ಬೆಂಗಳೂರು

ದುರಂತದ ಬೆನ್ನಲ್ಲೇ ಎಚ್ಚೆತ್ತ ಸರ್ಕಾರದಿಂದ ಮಹತ್ವದ ಘೋಷಣೆ

ಬೆಂಗಳೂರು: ನಿನ್ನೆ ಆರ್‍ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟಿದ್ದಾರೆ, ಈ ಮಹಾದುರಂತದ ಬೆನ್ನಲ್ಲೇ ಎಚ್ಚಿತ್ತಕೊಂಡಿರುವ ಕರ್ನಾಟಕ ಸರ್ಕಾರ ಮುಂದಿನ ಬೃಹತ್ ಕಾರ್ಯಕ್ರಮಗಳಿಗೆ ಸ್ಟಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ರೂಪಿಸಲು ಮುಂದಾಗಿದೆ
ಈ ರೀತಿಯ ದುರಂತಗಳನ್ನು ತಡೆಯುವ ಉದ್ದೇಶದಿಂದ ಬೃಹತ್ ಸಭೆ-ಸಮಾರಂಭಗಳು, ಕಾರ್ಯಕ್ರಮಗಳು ಸಂಭ್ರಮಾಚರಣೆಗಳಿಗೆ ಎಸ್‍ಒಪಿ ರೂಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ,
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಲ್ತುಳಿತಕ್ಕೆ ಕಾರಣವೇನು ಎಂಬುದನ್ನು ಪತ್ತೆ ಮಾಡಲಿದ್ದೇವೆ, ಲೋಪಗಳನ್ನು ಗುರುತಿಸಿ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಿದೆ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರ, ಗೃಹ ಇಲಾಖೆ ಹೊಸ ಎಸ್‍ಒಪಿ ರೂಪಿಸಲಿವೆ, ಇನ್ನು ಮುಂದೆ ಯಾವುದೇ ಬೃಹತ್ ಕಾರ್ಯಕ್ರಮಗಳು, ಸಭೆಗಳು ಮತ್ತು ಆಚರಣೆಗಳನ್ನು ಪೊಲೀಸ್ ಇಲಾಖೆ ಹೊರಡಿಸಿದ ನಿರ್ದೇಶನಗಳ ಚೌಕಟ್ಟಿನೊಳಗೆ ನಡೆಸಬೇಕೆಂದು ನಾವು ಸೂಚನೆಗಳನ್ನು ನೀಡುತ್ತೇವೆ ಎಂದು ಹೇಳಿದ್ದಾರೆ,

Leave a Reply

Your email address will not be published. Required fields are marked *

Trending

Exit mobile version