ಬೆಂಗಳೂರು
ಜ್ಞಾನಭಾರತಿ ಕ್ಯಾಂಪಸ್‌ಗೆ ಶೀಘ್ರದಲ್ಲೇ ‘ಪಾರಂಪರಿಕ ತಾಣ’ ಸ್ಥಾನಮಾನ..!
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ಗೆ ಶೀಘ್ರದಲ್ಲೇ ಪಾರಂಪರಿಕ ಸ್ಥಾನಮಾನ ಸಿಗಲಿದ್ದು, ಇದರೊಂದಿಗೆ ಕ್ಯಾಂಪಸ್‌ನಲ್ಲಿ ಸ್ಕೈಡೆಕ್ ನಿರ್ಮಿಸುವ ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಯೋಜನೆಗೆ ಹಿನ್ನೆಡೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಹಸಿರು ಪರಿಸರವನ್ನು ಕಾಪಾಡುವ ಉದ್ದೇಶದಿಂದ ಜೀವ ವೈವಿಧ್ಯ ಕಾಯ್ದೆ 2002 ರ ಅಡಿ ‘ಪಾರಂಪರಿಕ ತಾಣ’ ಎಂದು ಘೋಷಿಸಲು ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ಅವರು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದಾರೆ.
ಜ್ಞಾನಭಾರತಿ ಅವರಣದಲ್ಲಿ ಲಕ್ಷಾಂತರ ಬೃಹತ್ ಮರಗಳಿದ್ದು, ಇಲ್ಲಿನ ಜೀವವೈವಿಧ್ಯತೆಯನ್ನು ಮುಂದಿನ ಪೀಳಿಗೆಗೆ ಕಾಪಾಡುವ ಮತ್ತು ಬೆಂಗಳೂರು ಮಹಾನಗರದ ಹಸಿರು ವಲಯ ರಕ್ಷಿಸುವ ಹೊಣೆ ಇಲಾಖೆ ಮೇಲಿದೆ.
ಆದರೆ, ಜ್ಞಾನಭಾರತಿ ಪ್ರದೇಶದಲ್ಲಿ ಮರಗಳನ್ನು ಕಡಿದು ವಿವಿಧ ನಿರ್ಮಾಣ ಕಾರ್ಯಕೈಗೊಳ್ಳಲು ಪ್ರಯತ್ನಗಳು ನಡೆಯುತ್ತಿದ್ದು, ಇದನ್ನು ತಡೆದು ಜೀವ ವೈವಿಧ್ಯ ರಕ್ಷಿಸುವಂತೆ ಪರಿಸರ ಪ್ರೇಮಿಗಳು ಮನವಿ ಮಾಡಿದ್ದಾರೆ.
ಜೀವ ವೈವಿದ್ಯ ಕಾಯಿದೆ 2022ರ ಅಡಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಈ ಹಸಿರು ಆವರಣವನ್ನು ಪಾರಂಪರಿಕ ತಾ ಎಂದು ಘೋಷಿಸಲು ಸಾಧ್ಯವಿದ್ದಲ್ಲಿ, ಪ್ರಸ್ತಾವನೆಯನ್ನು ಕಡತದಲ್ಲಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಪ್ರಸ್ತಾವಿತ ಪ್ರದೇಶವನ್ನು ‘ಜೀವವೈವಿಧ್ಯ ಪಾರಂಪರಿತ ತಾಣ’ ಎಂದು ಘೋಷಿಸಿದರೆ, ಜೀವವೈವಿಧ್ಯ ಕಾಯ್ದೆ, 2002 ರ ಪ್ರಕಾರ ನಿರ್ಮಾಣದ ಮೇಲಿನ ಎಲ್ಲಾ ರಕ್ಷಣಾತ್ಮಕ ಕ್ರಮಗಳು ಮತ್ತು ನಿರ್ಬಂಧಗಳನ್ನು ವಿಧಿಸಲಾಗುವುದು ಎಂದು ಕೆಬಿಬಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋವರ್ಧನ್ ಸಿಂಗ್ ಅವರು ಹೇಳಿದ್ದಾರೆ.
ಸ್ಥಳದಲ್ಲಿ ವಿವರವಾದ ಸಮೀಕ್ಷೆಯನ್ನು ಕೈಗೊಳ್ಳಲಾಗುವುದು. ಪರಂಪರೆಯ ತಾಣವನ್ನು ಘೋಷಿಸಲು, ಶ್ರೀಮಂತ ಮತ್ತು ವಿಶಿಷ್ಟ ಸಸ್ಯ ಪ್ರಭೇದಗಳು ಇರಬೇಕು. ಭೂಮಿಯ ಸ್ಥಿತಿಯೂ ನಿರ್ಣಾಯಕ ಪಾತ್ರ ವಹಿಸುತ್ತದೆ. ಒಂದು ವೇಳೆ ಈ ಸ್ಥಳವನ್ನು ಪಾರಂಪರಿಕ ತಾಣವೆಂದು ಘೋಷಿಸಿದ್ದೇ ಆದರೆ, ಸ್ಕೈಡೆಕ್ ನಿರ್ಮಿಸಲು ಸಾಧ್ಯವಾಗುವುದಿಲ್ಲ. ಪಾರಂಪರಿಕ ತಾಣವೆಂದು ಘೋಷಿಸಲಾದ ಪ್ರದೇಶದ ಮೇಲೆ ಯಾವುದೇ ಪರಿಣಾಮ ಬೀರದಂತೆ ನೋಡಿಕೊಳ್ಳಲಾಗುತ್ತದೆ. ಅಸ್ತಿತ್ವದಲ್ಲಿರುವ ರಚನೆಯ ವಿಸ್ತರಣೆಯ ಮೂಲಕ ಲಂಬವಾದ ನಿರ್ಮಾಣವನ್ನು ಮಾತ್ರ ಅನುಮತಿಸಲಾಗುತ್ತದೆ ಎಂದು ಅರಣ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬೆಂಗಳೂರು ಪಶ್ಚಿಮದಲ್ಲಿ ಉಳಿದಿರುವ ಕೊನೆಯ ದೊಡ್ಡ ಹಸಿರು ಪ್ರದೇಶ ಇದಾಗಿದ್ದು, ಅದನ್ನು ರಕ್ಷಿಸಬೇಕಾದ ಕಾರಣ ಇದನ್ನು ಪರಂಪರೆಯ ತಾಣವೆಂದು ಘೋಷಿಸುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಟಿಜೆ ರೇಣುಕಾ ಪ್ರಸಾದ್ ಅವರು ಮಾತನಾಡಿ, ಕ್ಯಾಂಪಸ್ 1,112 ಎಕರೆಗಳಲ್ಲಿದ್ದು, ಸುಮಾರು 660 ಎಕರೆ ಭೂಮಿ ಹಸಿರಿನಿಂದ ಕೂಡಿದೆ. ಸಾಕಷ್ಟು ಮರಗಳು ಕ್ಯಾಂಪಸ್ ನಲ್ಲಿದೆ. ಒಂದು ಲಕ್ಷಕ್ಕೂ ಹೆಚ್ಚು ಮರಗಳಿವೆ, 1,300 ಅಪರೂಪದ ಮರಗಳಿವೆ. 150 ಪಕ್ಷಿಗಳು, 160 ಚಿಟ್ಟೆಗಳು ಮತ್ತು 50 ಜಾತಿಗಳ ಸರೀಸೃಪ ಹಾಗೂ ಅನೇಕ ಅಪರೂಪದ ಔಷಧೀಯ ಸಸ್ಯಗಳೂ ಇವೆ ಎಂದ ಮಾಹಿತಿ ನೀಡಿದ್ದಾರೆ.
ಕ್ಯಾಂಪಸ್ ನಲ್ಲಿ 395 ಎಕರೆಗಳನ್ನು ಎನ್‌ಎಲ್‌ಎಸ್‌ಐಯು, ಕಲಾಗ್ರಾಮ, ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಇತರ ಸಂಸ್ಥೆಗಳಿಗೆ ಗುತ್ತಿಗೆ ನೀಡಲಾಗಿದೆ. ಅಲ್ಲದೆ, 150 ಎಕರೆಗಳನ್ನು ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿ ಬಳಸಿಕೊಂಡಿದೆ. ಈ ಪ್ರದೇಶವನ್ನು ಜೀವವೈವಿಧ್ಯ ಪಾರಂಪರಿಕ ತಾಣವೆಂದು ಘೋಷಿಸಲು ಸುಮಾರು ನಾಲ್ಕು ತಿಂಗಳ ಹಿಂದೆ ಸಚಿವ ಈಶ್ವರ್ ಖಂಡ್ರೆಯವರಿಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿತ್ತು. ಮುಖ್ಯಮಂತ್ರಿ, ರಾಜ್ಯಪಾಲರು ಮತ್ತು ಪ್ರಧಾನಿಮಂತ್ರಿಗಳಿಗು ಮನವಿ ಸಲ್ಲಿಸಲಾಗಿಗಿತ್ತು. ಜ್ಞಾನಭಾರತಿ ಕ್ಯಾಂಪಸ್ ಅಷ್ಟೇ ಅಲ್ಲದೆ, ನಂದಿ ಬೆಟ್ಟವನ್ನೂ ಜೀವವೈವಿಧ್ಯ ಪಾರಂಪರಿಕ ತಾಣವೆಂದು ಘೋಷಿಸುವಂತೆ ಮನವಿ ಮಾಡಿದ್ದೇವೆಂದು ತಿಳಿಸಿದ್ದಾರೆ.
ಪರಿಸರವಾದಿ ಡಾ. ಎ.ಎನ್. ಯಲ್ಲಪ್ಪ ರೆಡ್ಡಿ ಅವರು ಮಾತನಾಡಿ, ಕ್ಯಾಂಪಸ್ ನಲ್ಲಿ ವಿಶಿಷ್ಟ ಉದ್ಯಾನಗಳನ್ನು ರಚಿಸಲಾಗಿದ್ದು, ಇದರಲ್ಲಿ ಪಶ್ಚಿಮ ಘಟ್ಟಗಳಿಗೆ ಸ್ಥಳೀಯವಾಗಿರುವ ಅಪರೂಪದ ಸಸ್ಯ ಪ್ರಭೇದಗಳು ಸಹ್ಯಾದ್ರಿ ವನ, ತಪೋವನ ಮತ್ತು ಚರಕವನ ಸೇರಿವೆ ಎಂದು ಹೇಳಿದ್ದಾರೆ.
ದೇಶ
Cockroach Janata Party ಗೆ ಬೆಂಗಳೂರು ಪೊಲೀಸರ ಶಾಕ್! ಟೌನ್ ಹಾಲ್ ಕಾರ್ಯಕ್ರಮಕ್ಕೆ ಅನುಮತಿ ಇಲ್ಲ
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿರುವ ‘ಕಾಕ್ರೋಚ್ ಜನತಾ ಪಾರ್ಟಿ’ಗೆ ಇದೀಗ Bengaluru City Police ದೊಡ್ಡ ಶಾಕ್ ನೀಡಿದೆ. ಮೇ 24ರಂದು ಟೌನ್ ಹಾಲ್ ಬಳಿ ಆಯೋಜಿಸಲು ಯೋಜಿಸಲಾಗಿದ್ದ ಶಾಂತಿಯುತ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಅನುಮತಿ ನೀಡುವುದಿಲ್ಲ ಎಂದು ಬೆಂಗಳೂರು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ಪೋಸ್ಟ್‌ಗಳಲ್ಲಿ, ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ ಬಳಿ ಮಾನವ ಸರಪಳಿ ನಿರ್ಮಿಸಲು ಕರೆ ನೀಡಲಾಗಿತ್ತು. ಆದರೆ ಈ ಸಂಬಂಧ ಯಾವುದೇ ಅಧಿಕೃತ ಮನವಿ ಪೊಲೀಸ್ ಇಲಾಖೆಗೆ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಒಂದು ವೇಳೆ ಅರ್ಜಿ ಸಲ್ಲಿಸಿದರೂ ಟೌನ್ ಹಾಲ್ ಪ್ರದೇಶದಲ್ಲಿ ಕಾರ್ಯಕ್ರಮ ನಡೆಸಲು ಅವಕಾಶವಿಲ್ಲ ಎಂದು ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.
Town Hall Bengaluru ಬಳಿ ಧರಣಿ, ಪ್ರತಿಭಟನೆ ಅಥವಾ ಮೆರವಣಿಗೆಗಳಿಗೆ ಅನುಮತಿ ನೀಡಬಾರದು ಎಂಬ High Court of Karnataka ಆದೇಶ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ Freedom Park ಹೊರತುಪಡಿಸಿ ನಗರದ ಬೇರೆ ಭಾಗಗಳಲ್ಲಿ ಪ್ರತಿಭಟನೆ ನಡೆಸಲು ಅವಕಾಶವಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
‘ಕಾಕ್ರೋಚ್ ಜನತಾ ಪಾರ್ಟಿ’ಯನ್ನು Abhijeet Dipke ಸ್ಥಾಪಿಸಿದ್ದು, ಕೆಲವೇ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಜನಪ್ರಿಯತೆ ಗಳಿಸಿತ್ತು. ಪಕ್ಷದ ಎಕ್ಸ್ ಖಾತೆ ಒಂದೇ ವಾರದಲ್ಲಿ 10 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಪಡೆದಿತ್ತು. ನಂತರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಸೂಚನೆಯ ಮೇರೆಗೆ ಖಾತೆಯನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ.
ಇತ್ತೀಚೆಗೆ ಭಾರತದ ಮುಖ್ಯ ನ್ಯಾಯಮೂರ್ತಿ Surya Kant ಯುವಕರನ್ನು ‘ಜಿರಳೆ’ಗಳಿಗೆ ಹೋಲಿಸಿ ನೀಡಿದ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಮೀಮ್ಸ್ ಮತ್ತು ಟ್ರೋಲಿಂಗ್‌ಗಳ ನಡುವೆ ‘ಕಾಕ್ರೋಚ್ ಜನತಾ ಪಾರ್ಟಿ’ ಟ್ರೆಂಡ್ ಆಗಿತ್ತು.
ಪಕ್ಷದ ಇನ್‌ಸ್ಟಾಗ್ರಾಮ್ ಖಾತೆಗೆ 5 ಮಿಲಿಯನ್‌ಗಿಂತ ಹೆಚ್ಚು ಫಾಲೋವರ್ಸ್ ಸೇರಿದ್ದು, ವೆಬ್‌ಸೈಟ್‌ನಲ್ಲಿ ಲಕ್ಷಾಂತರ ಮಂದಿ ನೋಂದಾಯಿಸಿಕೊಂಡಿದ್ದರು. ಇದೀಗ ಟೌನ್ ಹಾಲ್ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ ಹೊಸ ಚರ್ಚೆಗೆ ಕಾರಣವಾಗಿದೆ.
ದೇಶ
ತೈಲ ದರ ಮತ್ತೆ ಏರಿಕೆ! 10 ದಿನಗಳಲ್ಲಿ ಮೂರನೇ ಬಾರಿ ಶಾಕ್ ಕೊಟ್ಟ ಪೆಟ್ರೋಲ್-ಡೀಸೆಲ್
ಜಾಗತಿಕ ತೈಲ ಬಿಕ್ಕಟ್ಟಿನ ಪರಿಣಾಮವಾಗಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಇಂದು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಪ್ರತಿ ಲೀಟರ್‌ಗೆ 91 ಪೈಸೆವರೆಗೆ ಹೆಚ್ಚಿಸಿದ್ದು, ಜನರಿಗೆ ಮತ್ತೊಮ್ಮೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಕಳೆದ 10 ದಿನಗಳಲ್ಲಿ ಇದು ಮೂರನೇ ಬಾರಿಗೆ ಇಂಧನ ದರ ಏರಿಕೆಯಾಗಿರುವುದು ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ.
ಪರಿಷ್ಕೃತ ದರದ ಪ್ರಕಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 99.51 ರೂ.ಗೆ ಏರಿಕೆಯಾದರೆ, ಡೀಸೆಲ್ ದರ 92.49 ರೂ.ಗೆ ತಲುಪಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ 108.09 ರೂ. ಹಾಗೂ ಡೀಸೆಲ್ ದರ 95.99 ರೂ. ಆಗಿದೆ. ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈ ನಗರಗಳಲ್ಲಿಯೂ ಇಂಧನ ದರಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ.
ಮೇ 15ರಂದು ಪ್ರತಿ ಲೀಟರ್‌ಗೆ 3 ರೂ. ಏರಿಕೆ ಮಾಡಲಾಗಿತ್ತು. ಬಳಿಕ ಮೇ 19ರಂದು 90 ಪೈಸೆ ಹೆಚ್ಚಿಸಲಾಗಿದ್ದು, ಇದೀಗ ಮತ್ತೆ 91 ಪೈಸೆ ಏರಿಕೆ ಮಾಡಲಾಗಿದೆ. ಈ ಮೂಲಕ ಎರಡು ವಾರಗಳಲ್ಲಿ ಒಟ್ಟು 5 ರೂ.ವರೆಗೆ ಇಂಧನ ದರ ಏರಿಕೆಯಾಗಿದೆ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಉಂಟಾಗಿದೆ. ಭಾರತ ತನ್ನ ಕಚ್ಚಾ ತೈಲದ ಅವಶ್ಯಕತೆಗಳ ಶೇ 85ರಷ್ಟು ಆಮದು ಮಾಡಿಕೊಳ್ಳುವುದರಿಂದ ಅಂತಾರಾಷ್ಟ್ರೀಯ ಬೆಲೆ ಏರಿಳಿತದ ನೇರ ಪರಿಣಾಮ ದೇಶೀಯ ಮಾರುಕಟ್ಟೆಯ ಮೇಲೆ ಬೀಳುತ್ತಿದೆ. ಬ್ರೆಂಟ್ ಕಚ್ಚಾ ತೈಲದ ಬೆಲೆ ಬ್ಯಾರೆಲ್‌ಗೆ 104 ಡಾಲರ್ ದಾಟಿರುವುದು ತೈಲ ಕಂಪನಿಗಳ ಮೇಲೆ ಒತ್ತಡ ಹೆಚ್ಚಿಸಿದೆ.
ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚಳವಾಗುವ ಸಾಧ್ಯತೆ ಇದ್ದು, ಇದರ ಪರಿಣಾಮವಾಗಿ ದಿನನಿತ್ಯದ ವಸ್ತುಗಳ ಬೆಲೆಯಲ್ಲೂ ಏರಿಕೆ ಕಂಡುಬರುವ ಆತಂಕ ಎದುರಾಗಿದೆ.
ದೇಶ
ವಿಕಾಸ ದಶಕೋತ್ಸವ 2026: ಹಿರಿಯ ಪತ್ರಕರ್ತರಿಗೆ ಸನ್ಮಾನ, ಪ್ರಶಸ್ತಿ ಪ್ರದಾನ
ತುಮಕೂರು/ಗುಬ್ಬಿ: ಸಮಾನ ಮನಸ್ಕ ಮಾಧ್ಯಮ ಮಿತ್ರರ ಸಂಘಟನೆಯಾದ ‘ವಿಕಾಸ’ ಸಂಸ್ಥೆ ತನ್ನ ಯಶಸ್ವಿ ಹತ್ತು ವರ್ಷಗಳ ಪಯಣವನ್ನು ಸಂಭ್ರಮಿಸುವ ಅಂಗವಾಗಿ ‘ವಿಕಾಸ ದಶಕದ ಸಂಭ್ರಮ: 2026’ ಹಾಗೂ ತುಮಕೂರು ಜಿಲ್ಲಾ ಸಮಾವೇಶವನ್ನು ಆಯೋಜಿಸಿದೆ. ಮೇ 24, 2026ರ ಭಾನುವಾರ ಬೆಳಿಗ್ಗೆ 9.30ರಿಂದ ಸಂಜೆ 5 ಗಂಟೆಯವರೆಗೆ ಗುಬ್ಬಿಯ ಪ್ರಸಿದ್ಧ ಶ್ರೀ ಚಿದಂಬರ ಆಶ್ರಮದ ಆವರಣದಲ್ಲಿ ಈ ಭವ್ಯ ಸಮಾವೇಶ ನಡೆಯಲಿದೆ ಎಂದು ತುಮಕೂರು ಜಿಲ್ಲಾ ಸಂಚಾಲಕರಾದ ಭಾರತೀಶ ರಾವ್ ಹೊನ್ನಾಳಿ ಹಾಗೂ ಸುರೇಶ್ ವತ್ಸ ತಿಳಿಸಿದ್ದಾರೆ.
ಕಳೆದ ಒಂದು ದಶಕದಿಂದ ಸಮಾಜಮುಖಿ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ‘ವಿಕಾಸ’ ಸಂಸ್ಥೆ, ರಾಜ್ಯದ ವಿವಿಧ ಜಿಲ್ಲೆಗಳ ಮಾಧ್ಯಮ ಮಿತ್ರರನ್ನು ಒಂದೇ ವೇದಿಕೆಗೆ ತರಲು ಯಶಸ್ವಿಯಾಗಿದೆ. ಪತ್ರಿಕೋದ್ಯಮ, ಡಿಜಿಟಲ್ ಮೀಡಿಯಾ, ವ್ಯಂಗ್ಯಚಿತ್ರ, ವರದಿಗಾರಿಕೆ ಸೇರಿದಂತೆ ಮಾಧ್ಯಮ ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುವವರನ್ನು ಒಗ್ಗೂಡಿಸಿ ಕ್ರಿಯಾಶೀಲ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಸಂಸ್ಥೆಯ ವಿಶೇಷತೆ.
ಗಣ್ಯರಿಂದ ಉದ್ಘಾಟನೆ
ವಿಕಾಸದ ಗೌರವಾಧ್ಯಕ್ಷ ಬಿ.ಎಲ್. ಹನುಮಂತ ರಾವ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಮಾವೇಶವನ್ನು ಖ್ಯಾತ ವೈದಿಕ ಜ್ಯೋತಿಷಿ ಹಾಗೂ ರಾಜಗುರು ದ್ವಾರಕಾನಾಥ ಗುರೂಜಿ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಆರ್.ವಿ. ದೇಶಪಾಂಡೆ, ಸೊಗಡು ಶಿವಣ್ಣ, ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ ಹಾಗೂ ಎಸ್.ಆರ್. ಶ್ರೀನಿವಾಸ್ (ವಾಸು), ವಿಜಯವಾಣಿ ಹಿರಿಯ ಉಪ ಪ್ರಧಾನ ಸಂಪಾದಕ ರಾಘವೇಂದ್ರ ಗಣಪತಿ, ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಸಗೋಡು ಜಯಸಿಂಹ, ಮಾಜಿ ಎಂಎಲ್‌ಸಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ನಿವೃತ್ತ ಐಪಿಎಸ್ ಅಧಿಕಾರಿ ಗೋಪಾಲ ಹೊಸೂರ, ಖ್ಯಾತ ವಾಗ್ಮಿ ವೈ.ವಿ. ಗುಂಡುರಾವ್, ಆರ್ಟ್ ಆಫ್ ಲಿವಿಂಗ್ ಟ್ರಸ್ಟಿ ರಂಗನಾಥ ಪ್ರಸಾದ್, ಕೈಗಾರಿಕೋದ್ಯಮಿ ಎಚ್.ಜಿ. ಚಂದ್ರಶೇಖರ್ ಹಾಗೂ ಗುಬ್ಬಿ ಶ್ರೀ ಚಿದಂಬರ ಆಶ್ರಮದ ಅಧ್ಯಕ್ಷ ಸಚ್ಚಿದಾನಂದ ಶರ್ಮಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ವಿಶೇಷ ಉಪನ್ಯಾಸ ಮತ್ತು ಚರ್ಚಾಗೋಷ್ಠಿ
ಸಮಾವೇಶದ ಅಂಗವಾಗಿ ‘ಆಧುನಿಕ ಸಮಾಜಕ್ಕೆ ಮನುಸ್ಮೃತಿಯ ಅವಶ್ಯಕತೆ’ ವಿಷಯದ ಕುರಿತು ಡಾ. ರಾಘವೇಂದ್ರ ಭಟ್ಟ ಉಪನ್ಯಾಸ ನೀಡಲಿದ್ದು, ಆರ್‌ಎಸ್‌ಎಸ್ ಹಿರಿಯ ಪ್ರಚಾರಕ ಮಂಜುನಾಥ ಸ್ವಾಮಿ ಉಪಸ್ಥಿತರಿರಲಿದ್ದಾರೆ.
ಇನ್ನೊಂದು ವಿಶೇಷ ಚರ್ಚಾಗೋಷ್ಠಿಯಲ್ಲಿ ‘ಮಾಧ್ಯಮ ಕ್ಷೇತ್ರದ ಭವಿಷ್ಯ’ ಕುರಿತು ಡಾ. ಆಶಾ ಕೃಷ್ಣಸ್ವಾಮಿ, ಡಾ. ನಂದಿನಿ ಲಕ್ಷ್ಮೀಕಾಂತ್ ಹಾಗೂ ಉದಯ ಕಾಲ ದಿನಪತ್ರಿಕೆಯ ಕಾರ್ಯಕಾರಿ ಸಂಪಾದಕ ಪಿ. ರಾಜೇಂದ್ರ ವಿಚಾರ ಮಂಡನೆ ನಡೆಸಲಿದ್ದಾರೆ.
ಹಿರಿಯ ಪತ್ರಕರ್ತರಿಗೆ ಸನ್ಮಾನ
‘ನಮ್ಮ ಹಿರಿಯರು – ನಮ್ಮ ಹೆಮ್ಮೆ’ ಕಾರ್ಯಕ್ರಮದಡಿ ಹಿರಿಯ ವ್ಯಂಗ್ಯಚಿತ್ರಕಾರ ರಘುಪತಿ ಶೃಂಗೇರಿ, ಶ್ರೀಧರ್ ಕೋಮರವಳ್ಳಿ, ಅಂಕಣಕಾರ ತುರುವೇಕೆರೆ ಪ್ರಸಾದ್, ಹಿರಿಯ ಪತ್ರಕರ್ತರಾದ ಕರ್ಣಂ ರಮೇಶ್, ಸೊಗಡು ಸತ್ಯಣ್ಣ, ಆರ್. ಲಕ್ಷ್ಮಣ್, ಸಿ.ಟಿ. ಜೋಶಿ, ಜಿ.ಎಂ. ಜಗನ್ನಾಥ್, ಎಸ್.ಎನ್. ರಾಜಗೋಪಾಲ್ ಸೇರಿದಂತೆ ಹಲವು ಮಾಧ್ಯಮ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಗುತ್ತದೆ.
ವಿಕಾಸ ಸ್ಮಾರಕ ಪ್ರಶಸ್ತಿ ಪ್ರದಾನ
‘ವಿಕಾಸ ಸ್ಮಾರಕ ಪ್ರಶಸ್ತಿ – 2026’ಗೆ ಕೆ.ಬಿ. ಚಂದ್ರಮೌಳಿ, ಎಸ್.ಎನ್. ಪ್ರಸನ್ನ ಮೂರ್ತಿ, ವಾಸುದೇವ ಜಹಗೀರದಾರ್, ಕೃಷ್ಣಮೂರ್ತಿ ಚಿ.ಸು., ಸಿ.ಡಿ. ರವಿ, ಆರ್.ಎಸ್. ಅಯ್ಯರ್, ಎನ್.ಎಸ್. ಮಾರುತಿ ಪ್ರಸಾದ್, ಭಾನುಪ್ರಶಾಂತ, ಶ್ರೀನಿವಾಸ್ ಮೂರ್ತಿ, ಗುರುದತ್ತ ಹಾಗೂ ನಾಗಭೂಷಣ ಎಸ್. ಆಯ್ಕೆಯಾಗಿದ್ದಾರೆ.
ಇದೇ ವೇಳೆ ಲೇಖಕ ಪ್ರಕಾಶ್ ನಾಡಿಗ್ ಅವರಿಗೆ ‘ದಿ. ಸುಬ್ಬರಾಯರು ಸ್ಮಾರಕ ವಿಕಾಸ ಪ್ರಶಸ್ತಿ – 2025’ ಪ್ರದಾನ ಮಾಡಲಾಗುತ್ತದೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಎನ್. ವೆಂಕಟನಾರಾಯಣ, ವಾಮಾನಾಚಾರ್ಯ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಡಾ. ಎಸ್. ಸುದರ್ಶನ್ ಉಪಸ್ಥಿತರಿರಲಿದ್ದಾರೆ.
ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.
ಕಾರ್ಯಕ್ರಮದ ಯಶಸ್ಸಿಗಾಗಿ ವಿಕಾಸದ ಪ್ರಧಾನ ಸಂಚಾಲಕ ಬಿ.ವಿ. ಗೋಪಿನಾಥ್, ರಾಜ್ಯಾಧ್ಯಕ್ಷ ಶ್ರೀನಾಥ್ ಜೋಶಿ, ಹಿರಿಯ ಉಪಾಧ್ಯಕ್ಷ ಬಿ.ಎನ್. ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಹನುಮೇಶ್ ಕೆ. ಯಾವಗಲ್, ಖಜಾಂಚಿ ಬಿ.ಎನ್. ಮುರಳಿ ಪ್ರಸಾದ್, ಕಾರ್ಯದರ್ಶಿ ಗೋದಾವರಿ ಡಿ.ಎಸ್. ಸೇರಿದಂತೆ ರಾಜ್ಯ ಮತ್ತು ಜಿಲ್ಲಾ ಮಟ್ಟದ ಪದಾಧಿಕಾರಿಗಳು ಸಿದ್ಧತೆಗಳನ್ನು ಕೈಗೊಂಡಿದ್ದಾರೆ.
-
ಕ್ರೀಡೆ24 hours agoಮೈದಾನದಲ್ಲಿ ಕೋಪ ಸಿಡಿಸಿದ ವಿರಾಟ್ ಕೊಹ್ಲಿ: ವಿಡಿಯೊಗೆ ಭಾರೀ ಚರ್ಚೆ
-
ದೇಶ22 hours agoCockroach Janata Party ಗೆ ಬೆಂಗಳೂರು ಪೊಲೀಸರ ಶಾಕ್! ಟೌನ್ ಹಾಲ್ ಕಾರ್ಯಕ್ರಮಕ್ಕೆ ಅನುಮತಿ ಇಲ್ಲ
-
ದೇಶ22 hours agoಮೋದಿ ಸರ್ಕಾರದ 2025 ರಿಪೋರ್ಟ್ ಕಾರ್ಡ್ ಬಿಡುಗಡೆ! ಯಾವ ಸಚಿವಾಲಯ ಟಾಪ್, ಯಾವುದು ಹಿಂದುಳಿತು?
-
ಕ್ರೀಡೆ21 hours agoಕೃಣಾಲ್ ಪಾಂಡ್ಯ ಬೌಲಿಂಗ್ಗೆ ಕಾವ್ಯ ಮಾರನ್ ಆಕ್ಷೇಪ? ವೈರಲ್ ಆಯ್ತು SRH ಮಾಲಕಿಯ ರಿಯಾಕ್ಷನ್
-
ದೇಶ22 hours agoಲಡಾಖ್ನಲ್ಲಿ ಸೇನಾ ಹೆಲಿಕಾಪ್ಟರ್ ಪತನ! ಕೂದಲೆಳೆ ಅಂತರದಲ್ಲಿ ಪಾರಾದ ಅಧಿಕಾರಿಗಳ ಸೆಲ್ಫಿ ವೈರಲ್
