Connect with us

ಬೆಂಗಳೂರು

ಆರ್‌ಸಿಬಿ ಹುಡುಗರು ಕರ್ನಾಟಕಕ್ಕೆ ಗೌರವ, ಹೆಮ್ಮೆ ತಂದಿದ್ದಾರೆ: ಡಿಕೆಶಿ

Published

on

ಬೆಂಗಳೂರು: ಆರ್‌ಸಿಬಿ (RCB) ಹುಡುಗರು ನಮ್ಮ ಕರ್ನಾಟಕಕ್ಕೆ ಗೌರವ ಹಾಗೂ ಹೆಮ್ಮೆ ತಂದಿದ್ದಾರೆ. ಅವರನ್ನು ಅಭಿನಂದಿಸುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ (DK Shivakumar) ಆರ್‌ಸಿಬಿ ತಂಡಕ್ಕೆ ಶುಭಾಶಯ ಕೋರಿದ್ದಾರೆ,

ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಮಣಿಸಿ ಕಪ್ ಗೆದ್ದ ಆರ್‌ಸಿಬಿ ತಂಡದ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್‌ಸಿಬಿ ತಂಡವನ್ನು ನಾವು ಗೌರವಿಸಬೇಕು. ಯಾವ ರೀತಿ ಅವರನ್ನು ಗೌರವಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಟ್ರಾಫಿಕ್‌ಗೂ ಸಮಸ್ಯೆ ಆಗಬಾರದು, ಸಾಕಷ್ಟು ಯುವಕರು ಭಾಗವಹಿಸುತ್ತಾರೆ ಎಂದರು.

ಅವರು ಶೆಡ್ಯೂಲ್ ಹಾಕಿಕೊಳ್ಳುತ್ತಾರೆ. ಆದರೆ ಕಂಟ್ರೋಲ್ ಮಾಡೋದು ನಾವು. ಗೃಹ ಸಚಿವರು, ಪೊಲೀಸ್ ಕಮೀಷನರ್ ಎಲ್ಲಾ ಕೂತು ಮಾತನಾಡಿ ಈ ಬಗ್ಗೆ ನಿರ್ಧಾರ ಮಾಡುತ್ತಾರೆ. ನಾನು ಕೂಡ ಸಂಪೂರ್ಣ ಮ್ಯಾಚ್ ನೋಡಿದ್ದೇನೆ. ಆರ್‌ಸಿಬಿ ಟೀಂ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಅವರಿಗೆ ಸನ್ಮಾನ ಮಾಡುವ ಬಗ್ಗೆ ಮಾತನಾಡುತ್ತಿದ್ದೇವೆ ಎಂದು ತಿಳಿಸಿದರು.

ದೇಶ

ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್! ಬಿಸಿಲಿನ ತಾಪದಿಂದ ರಕ್ಷಿಸಲು ಬಿಎನ್‌ಸಿಸಿಯ ಹೊಸ ಪ್ರಯೋಗ

Published

on

ಬೆಂಗಳೂರು, ಜೂನ್ 05: ನಗರದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ತಾಪಮಾನ ಮತ್ತು ಬಿಸಿಲಿನ ತೀವ್ರತೆಯಿಂದ ರಸ್ತೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸ್ ಸಿಬ್ಬಂದಿಯ ಆರೋಗ್ಯ ರಕ್ಷಣೆಗಾಗಿ ಬೆಂಗಳೂರು ಉತ್ತರ ಮಹಾನಗರ ಪಾಲಿಕೆ (BNCC) ಮಹತ್ವದ ಹೆಜ್ಜೆ ಇಟ್ಟಿದೆ. ಪೈಲಟ್ ಯೋಜನೆಯ ಭಾಗವಾಗಿ ಸಂಚಾರಿ ಪೊಲೀಸರಿಗೆ ಅತ್ಯಾಧುನಿಕ ಎಸಿ (AC) ಹೆಲ್ಮೆಟ್‌ಗಳನ್ನು ವಿತರಿಸಲಾಗಿದೆ.

ಹೊರಾಂಗಣದಲ್ಲಿ ಹಾಗೂ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಗಂಟೆಗಟ್ಟಲೆ ನಿಂತು ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಬಿಸಿಲಿನ ತಾಪದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವ ಉದ್ದೇಶದಿಂದ ಮೊದಲ ಹಂತದಲ್ಲಿ 20 ಎಸಿ ಹೆಲ್ಮೆಟ್‌ಗಳನ್ನು ನೀಡಲಾಗಿದೆ. ಈ ಯೋಜನೆ ‘ಹೀಟ್-ಹೆಲ್ತ್ ಪ್ರೊಟೊಕಾಲ್’ (Heat-Health Protocol) ಅಡಿಯಲ್ಲಿ ಜಾರಿಗೊಂಡಿದ್ದು, ಬೆಂಗಳೂರು ಉತ್ತರ ಮಹಾನಗರ ಪಾಲಿಕೆ, C40 Cities, Sensing Local ಹಾಗೂ ಹಸಿರು ದಳ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಈ ಎಸಿ ಹೆಲ್ಮೆಟ್‌ಗಳು ಹೆಚ್ಚಿನ ಉಷ್ಣಾಂಶದ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ತಂಪಾದ ವಾತಾವರಣ ಒದಗಿಸುವ ಮೂಲಕ ಹೀಟ್ ಸ್ಟ್ರೆಸ್, ನಿರ್ಜಲೀಕರಣ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ರಕ್ಷಣೆ ನೀಡಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಬಿಎನ್‌ಸಿಸಿ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್, “ಹವಾಮಾನ ಬದಲಾವಣೆ ಮತ್ತು ಉಷ್ಣಾಂಶ ಏರಿಕೆಯಿಂದ ಹೊರಾಂಗಣದಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅತ್ಯಗತ್ಯವಾಗಿದೆ. ಈ ಹಿಂದೆ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು ಹಾಗೂ ಒಣ ಕಸ ಸಂಗ್ರಹಣಾ ಕೇಂದ್ರದ ಸಿಬ್ಬಂದಿಗೆ ಕೂಲಿಂಗ್ ಕಿಟ್‌ಗಳನ್ನು ನೀಡಲಾಗಿತ್ತು. ಇದೀಗ ಅದನ್ನು ಸಂಚಾರಿ ಪೊಲೀಸರಿಗೂ ವಿಸ್ತರಿಸಲಾಗಿದೆ” ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಇಂದಿರಾ ಕ್ಯಾಂಟೀನ್ ಸಿಬ್ಬಂದಿ ಹಾಗೂ ಇತರೆ ಸರ್ಕಾರಿ ಇಲಾಖೆಗಳಿಗೂ ವಿಸ್ತರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಹೀಟ್ ಸ್ಟ್ರೆಸ್ ಲಕ್ಷಣಗಳು, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ತುರ್ತು ಪರಿಸ್ಥಿತಿಗಳ ನಿರ್ವಹಣೆ ಕುರಿತು ಸಂಚಾರಿ ಪೊಲೀಸರಿಗೆ ವಿಶೇಷ ಜಾಗೃತಿ ಮೂಡಿಸಲಾಯಿತು.

ಬೆಂಗಳೂರು ನಗರದಲ್ಲಿ ತಾಪಮಾನ ಏರಿಕೆಗೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಈ ಎಸಿ ಹೆಲ್ಮೆಟ್ ಯೋಜನೆ ಮಹತ್ವದ ಮಾದರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Continue Reading

ದೇಶ

ಡಿಕೆಶಿ ಸರ್ಕಾರಕ್ಕೆ ಮತ್ತೊಂದು ಶಾಕ್! ರಾಮಲಿಂಗಾ ರೆಡ್ಡಿ ಬಳಿಕ ಕೆ.ಹೆಚ್. ಮುನಿಯಪ್ಪ ಅಸಮಾಧಾನ ಸ್ಫೋಟ

Published

on

ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಸಚಿವ ಸಂಪುಟದಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಳ್ಳತೊಡಗಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಪಡೆದಿರುವ K. H. Muniyappa ಅವರು ಕೂಡ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಖಾತೆ ಹಂಚಿಕೆ ವೇಳೆ ತಮ್ಮ ಹಿರಿತನಕ್ಕೆ ತಕ್ಕ ಮಹತ್ವ ನೀಡಿಲ್ಲ ಎಂದು ಮುನಿಯಪ್ಪ ಬೇಸರ ಹೊರಹಾಕಿದ್ದಾರೆ. ಕಳೆದ ಸಿದ್ದರಾಮಯ್ಯ ಸರ್ಕಾರದಲ್ಲೂ ಆಹಾರ ಖಾತೆಯನ್ನೇ ನಿರ್ವಹಿಸಿದ್ದ ಅವರು, ಈ ಬಾರಿ ಬೇರೆ ಖಾತೆಯ ನಿರೀಕ್ಷೆಯಲ್ಲಿದ್ದರು ಎನ್ನಲಾಗಿದೆ. ಆದರೆ ಮತ್ತೆ ಅದೇ ಇಲಾಖೆಯ ಜವಾಬ್ದಾರಿ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ಏಳು ಬಾರಿ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿರುವ ಮುನಿಯಪ್ಪ, “ಪಕ್ಷದಲ್ಲಿ ನನ್ನ ಹಿರಿತನವನ್ನು ಪರಿಗಣಿಸಿಲ್ಲ. ಆಹಾರ ಖಾತೆ ಬದಲು ಬೇರೆ ಇಲಾಖೆ ನೀಡುವಂತೆ ನಾಯಕತ್ವಕ್ಕೆ ಮನವಿ ಮಾಡಿದ್ದೆ. ಖಾತೆ ಹಂಚಿಕೆಯಲ್ಲಿ ಹಿರಿಯ ನಾಯಕರಿಗೆ ಸೂಕ್ತ ಗೌರವ ಸಿಗಬೇಕಿತ್ತು” ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಬೆಂಗಳೂರು ಅಭಿವೃದ್ಧಿ ಇಲಾಖೆ ನಿರೀಕ್ಷಿಸಿದ್ದ Ramalinga Reddy ಅವರಿಗೆ ಜಲಸಂಪನ್ಮೂಲ ಖಾತೆ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸಂಕಷ್ಟವನ್ನುಂಟು ಮಾಡಿದೆ.

ಸರ್ಕಾರ ರಚನೆಯಾದ ಮೂರೇ ದಿನಗಳಲ್ಲಿ ಇಬ್ಬರು ಹಿರಿಯ ನಾಯಕರ ಅಸಮಾಧಾನ ಬಹಿರಂಗವಾಗಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ. ಅಸಮಾಧಾನಿತ ನಾಯಕರನ್ನು ಮನವೊಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕರು ಮುಂದಾಗಿದ್ದು, ಮುಂದಿನ ಬೆಳವಣಿಗೆಗಳತ್ತ ರಾಜ್ಯ ರಾಜಕೀಯ ವಲಯ ಕುತೂಹಲದಿಂದ ಗಮನ ಹರಿಸಿದೆ.

Continue Reading

ಬೆಂಗಳೂರು

ವಾಹನ ಸವಾರರಿಗೆ ಬಂಪರ್ ಆಫರ್! ಟ್ರಾಫಿಕ್ ಫೈನ್‌ಗೆ 50% ರಿಯಾಯಿತಿ

Published

on

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಕರ್ನಾಟಕ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ದಾಖಲಿಸಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ಶೇ.50 ರಷ್ಟು ರಿಯಾಯಿತಿ ಘೋಷಿಸಲಾಗಿದೆ. ಈ ವಿಶೇಷ ಅವಕಾಶ ಜೂನ್ 21ರಿಂದ ಜುಲೈ 10ರವರೆಗೆ ಲಭ್ಯವಿರಲಿದೆ.

ರಾಜ್ಯದಲ್ಲಿ ಲಕ್ಷಾಂತರ ವಾಹನ ಸವಾರರು ಬಾಕಿ ಉಳಿಸಿಕೊಂಡಿರುವ ಟ್ರಾಫಿಕ್ ದಂಡವನ್ನು ಪಾವತಿಸಲು ಅನುಕೂಲವಾಗುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ರಿಯಾಯಿತಿ ಅವಧಿಯಲ್ಲಿ ದಂಡ ಪಾವತಿಸುವವರು ಕೇವಲ ಅರ್ಧ ಮೊತ್ತವನ್ನು ಪಾವತಿಸಿದರೆ ಸಾಕು.

ಯಾರಿಗೆಲ್ಲಾ ರಿಯಾಯಿತಿ ಅನ್ವಯ?

ಪೊಲೀಸ್ ಇಲಾಖೆಯು 2026ರ ಮೇ ತಿಂಗಳಿಗಿಂತ ಮುಂಚೆ ಇ-ಚಲನ್ ಮೂಲಕ ದಾಖಲಿಸಿರುವ ಎಲ್ಲಾ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಈ ರಿಯಾಯಿತಿ ಅನ್ವಯವಾಗಲಿದೆ.

ಇದರ ಜೊತೆಗೆ, ಸಾರಿಗೆ ಇಲಾಖೆ ಅಧಿಕಾರಿಗಳು 1991ರಿಂದ 2022ರವರೆಗೆ ದಾಖಲಿಸಿರುವ ಪ್ರಕರಣಗಳ ಬಾಕಿ ದಂಡಗಳಿಗೂ ಶೇ.50 ರಷ್ಟು ರಿಯಾಯಿತಿ ದೊರೆಯಲಿದೆ.

ಈ ಹಿಂದೆಯೂ ನೀಡಲಾಗಿತ್ತು ಅವಕಾಶ

ಇ-ಚಲನ್ ದಂಡ ಪಾವತಿಗೆ ರಾಜ್ಯ ಸರ್ಕಾರ ಈ ಹಿಂದೆ ಹಲವು ಬಾರಿ ಶೇ.50 ರಷ್ಟು ರಿಯಾಯಿತಿ ಘೋಷಿಸಿತ್ತು. ಕಳೆದ ವರ್ಷ ಮೊದಲ ಬಾರಿಗೆ ಸಾರಿಗೆ ಇಲಾಖೆ ಪ್ರಕರಣಗಳ ಬಾಕಿ ದಂಡ ಪಾವತಿಗೂ ರಿಯಾಯಿತಿ ನೀಡಲಾಗಿತ್ತು. ಇದೀಗ ಎರಡನೇ ಬಾರಿ ಈ ಸೌಲಭ್ಯ ಘೋಷಣೆ ಮಾಡಲಾಗಿದೆ.

ವಾಹನ ಸವಾರರು ಏನು ಮಾಡಬೇಕು?

ರಿಯಾಯಿತಿ ಅವಧಿಯೊಳಗೆ ತಮ್ಮ ವಾಹನಗಳ ವಿರುದ್ಧ ಇರುವ ಬಾಕಿ ದಂಡಗಳ ವಿವರಗಳನ್ನು ಪರಿಶೀಲಿಸಿ, ಆನ್‌ಲೈನ್ ಅಥವಾ ಸಂಬಂಧಿತ ಇಲಾಖೆಯ ಮೂಲಕ ಪಾವತಿಸಬಹುದು. ಗಡುವಿನ ಬಳಿಕ ಮತ್ತೆ ಪೂರ್ಣ ದಂಡ ಪಾವತಿಸಬೇಕಾಗುತ್ತದೆ.

ಸರ್ಕಾರದ ಈ ಕ್ರಮದಿಂದ ಲಕ್ಷಾಂತರ ವಾಹನ ಸವಾರರಿಗೆ ಆರ್ಥಿಕ ಪರಿಹಾರ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.

Continue Reading

Trending