Connect with us

ಆರೋಗ್ಯ

ದೊಡ್ಡಪತ್ರೆ:ಪುಟ್ಟ ಎಲೆಗಳ ದೊಡ್ಡ ಪ್ರಯೋಜನಗಳು!

Published

on

ದೊಡ್ಡಪತ್ರೆ

ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.ಮನೆಯ ಹಿತ್ತಲಿನಲ್ಲಿರುವ ಅದೆಷ್ಟೋ ಸಸ್ಯಗಳು ಸಾಮಾನ್ಯ ಕಾಯಿಲೆಗಳಿಗೆ ಪರಿಣಾಮಕಾರಿ ಪರಿಹಾರವನ್ನು ನೀಡುತ್ತದೆ. ಹೂವಿನ ಗಿಡಗಳ ನಡುವೆಯೇ ಬೆಳೆದು ಆರೋಗ್ಯ ವೃದ್ಧಿಸುವ ಕೆಲಸ ಮಾಡುವ ಪುಟ್ಟ ಪುಟ್ಟ ಗಿಡಗಳ ಆರೋಗ್ಯ ಗುಣ ಮಾತ್ರ ಬಹು ದೊಡ್ಡದು. ಅದರಲ್ಲಿ ದೊಡ್ಡ ಪತ್ರೆ ಗಿಡ ಕೂಡ ಒಂದು. ಸಾಮಾನ್ಯವಾಗಿ ಎಲ್ಲರ ಮನೆಯ ಹಿತ್ತಲಿನಲ್ಲಿ ಈ ದೊಡ್ಡ ಪತ್ರೆ ಗಿಡ ಕಂಡು ಬರುತ್ತದೆ. ಇದನ್ನು ಪುಟ್ಟ ಪಾಟ್‌ನಲ್ಲಿಯೂ ಇಟ್ಟು ಬೆಳೆಸಬಹುದಾಗಿದೆ. ಇದನ್ನು ಸಾಂಬಾರ ಸೊಪ್ಪು ಅಥವಾ ಅಜವನ ಗಿಡ ಎಂದೂ ಕರೆಯುತ್ತಾರೆ.ದೊಡ್ಡಪತ್ರೆಯು ಸುಮಾರು ಮೂವತ್ತರಿಂದ ತೊಂಬತ್ತು ಸೆ.ಮೀ ಎತ್ತರದವರೆಗೆ ಬೆಳೆಯಬಲ್ಲದು, ಇದರ ಎಲೆಗಳು ದೊಡ್ಡ ಮತ್ತು ದಪ್ಪವಾಗಿದ್ದು ಕಡು ಸುವಾಸನೆಯನ್ನು ಹೊಂದಿರುತ್ತವೆ, ದೊಡ್ಡಪತ್ರೆಯ ರಂಬೆಗಳು ಮತ್ತು ಹೂಗಳು ಚಿಕ್ಕದಾಗಿದೆ.ಆಫ್ರಿಕಾ ದೇಶಗಳಲ್ಲಿ ಇದನ್ನು ಪುದೀನಾದ ಬದಲಿಗೆ ಖಾದ್ಯಗಳಲ್ಲಿ ಬಳಸುತ್ತಾರೆ. ದಕ್ಷಿಣಭಾರತದಲ್ಲಿ ಸಾಮಾನ್ಯವಾಗಿ ಇದನ್ನು ಜ್ವರ, ಶೀತ, ಕೆಮ್ಮುಗಳಿಗೆ ಮನೆಮದ್ದಾಗಿ ಬಳಸಲಾಗುತ್ತದೆ. ಗಾಯ ಅಥವಾ ಚೇಳು ಕಡಿತವಾದಾಗ ಪ್ರಥಮ ಚಿಕಿತ್ಸೆಯಾಗಿ ಇದರ ಎಲೆಗಳನ್ನು ಜಜ್ಜಿ ಬಳಸಲಾಗುತ್ತದೆ. ದಕ್ಷಿಣ ಕರ್ನಾಟಕದಲ್ಲಿ ದೊಡ್ಡಪತ್ರೆಯ ಚಟ್ನಿ, ತಂಬುಳಿ ಮಾಡಲಾಗುತ್ತದೆ. ಈಗ ಈ ದೊಡ್ಡ ಪತ್ರೆ ಸೊಪ್ಪು ಯಾವೆಲ್ಲಾ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ ಎನ್ನುವ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ ಇಲ್ಲಿದೆ ನೋಡಿ.

ಸಾಮಾನ್ಯವಾಗಿ ಆಹಾರ ಸೇವನೆಯಲ್ಲಿ ಬದಲಾವಣೆ, ಹವಾಮಾನದಲ್ಲಿನ ವ್ಯತ್ಯಾಸದಿಂದ ಶ್ವಾಸಕೋಶದಲ್ಲಿ ಕಫ ಕಟ್ಟಿಕೊಳ್ಳುತ್ತದೆ. ಇದರಿಂದ ಶೀತವಾದರೆ ಎಷ್ಟು ದಿನವಾದರೂ ಕಡಿಮೆಯಾಗುವುದಿಲ್ಲ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆಮದ್ದಾಗಿದೆ. ದೊಡ್ಡಪತ್ರೆ ಎಲೆ, ತುಳಸಿ ಎಲೆ ಮತ್ತು ವೀಳ್ಯದೆಲೆಯನ್ನು ಅರೆದು ರಸ ತೆಗೆದು ಅದಕ್ಕೆ ಜೇನುತುಪ್ಪ ಬೆರೆಸಿ ಕುಡಿದರೆ ನೆಗಡಿ, ಕೆಮ್ಮು ದೂರವಾಗುತ್ತದೆ. ಚಿಕ್ಕ ಮಕ್ಕಳಿಗೂ ಕೂಡ ಈ ದೊಡ್ಡ ಪತ್ರೆ ಸೊಪ್ಪನ್ನು ಔಷಧವಾಗಿ ಬಳಸಬಹುದಾಗಿದೆ.ದೊಡ್ಡ ಪತ್ರೆ ಸೊಪ್ಪನ್ನು ಕೊಯ್ದು ತಂದು ಬೆಂಕಿಯಲ್ಲಿ ಸುಟ್ಟು ಅದರ ರಸವನ್ನು ತೆಗದು ಅದಕ್ಕೆ ಅರ್ಧ ಚಮಚ ಬೆಲ್ಲ ಸೇರಿಸಿ ಕುಡಿದರೆ ಒಂದೆ ದಿನದಲ್ಲಿ ಶೀತ, ಕಟ್ಟಿದ ಮೂಗಿನ ಸಮಸ್ಯೆ ನಿವಾರಣೆಯಾಗುತ್ತದೆ.ದೊಡ್ಡ ಪತ್ರೆ ಸೊಪ್ಪನ್ನು ಬೆಂಕಿಯ ಮೇಲೆ ಇಟ್ಟು ಬಾಡಿಸಿ ನಂತರ ಅದನ್ನು ನೆತ್ತಿಗೆ ಹಾಕಿದರೆ ದೇಹದಲ್ಲಿನ ತಣ್ಣನೆಯ ಅಂಶ ನಿವಾರಣೆಯಾಗಿ ಜ್ವರ, ಶೀತ ಕಡಿಮೆಯಾಗುತ್ತದೆ. ಮಕ್ಕಳಿಗೆ ಇದು ಬೆಸ್ಟ್‌ ಔಷಧವಾಗಿದೆ.ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆ ಎಲೆ ಬಾಡಿಸಿ ನೆತ್ತಿಯ ಮೇಲೆ ಇಡುತ್ತಾರೆ. ಈ ಎಲೆಗಳ ಪೇಸ್ಟ್ ತಯಾರಿಸಿ ಅದನ್ನು ಚೇಳು ಕಚ್ಚಿದ ಗಾಯಕ್ಕೆ ಹಚ್ಚಿದರೆ ನೋವು ದೂರವಾಗುತ್ತದೆ. ಒಂದು ವಾರದವರೆಗೆ ದೊಡ್ಡ ಪತ್ರೆಯ ಎಲೆಗಳನ್ನು ತಿಂದರೆ ಅರಿಶಿಣ ಕಾಮಾಲೆ ವಾಸಿಯಾಗುತ್ತದೆ. ದೊಡ್ಡಪತ್ರೆಯನ್ನು ಜೀರಿಗೆ, ಎಳ್ಳಿನೊಂದಿಗೆ ಹುರಿದು ಕಾಯಿತುರಿ ಜೊತೆ ರುಬ್ಬಿ ಅದಕ್ಕೆ ಉಪ್ಪು, ಮಜ್ಜಿಗೆ ಹಾಕಿ ತಂಬುಳಿ ಮಾಡಿ ಕುಡಿದರೆ ಪಿತ್ತದ ಖಾಯಿಲೆಗಳು ಗುಣಮುಖವಾಗುವುದು.ದೊಡ್ಡಪತ್ರೆ ಎಲೆಯನ್ನು ಉಪ್ಪಿನ ಸಹಿತ ತಿಂದರೆ ಜೀರ್ಣಶಕ್ತಿ ಅಧಿಕವಾಗುತ್ತದೆ. ದೊಡ್ಡ ಪತ್ರೆ ಎಲೆಯನ್ನು ಹುಳುಕಡ್ಡಿಯ ಭಾಗಕ್ಕೆ ತಿಕ್ಕುತ್ತಿದ್ದರೆ ಹುಳುಕಡ್ಡಿಯ ನಿವಾರಣೆಯಾಗುತ್ತದೆ. ದೊಡ್ಡ ಪತ್ರೆಯಲ್ಲಿ ವಿಟಮಿನ್‌ ಸಿ, ಫೈಬರ್‌ ಮತ್ತು ಕ್ಯಾಲ್ಸಿಯಂ ಗುಣ ಹೇರಳವಾಗಿದೆ. ಇದು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಗೊಳಿಸಲು ಸಹಾಯ ಮಾಡುತ್ತದೆ.ದೊಡ್ಡ ಪತ್ರೆಯ ಗಿಡದ ಎಲೆಯನ್ನು ತಂದು ಬಾಡಿಸಿ ರಸ ತೆಗೆದು ಜೇನುತುಪ್ಪ ಸೇರಿಸಿ ಕುಡಿದರೆ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ. ಅರಿಸಿನ ಕಾಮಾಲೆ ಇದ್ದವರಿಗೂ ದೊಡ್ಡ ಪತ್ರೆ ಸೊಪ್ಪು ಉತ್ತಮ ಮನೆ ಮದ್ದಾಗಿದೆ. ಈ ಎಲೆಯನ್ನು ಆಹಾರ ರೂಪದಲ್ಲಿ ಅಂದರೆ ಚಟ್ನಿ, ತಂಬುಳಿ ಮಾಡಿ ಸೇವಿಸಿದರೆ ಕೆಲವೇ ದಿನಗಳಲ್ಲಿ ಕಾಯಿಲೆ ಚೇತರಿಕೆಯನ್ನು ಕಾಣುತ್ತದೆ. ಕಂಬಳಿ ಹುಳ, ಇಸುಬು ಇಂತಹ ಕೀಟಗಳು ಕಚ್ಚಿದ್ದರೆ ಸಹಿಸಲಾರದ ಉರಿ ಚರ್ಮಕ್ಕಾಗುತ್ತದೆ. ಇದನ್ನು ತಡೆಯಲು ಈ ದೊಡ್ಡ ಪತ್ರೆ ಸೊಪ್ಪು ಸಹಾಯಕವಾಗಿದೆ.
ದೊಡ್ಡ ಪತ್ರೆ ಎಲೆಯ ರಸಕ್ಕೆ ಬೆಲ್ಲ ಸೇರಿಸಿ ಕುಡಿದಾಗ ಬೆಲ್ಲ ಕೂಡ ದೇಹಕ್ಕೆ ಒಳ್ಳೆಯ ಪದಾರ್ಥವಾಗಿದೆ. ಇದು ದೇಹದಿಂದ ವಿಷಯುಕ್ತ ಪದಾರ್ಥವನ್ನು ಹೊರಹಾಕಲು ನೆರವಾಗುತ್ತದೆ. ಆದ್ದರಿಂದ ನಿಮ್ಮ ಮನೆಯ ಹಿತ್ತಲಿನಲ್ಲಿ ದೊಡ್ಡ ಪತ್ರೆ ಸೊಪ್ಪಿದ್ದರೆ ಜೋಪಾನ ಮಾಡಿ ಉಳಿಸಿಕೊಳ್ಳ.

Continue Reading

ಆರೋಗ್ಯ

ಮೂತ್ರಪಿಂಡದ ಕಲ್ಲು: ಮೂತ್ರಕೋಶದಲ್ಲಿ ಸಿಲುಕಿದರೆ ಏನಾಗುತ್ತದೆ?

Published

on

ಬೆಂಗಳೂರು: ಮೂತ್ರಪಿಂಡದ ಕಲ್ಲು (Kidney Stone) ಮೂತ್ರಕೋಶಕ್ಕೆ ತಲುಪಿದ ಬಳಿಕ ಸುಲಭವಾಗಿ ಹೊರಹೋಗುತ್ತದೆ ಎಂಬುದು ಸಾಮಾನ್ಯ ನಂಬಿಕೆ. ಆದರೆ ಕೆಲವೊಮ್ಮೆ ಈ ಕಲ್ಲುಗಳು ಮೂತ್ರಕೋಶದಲ್ಲೇ ಸಿಲುಕಿಕೊಳ್ಳುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಸಿದ್ದಾರೆ.

ಸಾಮಾನ್ಯವಾಗಿ 4–5 ಮಿಮೀ ಗಾತ್ರದ ಕಲ್ಲುಗಳು ಸಹಜವಾಗಿ ಮೂತ್ರದ ಮೂಲಕ ಹೊರಹೋಗುತ್ತವೆ. ಆದರೆ 7 ಮಿಮೀಗಿಂತ ದೊಡ್ಡದಾದ ಅಥವಾ ಅಸಮ ಆಕಾರ ಹೊಂದಿರುವ ಕಲ್ಲುಗಳು ಮೂತ್ರನಾಳದಲ್ಲಿ ಸಿಲುಕಿಕೊಳ್ಳಬಹುದು. ಇದರಿಂದ ಕೆಳ ಹೊಟ್ಟೆ ನೋವು, ಮೂತ್ರ ವಿಸರ್ಜನೆ ವೇಳೆ ಉರಿ, ಮೂತ್ರದಲ್ಲಿ ರಕ್ತ ಹಾಗೂ ದುರ್ವಾಸನೆ ಕಾಣಿಸಬಹುದು.

ಮೂತ್ರಕೋಶ ಸರಿಯಾಗಿ ಖಾಲಿಯಾಗದಿರುವುದು ಕೂಡ ಪ್ರಮುಖ ಕಾರಣ. ಮೂತ್ರದ ಹರಿವು ಕಡಿಮೆಯಾಗುವ ಸ್ಥಿತಿ ಅಥವಾ ವೃದ್ಧರಾದ ಪುರುಷರಲ್ಲಿ ಕಾಣಿಸುವ ಪ್ರಾಸ್ಟೇಟ್ ವಿಸ್ತರಣೆ (BPH) ಸಮಸ್ಯೆಯಿಂದ ಕಲ್ಲುಗಳು ಸಿಲುಕಿಕೊಳ್ಳಬಹುದು. ಜೊತೆಗೆ ಮಧುಮೇಹ ಅಥವಾ ನರ ಸಮಸ್ಯೆಗಳೂ ಪರಿಣಾಮ ಬೀರುತ್ತವೆ.

ಕಲ್ಲುಗಳು ಹೆಚ್ಚು ಕಾಲ ಸಿಲುಕಿಕೊಂಡಿದ್ದರೆ ಸೋಂಕು (UTI), ಮೂತ್ರ ಧಾರಣ ತೊಂದರೆ ಹಾಗೂ ಮೂತ್ರಕೋಶದ ಉರಿಯೂತದಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಜ್ವರ, ತೀವ್ರ ನೋವು, ಮೂತ್ರವಿಸರ್ಜನೆ ಅಸಾಧ್ಯತೆ ಕಂಡುಬಂದರೆ ತಕ್ಷಣ ವೈದ್ಯಕೀಯ ಚಿಕಿತ್ಸೆ ಅಗತ್ಯ.

ತಜ್ಞರ ಪ್ರಕಾರ, ಸಾಕಷ್ಟು ನೀರು ಕುಡಿಯುವುದು, ಮೂತ್ರಕೋಶವನ್ನು ಸಂಪೂರ್ಣ ಖಾಲಿ ಮಾಡುವುದು ಹಾಗೂ ಆರೋಗ್ಯಕರ ಆಹಾರ ಪದ್ಧತಿಯನ್ನು ಅನುಸರಿಸುವುದರಿಂದ ಈ ಸಮಸ್ಯೆಯನ್ನು ತಪ್ಪಿಸಬಹುದು. “ಡಬಲ್ ವಾಯ್ಡ್” ಎಂಬ ವಿಧಾನವು ಮೂತ್ರಕೋಶ ಸಂಪೂರ್ಣ ಖಾಲಿಯಾಗಲು ಸಹಕಾರಿಯಾಗುತ್ತದೆ.

ಒಟ್ಟಿನಲ್ಲಿ, ಮೂತ್ರಪಿಂಡದ ಕಲ್ಲುಗಳ ಸಮಸ್ಯೆಯನ್ನು ನಿರ್ಲಕ್ಷಿಸದೇ ಆರಂಭಿಕ ಲಕ್ಷಣಗಳಲ್ಲೇ ಚಿಕಿತ್ಸೆ ಪಡೆಯುವುದು ಅತ್ಯಂತ ಮುಖ್ಯವಾಗಿದೆ.

Note: This information is provided by Dr. Venkatswamy and the Hosasuddi.in health team. Before publishing, Hosasuddi.in follows medical guidelines and expert advice.

Continue Reading

ಆರೋಗ್ಯ

ಮಧುಮೇಹ-ಬೊಜ್ಜಿಗೆ GLP-1 ಔಷಧ: ಪ್ರಯೋಜನದ ಜೊತೆ ಅಪಾಯವೂ!

Published

on

ನವದೆಹಲಿ: ಟೈಪ್ 2 ಮಧುಮೇಹ ಮತ್ತು ಸ್ಥೂಲಕಾಯತೆಗೆ ಚಿಕಿತ್ಸೆ ನೀಡಲು ಬಳಸಲಾಗುತ್ತಿರುವ GLP-1 ಔಷಧಗಳ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಎಚ್ಚರಿಕೆ ನೀಡಿದೆ. ಈ ಔಷಧಗಳು ಪರಿಣಾಮಕಾರಿ ಆಗಿದ್ದರೂ, ಅವುಗಳನ್ನು ವೈದ್ಯರ ಸಲಹೆಯಿಲ್ಲದೆ ಬಳಸುವುದು ಅಪಾಯಕಾರಿ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ಆರೋಗ್ಯ ಇಲಾಖೆ ಹೇಳುವಂತೆ, GLP-1 ಔಷಧಗಳು ರಕ್ತದಲ್ಲಿನ ಸಕ್ಕರೆ ನಿಯಂತ್ರಣ ಮತ್ತು ತೂಕ ಇಳಿಕೆಗೆ ಸಹಕಾರಿ. ಆದರೆ ವಾಕರಿಕೆ, ವಾಂತಿ ಮುಂತಾದ ಸಾಮಾನ್ಯ ಅಡ್ಡಪರಿಣಾಮಗಳಿಂದ ಹಿಡಿದು ಮೂತ್ರಪಿಂಡ ಹಾನಿ, ಮೇದೋಜ್ಜೀರಕ ಗ್ರಂಥಿಯ ಉರಿಯೂತ, ಕರುಳಿನ ಅಡಚಣೆಗಳಂತಹ ಗಂಭೀರ ಸಮಸ್ಯೆಗಳಿಗೂ ಕಾರಣವಾಗಬಹುದು.

Type 2 Diabetes ಮತ್ತು Obesity ಹೊಂದಿರುವವರು ಈ ಔಷಧಗಳನ್ನು ಕಡ್ಡಾಯವಾಗಿ ನೋಂದಾಯಿತ ವೈದ್ಯರ ಮೇಲ್ವಿಚಾರಣೆಯಲ್ಲೇ ಬಳಸಬೇಕು ಎಂದು ಸೂಚಿಸಲಾಗಿದೆ. ಅನಧಿಕೃತ ಮಾರಾಟ ಮತ್ತು ಮೇಲ್ವಿಚಾರಣೆಯಿಲ್ಲದ ಬಳಕೆಯನ್ನು ತಡೆಯಲು ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಾಗಿಸಲಾಗಿದೆ.

ಸಚಿವಾಲಯದ ಪ್ರಕಾರ, ಹೆಚ್ಚಿನ ತೂಕ, ವ್ಯಾಯಾಮದ ಕೊರತೆ ಮತ್ತು ಹೆಚ್ಚು ಸಕ್ಕರೆ ಸೇವನೆ ಟೈಪ್ 2 ಮಧುಮೇಹದ ಪ್ರಮುಖ ಕಾರಣಗಳಾಗಿವೆ. ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮದ ಮೂಲಕ ಈ ರೋಗವನ್ನು ತಡೆಗಟ್ಟಬಹುದು.

Continue Reading

ಆರೋಗ್ಯ

ಜಂಕ್ ಫುಡ್ ಬೇಡ! ಹಣ್ಣುಗಳಿಂದ ಆರೋಗ್ಯಕರವಾಗಿ ತೂಕ ಹೆಚ್ಚಿಸಿಕೊಳ್ಳಿ

Published

on

ಬೆಂಗಳೂರು: ಇಂದಿನ ಜೀವನಶೈಲಿಯಲ್ಲಿ ತೂಕ ಇಳಿಸುವುದು ಎಷ್ಟು ಕಷ್ಟವೋ, ಅತಿಯಾಗಿ ಸಪೂರ ಮೈಕಟ್ಟು ಹೊಂದಿರುವವರಿಗೆ ಆರೋಗ್ಯಕರವಾಗಿ ತೂಕ ಹೆಚ್ಚಿಸಿಕೊಳ್ಳುವುದು ಕೂಡ ಅಷ್ಟೇ ಸವಾಲಾಗಿದೆ. ತೂಕ ಹೆಚ್ಚಿಸುವುದು ಎಂದರೆ ಕೇವಲ ಕೊಬ್ಬು ಹೆಚ್ಚಿಸುವುದಲ್ಲ; ಬದಲಾಗಿ ದೇಹದಲ್ಲಿ ಸದೃಢ ಸ್ನಾಯುಗಳ (ಮಸಲ್ಸ್) ವೃದ್ಧಿ ಮುಖ್ಯ.

ಜಂಕ್ ಫುಡ್‌ಗಳಿಗೆ ಅವಲಂಬನೆ ಕಡಿಮೆ ಮಾಡಿ, ನೈಸರ್ಗಿಕ ಹಣ್ಣುಗಳನ್ನು ದಿನನಿತ್ಯದ ಆಹಾರದಲ್ಲಿ ಸೇರಿಸುವುದು ಉತ್ತಮ ವಿಧಾನವಾಗಿದೆ. ಕೆಲವು ಹಣ್ಣುಗಳು ದೇಹಕ್ಕೆ ಅಗತ್ಯ ಕ್ಯಾಲರಿ, ಪೋಷಕಾಂಶಗಳನ್ನು ನೀಡುವುದರ ಮೂಲಕ ತೂಕ ಹೆಚ್ಚಿಸಲು ಸಹಾಯ ಮಾಡುತ್ತವೆ.

ಬಾಳೆಹಣ್ಣು (Banana): ಕಾರ್ಬೋಹೈಡ್ರೇಟ್ ಮತ್ತು ಕ್ಯಾಲರಿಗಳಿಂದ ಸಮೃದ್ಧವಾಗಿರುವ ಬಾಳೆಹಣ್ಣು ತೂಕ ಹೆಚ್ಚಿಸಲು ಪರಿಣಾಮಕಾರಿ. ದಿನಕ್ಕೆ 2–3 ಬಾಳೆಹಣ್ಣು ತಿನ್ನುವುದು ಅಥವಾ ಹಾಲಿನೊಂದಿಗೆ ಬನಾನಾ ಶೇಕ್ ಸೇವಿಸುವುದು ವೇಗವಾಗಿ ಫಲ ನೀಡುತ್ತದೆ.

ಅವಕಾಡೋ (Avocado): ಆರೋಗ್ಯಕರ ಕೊಬ್ಬಿನ ಮೂಲವಾಗಿರುವ ಈ ಹಣ್ಣು ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನು ಒದಗಿಸಿ, ತೂಕವನ್ನು ಸಮತೋಲನದಿಂದ ಹೆಚ್ಚಿಸುತ್ತದೆ.

ಮಾವಿನ ಹಣ್ಣು (Mango): ನೈಸರ್ಗಿಕ ಸಕ್ಕರೆ ಮತ್ತು ಹೆಚ್ಚಿನ ಕ್ಯಾಲರಿಗಳಿಂದ ಕೂಡಿದ ಮಾವಿನ ಹಣ್ಣು ತೂಕ ಹೆಚ್ಚಿಸುವುದರ ಜೊತೆಗೆ ರೋಗನಿರೋಧಕ ಶಕ್ತಿಯನ್ನೂ ವೃದ್ಧಿಸುತ್ತದೆ.

ಒಣಹಣ್ಣುಗಳು (Dry Fruits): ಅಂಜೂರ, ಖರ್ಜೂರ, ಒಣ ದ್ರಾಕ್ಷಿ ಮುಂತಾದವು ತೂಕ ಹೆಚ್ಚಿಸಲು ಅತ್ಯುತ್ತಮ. ರಾತ್ರಿ ನೆನೆಸಿಟ್ಟು ಬೆಳಗ್ಗೆ ಸೇವಿಸಿದರೆ ಹೆಚ್ಚು ಲಾಭಕರ.

ಇದಲ್ಲದೆ ಸಪೋಟ, ಹಲಸಿನ ಹಣ್ಣುಗಳೂ ಸಹ ಸಹಾಯಕ. ಆದರೆ ಕೇವಲ ಆಹಾರ ಸೇವನೆ ಸಾಕಾಗುವುದಿಲ್ಲ; ಲಘು ವ್ಯಾಯಾಮ ಮತ್ತು ಯೋಗಾಭ್ಯಾಸದಿಂದ ಆಹಾರ ಸ್ನಾಯುವಾಗಿ ಪರಿವರ್ತನೆಗೊಳ್ಳಲು ಸಹಾಯವಾಗುತ್ತದೆ.

ನಿಯಮಿತ ಆಹಾರ ಮತ್ತು ತಾಳ್ಮೆಯೊಂದಿಗೆ ಈ ಕ್ರಮ ಪಾಲಿಸಿದರೆ ಆರೋಗ್ಯಕರ ತೂಕ ಹೆಚ್ಚಿಸಿಕೊಳ್ಳುವುದು ಸಾಧ್ಯ. ಈ ಮಾಹಿತಿಯನ್ನು ಆರೋಗ್ಯ ತಜ್ಞರು ಹಂಚಿಕೊಂಡಿದ್ದು, ಅದರ ಆಧಾರದ ಮೇಲೆ ಹೊಸ ಸುದ್ದಿ (Hosasuddi) ತಂಡವು ಈ ಲೇಖನವನ್ನು ಪ್ರಕಟಿಸಿದೆ.

Continue Reading

Trending