Connect with us

ರಾಜ್ಯ

ಕುಲದಲ್ಲಿ ಕೀಳ್ಯಾವದೋ ಚಲನಚಿತ್ರರಂಗದಿಂದ ಮತ್ತೊಂದು ಎಡವಟ್ಟು

ಬೆಂಗಳೂರು: ಕುಲದಲ್ಲಿ ಕೀಳ್ಯಾವದೋ ಚಲನಚಿತ್ರರಂಗದ ನಟ, ನಟಿಯರು ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಿದ್ದರು ಇದರಲ್ಲಿ ನಟ ಕರಿಸುಬ್ಬುರವರು ಮಡೆನೂರು ಮನು ಕುರಿತು ಮಾತನಾಡುವ ಸಂದರ್ಭದಲ್ಲಿ ಊರು ಎಂದರೆ ಹೊಲಗೇರಿ ಇರುತ್ತದೆ, ಹೊಲಗೇರಿ ಸೇರಿಕೊಂಡಿದೆ ಎಂಬ ಮಾತನ್ನಾಡುತ್ತಾರೆ ಇದರ ವಿವಾದತ್ಮಕ ಹೇಳಿಕೆ ಖಂಡಿಸಿ ಡಾ||ಬಿ.ಆರ್.ಅಂಬೇಡ್ಕರ್ ಮಾನವ ಹಕ್ಕುಗಳು ಕ್ರಾಂತಿ ಸೇನೆ ಸಂಘಟನೆ ರಾಜ್ಯಾಧ್ಯಕ್ಷರಾದ ಕ್ರಾಂತಿ ರಾಜುರವರು ಖಂಡನೆ ವ್ಯಕ್ತಪಡಿಸಿದ್ದರು.

ಇದೇ ಸಂದರ್ಭದಲ್ಲಿ ಕ್ರಾಂತಿ ರಾಜುರವರು ಮಾತನಾಡಿ ಹೊಲೆಯರು ಎಂದರೆ ಹೊಲದ ಒಡೆಯ ಎಂಬರ್ಥ ಇದೆ, ನಮ್ಮ ಸಮುದಾಯಕ್ಕೆ ತನ್ನದೇ ಆದ ಇತಿಹಾಸ ಹೊಂದಿದೆ.

2000 ಸಾವಿರ ವರ್ಷಗಳಿಂದ ನಮ್ಮ ಸಮುದಾಯಕ್ಕೆ ಶೋಷಣೆ ಮಾಡಿದರು, ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರು ನಮ್ಮ ಮೇಲೆ ಅಪಮಾನ ,ಶೋಷಣೆ ನಿಂತಿಲ್ಲ ಎಂಬುದು ವಿಷಾದಕರ ಸಂಗತಿ.

ನಟ ಕರಿಸುಬ್ಬು ರವರ ಅವಹೇಳನಕಾರಿ ಮಾತನಾಡುವಾಗ ನಟಿ ಮೌನ, ಹಿರಿಯ ನಟ ಉಮೇಶ್ ಮತ್ತು ಡ್ಯಾಗನ್ ಮಂಜುರವರು ಉಪಸ್ಥಿತರಿದ್ದರು ಅವರ ಸಹ ಮೌನವಹಿಸಿರುವುದು ಖಂಡನೀಯ.

ನಟ ಕರಿಸುಬ್ಬುರವರು ಕೊಡಲೆ ಕ್ಷಮಾಪಣೆ ಹೇಳಬೇಕು ಇಲ್ಲದೇ ಹೋದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಬೆಂಗಳೂರು

ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ ₹50,000 ಸಹಾಯಧನ: ಜಮೀರ್ ಅಹ್ಮದ್ ಘೋಷಣೆ

ಬೆಂಗಳೂರು:
ಕರ್ನಾಟಕದ ಅಲ್ಪಸಂಖ್ಯಾತ ಸಮುದಾಯದ ಸಾಮೂಹಿಕ ವಿವಾಹಗಳಿಗೆ ಇನ್ಮುಂದೆ ಸರ್ಕಾರದಿಂದ ₹50,000 ಸಹಾಯಧನ ಸಿಗಲಿದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಘೋಷಿಸಿರುವ ಬಜೆಟ್ ಯೋಜನೆಗೆ ಈಗ ಅನುಮೋದನೆ ಲಭಿಸಿದ್ದು, ಈ ನಿಟ್ಟಿನಲ್ಲಿ ಬಡ ಅಲ್ಪಸಂಖ್ಯಾತರಿಗೆ ಸಹಾಯ ಮಾಡಲು ಸರ್ಕಾರ ಸಜ್ಜಾಗಿದೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೆರವು:
ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್‌ ಸೇರಿದಂತೆ ಪ್ರತಿಭಾವಂತ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಧನ ಸಹಾಯ ನೀಡಲಾಗುತ್ತಿದೆ. ಈಗಾಗಲೇ 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್‌ಟಾಪ್ ವಿತರಣೆ ನಡೆಸಲಾಗಿದೆ.

ಮದರಸಾಗಳಲ್ಲಿ ಕನ್ನಡ ಕಲಿಕೆ:
ಮದರಸಾಗಳಲ್ಲಿ ಕನ್ನಡ ಕಲಿಕೆ ಆರಂಭಿಸುವ ಯೋಜನೆಯೊಂದಿಗೆ, ಮೊದಲ ಹಂತದಲ್ಲಿ 200 ಮೌಲ್ವಿಗಳನ್ನು ಆಯ್ಕೆ ಮಾಡಲಾಗಿದೆ. ಮೂವರು ತಿಂಗಳಲ್ಲಿ ಅವರಿಗೆ ಕನ್ನಡ ಭಾಷಾ ತರಬೇತಿ ನೀಡಲಾಗುವುದು.

2,000 ಮದರಸಾಗಳಿಗೆ ಕನ್ನಡ ಪಾಠ್ಯಕ್ರಮ:
ರಾಜ್ಯದಲ್ಲಿ 2 ಸಾವಿರ ಮದರಸಾಗಳಿಗೆ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಅಲ್ಪಸಂಖ್ಯಾತ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದ್ದಾರೆ. very soon ಈ ಪಾಠ್ಯಕ್ರಮ ಮುದ್ರಣಕ್ಕೂ ಕ್ರಮ ಜರಗಲಿದೆ.

Continue Reading

ಅಪರಾಧ

ಧರ್ಮಸ್ಥಳ ಶವ ಹೂತು ಪ್ರಕರಣ: ಮೂರು ಅಸ್ಥಿಪಂಜರ ಪತ್ತೆ, ಎಸ್‌ಐಟಿ ತನಿಖೆಗೆ ಹೊಸ ತಿರುವು!

ದಕ್ಷಿಣ ಕನ್ನಡ, ಆಗಸ್ಟ್ 5 – ಧರ್ಮಸ್ಥಳದ ಸುತ್ತಮುತ್ತಲ ಶವ ಹೂತು ಪ್ರಕರಣಕ್ಕೆ ದಿನೇ ದಿನೆ ನ್ಯೂ ಟ್ವಿಸ್ಟ್ ಸಿಗುತ್ತಿದ್ದು, ಇದೀಗ ಮೂರು ಅಸ್ಥಿಪಂಜರಗಳು ಪತ್ತೆಯಾಗಿವೆ ಎಂಬ ಸುದ್ದಿ ಚಕ್ಕರಿಗೊಳ್ಳುತ್ತಿದೆ. ಈ ಕುರಿತು ದೂರುದಾರ ಸುಜಾತಾ ಭಟ್ ಪರ ವಕೀಲ ಮಂಜುನಾಥ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಎಸ್‌ಐಟಿ ತಂಡದ ಶೋಧ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಡೆದ ಉತ್ಖನನದ ವೇಳೆ:

  • ಸ್ಟಾಟ್ ನಂಬರ್ 12ರ ಬಳಿ ಕಾರ್ಮಿಕರಿಂದ ಅಗೆಸಿದಾಗ, ಮೂರು ಅಸ್ಥಿಪಂಜರಗಳು ಹಾಗೂ ಮಹಿಳೆಯ ಸೀರೆ ಪತ್ತೆಯಾಗಿವೆ.
  • ಸುಮಾರು 140 ಮೂಳೆಗಳ ತುಂಡುಗಳು ಪತ್ತೆಯಾದ ಕುರಿತು ವರದಿ ಇದೆ.
  • ಅಸ್ಥಿಪಂಜರಗಳನ್ನು ತಕ್ಷಣವೇ ಕೆಎಂಸಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇಂದಿನ ಉತ್ಖನನ:

  • ನೇತ್ರಾವತಿ ನದಿಯ ದಡದ ಬಳಿ 11ನೇ ಪಾಯಿಂಟ್‌ನಲ್ಲಿ ಅಗೆತ ಕೆಲಸ ನಡೆಯುತ್ತಿದೆ.
  • 6 ಅಡಿಯವರೆಗೆ ಶೋಧ ನಡೆದ ಬಳಿಕ ಸಾಕ್ಷ್ಯ ಸಿಕ್ಕದರೆ ಮುಂದಿನ ಪಾಯಿಂಟ್‌ಗೆ ಹೋಗುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಪೂರ್ವ ಘಟನೆ:

  • ಜುಲೈ 31ರಂದು 6ನೇ ಗುರುತುಸ್ಥಳದಲ್ಲಿ ಅಸ್ಥಿಪಂಜರ ಪತ್ತೆಯಾದ ಹಿನ್ನೆಲೆ, ಎಸ್‌ಐಟಿ ಅಧಿಕಾರಿಗಳಾದ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದು, ಆಧಾರದ ಮೇಲೆ UDR ಪ್ರಕರಣ ದಾಖಲಾಗಿದೆ.
Continue Reading

ಬೆಂಗಳೂರು

ಸು ಫ್ರಮ್ ಸೋ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಕಲೆಕ್ಷನ್ ಸೆನ್ಸೇಷನ್: ಶ್ರಾವಣದ ಹಬ್ಬಕ್ಕೂ ಮುನ್ನ ಧನಲಕ್ಷ್ಮೀ ವರ!

ಬೆಂಗಳೂರು: ಶ್ರಾವಣ ತಿಂಗಳು ಅಂದ್ರೆ ಬಂಗಾರದ ತಿಂಗಳು. ಮನೆಮಾಲೀಕರಿಗೆ ವರಮಹಾಲಕ್ಷ್ಮೀ ಹಬ್ಬ, ಕನ್ನಡ ಚಿತ್ರರಂಗಕ್ಕೆ “ಸು ಫ್ರಮ್ ಸೋ” ಚಿತ್ರದ ಯಶಸ್ಸು! ರಾಜ್ ಬಿ.ಶೆಟ್ಟಿ ಅಭಿನಯದ ಈ ಹಾರರ್-ಕಾಮಿಡಿ ಸಿನಿಮಾ ಇದೀಗ ಮೂರನೇ ವಾರದಲ್ಲೂ ಭರ್ಜರಿಯಾಗಿ ಓಡುತ್ತಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹವಾ ಸೃಷ್ಟಿಸಿದೆ.

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಉತ್ತಮ ಕಂಟೆಂಟ್ ಹೊಂದಿರುವ ಸಿನಿಮಾಗಳಿಗೆ ಅಭಿಮಾನಿಗಳ ಮೆಚ್ಚುಗೆ ಹೆಚ್ಚಾಗುತ್ತಿದೆ. ‘ಎಕ್ಕ’, ‘ಜೂನಿಯರ್’ ನಂತರ ‘ಸು ಫ್ರಮ್ ಸೋ’ ಕೂಡ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
75 ಲಕ್ಷ ಬಜೆಟ್‌ನಲ್ಲಿ ತಯಾರಾದ ಈ ಸಿನಿಮಾ ಈಗಾಗಲೇ ₹25 ಕೋಟಿ ಕಲೆಕ್ಷನ್ ಮಾಡಿದ್ದು, ಶೀಘ್ರದಲ್ಲೇ ₹50 ಕೋಟಿ ಕ್ಲಬ್ ಸೇರುವ ಲಕ್ಷಣವಿದೆ.

ಮುಂಬೈ, ದೆಹಲಿ, ಚೆನ್ನೈ, ಹೈದರಾಬಾದ್, ಕೇರಳ ಹಾಗೂ ವಿದೇಶಗಳಲ್ಲೂ ರಿಲೀಸ್ ಆದ ಈ ಸಿನಿಮಾ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಪಡೆಯುತ್ತಿದೆ. ರಾಜ್ ಬಿ.ಶೆಟ್ಟಿ ಹಾಗೂ ನಿರ್ದೇಶಕ ಜೆ.ಪಿ. ತುಮಿನಾಡ್ ಅವರ ಶ್ರದ್ಧೆ ಫಲ ನೀಡಿದ್ದು, “ಬಂದರೋ ಬಂದರು.. ಬಾವ ಬಂದರು” ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ.

ಇನ್ನು ಮಲಯಾಳಂ ಡಬ್ಬಿಂಗ್ ಆಗಿ ಆಗಸ್ಟ್ 1ರಂದು ಬಿಡುಗಡೆಗೊಂಡ ‘ಸು ಫ್ರಮ್ ಸೋ’ ಚಿತ್ರ, ಕೊಚ್ಚಿಯಲ್ಲಿ ಒಂದೇ ದಿನ 8 ಸಾವಿರ ಟಿಕೆಟ್ ಮಾರಾಟ ಮಾಡಿದ ದಾಖಲೆ ಸ್ಥಾಪಿಸಿದೆ. ಆದುದರಿಂದ, ಚಿತ್ರದ ಬಯೋಪಿಕ್ ಮತ್ತಷ್ಟು ಭಾಷೆಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ.

Continue Reading

Trending