Connect with us

ಬೆಂಗಳೂರು

ರಾಜಕಾರಣದ ಚಕ್ರ ಉರುಳುತ್ತಿರುತ್ತದೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

Published

on

ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಸುವುದೇ ನಮ್ಮ ಗುರಿ ಎಚ್.ಡಿ. ಕುಮಾರಸ್ವಾಮಿ
ರಾಜಕಾರಣದ ಚಕ್ರ ಉರುಳುತ್ತಿರುತ್ತದೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಬಿಜೆಪಿ ಮೈತ್ರಿ ಮಾತುಕತೆ ಆರಂಭಿಕ ಹಂತದಲ್ಲಿ ಇದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಹೆಚ್‌ಡಿಕೆ ಎಲ್ಲಾ ವಿಚಾರಗಳು ಪ್ರಾರಂಭಿಕ ಹಂತದಲ್ಲಿ ಇದೆ, ಈವರೆಗೂ ಕ್ಷೇತ್ರ ಹಂಚಿಕೆ ಬಗ್ಗೆ ಚರ್ಚೆ ನಡೆದಿಲ್ಲ ಮುಂದೆ ಈ ಬಗ್ಗೆ ಹೇಳುತ್ತೇವೆ ಎಂದು ತಿಳಿಸಿದ್ದಾರೆ,
ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರು ಮೈತ್ರಿ ಬಗ್ಗೆ ಮಾತನಾಡಿದ್ದಾರೆ ಅವರಿಗೆ ನಾನು ಅಭಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೂರೇ ತಿಂಗಳಿಗೆ ಜನರು ರೋಸಿ ಹೋಗಿದ್ದಾರೆ, ಸರಕಾರ ಮೂರೇ ತಿಂಗಳಿಗೆ ಆಡಳಿತ ವಿರೋಧಿ ಅಲೆ ಎzರಿಸÀತ್ತಿದೆ, ಇಂಥ ಸರಕಾರದ ವಿರುದ್ಧ ಸಂಘಟಿವಾಗಿ ಹೋರಾಟ ನಡೆಸಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು
ರಾಜಕಾರಣದಲ್ಲಿ ನಿರಾಶೆ ಎನ್ನುವುದು ಬರಲ್ಲ, ಡೆಸ್ಪರೇಟ್ ಅನ್ನುವ ಪದ ರಾಜಕಾರಣದಲ್ಲಿ ಬರಲ್ಲ, ರಾಜಕಾರಣದ ಡಿಕ್ಷನರಿಯಲ್ಲೇ ಆ ಪದ ಇಲ್ಲ, ಅದರೆ ಈಗ ಕಾಂಗ್ರೆಸ್ ಪಕ್ಷಕ್ಕೆ ಡೆಸ್ಟರೇಟ್ ಆಗುತ್ತದೆ, ಹೊರ ನೋಟಕ್ಕೆ ಅವರು ಏನು ಬೇಕಾದರೂ ಹೇಳಬಹುದು ಅದರೆ ಬಳಗಡೆ ಏನಿದೆ ಅನ್ನುವುದು ನನಗೂ ಗೊತ್ತಿದೆ, ಅವರ ಶಕ್ತಿ ಏನಿದೆ ಅನ್ನುವುದು ನನಗೂ ಗೊತ್ತಿದೆ ಎಂದು ಅವರು ಹೇಳಿದ್ದಾರೆ,
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿ, ರಾಜಕಾರಣದಲ್ಲಿ ಒಂದೇ ರೀತಿ ಇರಲ್ಲ, ರಾಜಕಾರಣದ ಚಕ್ರ ಉರುಳುತ್ತಿರುತ್ತದೆ ಎಂದು ಹೇಳಿದ್ದಾರೆ,

ದೇಶ

ಮಾರ್ನಿಂಗ್ ವಾಕ್ ವೇಳೆ ಎಚ್ಚರ! ದೊಡ್ಡ ಗೊಲ್ಲರಹಟ್ಟಿ ಬಳಿ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ

Published

on

ಬೆಂಗಳೂರು, ಜು.10: ಸಿಲಿಕಾನ್ ಸಿಟಿ ಬೆಂಗಳೂರುದಲ್ಲಿ ಮತ್ತೆ ಚಿರತೆ (Leopard) ಪ್ರತ್ಯಕ್ಷವಾಗಿದ್ದು, ನಗರದ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ನಗರದ ದೊಡ್ಡ ಗೊಲ್ಲರಹಟ್ಟಿ ಸಮೀಪದ ನೈಸ್ ರಸ್ತೆ (NICE Road) ಬಳಿಯ BEL ಲೇಔಟ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಚಿರತೆ ಓಡಾಡುತ್ತಿರುವ ದೃಶ್ಯ ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆ ಆಗಿದೆ.

ಮಾಹಿತಿ ಪ್ರಕಾರ, ಇಂದು ಬೆಳಗ್ಗೆ ಸುಮಾರು 6:50ರ ವೇಳೆಗೆ ರಸ್ತೆಯಲ್ಲಿ ವಾಹನ ಹಾಗೂ ಜನರ ಸಂಚಾರ ಕಡಿಮೆ ಇದ್ದ ಸಂದರ್ಭದಲ್ಲಿ ಚಿರತೆ ನಿರಾತಂಕವಾಗಿ ರಸ್ತೆ ದಾಟಿದೆ. ಬಳಿಕ ಅದು BEL ಲೇಔಟ್‌ನಲ್ಲಿರುವ ಮನೆಯೊಂದರ ಕಾಂಪೌಂಡ್ ಒಳಗೆ ಜಿಗಿದಿರುವ ದೃಶ್ಯವೂ ಕ್ಯಾಮೆರಾದಲ್ಲಿ ದಾಖಲಾಗಿದೆ.

ಚಿರತೆ ಕಾಣಿಸಿಕೊಂಡ ಸಮಯವೇ ಬೆಳಗಿನ ವಾಯುವಿಹಾರಕ್ಕೆ ತೆರಳುವವರು, ಶಾಲಾ ಮಕ್ಕಳು ಹಾಗೂ ಸ್ಥಳೀಯ ನಿವಾಸಿಗಳು ಸಂಚರಿಸುವ ಸಮಯವಾಗಿದ್ದರಿಂದ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹಲವರು ಮನೆಯಿಂದ ಹೊರಬರಲು ಆತಂಕ ವ್ಯಕ್ತಪಡಿಸಿದ್ದು, ಮಕ್ಕಳನ್ನು ಹೊರಗೆ ಕಳುಹಿಸದಂತೆ ಪೋಷಕರು ಎಚ್ಚರಿಕೆ ವಹಿಸುತ್ತಿದ್ದಾರೆ.

ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಚಿರತೆ ಯಾವ ಪ್ರದೇಶದಲ್ಲಿ ಅಡಗಿದೆ ಎಂಬುದನ್ನು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದ್ದು, ಅಗತ್ಯವಿದ್ದರೆ ಬೋನು ಅಳವಡಿಸಿ ಸೆರೆಹಿಡಿಯಲು ಕ್ರಮ ಕೈಗೊಳ್ಳಲಾಗುತ್ತಿದೆ.

ಅರಣ್ಯ ಇಲಾಖೆ ಸಾರ್ವಜನಿಕರಿಗೆ ಅನಗತ್ಯವಾಗಿ ಚಿರತೆಯನ್ನು ಹುಡುಕಲು ಹೋಗಬಾರದು, ಒಂಟಿಯಾಗಿ ಸಂಚರಿಸಬಾರದು ಹಾಗೂ ಚಿರತೆ ಕಂಡುಬಂದರೆ ತಕ್ಷಣ ಇಲಾಖೆಗೆ ಮಾಹಿತಿ ನೀಡುವಂತೆ ಮನವಿ ಮಾಡಿದೆ. ಪರಿಸ್ಥಿತಿಯನ್ನು ಅಧಿಕಾರಿಗಳು ನಿಕಟವಾಗಿ ಗಮನಿಸುತ್ತಿದ್ದು, ಸ್ಥಳೀಯರು ಎಚ್ಚರಿಕೆಯಿಂದಿರುವಂತೆ ಸೂಚಿಸಲಾಗಿದೆ.

Continue Reading

ದೇಶ

ರೈತರು ಸಂಕಷ್ಟದಲ್ಲಿ, ಮಕ್ಕಳು ಇನ್ಸುಲಿನ್‌ಗಾಗಿ ಕಾಯುತ್ತಿದ್ದಾರೆ; ಸರ್ಕಾರದ ವಿರುದ್ಧ ಆರ್. ಅಶೋಕ್ ಟೀಕೆ

Published

on

ಬೆಂಗಳೂರು, ಜು.10: ರಾಜ್ಯದಲ್ಲಿ ಕೃಷಿ ಬಿಕ್ಕಟ್ಟು, ಸಚಿವ ಸಂಪುಟ ವಿಸ್ತರಣೆ ವಿಳಂಬ ಹಾಗೂ ಉಚಿತ ಇನ್ಸುಲಿನ್ ಯೋಜನೆ ಜಾರಿಯಾಗದಿರುವ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ನಾಯಕ ಆರ್. ಅಶೋಕ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈರುಳ್ಳಿ ಬೆಳೆ ನಾಶವಾಗುತ್ತಿದೆ. ಟೊಮೇಟೊ ಬೆಲೆ ಕುಸಿತ ಹಾಗೂ ಮಧ್ಯವರ್ತಿಗಳ ಸಮಸ್ಯೆಯಿಂದ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ ಎಂದು ಅಶೋಕ್ ಆರೋಪಿಸಿದ್ದಾರೆ. ಚಿತ್ರದುರ್ಗ, ವಿಜಯಪುರ, ಗದಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರ ಸಮಸ್ಯೆಗಳನ್ನು ಸರ್ಕಾರ ನಿರ್ಲಕ್ಷಿಸಿದೆ ಎಂದು ಅವರು ಟೀಕಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ವಿಚಾರದಲ್ಲಿಯೂ ಸರ್ಕಾರವನ್ನು ಟಾರ್ಗೆಟ್ ಮಾಡಿದ ಅಶೋಕ್, ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡು ತಿಂಗಳುಗಳಾದರೂ ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಕೃಷಿ ಸೇರಿದಂತೆ ಖಾಲಿ ಇರುವ ಪ್ರಮುಖ ಇಲಾಖೆಗೆ ಶೀಘ್ರ ಪೂರ್ಣಾವಧಿ ಸಚಿವರನ್ನು ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ, ಟೈಪ್-1 ಮಧುಮೇಹದಿಂದ ಬಳಲುತ್ತಿರುವ ಮಕ್ಕಳಿಗಾಗಿ ಘೋಷಿಸಲಾಗಿದ್ದ ಉಚಿತ ಇನ್ಸುಲಿನ್ ಯೋಜನೆ ಇನ್ನೂ ಸಮರ್ಪಕವಾಗಿ ಜಾರಿಯಾಗಿಲ್ಲ ಎಂದು ಅಶೋಕ್ ಆರೋಪಿಸಿದರು. ಟೆಂಡರ್ ಪ್ರಕ್ರಿಯೆ ವಿಳಂಬದಿಂದ ಸಾವಿರಾರು ಮಕ್ಕಳಿಗೆ ಅಗತ್ಯ ಇನ್ಸುಲಿನ್ ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ ಎಂದು ಅವರು ಹೇಳಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಸುಲಿನ್ ಕೊರತೆಯಿಂದ ಕೆಲವೆಡೆ ಸ್ವಯಂಸೇವಾ ಸಂಸ್ಥೆಗಳ ನೆರವು ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ದೂರಿದರು.

ಉಚಿತ ಇನ್ಸುಲಿನ್ ವಿತರಣೆಯನ್ನು ತಕ್ಷಣ ಆರಂಭಿಸಬೇಕು ಹಾಗೂ ರೈತರ ಸಮಸ್ಯೆಗಳಿಗೆ ಆದ್ಯತೆ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಸರ್ಕಾರವನ್ನು ಆಗ್ರಹಿಸಿದರು.

Continue Reading

ದೇಶ

ತುಮಕೂರು ರಸ್ತೆ ಟ್ರಾಫಿಕ್‌ಗೆ ಬ್ರೇಕ್; ಗೊರಗುಂಟೆಪಾಳ್ಯದಲ್ಲಿ ಬೃಹತ್ ಸುರಂಗ ರಸ್ತೆ ಯೋಜನೆ

Published

on

ಬೆಂಗಳೂರು, ಜು.8: ಬೆಂಗಳೂರು-ತುಮಕೂರು ರಸ್ತೆಯಲ್ಲಿನ ಗೊರಗುಂಟೆಪಾಳ್ಯ ಭಾಗದ ತೀವ್ರ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ಕಂಡುಹಿಡಿಯುವ ಉದ್ದೇಶದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಮಹತ್ವಾಕಾಂಕ್ಷಿ 6 ಪಥದ ಸುರಂಗ ರಸ್ತೆ (Tunnel Road) ನಿರ್ಮಾಣಕ್ಕೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಹೆಬ್ಬಾಳ ಕಿರು ಸುರಂಗ ರಸ್ತೆ ಯೋಜನೆಯ ಬಳಿಕ ಇದೀಗ ಡಾ. ರಾಜ್‌ಕುಮಾರ್ ಸ್ಮಾರಕದಿಂದ BEL ವೃತ್ತದವರೆಗೆ ಭೂಗತ ಸುರಂಗ ರಸ್ತೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ಯೋಜನೆಗೆ ಸಂಬಂಧಿಸಿದ ವಿಸ್ತೃತ ಯೋಜನಾ ವರದಿ (DPR) ಶೀಘ್ರದಲ್ಲೇ ಸಿದ್ಧವಾಗಲಿದ್ದು, ಬಳಿಕ ಸರ್ಕಾರದ ಅನುಮೋದನೆ ಪಡೆದು ಟೆಂಡರ್ ಪ್ರಕ್ರಿಯೆ ಆರಂಭಿಸುವ ಗುರಿ ಹೊಂದಲಾಗಿದೆ ಎಂದು ಬಿಡಿಎ ಆಯುಕ್ತ ಮೇಜರ್ ಪಿ. ಮಣಿವಣ್ಣನ್ ತಿಳಿಸಿದ್ದಾರೆ.

ಪ್ರಸ್ತಾವಿತ ಸುರಂಗ ರಸ್ತೆಯಲ್ಲಿ ವಿಶೇಷ ಭೂಗತ ಲೂಪ್ ವ್ಯವಸ್ಥೆ ಇರಲಿದ್ದು, ತುಮಕೂರು ರಸ್ತೆಯಿಂದ BEL ಜಂಕ್ಷನ್ ಹಾಗೂ ಡಾ. ರಾಜ್‌ಕುಮಾರ್ ಸ್ಮಾರಕದತ್ತ ತೆರಳುವ ವಾಹನಗಳು ಯಾವುದೇ ಟ್ರಾಫಿಕ್ ಸಿಗ್ನಲ್ ಇಲ್ಲದೆ ಸಂಚರಿಸುವಂತಾಗಲಿದೆ. ಈ ಮಾರ್ಗದಲ್ಲಿ ಭೂಸ್ವಾಧೀನದ ಅಗತ್ಯ ಕಡಿಮೆ ಇರುವುದರಿಂದ ಕಾಮಗಾರಿಯನ್ನು ವೇಗವಾಗಿ ಪೂರ್ಣಗೊಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುರಂಗ ನಿರ್ಮಾಣಕ್ಕೆ Cut-and-Cover, Box Push ಅಥವಾ Tunnel Boring Machine (TBM) ತಂತ್ರಜ್ಞಾನಗಳಲ್ಲಿ ಒಂದನ್ನು ಬಳಸುವ ಕುರಿತು ಅಂತಿಮ ನಿರ್ಧಾರ ಡಿಪಿಆರ್ ಬಳಿಕ ಕೈಗೊಳ್ಳಲಾಗುತ್ತದೆ.

ಇದೇ ಪ್ರದೇಶದಲ್ಲಿ BMRCL ಕೂಡ ಜೆ.ಪಿ.ನಗರ 4ನೇ ಹಂತದಿಂದ ಹೆಬ್ಬಾಳದ ಕೆಂಪಾಪುರದವರೆಗೆ ಡಬಲ್-ಡೆಕ್ಕರ್ ಮೆಟ್ರೋ ಹಾಗೂ ಫ್ಲೈಓವರ್ ಕಾರಿಡಾರ್ ನಿರ್ಮಾಣಕ್ಕೆ ಯೋಜನೆ ರೂಪಿಸಿದ್ದು, ಸುರಂಗ ರಸ್ತೆ ಮತ್ತು ಮೆಟ್ರೋ ಯೋಜನೆ ಪರಸ್ಪರ ಪೂರಕವಾಗಿ ಕಾರ್ಯನಿರ್ವಹಿಸುವಂತೆ ವಿನ್ಯಾಸ ಸಿದ್ಧಪಡಿಸಲಾಗುತ್ತಿದೆ.

ಆದರೆ, ಈ ಯೋಜನೆಗೆ ಕೆಲವು ಸಾರಿಗೆ ತಜ್ಞರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕಾದ ಸಂದರ್ಭದಲ್ಲಿ ದುಬಾರಿ ಸುರಂಗ ರಸ್ತೆ ನಿರ್ಮಾಣವು ಖಾಸಗಿ ವಾಹನಗಳ ಬಳಕೆಯನ್ನು ಹೆಚ್ಚಿಸಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Continue Reading

Trending