೇಳುವಂತಾಗಿದೆ.
ದೇಶ
Latest News : “ಗೆಲ್ಲಿಸದಿದ್ರೆ ರಾಜೀನಾಮೆ!” – ಜಮೀರ್ ಅಹ್ಮದ್ ಸ್ಫೋಟಕ ಹೇಳಿಕೆ
ಬೆಂಗಳೂರು: ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ವಿಚಾರ ಮತ್ತೆ ರಾಜಕೀಯ ಚರ್ಚೆಗೆ ಗ್ರಾಸವಾಗಿದ್ದು, ಸಚಿವ ಜಮೀರ್ ಅಹ್ಮದ್ ಖಾನ್ ಮಹತ್ವದ ಹೇಳಿಕೆ ನೀಡಿದ್ದಾರೆ. ಕೆಪಿಸಿಸಿ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಮತ್ತು ರಂದೀಪ್ ಸುರ್ಜೇವಾಲಾ ಅವರ ಎದುರಲ್ಲೇ 7 ಮುಸ್ಲಿಂ ನಾಯಕರಿಗೆ ಟಿಕೆಟ್ ನೀಡುವಂತೆ ಕೇಳಿದ್ದೆ ಎಂದು ಅವರು ಬಹಿರಂಗಪಡಿಸಿದ್ದಾರೆ.
“ನಾನು ಓಪನ್ ಆಗಿ ಸಭೆಯಲ್ಲಿ ಹೇಳಿದ್ದೆ. ಜಬ್ಬಾರ್‌ಗೆ ಟಿಕೆಟ್ ಕೇಳಿಲ್ಲ. ಅವರು ಈಗಾಗಲೇ ಎಂಎಲ್‌ಸಿ ಆಗಿರುವುದರಿಂದ ಬೇರೆ ಮುಸ್ಲಿಂ ನಾಯಕರಿಗೆ ಅವಕಾಶ ಕೊಡಬೇಕು ಎಂದಿದ್ದೆ. ನನ್ನ ಜವಾಬ್ದಾರಿಯಲ್ಲಿ ಗೆಲ್ಲಿಸಿಕೊಡುತ್ತೇನೆ, ಇಲ್ಲವಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದೆ,” ಎಂದು ಜಮೀರ್ ಸ್ಪಷ್ಟಪಡಿಸಿದರು.
ಟಿಕೆಟ್ ನೀಡದಿರುವುದರಿಂದ ಆರಂಭದಲ್ಲಿ ಅಸಮಾಧಾನ ಇದ್ದುದನ್ನು ಒಪ್ಪಿಕೊಂಡ ಅವರು, ಬಳಿಕ ಪರಿಸ್ಥಿತಿ ಸರಿಹೋಗಿದೆ ಎಂದರು. ದಾವಣಗೆರೆ ಹಾಗೂ ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಅಲ್ಪಸಂಖ್ಯಾತ ಘಟಕದ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಜಮೀರ್, “ಸ್ಥಳೀಯ ಮಟ್ಟದಲ್ಲಿ ಅಸಮಾಧಾನ ಇದ್ದರೂ ಈಗ ಪರಿಸ್ಥಿತಿ ಸುಧಾರಿಸಿದೆ” ಎಂದರು.
ಕಾಂಗ್ರೆಸ್ ಶಾಸಕರ ದೆಹಲಿ ಭೇಟಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, “ಪ್ರತಿ ನಾಯಕನಿಗೂ ಮಂತ್ರಿಯಾಗುವ ಆಸೆ ಸಹಜ. ನನಗೂ ಇದೆ. ಆದರೆ ನನ್ನ ಕೆಲಸವನ್ನು ನಾನು ಪ್ರಾಮಾಣಿಕವಾಗಿ ಮಾಡಿದ್ದೇನೆ,” ಎಂದು ಹೇಳಿದರು.
ಇದಲ್ಲದೆ, ಕೇರಳದಲ್ಲಿ ಸ್ಟಾರ್ ಪ್ರಚಾರಕರಾಗಿ ಜವಾಬ್ದಾರಿ ನೀಡಲಾಗಿತ್ತು ಎಂದು ಹೇಳಿದ ಅವರು, ಸಿಎಂ ಸೂಚನೆ ಮೇರೆಗೆ ಪ್ರಚಾರದಲ್ಲಿ ಭಾಗವಹಿಸಿದ್ದೇನೆ ಎಂದರು.
ದೇಶ
“ನೀನೇ ಸ್ಪಷ್ಟನೆ ಕೊಡು” – ಜಮೀರ್‌ಗೆ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕುತೂಹಲ ಕೆರಳಿಸಿರುವ ಬೆಳವಣಿಗೆಯಾಗಿ, ಸಿದ್ದರಾಮಯ್ಯ ಮತ್ತು ಜಮೀರ್ ಅಹ್ಮದ್ ಖಾನ್ ನಡುವೆ ಕಾವೇರಿ ನಿವಾಸದಲ್ಲಿ ನಡೆದ ಭೇಟಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಪಕ್ಷದ ಆಂತರಿಕ ವಿಚಾರಗಳ ಹಿನ್ನೆಲೆ ಈ ಭೇಟಿಗೆ ಹೆಚ್ಚಿನ ಮಹತ್ವ ಸಿಕ್ಕಿದೆ.
ಮೂಲಗಳ ಪ್ರಕಾರ, ಪಕ್ಷದೊಳಗಿನ ಅಸಮಾಧಾನ ಮತ್ತು ಬಂಡಾಯ ಚಟುವಟಿಕೆಗಳ ಕುರಿತು ಸಿಎಂ ಸಿದ್ದರಾಮಯ್ಯ ಜಮೀರ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಹೈಕಮಾಂಡ್ ಮಟ್ಟದಲ್ಲಿ ದೂರುಗಳು ಕೇಳಿಬರುತ್ತಿವೆ ಎಂದು ಎಚ್ಚರಿಕೆ ನೀಡಿದ್ದಾರೆ. “ನಿನ್ನ ವಿರುದ್ಧ ಆರೋಪಗಳು ಹೆಚ್ಚಾಗುತ್ತಿವೆ, ನೀನೇ ಹೈಕಮಾಂಡ್ ಮುಂದೆ ಸ್ಪಷ್ಟನೆ ನೀಡಬೇಕು” ಎಂದು ಸಿಎಂ ಸೂಚಿಸಿರುವುದಾಗಿ ತಿಳಿದುಬಂದಿದೆ.
ಇದಕ್ಕೆ ಪ್ರತಿಕ್ರಿಯಿಸಿದ ಜಮೀರ್ ಅಹ್ಮದ್ ಖಾನ್, ತಾವು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. “ನಮ್ಮ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಮಾತ್ರ ಕೇಳಿದ್ದೆ. ನಿಮ್ಮ ಸೂಚನೆಯಂತೆ ದಾವಣಗೆರೆಗೆ ತೆರಳಿ ಪಕ್ಷದ ಪರವಾಗಿ ಕೆಲಸ ಮಾಡಿದ್ದೇನೆ” ಎಂದು ಅವರು ವಿವರಿಸಿದ್ದಾರೆ.
ಇದೇ ವೇಳೆ, ಪಕ್ಷದಲ್ಲಿ ತಮಗೆ ಸೂಕ್ತ ಜವಾಬ್ದಾರಿ ನೀಡದಿರುವ ಬಗ್ಗೆ ಜಮೀರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಿಜ್ವಾನ್ ಅರ್ಷದ್ ಮತ್ತು ಸಲೀಂ ಅಹ್ಮದ್ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುದೀರ್ಘ ಚರ್ಚೆಯ ಬಳಿಕ, ಹೈಕಮಾಂಡ್ ಜೊತೆ ನೇರವಾಗಿ ಮಾತನಾಡುವಂತೆ ಸಿಎಂ ಸಲಹೆ ನೀಡಿದ್ದಾರೆ. ಸಭೆಯ ನಂತರ ಸಿದ್ದರಾಮಯ್ಯ ಮತ್ತು ಜಮೀರ್ ಒಂದೇ ಕಾರಿನಲ್ಲಿ ವಿಧಾನಸೌಧ ಕಡೆ ಪ್ರಯಾಣಿಸಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
-
ದೇಶ23 hours agoHormuz Crisis: ಅಮೆರಿಕ ದಿಗ್ಬಂಧನ ಘೋಷಣೆ – ಜಾಗತಿಕ ತೈಲ ಬಿಕ್ಕಟ್ಟು, ಭಾರತಕ್ಕೂ ಶಾಕ್!
-
ದೇಶ4 hours ago“ನೀನೇ ಸ್ಪಷ್ಟನೆ ಕೊಡು” – ಜಮೀರ್‌ಗೆ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
-
ದೇಶ5 hours agoಆಶಾ ಭೋಂಸ್ಲೆ ಸುದ್ದಿ ಪ್ರಸಾರಕ್ಕೆ ಜಿಯೋ ನ್ಯೂಸ್ಗೆ ನೋಟಿಸ್!
-
ದೇಶ5 hours agoಇರಾನ್–ಅಮೆರಿಕ ಮಾತುಕತೆಗೆ ಪಾಕಿಸ್ತಾನ ಮತ್ತೆ ವೇದಿಕೆ
-
ದೇಶ1 hour agoಏಪ್ರಿಲ್ 15ರಿಂದ ಬಿಸಿಲಿನ ಕಾಟ ಹೆಚ್ಚಳ: ಯಾವ ಜಿಲ್ಲೆಗಳಲ್ಲಿ ಅಲರ್ಟ್?
-
ದೇಶ5 hours agoBig News : ಜೈಲು ಭದ್ರತೆಗೆ ಯೋಧರ ಎಂಟ್ರಿ – ಸರ್ಕಾರದ ದೊಡ್ಡ ನಿರ್ಧಾರ
-
ಕ್ರೀಡೆ3 hours agoವಾಂಖೆಡೆ ಸ್ಟೇಡಿಯಂನಲ್ಲಿ ಕರೀನಾ ಸಿಟ್ಟು – ವೈರಲ್ ವಿಡಿಯೋ ಸದ್ದು!
-
ಅಪರಾಧ6 hours agoಟಿಸಿಎಸ್ ಕಿರುಕುಳ ಪ್ರಕರಣಕ್ಕೆ ಚಂದ್ರಶೇಖರನ್ ಪ್ರತಿಕ್ರಿಯೆ
