ಬೆಂಗಳೂರು
ತಂದೆ ಹೆಸರಲ್ಲಿ ಸ್ವಂತ ಖರ್ಚಿನಲ್ಲಿ 101 ಜನರಿಗೆ ಕಾಶಿಯಾತ್ರೆ ಮಾಡಿಸುತ್ತಿರುವ ನಟ ಜಿಮ್ ರವಿ
ಕೋಲಾರ ಮೂಲದ ಎ.ಕೆ.ರವಿ ಅವರು ಜಿಮ್ ರವಿ ಎಂದೇ ಖ್ಯಾತರು. ದೇಹದಾರ್ಢ್ಯ ಪಟುವಾಗಿ ದೇಶ, ವಿದೇಶಗಳಲ್ಲಿ ಜನಪ್ರಿಯರಾಗಿರುವ ಜಿಮ್ ರವಿ ಇತ್ತೀಚೆಗೆ “ಪುರುಷೋತ್ತಮ” ಎಂಬ ಚಿತ್ರದಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದರು. ಅಲ್ಲದೇ, ಸಾಮಾಜಿಕ ಕಾರ್ಯಗಳ ಮೂಲಕವೂ ಹೆಸರು ಸಂಪಾದಿಸಿದ್ದಾರೆ.
ಆದರೆ, ತಾವು ಮಾಡುವ ಸಾಮಾಜಿಕ ಕೆಲಸಕ್ಕೆ ಸಂಬಂಧಿಸಿದಂತೆ ಒಂದು ದಿನವೂ ಪ್ರಚಾರ ಬಯಸಿದವರಲ್ಲ. ಅವರೀಗ ಮತ್ತೊಂದು ಮಹತ್ತರ ಕಾರ್ಯಕ್ಕೆ ಮುಂದಾಗಿದ್ದಾರೆ. ಸ್ನೇಹಿತರ ಒತ್ತಾಯಕ್ಕೆ ಮಣಿದ ರವಿ ಅವರು ಈ ಕಾರ್ಯ ಇತರರಿಗೂ ಮಾದರಿಯಾಗಲಿ ಎಂಬ ಉದ್ದೇಶದಿಂದ ಇತ್ತೀಚೆಗೆ ಪತ್ರಿಕಾಗೋಷ್ಠಿ ಹಮ್ಮಿಕೊಂಡಿದ್ದರು
ಕೋಲಾರದಿಂದ ಬೆಂಗಳೂರಿಗೆ ಬಂದು ಟೌನ್ ಹಾಲ್ನಲ್ಲಿ ನಡೆದ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಗಳಿಸಿದ ವಿಷಯದೊಂದಿಗೆ ಮಾತು ಆರಂಭಿಸಿದ ಜಿಮ್ ರವಿ, ”ನಮ್ಮದು ಮಧ್ಯಮವರ್ಗ ಕುಟುಂಬ. ಪ್ರತಿದಿನ ಮುದ್ದೆ ತಿನ್ನುತ್ತಿದ್ದ ನಾವು ಹಬ್ಬಗಳಲ್ಲೇ ಅನ್ನ ಉಣ್ಣುತ್ತಿದ್ದದ್ದು. ನನ್ನ ತಾಯಿ ನನಗೆ ಆದರ್ಶ. ಜೀವನದ ಪಾಠ ಕಲಿಸಿದ ಮಹಾತಾಯಿ ಅವರು. ಒಬ್ಬರ ಸುಖಕ್ಕೆ ನೀನು ಆಗದಿದ್ದರೂ ಪರವಾಗಿಲ್ಲ, ಕಷ್ಟದಲ್ಲಿರುವವರ ಜೊತೆಗಿರು. ಹಿರಿಯರೆದುರು ಕೈಕಟ್ಟಿ ನಿಲ್ಲೆಂದು ಅಮ್ಮ ಹೇಳಿಕೊಟ್ಟಿದ್ದಾರೆ. ಹೀಗೆ ಜೀವನ ಸಾಗುತ್ತಿದ್ದಾಗ ಅಮ್ಮ ನಮ್ಮನ್ನು ಬಿಟ್ಟು ಹೋದರು. ಅಮ್ಮನ ನಿಧನದ ಕೆಲ ತಿಂಗಳ ನಂತರ ಅಪ್ಪ, ನನ್ನ ಹತ್ತಿರ ಬಂದು ನಿಮ್ಮ ಅಮ್ಮನ ಸಾವಿನಿಂದ ಬಹಳ ದುಖವಾಗಿದೆ. ಹಾಗಾಗಿ, ನನ್ನನ್ನು ಕಾಶಿಯಾತ್ರೆಗೆ ಕರೆದುಕೊಂಡು ಹೋಗು ಎಂದರು. ನನ್ನ ಹತ್ತಿರ ಆಗ ಹಣವಿರಲಿಲ್ಲ. ಅಪ್ಪನಿಗೆ ಏರುದನಿಯಲ್ಲಿ ಈಗ ಅದೆಲ್ಲ ಆಗಲ್ಲ ಎಂದುಬಿಟ್ಟೆ”.
ನಮ್ಮ ಯೋಜನೆ ಒಂದಾದರೆ, ವಿಧಿ ಮತ್ತೊಂದು: ”ಅದಾದ ಕೆಲ ತಿಂಗಳ ಬಳಿಕ ಮತ್ತೆ ಕೇಳಿದರು. ಆಗ ನಾನು ಅವರಿಗೆ ವಿಮಾನದಲ್ಲಿ ಕರೆದುಕೊಂಡು ಹೋಗುತ್ತೇನೆಂದು ಹೇಳಿ ಸಮಾಧಾನಪಡಿದೆ. ಕೆಲ ದಿನಗಳ ನಂತರ ಗೆಳೆಯರ ಹತ್ತಿರ ಸಾಲ ಮಾಡಿ ಅಪ್ಪನ ಕಾಶಿಯಾತ್ರೆಗೆ ವಿಮಾನದ ಟಿಕೆಟ್ ಬುಕ್ ಮಾಡಿದೆ. ಆ ವಿಷಯವನ್ನು ಅಪ್ಪನಿಗೆ ಫೋನ್ ಮಾಡಿ ತಿಳಿಸಿದೆ. ಅವರು ಖುಷಿಯಾಗುತ್ತಾರೆ. ಆದರೆ ವಿಧಿ ಬೇರೆಯದ್ದಾಗಿತ್ತು,
ಅಪ್ಪನ ಹೆಸರಿನಲ್ಲಿ ಕಾಶಿಯಾತ್ರೆ: ”ನಾನು ಈ ವಿಷಯ ತಿಳಿಸಿದ ಕೆಲವೇ ಗಂಟೆಗಳಲ್ಲೇ ಅಪ್ಪ ನಮ್ಮನ್ನು ಬಿಟ್ಟು ಹೋದರು. ಅವರ ಕಾಶಿಯಾತ್ರೆಯ ಆಸೆಯೂ ಅವರ ಜೊತೆಗೆ ಹೋಗಿ ಬಿಡ್ತು. ಅದೇ ದಿನ ನಾನು ನಿರ್ಧಾರ ಮಾಡಿದೆ. ನಮ್ಮ ಅಪ್ಪನ ಆಸೆ ಈಡೇರಿಸಲು, ಕಾಶಿಯಾತ್ರೆ ಮಾಡಲು ಸಾಧ್ಯವಿಲ್ಲದ ಕೆಲ ಅಶಕ್ತರಿಗೆ ಅಪ್ಪನ ಹೆಸರಿನಲ್ಲಿ ಕಾಶಿಯಾತ್ರೆ ಮಾಡಿಸಬೇಕು ಎಂದು ನಿರ್ಧರಿಸಿದೆ” ಎಂದು ತಿಳಿಸಿದರು.
ಅಪ್ಪ ನಿಧನರಾಗಿ 14 ವರ್ಷಗಳಾಯಿತು. ಅಂದಿನಿಂದ ಈವರೆಗೂ ಅದಕ್ಕೋಸ್ಕರ ಹುಂಡಿ ಇಟ್ಟು ಹಣ ಕೂಡಿಸುತ್ತಿದ್ದೆ. ಯಾವುದೇ ದುಂದು ವೆಚ್ವ ಮಾಡದೇ ಹತ್ತು, ಇಪ್ಪತ್ತು ರೂಪಾಯಿಯಿಂದ ಹಿಡಿದು ಸಾವಿರ ರೂಪಾಯಿಗಳವರೆಗೂ ಹುಂಡಿಯಲ್ಲಿ ಹಾಕುತ್ತಿದ್ದೆ. ಈಗದಕ್ಕೆ ಕಾಲ ಕೂಡಿ ಬಂದಿದೆ. ವಾಣಿಜ್ಯ ತೆರೆಗೆ ಅಧಿಕಾರಿಗಳಾದ ಜಗನ್ನಾಥ್ ಹಾಗೂ ಕುಟುಂಬದವರ ಮಾರ್ಗದರ್ಶನದಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಸುಮಾರು 80 ಜನ ಅಸಕ್ತರನ್ನು ನಾನೇ ಖುದ್ದಾಗಿ ಭೇಟಿ ಮಾಡಿದ್ದು, ಅವರ ಜೊತೆ 101 ಜನರ ತಂಡ ಜುಲೈ 2ರಂದು ಪಯಣ ಬೆಳೆಸುತ್ತಿದ್ದೇವೆ” ಎಂದು ತಿಳಿಸಿದರು.
ಅವರ ಊರಿನಿಂದ ಬರುವ ಪ್ರಯಾಣದ ವೆಚ್ಚದಿಂದ ಹಿಡಿದು ಎಲ್ಲ ವ್ಯವಸ್ಥೆಯನ್ನೂ ನಾವೇ ಮಾಡುತ್ತಿದ್ದೇವೆ. ಜುಲೈ 2ರ ಬೆಳಗ್ಗೆ ಬೆಂಗಳೂರು ವಿಮಾನ ನಿಲ್ದಾಣದಿಂದ ರಾಮ ಜನ್ಮಭೂಮಿ ಅಯೋಧ್ಯೆಗೆ ಪಯಣ ಕೈಗೊಳ್ಳಲಿದ್ದೇವೆ. ಅಲ್ಲಿಂದ ಪ್ರಯಾಗರಾಜ. ಅಲ್ಲಿಂದ ಕಾಶಿ. ಒಟ್ಟು 3 ದಿನಗಳ ಯಾತ್ರೆ. ಎಲ್ಲಾ ಕಡೆ ಎಸಿ ವಾಹನ ಹಾಗೂ ಎಸಿ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ನಮ್ಮ ಜೊತೆ ವೈದ್ಯರು ಹಾಗೂ ಸ್ವಯಂ ಸೇವಕರಿರುತ್ತಾರೆ. ಆಹ್ವಾನಿಸಿದ ಅತಿಥಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು. ನನಗೆ ಈ ವಿಚಾರ ಪ್ರಚಾರ ಮಾಡುವ ಉದ್ದೇಶವಿರಲಿಲ್ಲ. ಸ್ನೇಹಿತರೋರ್ವರು, ನೀವು ಈ ವಿಷಯ ಜನರಿಗೆ ತಿಳಿಸಿ, ಅದು ಎಷ್ಟೋ ಜನರಿಗೆ ಆದರ್ಶವಾಗಬಹುದು ಎಂದರು. ಹಾಗಾಗಿ, ನಿಮ್ಮ ಮುಂದೆ ಈ ವಿಷಯ ತಿಳಿಸಿದ್ದೇನೆ. ದೇವರು ಅನುಕೂಲ ಮಾಡಿಕೊಟ್ಟರೆ ಮುಂದೆಯೂ ಇದೇ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳುವ ಯೋಜನೆ ಇದೆ ಎಂದು ಮಾಹಿತಿ ನೀಡಿದರು
ದೇಶ
Bengaluru : ₹180ಗೆ ತೆಂಗಿನ ನೀರು? ಬೆಂಗಳೂರಲ್ಲಿ ಏನಾಗ್ತಿದೆ ನೋಡಿ!
ಬೆಂಗಳೂರು: ಬೇಸಿಗೆ ತಾಪಮಾನ ಏರಿಕೆಯಾಗುತ್ತಿದ್ದಂತೆ ತಂಪು ಪಾನೀಯಗಳ ಬೇಡಿಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. ಅದರಲ್ಲೂ ನೈಸರ್ಗಿಕ ಪಾನೀಯವಾದ ತೆಂಗಿನ ನೀರಿಗೆ ಸಿಕ್ಕಿರುವ ಬೇಡಿಕೆ ಈಗ ಅಚ್ಚರಿಯ ಮಟ್ಟ ತಲುಪಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗ ತೆಂಗಿನ ನೀರನ್ನು ಲೀಟರ್‌ಗೆ ಮಾರಾಟ ಮಾಡಲಾಗುತ್ತಿದ್ದು, ಅದರ ಬೆಲೆ ಕೇಳಿದವರು ಬೆಚ್ಚಿಬಿದ್ದಿದ್ದಾರೆ.
ನಗರದ ಕೆಲವು ಭಾಗಗಳಲ್ಲಿ ಒಂದು ಲೀಟರ್ ತೆಂಗಿನ ನೀರಿಗೆ ₹180 ವರೆಗೆ ದರ ನಿಗದಿ ಮಾಡಲಾಗಿದೆ. ಕೆಲವು ಕಡೆಗಳಲ್ಲಿ ಒಂದೇ ತೆಂಗಿನಕಾಯಿ ₹70ರಿಂದ ₹80ರೊಳಗೆ ಮಾರಾಟವಾಗುತ್ತಿದ್ದರೂ, ಬೇಡಿಕೆ ಹೆಚ್ಚಾದ ಕಾರಣ ವ್ಯಾಪಾರಿಗಳು ಹೊಸ ರೀತಿಯಲ್ಲಿ ಲೀಟರ್ ಲೆಕ್ಕದಲ್ಲಿ ಮಾರಾಟ ಆರಂಭಿಸಿದ್ದಾರೆ.
ಬೆಂಗಳೂರಿನ ನವನಗರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಅಂಗಡಿಗಳ ಮುಂದೆ “1 ಲೀಟರ್ ತೆಂಗಿನ ನೀರು – ₹180” ಎಂಬ ಬೋರ್ಡ್‌ಗಳು ಕಾಣಿಸಿಕೊಂಡಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೇಸಿಗೆ ಉಷ್ಣತೆ ಹೆಚ್ಚಾಗುತ್ತಿದ್ದಂತೆ ಜನರು ಹೆಚ್ಚು ತಂಪು ಮತ್ತು ಆರೋಗ್ಯಕರ ಪಾನೀಯಗಳನ್ನು ಆರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತೆಂಗಿನ ನೀರಿನ ಬೇಡಿಕೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
ವ್ಯಾಪಾರಿಗಳ ಪ್ರಕಾರ, ಪೂರೈಕೆ ಕಡಿಮೆ ಹಾಗೂ ಬೇಡಿಕೆ ಹೆಚ್ಚಿರುವುದರಿಂದ ದರ ಏರಿಕೆ ಅನಿವಾರ್ಯವಾಗಿದೆ. ಆದರೆ ಸಾಮಾನ್ಯ ಜನರು ಮಾತ್ರ ಈ ದರ ಏರಿಕೆಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. “ಇಷ್ಟು ದುಬಾರಿ ದರದಲ್ಲಿ ತೆಂಗಿನ ನೀರು ಖರೀದಿಸಲು ಸಾಧ್ಯವೇ?” ಎಂಬ ಪ್ರಶ್ನೆ ಕೇಳುತ್ತಿದ್ದಾರೆ.
ಒಟ್ಟಿನಲ್ಲಿ, ಬೇಸಿಗೆಯ ಬೇಡಿಕೆ ಹಾಗೂ ಪೂರೈಕೆ ನಡುವಿನ ಅಸಮತೋಲನದಿಂದ ಬೆಂಗಳೂರಿನಲ್ಲಿ ತೆಂಗಿನ ನೀರಿನ ಬೆಲೆ ಗಗನಕ್ಕೇರಿದೆ.
ದೇಶ
Bengaluru: ಸಚಿವ ಮುನಿಯಪ್ಪ ಮನೆ ಮುತ್ತಿಗೆ: ಆಟೋ ಚಾಲಕರ ಪ್ರತಿಭಟನೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ಕೊರತೆ ತೀವ್ರಗೊಂಡಿದ್ದು, ಸಾವಿರಾರು ಆಟೋ ಚಾಲಕರ ಬದುಕು ಸಂಕಷ್ಟಕ್ಕೀಡಾಗಿದೆ. ಕಳೆದ ಕೆಲವು ದಿನಗಳಿಂದ ಗ್ಯಾಸ್ ಸಿಗದೆ ಚಾಲಕರು ಬಂಕ್‌ಗಳ ಮುಂದೆ ಕಿಲೋಮೀಟರ್‌ಗಳಷ್ಟು ಉದ್ದದ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ಸಮಸ್ಯೆಗೆ ವಿರೋಧವಾಗಿ ಚಾಲಕರು ಇಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ K. H. Muniyappa ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. “ಗ್ಯಾಸ್ ಸಿಗುತ್ತಿಲ್ಲ, ಸಿಕ್ಕರೂ ಲೀಟರ್‌ಗೆ ₹90 ಬದಲು ₹135 ವರೆಗೆ ವಸೂಲಿ ಮಾಡುತ್ತಿದ್ದಾರೆ” ಎಂದು ಚಾಲಕರು ಆರೋಪಿಸಿದ್ದಾರೆ.
ಮಹಿಳಾ ಆಟೋ ಚಾಲಕರ ಸ್ಥಿತಿ ಮತ್ತಷ್ಟು ದುಃಖಕರವಾಗಿದೆ. “ಮಕ್ಕಳನ್ನು ಮನೆಯಲ್ಲಿ ಬಿಟ್ಟು ಗಂಟೆಗಳ ಕಾಲ ಗ್ಯಾಸ್‌ಗಾಗಿ ಕಾಯಬೇಕು” ಎಂದು ತಮ್ಮ ಅಳಲನ್ನು ಹಂಚಿಕೊಂಡಿದ್ದಾರೆ. ಈ ನಡುವೆ ಬಂಕ್‌ಗಳಲ್ಲಿ ದಾಸ್ತಾನು ಕೊರತೆಯೇ ಪ್ರಮುಖ ಕಾರಣವಾಗಿದ್ದು, ಹಗಲು-ರಾತ್ರಿ ಎನ್ನದೆ ಚಾಲಕರು ರಸ್ತೆಯಲ್ಲೇ ಕಾಯುವಂತಾಗಿದೆ.
ಪ್ರತಿಭಟನೆಯ ಬಳಿಕ ಪ್ರತಿಕ್ರಿಯಿಸಿದ ಸಚಿವ ಕೆ.ಎಚ್. ಮುನಿಯಪ್ಪ, “ಈ ಸಮಸ್ಯೆಗೆ ಕೇಂದ್ರ ಸರ್ಕಾರವೇ ಕಾರಣ. ಎಲ್‌ಪಿಜಿ, ಸಿಎನ್‌ಜಿ ಸೇರಿದಂತೆ ಇಂಧನ ವಿತರಣೆ ಕೇಂದ್ರದ ನಿಯಂತ್ರಣದಲ್ಲಿ ಇದೆ. ಕರ್ನಾಟಕಕ್ಕೆ ಸಮರ್ಪಕ ಪೂರೈಕೆ ಆಗುತ್ತಿಲ್ಲ” ಎಂದು ಆರೋಪಿಸಿದರು. ಈ ಕುರಿತು ಈಗಾಗಲೇ ಕೇಂದ್ರಕ್ಕೆ ಪತ್ರ ಬರೆದಿರುವುದಾಗಿ ತಿಳಿಸಿ, ಏಪ್ರಿಲ್ 10 ನಂತರ ಸಭೆ ನಡೆಸಿ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಿದರು.
ಆದರೆ ಸಚಿವರ ಉತ್ತರದಿಂದ ಅಸಮಾಧಾನಗೊಂಡ ಚಾಲಕರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. “ನಾವು ರಸ್ತೆಯಲ್ಲೇ ಮಲಗುತ್ತಿದ್ದರೂ ನಮ್ಮ ಸಮಸ್ಯೆ ಯಾರಿಗೂ ಕಾಣುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಟ್ಟಿನಲ್ಲಿ, ಅಂತಾರಾಷ್ಟ್ರೀಯ ಮಟ್ಟದ ಇಂಧನ ಅಸ್ಥಿರತೆಯ ನಡುವೆ ಸ್ಥಳೀಯ ಮಟ್ಟದಲ್ಲಿ ಉಂಟಾದ ಈ ಎಲ್‌ಪಿಜಿ ಕೊರತೆ ಆಟೋ ಚಾಲಕರ ಆದಾಯಕ್ಕೆ ದೊಡ್ಡ ಹೊಡೆತ ನೀಡಿದೆ.
ದೇಶ
ವೀರಕುಮಾರರ ತಪಸ್ಸು, ಭಕ್ತಿಯ ತೇಜಸ್ಸು: ಕೆಂಗೇರಿ ಕರಗದ ವೈಶಿಷ್ಟ್ಯ
ಬೆಂಗಳೂರು: ನಗರದ ಕೆಂಗೇರಿಯಲ್ಲಿ ಕ್ಷತ್ರಿಯ (ತಿಗಳ ಕ್ಷತ್ರಿಯ) ಸಮುದಾಯದವರಿಂದ ಆಚರಿಸಲ್ಪಡುವ ದ್ರೌಪದಿ ಅಮ್ಮನವರ ಭವ್ಯ ಕರಗ ಶಕ್ತಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಅನಾದಿಕಾಲದಿಂದಲೂ ನಡೆಯುತ್ತಿರುವ ಈ ಸಂಪ್ರದಾಯಿಕ ಹಬ್ಬದಲ್ಲಿ ಭಕ್ತಿ, ಶಕ್ತಿ ಮತ್ತು ಸಂಸ್ಕೃತಿಯ ಸಮ್ಮಿಳನ ಕಂಡುಬರುತ್ತದೆ.
ಈ ಮಹೋತ್ಸವದ ಅಂಗವಾಗಿ ಹಸಿ ಕರಗವನ್ನು ಮುನ್ನಡೆಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಸಮುದಾಯದವರು Draupadi Amman ಅವರನ್ನು ಕುಲದೇವತೆಯಾಗಿ ಆರಾಧಿಸುತ್ತಾರೆ. ಕರಗ ಪೂಜೆಯಲ್ಲಿ ಕುಲಪುರೋಹಿತರು, ವೀರಕುಮಾರರು ಮತ್ತು ಭಕ್ತರು ಭಾಗವಹಿಸಿ ವಿಶೇಷ ವಿಧಿವಿಧಾನಗಳನ್ನು ನೆರವೇರಿಸುತ್ತಾರೆ.
ಹಬ್ಬದ ವಿಶೇಷವೆಂದರೆ ವೀರಕುಮಾರರು ಕೈಯಲ್ಲಿ ಖಡ್ಗಗಳನ್ನು ಹಿಡಿದು ಭಕ್ತಿಯ ಸಂಕೇತವಾಗಿ ತಮ್ಮ ಎದೆಗೆ ತಾವೇ ಪ್ರಹಾರ ಮಾಡಿಕೊಳ್ಳುವುದು. ಗಾಯವಾದಲ್ಲಿ ಔಷಧಿಯ ಬದಲು ಅರಿಶಿನವನ್ನು ಬಳಸಿ ದೇವಿಯ ಮೇಲಿನ ಭಕ್ತಿಯನ್ನು ತೋರಿಸುತ್ತಾರೆ.
ರಾತ್ರಿ ಸುಮಾರು ಮೂರು ಗಂಟೆಗೆ ಹೂವಿನ ಕರಗ ಸಿದ್ಧವಾಗುತ್ತಿದ್ದು, ಕೆಂಪು ವಸ್ತ್ರ ಮತ್ತು ಮಂಗಳ ದ್ರವ್ಯಗಳಿಂದ ಅಲಂಕರಿಸಲಾಗುತ್ತದೆ. ಪೂಜಾರಿ ಮಲ್ಲಿಗೆ ಹೂಗಳಿಂದ ಸಿಂಗರಿಸಿಕೊಂಡು ಕರಗವನ್ನು ಹೊತ್ತು ಭಕ್ತಿಭಾವದಿಂದ ನರ್ತನ ಮಾಡುತ್ತಾ ಸಾಗುತ್ತಾರೆ.
ಈ ಕರಗವು ಕೆಂಗೇರಿ ಸುತ್ತಮುತ್ತಲಿನ ಬಡಾವಣೆಗಳಲ್ಲಿ ಸಂಚರಿಸಿ, ನಂತರ ದೇವಸ್ಥಾನಕ್ಕೆ ಮರಳಿ ಪೂಜೆ ಸ್ವೀಕರಿಸುವ ಮೂಲಕ ಮಹೋತ್ಸವ ಮುಕ್ತಾಯಗೊಳ್ಳುತ್ತದೆ.
ಈ ಸಂದರ್ಭದಲ್ಲಿ ಸಮುದಾಯದ ಅನೇಕ ಮುಖಂಡರು ಹಾಗೂ ಭಕ್ತರು ಭಾಗವಹಿಸಿ ಉತ್ಸವಕ್ಕೆ ಭಕ್ತಿ ಭಾವ ತುಂಬಿದರು.
-
ಚುನಾವಣೆ24 hours agoDavangere By Election 2026 : 25 ಅಭ್ಯರ್ಥಿಗಳ ಕಣ: ಮುಸ್ಲಿಂ ಅಭ್ಯರ್ಥಿಗಳೇ ಗೇಮ್ಚೇಂಜರ್?
-
ದೇಶ22 hours agoಬಾಹ್ಯಾಕಾಶದಲ್ಲಿ ಡೇಟಾ ಸೆಂಟರ್?: AI ರೇಸ್ನಲ್ಲಿ ಟೆಕ್ ದೈತ್ಯರ ಹೊಸ ಹೆಜ್ಜೆ
-
ದೇಶ24 hours agoಗಡಿಯಲ್ಲಿ ಹಾವು-ಮೊಸಳೆ ಕಾವಲು?: ಬಿಎಸ್ಎಫ್ ಹೊಸ ಯೋಜನೆ ಚರ್ಚೆಯಲ್ಲಿ
-
ದೇಶ22 hours agoವೀರಕುಮಾರರ ತಪಸ್ಸು, ಭಕ್ತಿಯ ತೇಜಸ್ಸು: ಕೆಂಗೇರಿ ಕರಗದ ವೈಶಿಷ್ಟ್ಯ
-
ಚುನಾವಣೆ21 hours ago‘ಆಪರೇಷನ್ ಸಿಂಧೂರ್’ ವಿವಾದ: ಕಾಂಗ್ರೆಸ್ ವಿರುದ್ಧ ಮೋದಿ ತೀವ್ರ ಆರೋಪ
-
ದೇಶ20 hours agoಹಾರ್ಮುಜ್ ಸಮಸ್ಯೆ ಪರಿಹಾರಕ್ಕೆ ಭಾರತ ಪ್ರಮುಖ ಪಾತ್ರ?: ಇರಾನ್ ವಿಶ್ವಾಸ
-
ದೇಶ22 hours agoಹೊರ್ಮುಜ್ ಜಲಸಂಧಿ ತೆರೆಯಲ್ಲ: ಇರಾನ್ ಕಠಿಣ ನಿಲುವು
-
ದೇಶ1 hour ago4 ಗಂಟೆಗೂ ಬೋರ್ ಇಲ್ಲ: ಕೊಹ್ಲಿ ರಿವ್ಯೂ ವೈರಲ್
