Connect with us

ಕ್ರೀಡೆ

ಐಪಿಎಲ್ 2025 ಟೂರ್ನಿಗೆ ಪ್ಲೇಯರ್ ರಿಪ್ಲೇಸ್‌ಮೆಂಟ್ ನಿಯಮ ಬದಲು, ಹೊಸ ರೂಲ್ಸ್

Published

on

 ಐಪಿಎಲ್ ಟೂರ್ನಿ ಸ್ಮಾಲ್ ಬ್ರೇಕ್ ಬಳಿಕ ಇದೀಗ ಮತ್ತೆ ಆರಂಭಗೊಳ್ಳುತ್ತಿದೆ. ಭಾರತ ಹಾಗೂ ಪಾಕಿಸ್ತಾನ ನಡುವಿನ ಗಡಿ ಸಂಘರ್ಷ ಕಾರಣದಿಂದ ಐಪಿಎಲ್ ಟೂರ್ನಿ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಇದೀಗ ಮೇ.17 ರಿಂದ ಟೂರ್ನಿ ಪುನರ್ ಆರಂಭಗೊಳ್ಳುತ್ತಿದೆ. ಇದರ ಬೆನ್ನಲ್ಲೇ ಬಿಸಿಸಿಐ ಪ್ಲೇಯರ್ ರಿಪ್ಲೇಸ್‌ಮೆಂಟ್ ನಿಯಮದಲ್ಲಿ ಬದಲಾವಣೆ ಮಾಡಿದೆ. 2025ರ ಐಪಿಎಲ್ ಟೂರ್ನಿಯ ಇನ್ನುಳಿದ ಆವೃತ್ತಿಗೆ ಹೊಸ ನಿಯಮ ಜಾರಿಯಾಗುತ್ತಿದೆ. ಹೊಸ ನಿಯಮದ ಪ್ರಕಾರ ತಾತ್ಕಾಲಿಕವಾಗಿ ಬದಲಿ ಆಟಗಾರರ ಆಯ್ಕೆ ಮಾಡಲು ಬಿಸಿಸಿಐ ಅವಕಾಶ ನೀಡಿದೆ. 

ಪ್ಲೇಯರ್ ರಿಪ್ಲೇಸ್‌ಮೆಂಟ್ ನಿಯಮದಲ್ಲಿ ಬದಲಾವಣೆ
ಐಪಿಎಲ್ ಟೂರ್ನಿಯ ಹೊಸ ವೇಳಾಪಟ್ಟಿ ಪ್ರಕಾರ ಫೈನಲ್ ಪಂದ್ಯ ಜೂನ್ 3 ರಂದು ನಡೆಯಲಿದೆ. ಮೊದಲ ವೇಳಾಪಟ್ಟಿ ಪ್ರಕಾರ ಮೇ 25ಕ್ಕೆ ಅಂತ್ಯಗೊಳ್ಳಬೇಕಿತ್ತು. ಅಂತಾರಾಷ್ಟ್ರೀಯ ಆಟಗಾರರ ಲಭ್ಯತೆ ಹಾಗೂ ಇತರ ಟೂರ್ನಿಗಳ ಕಾರಣಗಳಿಂದ ಮೇ.25 ರಿಂದ 30 ರೊಳಗೆ ಐಪಿಎಲ್ ಮುಗಿಸಬೇಕು. ಆದರೆ ಟೂರ್ನಿ ಸ್ಥಗಿತಗೊಂಡ ಕಾರಣ ಟೂರ್ನಿ ವಿಳಂಬವಾಗಿದೆ. ಇದರಿಂದ ಹಲವು ಅಂತಾರಾಷ್ಟ್ರೀಯ ಆಟಗಾರರು 2025ರ ಇನ್ನುಳಿದ ಐಪಿಎಲ್ ಟೂರ್ನಿಗೆ ಲಭ್ಯರಿಲ್ಲ. ಮತ್ತೆ ಕೆಲ ಆಟಾಗರರ ವೈಯುಕ್ತಿಕ ಕಾರಣ ನೀಡಿ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಪ್ಲೇಯರ್ ರಿಪ್ಲೇಸ್‌ಮೆಂಟ್ ನಿಯಮದಲ್ಲಿ ಬದಲಾವಣೆ ಅನಿವಾರ್ಯವಾಗಿತ್ತು.

ತಾತ್ಕಾಲಿಕ ಆಯ್ಕೆ ಒಕೆ, ರಿಟೆನ್ಶನ್ ಸಾಧ್ಯವಿಲ್ಲ
ಅಂತಾರಾಷ್ಟ್ರೀಯ ಆಟಗಾರರ ರಾಷ್ಟ್ರೀಯ ಕಮಿಟ್‌ಮೆಂಟ್, ಇಂಜುರಿ, ವೈಯುಕ್ತಿ ಕಾರಣಗಳಿಂದ ಐಪಿಎಲ್ ಪಂದ್ಯಕ್ಕೆ ಅಲಭ್ಯರಾಗಿದ್ದರೆ, ಅವರ ಸ್ಥಾನಕ್ಕೆ ಬದಲಿ ಆಟಗಾರರನ್ನು ನೇಮಕ ಮಾಡಲು ಬಿಸಿಸಿಐ ಅವಕಾಶ ನೀಡಿದೆ.  ಹೀಗಾಗಿ ಫ್ರಾಂಚೈಸಿ ತಮ್ಮ ತಮ್ಮ ತಂಡದಲ್ಲಿ ಯಾವ ಆಟಗಾರರು ಲಭ್ಯರಿಲ್ಲವೋ ಅವರ ಸ್ಥಾನಕ್ಕೆ ಸೂಕ್ತ ಆಟಗಾರರನ್ನು ಟೂರ್ನಿಯ ಅಂತ್ಯದ ವರೆಗೆ ಬದಲಿಸಲು ಅವಕಾಶ ನೀಡಿದೆ.  ಆದರೆ ತಾತ್ಕಾಲಿಕವಾಗಿ ಆಯ್ಕೆ ಮಾಡಿದ ಆಟಗಾರರನ್ನು ಮುಂದಿನ ಆವೃತ್ತಿಗೆ ಉಳಿಸಲು ಸಾಧ್ಯವಿಲ್ಲ. ಈ ಆಟಾಗರರು 2026ರ ಐಪಿಎಲ್ ಹರಾಜಿನಲ್ಲಿ ನೋಂದಣಿ ಮಾಡಿಕೊಳ್ಳಬೇಕು. 

ಮೊದಲಿನ ನಿಯಮವೇನು?
ಐಪಿಎಲ್ ಮೊದಲಿ ನಿಮಯ ಪ್ರಕಾರ ಪ್ಲೇಯರ್ ರಿಪ್ಲೇಸ್‌ಮೆಂಟ್ ಮಾಡಲು ಕಾಲಾವಕಾಶವಿದೆ. ಅಂದರೆ ಗಾಯ ಅಥವಾ ಅನಾರೋಗ್ಯ ಕಾರಣದಿಂದ ಆಟಗಾರರ ಅಲಭ್ಯರಾಗಿದ್ದರೆ ಅವರ ಸ್ಥಾನಕ್ಕೆ ಬದಲಿ ಆಟಗಾರರ ನೇಮಕಕ್ಕೆ ಅವಕಾಶವಿದೆ. ಆದರೆ ತಂಡ ತನ್ನ 12ನೇ ಪಂದ್ಯಕ್ಕೂ ಮೊದಲು ಈ ಬದಲಾವಣೆ ಮಾಡಬೇಕು. 12ನೇ ಪಂದ್ಯದ ಬಳಿಕ ಆಟಗಾರರ ಬದಲಾವಣೆಗೆ ಅವಕಾಶವಿಲ್ಲ. ಆದರೆ ಈ ಬಾರಿ ಪರಿಸ್ಥಿತಿ ಬೇರೆಯಾಗಿರುವ ಕಾರಣ ಟೂರ್ನಿ ಅಂತ್ಯದವರೆಗೆ ಅವಕಾಶ ನೀಡಲಾಗಿದೆ.

ಹೊಸ ನಿಯಮದಿಂದ ಫ್ರಾಂಚೈಸಿ ಖುಷ್
ಬಿಸಿಸಿಐ ಪ್ಲೇಯರ್ ರಿಪ್ಲೇಸ್‌ಮೆಂಟ್ ನಿಯಮ ಬದಲಾವಣೆಯಿಂದ ಫ್ರಾಂಚೈಸಿ ಖುಷಿಯಾಗಿದೆ. ಕಾರಣ ಬಹುತೇಕ ಎಲ್ಲಾ ತಂಡದಿಂದ ಕೆಲ ವಿದೇಶಿ ಆಟಗಾರರು ಅಲಭ್ಯರಾಗಿದ್ದಾರೆ. ತಮ್ಮ ರಾಷ್ಟ್ರೀಯ ತಂಡದ ಟೂರ್ನಿಗಾಗಿ ಮರಳಿದ್ದಾರೆ. ಮತ್ತೆ ಕೆಲವರು ಗಡಿ ಸಂಘರ್ಷದ ಕಾರಣದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ತಂಡದಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಕಠಿಣ ಸವಾಲಾಗಿತ್ತು. ಇದೀಗ ಬಿಸಿಸಿಐ ಆಟಗಾರರ ರಿಪ್ಲೇಸ್ ಮಾಡಲು ಅವಕಾಶ ನೀಡಿರುವ ಕಾರಣ ಫ್ರಾಂಚೈಸಿ ಇದೀಗ ಸಮಾಧಾನಗೊಂಡಿದೆ.

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!

Published

on

By

ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.

ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.

ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.

ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.

ಆರ್ಸಿಬಿ ಬ್ಯಾಟಿಂಗ್ ವಿವರ:

  • ವಿರಾಟ್ ಕೊಹ್ಲಿ – 28 (18)
  • ಫಿಲ್ ಸಾಲ್ಟ್ – 46 (30)
  • ದೇವದತ್ತ ಪಡಿಕಲ್ – 50 (29)
  • ರಜತ್ ಪಾಟೀದಾರ್ – 48* (19)
  • ಟಿಮ್ ಡೇವಿಡ್ – 70* (25)
Continue Reading

ಕ್ರೀಡೆ

ಐಪಿಎಲ್ ಟಿಕೆಟ್ ದುರ್ಬಳಕೆ: ಶಾಸಕರ ಪಾಸ್ ಸ್ನೇಹಿತರ ಕೈಗೆ!

Published

on

By

ಬೆಂಗಳೂರುದಲ್ಲಿ ಐಪಿಎಲ್ ಕ್ರೇಜ್ ಗರಿಷ್ಠ ಮಟ್ಟಕ್ಕೆ ಏರಿರುವ ನಡುವೆಯೇ, ಶಾಸಕರಿಗೆ ನೀಡಲಾದ ಉಚಿತ ಟಿಕೆಟ್ ಪಾಸ್‌ಗಳ ದುರ್ಬಳಕೆಯ ಆರೋಪ ದೊಡ್ಡ ವಿವಾದಕ್ಕೆ ಕಾರಣವಾಗಿದೆ. Indian Premier League ಪಂದ್ಯಗಳಿಗೆ ಸಂಬಂಧಿಸಿದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.

ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನ ಕೆಲವು ಶಾಸಕರು ತಮ್ಮ ಹಾಗೂ ಕುಟುಂಬ ಸದಸ್ಯರಿಗೆ ಉಚಿತ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ Karnataka State Cricket Association ವಿಶೇಷ ಅಕ್ರೆಡೆಷನ್ ಕಾರ್ಡ್ ಮಾದರಿಯ ಪಾಸ್‌ಗಳನ್ನು ವಿತರಿಸಿತ್ತು.

ಆದರೆ, ಈ ಪಾಸ್‌ಗಳು ಈಗ ಶಾಸಕರ ಕುಟುಂಬದವರಿಗಷ್ಟೇ ಸೀಮಿತವಾಗದೆ, ಅವರ ಮಕ್ಕಳ ಸ್ನೇಹಿತರ ಕೈಗೆ ಸೇರಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಪೊಲೀಸರು ತಪಾಸಣೆ ನಡೆಸಿದ ವೇಳೆ, ಶಾಸಕರ ಕುಟುಂಬದ ಹೆಸರಿನ ಪಾಸ್ ಹಿಡಿದು ಬಂದಿದ್ದ ಕೆಲ ಯುವಕರ ಮೇಲೆ ಅನುಮಾನ ಮೂಡಿದೆ.

ಪರಿಶೀಲನೆ ವೇಳೆ ಯುವಕರು ತಡಬಡಾಯಿಸಿದ್ದು, ಕೊನೆಯಲ್ಲಿ ತಾವು ಶಾಸಕರ ಮಗನ ಸ್ನೇಹಿತರು ಎಂದು ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸರು ಅವರನ್ನು ಎಚ್ಚರಿಕೆ ನೀಡಿ ಕಳಿಸಿದ್ದಾರೆ.

ಈ ಘಟನೆ ಹಲವಾರು ಪ್ರಶ್ನೆಗಳನ್ನು ಎಬ್ಬಿಸಿದೆ. ಜನಪ್ರತಿನಿಧಿಗಳಿಗಾಗಿ ನೀಡಲಾದ ಸೌಲಭ್ಯವನ್ನು ಅನರ್ಹರು ಬಳಸುವುದು ಸರಿಯೇ? ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಸಾಮಾನ್ಯ ಜನರು ಟಿಕೆಟ್‌ಗಾಗಿ ಪರದಾಡುತ್ತಿರುವಾಗ, ಉಚಿತ ಪಾಸ್‌ಗಳು ದುರ್ಬಳಕೆಯಾಗುತ್ತಿರುವುದು ಜನರಲ್ಲಿ ಆಕ್ರೋಶಕ್ಕೂ ಕಾರಣವಾಗಿದೆ. ಇದೀಗ KSCA ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಡ ಹೆಚ್ಚಾಗಿದೆ.

Continue Reading

ಕ್ರೀಡೆ

ಗ್ಯಾಸ್‌ಗಾಗಿ ಜನ ಸಾಲು, ಟಿಕೆಟ್‌ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!

Published

on

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆ, ಜನಪ್ರತಿನಿಧಿಗಳ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಆಟೋ ಚಾಲಕರು ಗ್ಯಾಸ್‌ಗಾಗಿ ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವಾಗ, ಇನ್ನೊಂದು ಕಡೆ ಶಾಸಕರು IPL 2026 ಟಿಕೆಟ್ ಪಡೆಯಲು ತಮ್ಮ ಪಿಎಗಳನ್ನು ಕ್ಯೂನಲ್ಲಿ ನಿಲ್ಲಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮಾಹಿತಿಯ ಪ್ರಕಾರ, ಸರ್ಕಾರ ಮತ್ತು Karnataka State Cricket Association (KSCA) ನಡುವೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಒಪ್ಪಂದವಾಗಿದೆ. ಇದರ ಹಿನ್ನೆಲೆಯಲ್ಲಿ, Royal Challengers Bengaluru ಮತ್ತು Chennai Super Kings ನಡುವಿನ ಪಂದ್ಯಕ್ಕೆ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಗಮನ ಸೆಳೆದಿವೆ.

ಸ್ಪೀಕರ್ ಕಚೇರಿಯಲ್ಲೇ ಟಿಕೆಟ್ ವಿತರಣೆ ನಡೆಯುತ್ತಿರುವುದರಿಂದ, ಶಾಸಕರ ಸೂಚನೆ ಮೇರೆಗೆ ಪಿಎಗಳು ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.

ಇದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಗ್ಯಾಸ್ ಕೊರತೆ, ದೈನಂದಿನ ಸಮಸ್ಯೆಗಳ ನಡುವೆ ಈ ರೀತಿಯ ಘಟನೆಗಳು ಸಾರ್ವಜನಿಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿವೆ.

ರಾಜಕೀಯ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Continue Reading

Trending