Connect with us

ದೇಶ

ಅಗ್ನಿವೀರ್​ ನೇಮಕಾತಿ: ರಾಜ್ಯದ ಈ ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ – AGNIVEER RECRUITMENT

Published

on

ಬೆಂಗಳೂರು: ಅಗ್ನಿವೀರ್​ ಸಾಮಾನ್ಯ ಕರ್ತವ್ಯ (ಮಹಿಳಾ ಮಿಲಿಟರಿ ಪೊಲೀಸ್​) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಭಾರತೀಯ ಸೇನೆ ಅರ್ಜಿ ಆಹ್ವಾನಿಸಿದೆ. ಇವು ಭೂ ಸೇನೆಯ ಅಗ್ನಿವೀರ್​ ಹುದ್ದೆಗಳಾಗಿವೆ. ಆಸಕ್ತರು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ, ಚಿತ್ರದುರ್ಗ ಮತ್ತು ವಿಜಯನಗರ ಜಿಲ್ಲೆಗಳ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು. ಎಲ್ಲಾ ಅಭ್ಯರ್ಥಿಗಳು ಜಿಎಸ್​ಟಿ ಶುಲ್ಕದೊಂದಿಗೆ 250 ರೂ. ಪಾವತಿ ಮಾಡಬೇಕು.

ವೇತನ: ನಾಲ್ಕು ವರ್ಷದ ಸೇವಾವಧಿಯ ಹುದ್ದೆಗೆ ಮೊದಲ ವರ್ಷ 30,000 ರೂ. ಎರಡನೇ ವರ್ಷದಲ್ಲಿ 33,000 ರೂ. ಮೂರನೇ ವರ್ಷ 36,500 ರೂ. ಮತ್ತು ನಾಲ್ಕನೇ ವರ್ಷ 40,000 ರೂಪಾಯಿ ವೇತನ ಸಿಗಲಿದೆ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್​ಲೈನ್​ ಪರೀಕ್ಷೆ, ದೈಹಿಕ ಸಾಮರ್ಥ್ಯ ಸೇರಿದಂತೆ ಇನ್ನಿತರ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ. ಜೂನ್​ನಲ್ಲಿ ಆನ್​ಲೈನ್​ನಲ್ಲಿ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.

ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಮೇ 10 ಆಗಿದೆ. ಹೆಚ್ಚಿನ ಮಾಹಿತಿಗೆ joinindianvavy.gov.in ಅಥವಾ agniveernavy.cdac.in ಈ ಜಾಲತಾಣಕ್ಕೆ ಭೇಟಿ ನೀಡಿ.

ದೇಶ

‘ನಮಸ್ಕಾರ ಬೆಂಗಳೂರು’ ಎಂದೇ ಕನ್ನಡದಲ್ಲಿ ಮಾತು ಆರಂಭಿಸಿದ ಹುಮಾ ಖುರೇಷಿ; ‘ಟಾಕ್ಸಿಕ್’ ಬಗ್ಗೆ ಕೊಟ್ಟ ಹೊಸ ಅಪ್ಡೇಟ್

Published

on

ಬೆಂಗಳೂರು, ಜು.8: ಬಾಲಿವುಡ್‌ನ ಖ್ಯಾತ ನಟಿ ಹುಮಾ ಖುರೇಷಿ ಬೆಂಗಳೂರಿಗೆ ಭೇಟಿ ನೀಡಿ ತಮ್ಮ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಟಾಕ್ಸಿಕ್’ ಹಾಗೂ ತಮ್ಮದೇ ನಿರ್ಮಾಣದ ‘ಬೇಬಿ ಡು ಡೈ ಡು’ ಚಿತ್ರದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದರು. “ನಮಸ್ಕಾರ ಬೆಂಗಳೂರು… ಅಲ್ಪ ಸ್ವಲ್ಪ ಕನ್ನಡ ಗೊತ್ತು” ಎಂದು ಕನ್ನಡದಲ್ಲೇ ಮಾತು ಆರಂಭಿಸಿದ ಅವರು, ನೆರೆದಿದ್ದವರಿಂದ ಭರ್ಜರಿ ಚಪ್ಪಾಳೆ ಗಳಿಸಿದರು.

ತಮ್ಮ ಸಹೋದರ ಸಾಕಿಬ್ ಸಲೀಮ್ ಅವರೊಂದಿಗೆ ನಿರ್ಮಿಸಿರುವ ‘ಬೇಬಿ ಡು ಡೈ ಡು’ ಚಿತ್ರದ ಪ್ರಚಾರಕ್ಕಾಗಿ ಬೆಂಗಳೂರಿಗೆ ಬಂದಿದ್ದ ಹುಮಾ, ಸ್ಯಾಂಡಲ್‌ವುಡ್ ಸೂಪರ್‌ಸ್ಟಾರ್ ಯಶ್ ಹಾಗೂ ನಿರ್ದೇಶಕಿ ಗೀತೂ ಮೋಹನ್ ದಾಸ್ ಅವರಿಗೆ ವಿಶೇಷ ಧನ್ಯವಾದ ಸಲ್ಲಿಸಿದರು. “ನಮ್ಮ ಸಣ್ಣ ಬಜೆಟ್ ಚಿತ್ರದ ಬಗ್ಗೆ ಯಶ್ ಮತ್ತು ಗೀತೂ ಮೋಹನ್ ದಾಸ್ ಸಾಮಾಜಿಕ ಜಾಲತಾಣಗಳಲ್ಲಿ ಸ್ಟೋರಿ ಹಂಚಿಕೊಂಡಿದ್ದರು. ಅವರ ಬೆಂಬಲದಿಂದ ಬೆಂಗಳೂರಿನಲ್ಲಿ ಚಿತ್ರದ ಬಗ್ಗೆ ದೊಡ್ಡ ಮಟ್ಟದ ಪ್ರಚಾರ ದೊರೆತು, ಪ್ರದರ್ಶನಗಳ ಸಂಖ್ಯೆಯೂ ಹೆಚ್ಚಾಯಿತು” ಎಂದು ಹೇಳಿದರು.

‘ಗ್ಯಾಂಗ್ಸ್ ಆಫ್ ವಾಸಿಪುರ್’ ಖ್ಯಾತಿಯ ಹುಮಾ, ‘ಬೇಬಿ ಡು ಡೈ ಡು’ ಚಿತ್ರದಲ್ಲಿ ಕಿವುಡ ಮತ್ತು ಮೂಗಿಯಾದ ಹಿಟ್‌ವುಮನ್ ‘ಬೇಬಿ ಕರ್ಮಾಕರ್’ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಪಾತ್ರಕ್ಕಾಗಿ ಸನ್ನೆ ಭಾಷೆಯ ತಜ್ಞರಿಂದ ವಿಶೇಷ ತರಬೇತಿ ಪಡೆದಿದ್ದು, ವಿಶೇಷ ಮಕ್ಕಳ ಶಾಲೆಗಳಿಗೆ ಭೇಟಿ ನೀಡಿ ಅವರೊಂದಿಗೆ ಸಮಯ ಕಳೆದಿರುವುದಾಗಿ ತಿಳಿಸಿದರು. ಪ್ರೇಕ್ಷಕರಿಗೆ ಸುಲಭವಾಗಿ ಅರ್ಥವಾಗುವಂತೆ ಸಾರ್ವತ್ರಿಕ ಸನ್ನೆ ಭಾಷೆಯನ್ನು ಚಿತ್ರದಲ್ಲಿ ಬಳಸಲಾಗಿದೆ ಎಂದರು.

ಇದೇ ವೇಳೆ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರದ ಕುರಿತು ಮಾತನಾಡಿದ ಹುಮಾ, “ಇಡೀ ಜಗತ್ತೇ ಈ ಚಿತ್ರದ ಬಿಡುಗಡೆಗಾಗಿ ಕಾತುರದಿಂದ ಕಾಯುತ್ತಿದೆ. ಯಶ್ ದೇಶದ ಅತ್ಯಂತ ದೊಡ್ಡ ಸೂಪರ್‌ಸ್ಟಾರ್‌ಗಳಲ್ಲಿ ಒಬ್ಬರು. ಅವರೊಂದಿಗೆ ಕೆಲಸ ಮಾಡುವುದರಿಂದ ಪ್ರತಿದಿನ ಹೊಸದನ್ನು ಕಲಿಯುತ್ತಿದ್ದೇನೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಸಿನಿಮಾ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಅಭಿಮಾನಿಗಳು ಸ್ವಲ್ಪ ತಾಳ್ಮೆಯಿಂದ ಕಾಯಬೇಕು ಎಂದು ಅವರು ಮನವಿ ಮಾಡಿದರು.

Continue Reading

ಅಪರಾಧ

ಪ್ರಯಾಣಿಕರ ಜೀವದ ಜೊತೆ ಚೆಲ್ಲಾಟ! ಸ್ಟೀರಿಂಗ್ ಮೇಲೆ ಮೊಣಕೈ, ಕೈಯಲ್ಲಿ ಮೊಬೈಲ್; ವೈರಲ್ ವಿಡಿಯೊ

Published

on

ನವದೆಹಲಿ, ಜು.8: ರಸ್ತೆ ಸುರಕ್ಷತೆ ಕುರಿತು ಸರ್ಕಾರ ಮತ್ತು ಸಾರಿಗೆ ಇಲಾಖೆ ನಿರಂತರ ಜಾಗೃತಿ ಮೂಡಿಸುತ್ತಿದ್ದರೂ ಕೆಲವರ ನಿರ್ಲಕ್ಷ್ಯದಿಂದ ಅಪಘಾತಗಳ ಅಪಾಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇನಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ದೆಹಲಿ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್‌ನ ಚಾಲಕ ಸುಮಾರು 100 ಕಿ.ಮೀ ವೇಗದಲ್ಲಿ ಬಸ್ ಚಲಾಯಿಸುತ್ತಿದ್ದರೂ, ರಸ್ತೆಯತ್ತ ಸಂಪೂರ್ಣ ಗಮನ ಹರಿಸುವ ಬದಲು ತನ್ನ ಮೊಬೈಲ್‌ನಲ್ಲಿ ರೀಲ್ಸ್ ವೀಕ್ಷಿಸುತ್ತಿರುವುದು ವೈರಲ್ ವಿಡಿಯೊದಲ್ಲಿ ಕಾಣಿಸಿದೆ. ಚಾಲಕ ಸ್ಟೀರಿಂಗ್ ಮೇಲೆ ಮೊಣಕೈ ಇಟ್ಟುಕೊಂಡೇ ಮೊಬೈಲ್ ನೋಡುತ್ತಿರುವ ದೃಶ್ಯ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಗಂಭೀರ ಆತಂಕ ಮೂಡಿಸಿದೆ.

ವೈರಲ್ ವಿಡಿಯೊದಲ್ಲಿ ಚಾಲಕ ಕೆಲ ಕ್ಷಣಗಳಿಗೊಮ್ಮೆ ಮಾತ್ರ ರಸ್ತೆಯತ್ತ ಕಣ್ಣಾಡಿಸಿ ಮತ್ತೆ ಮೊಬೈಲ್‌ಗೆ ಗಮನ ಹರಿಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ. ಇನ್ನೂ ಆತನ ಪಕ್ಕದಲ್ಲಿದ್ದ ಕಂಡಕ್ಟರ್ ಕೂಡ ಚಾಲಕನಿಗೆ ಎಚ್ಚರಿಕೆ ನೀಡುವ ಬದಲು ತನ್ನ ಮೊಬೈಲ್‌ನಲ್ಲೇ ತೊಡಗಿಸಿಕೊಂಡಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಬಸ್‌ನಲ್ಲಿದ್ದ ಪ್ರಯಾಣಿಕರೊಬ್ಬರು ಈ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಕೆಲವೇ ಗಂಟೆಗಳಲ್ಲಿ ವಿಡಿಯೊ ವ್ಯಾಪಕವಾಗಿ ವೈರಲ್ ಆಗಿದೆ. ಘಟನೆ ನಡೆದ ನಿಖರ ದಿನಾಂಕ ಹಾಗೂ ಚಾಲಕನ ಗುರುತು ಅಧಿಕೃತವಾಗಿ ದೃಢಪಟ್ಟಿಲ್ಲ. ಆದರೂ ಈ ವಿಡಿಯೊ ರಸ್ತೆ ಸುರಕ್ಷತೆ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಇಂತಹ ಚಾಲಕನ ಚಾಲನಾ ಪರವಾನಗಿಯನ್ನು ತಕ್ಷಣವೇ ರದ್ದುಪಡಿಸಬೇಕು” ಎಂದು ಹಲವರು ಆಗ್ರಹಿಸಿದ್ದಾರೆ. ಮತ್ತೊಬ್ಬರು “ನೂರಾರು ಪ್ರಯಾಣಿಕರ ಜೀವದೊಂದಿಗೆ ಆಟವಾಡುವುದು ಕ್ಷಮಿಸಲಾಗದ ಅಪರಾಧ. ಚಾಲಕ ಹಾಗೂ ಕರ್ತವ್ಯ ನಿರ್ಲಕ್ಷ್ಯ ತೋರಿದ ಕಂಡಕ್ಟರ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಘಟನೆ ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಎಷ್ಟು ಅಪಾಯಕಾರಿ ಎಂಬುದನ್ನು ಮತ್ತೊಮ್ಮೆ ನೆನಪಿಸಿದ್ದು, ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಅಗತ್ಯವನ್ನು ಒತ್ತಿಹೇಳಿದೆ.

Continue Reading

ಕ್ರೀಡೆ

ಇಂಗ್ಲೆಂಡ್ ವಿರುದ್ಧ ಮುಖಭಂಗ; ಸೋಲಿನ ಬಳಿಕ ಶ್ರೇಯಸ್ ಅಯ್ಯರ್ ಹೇಳಿದ್ದೇನು?

Published

on

ನಾಟಿಂಗ್‌ಹ್ಯಾಮ್: ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 125 ರನ್‌ಗಳ ಹೀನಾಯ ಸೋಲು ಅನುಭವಿಸಿದ ಬಳಿಕ ನಾಯಕ ಶ್ರೇಯಸ್ ಅಯ್ಯರ್ ತಂಡದ ಕಳಪೆ ಪ್ರದರ್ಶನದ ಬಗ್ಗೆ ನಿರಾಸೆ ವ್ಯಕ್ತಪಡಿಸಿದ್ದಾರೆ. ಐದು ಪಂದ್ಯಗಳ ಸರಣಿಯಲ್ಲಿ ಭಾರತ ಇನ್ನೂ ಗೆಲುವಿನ ಖಾತೆ ತೆರೆಯದೆ 0-2 ಅಂತರದಲ್ಲಿ ಹಿನ್ನಡೆ ಅನುಭವಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್, ಆರಂಭಿಕ ಬ್ಯಾಟರ್ ಫಿಲ್ ಸಾಲ್ಟ್ ಅವರ 44 ಎಸೆತಗಳಲ್ಲಿ 70 ರನ್‌ಗಳ ಸ್ಫೋಟಕ ಆಟದ ನೆರವಿನಿಂದ ಬೃಹತ್ ಮೊತ್ತ ಕಲೆಹಾಕಿತು. ಕೊನೆಯಲ್ಲಿ ಸ್ಯಾಮ್ ಕರನ್ ಅಜೇಯ 41 ರನ್ ಹಾಗೂ ವಿಲ್ ಜಾಕ್ಸ್ ಅವರ ವೇಗದ ಇನ್ನಿಂಗ್ಸ್‌ನಿಂದ ಇಂಗ್ಲೆಂಡ್ 20 ಓವರ್‌ಗಳಲ್ಲಿ 201 ರನ್ ಗಳಿಸಿತು.

202 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಆರಂಭದಿಂದಲೇ ವಿಕೆಟ್‌ಗಳನ್ನು ಕಳೆದುಕೊಂಡಿತು. ಇಂಗ್ಲೆಂಡ್ ಬೌಲರ್‌ಗಳ ದಾಳಿಗೆ ತತ್ತರಿಸಿದ ಭಾರತೀಯ ಬ್ಯಾಟರ್‌ಗಳು ಯಾವುದೇ ಹಂತದಲ್ಲೂ ಪ್ರತಿರೋಧ ತೋರಲಿಲ್ಲ. ಅಂತಿಮವಾಗಿ ಭಾರತ ಕೇವಲ 11.4 ಓವರ್‌ಗಳಲ್ಲಿ 76 ರನ್‌ಗೆ ಆಲೌಟ್ ಆಗಿ 125 ರನ್‌ಗಳ ಭಾರೀ ಸೋಲು ಕಂಡಿತು. ವೈಭವ್ ಸೂರ್ಯವಂಶಿ ಹಾಗೂ ಇಶಾನ್ ಕಿಶನ್ ತಲಾ 13 ರನ್ ಗಳಿಸಿದ್ದೇ ಭಾರತದ ಗರಿಷ್ಠ ವೈಯಕ್ತಿಕ ಮೊತ್ತವಾಗಿತ್ತು.

ಪಂದ್ಯದ ಬಳಿಕ ಮಾತನಾಡಿದ ನಾಯಕ ಶ್ರೇಯಸ್ ಅಯ್ಯರ್, “ನಾವು ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದೇವೆ. ಇಷ್ಟು ದೊಡ್ಡ ಅಂತರದ ಸೋಲನ್ನು ಒಪ್ಪಿಕೊಳ್ಳುವುದು ಕಷ್ಟವಾದರೂ ಅದನ್ನು ಸ್ವೀಕರಿಸಲೇಬೇಕು. ಟ್ರೆಂಟ್ ಬ್ರಿಡ್ಜ್ ಪಿಚ್‌ನಲ್ಲಿ ನಮ್ಮ ಬೌಲರ್‌ಗಳು ಸರಿಯಾದ ಲೆಂತ್‌ನಲ್ಲಿ ಬೌಲಿಂಗ್ ಮಾಡಲು ವಿಫಲರಾದರು. ಪವರ್‌ಪ್ಲೇನಲ್ಲೇ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡಿದ್ದು ನಮ್ಮ ಸೋಲಿಗೆ ಪ್ರಮುಖ ಕಾರಣವಾಯಿತು” ಎಂದು ಹೇಳಿದರು.

ಮುಂದುವರಿದು ಮಾತನಾಡಿದ ಅವರು, ಕಳೆದ ತಪ್ಪುಗಳನ್ನು ನೆನೆದು ಕುಳಿತುಕೊಳ್ಳುವುದರಿಂದ ಪ್ರಯೋಜನವಿಲ್ಲ. ಪ್ರತಿಯೊಬ್ಬ ಆಟಗಾರನೂ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಬೇಕು. ಮುಂದಿನ ಪಂದ್ಯಗಳಲ್ಲಿ ಬಲಿಷ್ಠವಾಗಿ ಪುನರಾಗಮನ ಮಾಡುವ ವಿಶ್ವಾಸವಿದೆ ಎಂದು ತಿಳಿಸಿದರು. ಇದೀಗ ಸರಣಿಯಲ್ಲಿ ಉಳಿಯಲು ಭಾರತಕ್ಕೆ ಮುಂದಿನ ಪಂದ್ಯಗಳು ಅತ್ಯಂತ ಮಹತ್ವದ್ದಾಗಿವೆ.

Continue Reading

Trending