ರಾಜಕೀಯ
ಅಖಾಡದಲ್ಲಿ ಒಂಟಿಯಾದ್ರಾ ‘ಬಂಡೆ’: ಮುಖ್ಯಮಂತ್ರಿ ಕುರ್ಚಿ ಆಸೆ ಬಿಟ್ಟಿದ್ದೇಕೆ ಡಿಕೆಶಿ?; ಸಿದ್ದು CM ಆಗಿ ಮುಂದುವರಿಯಲು ಸಹಾಯವಾಗಿವೆ ಈ ಅಂಶಗಳು!
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ಐದು ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ನಡುವೆ ಸಿಎಂ ಕುರ್ಚಿ ಆಸೆಯಿಂದ ಡಿಕೆ ಶಿವಕುಮಾರ್ ಹಿಂದೆ ಸರಿದಿದ್ದಾರೆ. ಅಖಾಡದಲ್ಲಿ ಕನಕಪುರ ಬಂಡೆ ಒಂಟಿಯಾಗಿ ನಿಂತಿದ್ದಾರೆ. ಅಸಹಾಯಕತೆ ತೋಡಿಕೊಂಡಿದ್ದಾರೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಧಿಕ್ಕೇ ಬದಲಾಗಿದೆ.
ಸಿದ್ದು ಮತ್ತು ಡಿಕೆಶಿ ನಡುವೆ ಕದನ ವಿರಾಮದ ಮಧ್ಯಸ್ಥಿಕೆ ವಹಿಸಲು ಪಕ್ಷವು ಹಿರಿಯ ನಾಯಕ ರಂದೀಪ್ ಸುರ್ಜೇವಾಲಾ ಅವರನ್ನು ಕಳುಹಿಸಿತ್ತು, ಪಕ್ಷದ ಹೈಕಮಾಂಡ್ ತನಗೆ ವಹಿಸಿದ್ದ ಜವಾಬ್ದಾರಿ ನಿರ್ವಹಿಸುವಲ್ಲಿ ಸುರ್ಜೇವಾಲಾ ಯಶಸ್ವಿಯಾಗಿದ್ದಾರೆ.
ಕಾಂಗ್ರೆಸ್‌ನ 138 ಶಾಸಕರಲ್ಲಿ ಅಗಾಧ ಸಂಖ್ಯೆಯ ಬೆಂಬಲವಿದ್ದರೂ ಡಿಕೆ ಶಿವಕುಮಾರ್ ಏಕೆ ಸಿಎಂ ರೇಸ್ ನಿಂದ ಹಿಂದೆ ಸರಿದರು ಎಂಬ ಪ್ರಶ್ನೆ ಮೂಡಿದೆ. ಸಿದ್ದು, ಡಿಕೆಎಸ್ ಮತ್ತು ಸುರ್ಜೇವಾಲ ನಡುವಿನ ಸಭೆಗಳಲ್ಲಿ ಏನಾಯಿತು ಎಂಬುದು ನಿಗೂಢವಾಗಿಯೇ ಉಳಿಯುವ ಸಾಧ್ಯತೆಯಿದೆ. ಕಾಂಗ್ರೆಸ್‌ನ ಕೇಂದ್ರ ನಾಯಕರೊಂದಿಗೆ, ಅಂದರೆ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಗಾಂಧಿಗಳೊಂದಿಗೆ ಮಾತ್ರ ಹಂಚಿಕೊಳ್ಳುವ ಸಾಧ್ಯತೆಯಿದೆ, ಆದರೆ ಸಿದ್ದರಾಮಯ್ಯ ಕರ್ನಾಟಕದ ಮುಖ್ಯಮಂತ್ರಿಯಾಗಿರುವುದಕ್ಕೆ ಏಳು ಕಾರಣಗಳಿವೆ.
ನೀವು ಮುಖ್ಯಮಂತ್ರಿಯಾಗಲು ಬಯಸಿದರೆ, ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಆ ನಂತರ ಆ ಹುದ್ದೆಗೆ ಸಿದ್ದರಾಮಯ್ಯ ತಮ್ಮ ನಿಷ್ಠರನ್ನು ನೇಮಿಸಿಕೊಳ್ಳಬಹುದಾಗಿದೆ. ಹೀಗಾಗಿ ಈ ಆಫರ್ ಗೆ ಡಿಕೆಶಿವಕುಮಾರ್ ಸುತಾರಾಂ ಒಪ್ಪಿಲ್ಲ ಎಂದು ಮೂಲಗಳು ತಿಳಿಸಿವೆ.
ಈ ವರ್ಷದ ಕೊನೆಯಲ್ಲಿ ಬಿಹಾರ ಚುನಾವಣೆ ನಡೆಯಲಿದೆ. ಪಾಟ್ನಾ ಬೆಂಗಳೂರಿನಿಂದ 2,000 ಕಿ.ಮೀ ದೂರದಲ್ಲಿದೆ, ಶೇಕಡಾ 64 ರಷ್ಟು ಹಿಂದುಳಿದ ಮತ್ತು ಅತ್ಯಂತ ಹಿಂದುಳಿದ ವರ್ಗಗಳ ಜನಸಂಖ್ಯೆಯನ್ನು ಹೊಂದಿರುವ ರಾಜ್ಯದಲ್ಲಿ ಮತದಾನ ಮಾಡುವ ಮೊದಲು ಅಂಚಿನಲ್ಲಿರುವ ಸಮುದಾಯದ ನಾಯಕನನ್ನು ವಜಾಗೊಳಿಸುವ ಸಾಧ್ಯತೆಯ ಬಗ್ಗೆ ಕಾಂಗ್ರೆಸ್ ಎಚ್ಚರದಿಂದ ಹೆಜ್ಜೆ ಇಡುತ್ತಿದೆ ಎನ್ನಲಾಗಿದೆ.
ಬಿಹಾರ ಚುನಾವಣೆಯವರೆಗೂ ಸಿದ್ದರಾಮಯ್ಯ ಕುರ್ಚಿ ಬಹುತೇಕ ಸೇಫ್ . ಮೂರನೇ ಕಾರಣವೆಂದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ಮೊದಲ ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಶಸ್ತಿಯನ್ನು ಗೆದ್ದ ನಂತರ ಸಂಭವಿಸಿದ ಕಾಲ್ತುಳಿತ. ಆರ್‌ಸಿಬಿ ಗೆಲುವನ್ನು ಆಚರಿಸುವ ವೇಳೆ ಹನ್ನೊಂದು ಜನರು ಸಾವನ್ನಪ್ಪಿದರು, ಇದಕ್ಕೆ ಕ್ರಿಕೆಟ್ ತಂಡವೇ ಹೊಣೆ ಎಂದು ಪರಿಗಣಿಸಲಾಗಿದ್ದರೂ, ಜನಸಂದಣಿ ನಿಯಂತ್ರಣ ಎಚ್ಚರಿಕೆಗಳನ್ನು ಲೆಕ್ಕಿಸದೆ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಕ್ಕಾಗಿ ಡಿಕೆ ಶಿವಕುಮಾರ್ ತೀವ್ರ ಟೀಕೆಗೆ ಗುರಿಯಾಗಿದ್ದಾರೆ,
ಡಿಕೆ ಶಿವಕುಮಾರ್ ಅವರನ್ನು ಹಲವು ಏಜೆನ್ಸಿಗಳು ತನಿಖೆ ನಡೆಸುತ್ತಿವೆ 2019 ರಲ್ಲಿ – ಸೆಪ್ಟೆಂಬರ್ 3 ರಿಂದ ಅಕ್ಟೋಬರ್ 25 ರವರೆಗೆ – ಹಣ ವರ್ಗಾವಣೆ ಆರೋಪದ ಮೇಲೆ ಜೈಲಿಗೆ ಹಾಕಲಾಗಿತ್ತು. ಈಗ ಅವರಿಗೆ ಬಡ್ತಿ ನೀಡುವುದರಿಂದ, ಅರವಿಂದ್ ಕೇಜ್ರಿವಾಲ್ ಗೆ ಎದುರಾದ ಪರಿಸ್ಥಿತಿಯೇ ಬರುತ್ತದೆ.
ವಿಪರ್ಯಾಸವೆಂದರೆ ಸಿದ್ದರಾಮಯ್ಯ ಹುದ್ದೆ ಈಗ ಸುರಕ್ಷಿತವಾಗಿದೆ, ಏಕೆಂದರೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಮಗ ಪ್ರಿಯಾಂಕ್ ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ. ಅದರ ಜೊತೆಗೆ ಸಿಎಂ ರೇಸ್ ನಲ್ಲಿ ಹಲವು ಬ್ಲ್ಯಾಕ್ ಹಾರ್ಸ್ ಗಳಿವೆ. ಹೀಗಾಗಿ ಖರ್ಗೆ ಜೋಡಿ ಸಿಎಂ ಸ್ಥಾನಕ್ಕೆ ಬೇಡಿಕೆ ಇಡುವ ಸಾಧ್ಯತೆಯಿದೆ. ಪಕ್ಷವು ಈಗ ಆತುರಪಟ್ಟು ನಂತರ ಆಯ್ಕೆಗಳನ್ನು ಮರುಪರಿಶೀಲಿಸಲು ಸಿದ್ಧರಿಲ್ಲ ಎಂದು ಮೂಲಗಳು ತಿಳಿಸಿವೆ. ಬಂಡಾಟ ಆಡುವ ಮೂಲಕ ಸಿದ್ದರಾಮಯ್ಯ ತಮ್ಮ ಉನ್ನತ ಹುದ್ದೆಯನ್ನು ಹಿಡಿದಿಟ್ಟುಕೊಳ್ಳುವುದಕ್ಕೆ ವೈಯಕ್ತಿಕ ಕಾರಣವಿದೆ ಎಂದು ಮೂಲಗಳು ತಿಳಿಸಿವೆ. ದೇವರಾಜ್ ಅರಸ್ ಅವರು ಏಳು ವರ್ಷ 238 ದಿನಗಳನ್ನು ಮುಖ್ಯಮಂತ್ರಿಯಾಗಿ ನಿರ್ವಹಿಸಿದ ದಾಖಲೆ ಮುರಿಯಲು ಸಿದ್ದರಾಮಯ್ಯ ಬಯಸುತ್ತಿದ್ದಾರೆ ಎಂದು ವರದಿಯಾಗಿದೆ. ಸಿದ್ದರಾಮಯ್ಯ ಏಳು ವರ್ಷ 48 ದಿನಗಳ ಕಾಲ ಮುಖ್ಯಮಂತ್ರಿಯಾಗಿದ್ದಾರೆ. ಅದಾದ ನಂತರ ಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ, ಇದರಿಂದಾಗಿ ಡಿಕೆಶಿವಕುಮಾರ್ ಅವರಿಗೆ ಮತ್ತಷ್ಟು ಸಮಯವಿದೆ.
ಮತ್ತೊಂದು ಪ್ರಮುಖ ಅಂಶವೆಂದರೆ ರಾಜಸ್ಥಾನದ ಗಲಾಟೆ. ಅಶೋಕ್ ಗೆಹ್ಲೋಟ್ – ಸಚಿನ್ ಪೈಲಟ್ ಜಗಳ , ಮಧ್ಯಪ್ರದೇಶದಲ್ಲಿ – ಕಮಲ್ ನಾಥ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ ನಡುವಿನ ಜಗಳ ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ಉತ್ಸುಕರಾಗಿರುವ ಕಾಂಗ್ರೆಸ್, ಶಿವಕುಮಾರ್ ಅವರಿಗೆ ಭರವಸೆ ನೀಡಿದೆ ಎನ್ನಲಾಗಿದೆ.
ಸರ್ಕಾರದಲ್ಲಿ ಹೊಗೆಯಾಡುತ್ತಿದ್ದ ಸಿಎಂ ಬದಲಾವಣೆಯ ಚರ್ಚೆಗೆ ಸದ್ಯಕ್ಕೆ ತೆರೆ ಬಿದ್ದಂತೆ ಕಾಣುತ್ತಿದೆ. ಸಿದ್ದರಾಮಯ್ಯನವರನ್ನು ಬದಲಿಸಿ ಆ ಸ್ಥಾನಕ್ಕೇರಲು ಪ್ರಯತ್ನಿಸುತ್ತಿದ್ದ ಡಿ.ಕೆ.ಶಿವಕುಮಾರ್ ತಮ್ಮ ಪಟ್ಟಿನಿಂದ ಹಿಂದೆ ಸರಿದಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‌ನ ಶಾಂತಿ ಸಂಧಾನ ಪ್ರಯತ್ನ ಸದ್ಯಕ್ಕೆ ಫಲ ನೀಡಿದೆ ಎನ್ನಲಾಗಿದೆ. ಹೈಕಮಾಂಡ್ ಕಳುಹಿಸಿದ್ದ ಹಿರಿಯ ನಾಯಕ ರಣದೀಪ್ ಸುರ್ಜೇವಾಲಾ ಸಿದ್ದರಾಮಯ್ಯ ಮತ್ತು ಡಿಕೆಶಿ ನಡುವೆ ಸಂಧಾನ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ.
ಚುನಾವಣೆ
ತಮಿಳುನಾಡು ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರಿಗೆ ₹5,000 ಜಮೆ: ಡಿಎಂಕೆ ಸರ್ಕಾರದ ಘೋಷಣೆ
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ Dravida Munnetra Kazhagam (DMK) ಸರ್ಕಾರ ಮಹಿಳಾ ಫಲಾನುಭವಿಗಳಿಗೆ ₹5,000 ಹಣ ಜಮೆ ಮಾಡಿದೆ.
Kalaignar Magalir Urimai Thogai Scheme ಯೋಜನೆಯಡಿ ರಾಜ್ಯದ 1.31 ಕೋಟಿ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ ₹5,000 ಜಮೆಯಾಗಿದೆ. ಫೆಬ್ರವರಿ, ಮಾರ್ಚ್ ಹಾಗೂ ಏಪ್ರಿಲ್ ತಿಂಗಳ ಹಣದ ಜೊತೆಗೆ ಬೇಸಿಗೆ ಸಮಯದ ನೆರವಿಗಾಗಿ ಹೆಚ್ಚುವರಿಯಾಗಿ ₹2,000 ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ.
‘ದ್ರಾವಿಡ 2.0’ ಭರವಸೆ
ಮುಂದಿನ ಚುನಾವಣೆಯಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ‘ದ್ರಾವಿಡ 2.0’ ಸರ್ಕಾರದ ಅಡಿಯಲ್ಲಿ ತಿಂಗಳಿಗೆ ನೀಡುವ ಮೊತ್ತವನ್ನು ₹2,000ಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ M. K. Stalin ಭರವಸೆ ನೀಡಿದ್ದಾರೆ.
ಯೋಜನೆಯ ಹಿನ್ನೆಲೆ
ಈ ಯೋಜನೆಯನ್ನು ಸೆಪ್ಟೆಂಬರ್ 2023ರಲ್ಲಿ ಆರಂಭಿಸಲಾಗಿತ್ತು. ಆರಂಭದಲ್ಲಿ 1.13 ಕೋಟಿ ಮಹಿಳೆಯರಿಗೆ ಪ್ರತಿ ತಿಂಗಳು ₹1,000 ನೀಡಲಾಗುತ್ತಿತ್ತು. ಈಗ ಫಲಾನುಭವಿಗಳ ಸಂಖ್ಯೆಯನ್ನು 1.31 ಕೋಟಿಗೆ ವಿಸ್ತರಿಸಲಾಗಿದೆ.
ಎಐಎಡಿಎಂಕೆ ಪ್ರತಿಕ್ರಿಯೆ
ಇದೇ ರೀತಿಯ ಭರವಸೆಯನ್ನು ಕಳೆದ ತಿಂಗಳು ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ All India Anna Dravida Munnetra Kazhagam ಪ್ರಧಾನ ಕಾರ್ಯದರ್ಶಿ Edappadi K. Palaniswami ನೀಡಿದ್ದರು.
ರಾಜಕೀಯ ವಲಯದಲ್ಲಿ ಈ ಘೋಷಣೆ ಚುನಾವಣಾ ಪೂರ್ವ ತಂತ್ರವೆಂದು ಚರ್ಚೆ ನಡೆಯುತ್ತಿದೆ.
ದೇಶ
ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರ ಅನುಮತಿ ನಿರೀಕ್ಷೆ: ಡಿ.ಕೆ. ಶಿವಕುಮಾರ್
ಬೆಂಗಳೂರು: ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರ ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ ಎಂದು ಡಿಸಿಎಂ D. K. Shivakumar ವಿಶ್ವಾಸ ವ್ಯಕ್ತಪಡಿಸಿದರು.
ಭಾರತೀಯ ವಿಜ್ಞಾನ ಸಂಸ್ಥೆ (IISc)ಯ ಜೆಜೆ ಟಾಟಾ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ (ICDS) ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ಸಹಕಾರ ಸಿಗುವ ಭರವಸೆ ವ್ಯಕ್ತಪಡಿಸಿದರು.
ಮೇಕೆದಾಟು ಯೋಜನೆ ಜಾರಿಗೆ ಸಿದ್ಧತೆ
Mekedatu ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಯೋಜನೆ ಪರವಾಗಿದೆ. ಕೇಂದ್ರ ಅನುಮತಿ ದೊರೆತ ಕೂಡಲೇ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದರು. ಈ ಯೋಜನೆಯಿಂದ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಹಾಗೂ ಸುಮಾರು 400 ಮೆಗಾವಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ ಎಂದು ತಿಳಿಸಿದರು.
ಕೃಷ್ಣಾ ಮೇಲ್ದಂಡೆ ಯೋಜನೆ – ರೈತರಿಗೆ ಪರಿಹಾರ
Krishna River ಮೇಲ್ದಂಡೆ ಯೋಜನೆ ವಿಚಾರದಲ್ಲಿ 2013ರ ಕಾಯ್ದೆಯಂತೆ ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ನೀಡಲಾಗುತ್ತದೆ. 2025ರ ಡಿಸೆಂಬರ್ ವೇಳೆಗೆ 1.72 ಲಕ್ಷ ಎಕರೆ ಕೃಷಿಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.
ಅಣೆಕಟ್ಟು ಸುರಕ್ಷತೆ ರಾಷ್ಟ್ರದ ಆದ್ಯತೆ
ಅಣೆಕಟ್ಟುಗಳು ದೇಶದ ಶಕ್ತಿ ಹಾಗೂ ಪ್ರಗತಿಯ ಪ್ರತೀಕವಾಗಿದ್ದು, ಭಾರತದಲ್ಲಿ ಸುಮಾರು 6,500 ಅಣೆಕಟ್ಟುಗಳಿವೆ. ವಿಶ್ವದಲ್ಲಿ ಅತಿ ಹೆಚ್ಚು ಅಣೆಕಟ್ಟುಗಳಿರುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 232 ಅಣೆಕಟ್ಟುಗಳಿದ್ದು, ಅವುಗಳಲ್ಲಿ ಬಹುಪಾಲು 25 ವರ್ಷಕ್ಕಿಂತ ಹಳೆಯದಾಗಿದೆ.
ಕೇಂದ್ರ ಸರ್ಕಾರವು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಜಾರಿಗೊಳಿಸಿರುವ Dam Rehabilitation and Improvement Project (DRIP) ಯೋಜನೆಯಡಿ ರಾಜ್ಯದಲ್ಲಿ 58 ಅಣೆಕಟ್ಟುಗಳ ದುರಸ್ತಿಗೆ ಸುಮಾರು 1,500 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಅಣೆಕಟ್ಟುಗಳ ಬಳಿ ಪ್ರವಾಸೋದ್ಯಮಕ್ಕೆ ಮನವಿ
ಅಣೆಕಟ್ಟುಗಳ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ ವಿಧಿಸಿರುವ ನಿರ್ಬಂಧಗಳನ್ನು ಸಡಿಲಗೊಳಿಸಿ ಪ್ರವಾಸೋದ್ಯಮಕ್ಕೆ ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
“ಜಲವೇ ಸಂಪತ್ತು, ಜಲವೇ ಇಂಧನ, ಜಲವೇ ಜೀವನ” ಎಂದು ಹೇಳಿದ ಅವರು, ಅಣೆಕಟ್ಟು ಸುರಕ್ಷತೆ ವಿಚಾರದಲ್ಲಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡುವ ಬದ್ಧತೆ ವ್ಯಕ್ತಪಡಿಸಿದರು.
ದೇಶ
karnataka ಅಧಿಕಾರದಿಂದ ಬಂಧನದವರೆಗೆ: ಜೈಲು ಸೇರಿದ್ದ ಕರ್ನಾಟಕದ ಪ್ರಮುಖ ಜನಪ್ರತಿನಿಧಿಗಳ ಸಂಪೂರ್ಣ ಪಟ್ಟಿ
ಬೆಂಗಳೂರು: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ Bairathi Basavaraj ಬಂಧನಕ್ಕೊಳಗಾಗಿದ್ದಾರೆ. ಸಿಐಡಿ ತಂಡ ಅವರು ಬೆಂಗಳೂರಿನ ವಿಮಾನ ನಿಲ್ದಾಣದಲ್ಲೇ ವಶಕ್ಕೆ ಪಡೆದಿದೆ. ವಿಧಾನಸಭೆಯಲ್ಲಿ ಕಾನೂನು ರೂಪಿಸಬೇಕಾದ ಜನಪ್ರತಿನಿಧಿಗಳೇ ಕಾನೂನು ಉಲ್ಲಂಘನೆ ಆರೋಪದಲ್ಲಿ ಜೈಲು ಸೇರಿದ ಹಲವು ಉದಾಹರಣೆಗಳು ಕರ್ನಾಟಕ ರಾಜಕೀಯದಲ್ಲಿ ಕಂಡುಬಂದಿವೆ.
ವಿನಯ್ ಕುಲಕರ್ಣಿಗೂ ಜೈಲು ಅನುಭವ
ಹುಬ್ಬಳ್ಳಿ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ Vinay Kulkarni ಬಂಧನಕ್ಕೊಳಗಾಗಿದ್ದರು. 2020ರಲ್ಲಿ Central Bureau of Investigation (CBI) ಅವರು ಅವರನ್ನು ಬಂಧಿಸಿತ್ತು. ಸುಪ್ರೀಂ ಕೋರ್ಟ್ 2021ರಲ್ಲಿ ಜಾಮೀನು ನೀಡಿದರೂ, ಸಾಕ್ಷಿಗಳಿಗೆ ಬೆದರಿಕೆ ಆರೋಪ ಹಿನ್ನೆಲೆ 2025ರಲ್ಲಿ ಜಾಮೀನು ರದ್ದುಗೊಂಡಿತ್ತು.
ವೀರೇಂದ್ರ ಪಪ್ಪಿ ವಿರುದ್ಧ ಬೆಟ್ಟಿಂಗ್ ಆರೋಪ
ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ Veerendra Pappi ಅಕ್ರಮ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಾಲ್ಕು ತಿಂಗಳು ಕಳೆದಿದ್ದರು. ಪ್ರಕರಣವನ್ನು ಪ್ರಶ್ನಿಸಿ Enforcement Directorate (ED) ಹೈಕೋರ್ಟ್ ಮೆಟ್ಟಿಲೇರಿದೆ.
ಮುನಿರತ್ನ ವಿರುದ್ಧ ಗಂಭೀರ ಆರೋಪ
ಬಿಜೆಪಿ ಶಾಸಕ Munirathna ಬೆದರಿಕೆ ಹಾಗೂ ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದರು. ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಮಾಡಲಾಗಿತ್ತು.
ಗಣಿ ಹಗರಣದಲ್ಲಿ ಜನಾರ್ದನ ರೆಡ್ಡಿ
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ Gali Janardhana Reddy ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ಬಳಿಕ ಹೈಕೋರ್ಟ್ ಶಿಕ್ಷೆಯನ್ನು ಅಮಾನತುಗೊಳಿಸಿದೆ.
ಸತೀಶ್ ಸೈಲ್‌ಗೆ ಶಿಕ್ಷೆ
ಬೇಲೆಕೇರಿ ಅದಿರು ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ Satish Sail ಅವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. ನಂತರ ಹೈಕೋರ್ಟ್ ತೀರ್ಪು ಅಮಾನತುಗೊಳಿಸಿದೆ.
ಜೀವಾವಧಿ ಶಿಕ್ಷೆ ಪಡೆದ ಪ್ರಜ್ವಲ್ ರೇವಣ್ಣ
ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ Prajwal Revanna ಜೀವಾವಧಿ ಶಿಕ್ಷೆಗೆ ಒಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಪ್ರಕರಣದಲ್ಲಿ H. D. Revanna ಹಾಗೂ Suraj Revanna ಹೆಸರುಗಳು ಕೂಡ ಕೇಳಿಬಂದಿವೆ.
-
ಚುನಾವಣೆ12 hours agoGBA ವಾರ್ಡ್ಗಳಲ್ಲಿ ಬೂತ್ ಹಂಚಿಕೆ ಗೊಂದಲ: ತಿದ್ದುಪಡಿಸದಿದ್ದರೆ ಸುಪ್ರೀಂ ಕೋರ್ಟ್ಗೆ ಮನವಿ – ಸಿ.ಎಂ. ಸತ್ಯನಾರಾಯಣ ಎಚ್ಚರಿಕೆ
-
ದೇಶ18 hours agoಫುಟ್ಪಾತ್ನಲ್ಲಿ ಬೈಕ್ಗೆ ಮಹಿಳೆಯ ಅಡ್ಡಿ: ಕೇರಳದಲ್ಲಿ ವೈರಲ್ ವಿಡಿಯೋ
-
ದೇಶ17 hours agoRBI : ಸಾಲ ವಸೂಲಿಗೆ ಹೊಸ ನಿಯಮಗಳು: ಆರ್ಬಿಐ ಕಟ್ಟುನಿಟ್ಟಿನ ಮಾರ್ಗಸೂಚಿ
-
ದೇಶ18 hours agoSHAKTI SCHEME : ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್: ಸಚಿವ ಸಂಪುಟದ ಮಹತ್ವದ ನಿರ್ಧಾರ
-
ದೇಶ19 hours agoBangladesh Election 2026: ಬಿಎನ್ಪಿ ಭರ್ಜರಿ ಗೆಲುವು, ತಾರಿಖ್ ರೆಹಮಾನ್ ಮುಂದಿನ ಪ್ರಧಾನಿ
-
ಕ್ರೀಡೆ16 hours agoBENGALURU : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ಗೆ ಒಪ್ಪಿಗೆ: 35 ಸಾವಿರ ಜನ ಮಿತಿ, ಭದ್ರತೆಗೆ ಸಮಿತಿ
-
ದೇಶ14 hours agoBENGALURU : ಮಹಾಶಿವರಾತ್ರಿ ಪ್ರಯುಕ್ತ ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ನಿಷೇಧ
-
ದೇಶ18 hours agoದೇವನಹಳ್ಳಿ ಸಮೀಪ ಭೀಕರ ರಸ್ತೆ ಅಪಘಾತ: 7 ಮಂದಿ ದುರ್ಮರಣ
