ರಾಜಕೀಯ

INDIA ಹೆಸರಿಗೆ ಬೆಚ್ಚಿ ಬಿದ್ದು, ಭಾರತ ಅಂತಾ ಹೇಳಲು ಹೊರಟಿದೆ ಸಿಎಂ ಸಿದ್ದರಾಮಯ್ಯ

INDIA" ಹೆಸರಿಗೆ ಬೆಚ್ಚಿ ಬಿದ್ದು, ಭಾರತ ಅಂತಾ ಹೇಳಲು ಹೊರಟಿದೆ- ಸಿದ್ದರಾಮಯ್ಯ

 ಸಾವಿರಾರು ವರ್ಷಗಳ ಭಾರತದ ಬಹುತ್ವ ಸಂಸ್ಕೃತಿಯನ್ನು ನಾಶಪಡಿಸುವ ಹುನ್ನಾರ ನಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ಇಂದು ನಡೆದ ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸಿರ್ ಹುಸೇನ್ ಅವರ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ, ಬಹುತ್ವವು ಭಾರತೀಯ ಸಂಸ್ಕೃತಿಯ ಜೀವಾಳ. ಇದೇ ಭಾರತದ ಮಣ್ಣಿನ ಸತ್ವ. ಭಾರತದ ಬಹುತ್ವದ ನಾಶ ಎಂದರೆ ಅದು ನಮ್ಮ ಸಂವಿಧಾನದ ನಾಶ.ಇದಕ್ಕಾಗಿ ಬಿಜೆಪಿಯವರು ಆಕರ್ಷಕ ಪದಗಳನ್ನು, ಘೋಷಣೆಗಳನ್ನು ಕೊಡುತ್ತಿದ್ದಾರೆ. ಇದಕ್ಕೆ ಮರುಳಾದರೆ ಭಾರತದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಬೆಸುಗೆ ನಾಶವಾಗುತ್ತದೆ ಎಂದರು. 

ದೇಶದ ಹೆಸರನ್ನೇ ಈಗ ಬದಲಾಯಿಸುವ ಹುನ್ನಾರ ಮಾಡುತ್ತಾ ಡ್ರಾಮಾ ಮಾಡುತ್ತಿದ್ದಾರೆ. ತನ್ನ ಕಾರ್ಯಕ್ರಮಗಳಿಗೆ ಮೇಕ್ ಇನ್ ಇಂಡಿಯಾ , ಸ್ಕಿಲ್ ಇಂಡಿಯಾ, ಸ್ಟಾಂಡ್ ಅಪ್ ಇಂಡಿಯಾ ಅಂತೆಲ್ಲಾ ಹೆಸರಿಟ್ಟಿದ್ದ ಬಿಜೆಪಿ, ಕೇಂದ್ರ ಸರ್ಕಾರವೇ ಈಗ ವಿಪಕ್ಷಗಳ ಮೈತ್ರಿಕೂಟವಾದ “INDIA” ಹೆಸರಿಗೆ ಬೆಚ್ಚಿ ಬಿದ್ದು,”ಭಾರತ” ಎಂದು ಹೊಸದಾಗಿ ಹೇಳಲು ಹೊರಟಿದೆ ಎಂದು ಟೀಕಿಸಿದರು.

ನಾವು ಭಾರತ್ ಜೋಡೋ ನಡೆಸಿದವರು. ನಮಗೆ ಭಾರತ-ಇಂಡಿಯಾ ಬಗ್ಗೆ ಪಾಠ ಹೇಳುವ ಮೂರ್ಖತನಕ್ಕೆ ಬಿಜೆಪಿ ಪರಿವಾರ ಮುಂದಾಗಿದೆ. ಇವರಿಗೆ ಭಾರತದ ಬಗ್ಗೆಯೂ ಗೌರವ ಇಲ್ಲ, ಇಂಡಿಯಾದ ಘನತೆಯೂ ಗೊತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. 

Trending

Exit mobile version