ರಾಜ್ಯ
ಫೋಟೋ ತೆಗೆದುಕೊಳ್ಳುವಾಗ ಜಾರಿ ಬಿದ್ದು ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ
ಮಂಡ್ಯ: ಫೋಟೋ ತೆದುಕೊಳ್ಳಲು ಹೋಗಿ ಕಾವೇರಿ ನದಿಯಲ್ಲಿ (Cauvery Water) ವ್ಯಕ್ತಿಯೊಬ್ಬರು ಕೊಚ್ಚಿ ಹೋದ ಘಟನೆ ಶ್ರೀರಂಗಪಟ್ಟಣ (Srirangapatna) ತಾಲೂಕಿನ ಸರ್ವಧರ್ಮ ಆಶ್ರಮದ ಬಳಿ ನಡೆದಿದೆ,
ಮೈಸೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮಹೇಶ್ ( 36) ನದಿಯಲ್ಲಿ ಕೊಚ್ಚಿ ಹೋದ ವ್ಯಕ್ತಿ. ಭಾನುವಾರ ಸಂಜೆ ಮಹೇಶ್ ಸ್ನೇಹಿತರೊಂದಿಗೆ ಕೆಆರ್‌ಎಸ್ ಭಾಗಕ್ಕೆ ಪಿಕ್ನಿಕ್ ಬಂದಿದ್ದರು.
ಸರ್ವಧರ್ಮ ಆಶ್ರಮದ ಫೋಟೋ ತೆಗೆಸಿಕೊಳ್ಳಲು ಹೋದಾಗ ಆಯತಪ್ಪಿ ಕಾವೇರಿ ನದಿಗೆ ಬಿದ್ದಿದ್ದಾರೆ. ನದಿಯಲ್ಲಿ ನೀರು ಹೆಚ್ಚಿದ್ದ ಕಾರಣ ಮಹೇಶ್ ಕೊಚ್ಚಿ ಹೋಗಿದ್ದಾರೆ
ಬೆಂಗಳೂರು
Greater Bengaluru Authority ಉಗ್ರ ಸ್ವಭಾವದ ನಾಯಿಗಳಿಗೆ ನಿಷೇಧ ಸಾಧ್ಯತೆ
ರಾಜಧಾನಿಯಲ್ಲಿ ಬೀದಿನಾಯಿ ಸಮಸ್ಯೆ ತೀವ್ರವಾಗುತ್ತಿರುವ ಹಿನ್ನೆಲೆ, Greater Bengaluru Authority (ಜಿಬಿಎ) ಸಾಕು ನಾಯಿಗಳ ನಿಯಂತ್ರಣಕ್ಕಾಗಿ ಹೊಸ ನಿಯಮ ಜಾರಿಗೆ ತರುವ ಸಿದ್ಧತೆ ನಡೆಸಿದೆ.
ಸಾರ್ವಜನಿಕರು ಹಾಗೂ ಮಕ್ಕಳಿಗೆ ಸಾಕು ನಾಯಿಗಳಿಂದ ಸಮಸ್ಯೆ ಉಂಟಾಗುತ್ತಿದೆ ಎಂಬ ದೂರುಗಳ ಹಿನ್ನೆಲೆ, ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು ಐದು ಪಾಲಿಕೆ ಆಯುಕ್ತರಿಗೆ ಹೊಸ ಮಾನದಂಡ ರೂಪಿಸುವಂತೆ ಸೂಚನೆ ನೀಡಿದ್ದಾರೆ.
ಈಗಾಗಲೇ Supreme Court of India ಕೂಡ ಬೀದಿನಾಯಿ ಸಮಸ್ಯೆ ತಡೆಯಲು ಸ್ಥಳೀಯ ಸಂಸ್ಥೆಗಳು ನಿಯಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕೆಂದು ಸೂಚನೆ ನೀಡಿತ್ತು.
ಪರವಾನಗಿ ಕಡ್ಡಾಯ – ವಾರ್ಷಿಕ ನವೀಕರಣ
ಜಿಬಿಎ ಪಶುಪಾಲನೆ ಇಲಾಖೆ ನಡೆಸಿದ ಸಮೀಕ್ಷೆ ಪ್ರಕಾರ ನಗರದಲ್ಲಿ ಸುಮಾರು 1.15 ಲಕ್ಷ ಸಾಕು ನಾಯಿಗಳ ಮಾಹಿತಿ ಸಂಗ್ರಹಿಸಲಾಗಿದೆ.
ಹೊಸ ಕಾಯ್ದೆಯ ಪ್ರಕಾರ:
- ಸಾಕು ನಾಯಿಗಳಿಗೆ ಜಿಬಿಎ ಪಶುಪಾಲನೆ ಇಲಾಖೆಯಿಂದ ಪರವಾನಗಿ ಪಡೆಯುವುದು ಕಡ್ಡಾಯ
- ವಾರ್ಷಿಕ ಶುಲ್ಕ ಪಾವತಿ ಮಾಡಿ ಪರವಾನಗಿ ನವೀಕರಣ
- ಕ್ರೂರ ಸ್ವಭಾವದ ನಾಯಿಗಳನ್ನು ಸಾಕುವುದಕ್ಕೆ ನಿರ್ಬಂಧ
ಸಂಭಾವ್ಯ ನಿಯಮಗಳ ಪಟ್ಟಿ
- ಎಲ್ಲ ಸಾಕು ನಾಯಿಗಳಿಗೆ ರೇಬೀಸ್ ಲಸಿಕೆ ಕಡ್ಡಾಯ
- ಲಸಿಕೆ ಪಡೆದ ಬಗ್ಗೆ ನೊಂದಾಯಿತ ಪಶುವೈದ್ಯರಿಂದ ದೃಢೀಕರಣ
- 12 ತಿಂಗಳಿಗಿಂತ ಹೆಚ್ಚಿನ ವಯಸ್ಸಿನ ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ಕಡ್ಡಾಯ
- ಮಾಲೀಕರು ತಮ್ಮ ಖರ್ಚಿನಲ್ಲಿ ಮೈಕ್ರೋಚಿಪ್ ಅಳವಡಿಕೆ
- ನೆರೆಹೊರೆಯವರಿಗೆ ತೊಂದರೆ ಆಗದಂತೆ ಸಾಕುವುದು
- ಮೂರು ನಾಯಿಗಳಿಗಿಂತ ಹೆಚ್ಚು ಸಾಕಿದರೆ ವಶಕ್ಕೆ ಪಡೆದು ಪ್ರಾಣಿ ಕೇಂದ್ರಕ್ಕೆ ಕಳುಹಿಸುವುದು
- ನಗರ ಪಾಲಿಕೆ ಬೈಲಾಗಳ ಪ್ರಕಾರ ಸಾಕಣೆ
- ನಿಯಮ ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ
- ತಪ್ಪಿಸಿಕೊಂಡ ನಾಯಿ ವಶಕ್ಕೆ ಪಡೆದರೆ ದಂಡ ಪಾವತಿ ಬಳಿಕ ಬಿಡುಗಡೆ
- 72 ಗಂಟೆಯೊಳಗೆ ಬಿಡಿಸಿಕೊಂಡರೆ ₹1000
- ನಂತರ ಪ್ರತಿ ದಿನ ₹200 ದಂಡ
- ಬಿಡಿಸಿಕೊಳ್ಳದಿದ್ದರೆ ಪ್ರಾಣಿ ದಯಾ ಸಂಘಕ್ಕೆ ಹಸ್ತಾಂತರ
- ವಾಕಿಂಗ್ ವೇಳೆ ಕಡ್ಡಾಯವಾಗಿ ಹಗ್ಗ/ಚೈನ್ ಬಳಕೆ
- ನಾಯಿ ರಸ್ತೆಯಲ್ಲಿ ಗಲೀಜು ಮಾಡಿದರೆ ಮಾಲೀಕರೇ ಸ್ವಚ್ಛಗೊಳಿಸಬೇಕು
- ಅಪಾರ್ಟ್‌ಮೆಂಟ್‌ಗಳಲ್ಲಿ ಉಗ್ರ ಸ್ವಭಾವದ ನಾಯಿಗಳಿಗೆ ನಿಷೇಧ
ಕೆಲವು ಜಾತಿಗಳ ಮೇಲೆ ನಿರ್ಬಂಧ?
ಜರ್ಮನ್ ಶೆಪರ್ಡ್, ರೊಟ್ವೈಲರ್, ಡೋಬರ್ಮನ್, ಹೌಂಡ್ ಸೇರಿದಂತೆ ಕೆಲವು ಉಗ್ರ ಸ್ವಭಾವದ ನಾಯಿಗಳನ್ನು ಸಾಕುವುದಕ್ಕೆ ನಿಷೇಧ ಹೇರುವ ಕುರಿತು ಚರ್ಚೆ ನಡೆಯುತ್ತಿದೆ. ನಿಷೇಧಿತ ಜಾತಿಯ ನಾಯಿಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ಪ್ರವೇಶಿಸಲು ಅವಕಾಶ ಇರದು ಎಂಬ ಪ್ರಸ್ತಾವನೆಯೂ ಇದೆ.
ದೇಶ
ರಾಜ್ಯ ಬಜೆಟ್ ಹೊಸ್ತಿಲಲ್ಲಿ ಮಂಡ್ಯ ನಿರೀಕ್ಷೆ: ಪ್ರವಾಸೋದ್ಯಮ, ರಸ್ತೆ, ಆರೋಗ್ಯಕ್ಕೆ ಒತ್ತು
ಮಂಡ್ಯ: ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆ ಹೊಸ್ತಿಲಲ್ಲಿ ಮಂಡನೆಯಾಗುತ್ತಿರುವ ರಾಜ್ಯ ಬಜೆಟ್‌ನಲ್ಲಿ ಮಂಡ್ಯ ಜಿಲ್ಲೆಯ ಜನರಲ್ಲಿ ಭಾರೀ ನಿರೀಕ್ಷೆ ಮೂಡಿದೆ. ಚುನಾವಣೆ ದೃಷ್ಟಿಯಿಂದಾದರೂ ವಿಶೇಷ ಪ್ಯಾಕೇಜ್ ಮೂಲಕ ಜಿಲ್ಲೆಗೆ ಅನುದಾನ ಮಂಜೂರಾಗಬಹುದು ಎಂಬ ಆಶಾಭಾವನೆ ವ್ಯಕ್ತವಾಗಿದೆ.
ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಬೇಡಿಕೆ
ಜಿಲ್ಲೆಯಲ್ಲಿ ವಿಶ್ವವಿಖ್ಯಾತ Krishna Raja Sagara (ಕೆಆರ್‌ಎಸ್) ಬೃಂದಾವನ, Gaganachukki Falls, Ranganathittu Bird Sanctuary, Melukote, Srirangapatna, Adichunchanagiri ಸೇರಿದಂತೆ ಪ್ರಮುಖ ಪ್ರವಾಸಿ ತಾಣಗಳಿವೆ.
ಪ್ರವಾಸೋದ್ಯಮ ಇಲಾಖೆ ಪಟ್ಟಿ ಪ್ರಕಾರ ಜಿಲ್ಲೆಯಲ್ಲಿ 106 ಪ್ರವಾಸಿ ತಾಣಗಳಿದ್ದರೂ, ಅಭಿವೃದ್ಧಿಯಲ್ಲಿ ಹಿನ್ನಡೆಯಾಗಿದೆ. ಶ್ರೀರಂಗಪಟ್ಟಣವನ್ನು ಮೆಕ್ಸಿಕೊ ಅಥವಾ ಸಿಡ್ನಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಗೆ ಒತ್ತು ನೀಡಬೇಕು ಎಂದು ಇತಿಹಾಸತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಗಗನಚುಕ್ಕಿ ಜಲಪಾತದಲ್ಲಿ ರೋಪ್‌ವೇ ಅಳವಡಿಕೆಗೂ ಬೇಡಿಕೆ ಇದೆ.
ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿ
ಜಿಲ್ಲೆಯ ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳ ಸ್ಥಿತಿ ದುರ್ಬಲವಾಗಿದೆ. ಮಂಡ್ಯ ನಗರದಲ್ಲಿ ರಸ್ತೆ ಪುನರ್‌ನಿರ್ಮಾಣಕ್ಕೆ ವಿಶೇಷ ಅನುದಾನ ಅಗತ್ಯವಿದೆ. ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಿಂದ ಉತ್ತರ ಬೈಪಾಸ್ ನಿರ್ಮಾಣಗೊಂಡಿದ್ದು, ದಕ್ಷಿಣ ಭಾಗದಲ್ಲೂ ಬೈಪಾಸ್ ನಿರ್ಮಾಣವಾದರೆ ರಿಂಗ್‌ರೋಡ್ ರೂಪುಗೊಳ್ಳಲಿದೆ.
ಆರೋಗ್ಯ ಮತ್ತು ಕೃಷಿಗೆ ಆದ್ಯತೆ
- ಮಂಡ್ಯದಲ್ಲಿ ಟ್ರಾಮಾ ಕೇರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ
- ಹನಿ ಮತ್ತು ಏತ ನೀರಾವರಿ ಯೋಜನೆಗಳ ಅನುಷ್ಠಾನ
- ಎಲ್ಲಾ ನಾಲೆಗಳ ಆಧುನೀಕರಣ
- ಕೃಷಿ ಕೈಗಾರಿಕೆಗಳ ಸ್ಥಾಪನೆ
ಮೈಶುಗರ್ ಪುನಶ್ಚೇತನ ಬೇಡಿಕೆ
ಜಿಲ್ಲೆಯ ಹೆಮ್ಮೆಯ Mysore Sugar Company (ಮೈಶುಗರ್) ಪುನಶ್ಚೇತನಕ್ಕೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಜನರು ಆಗ್ರಹಿಸಿದ್ದಾರೆ.
ದೇಶ
SHAKTI SCHEME : ಶಕ್ತಿ ಯೋಜನೆಗೆ ಸ್ಮಾರ್ಟ್ ಕಾರ್ಡ್: ಸಚಿವ ಸಂಪುಟದ ಮಹತ್ವದ ನಿರ್ಧಾರ
ಬೆಂಗಳೂರು, ಫೆಬ್ರವರಿ 13: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ Shakti Scheme ಅಡಿ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಇನ್ನುಮುಂದೆ ಆಧಾರ್ ಕಾರ್ಡ್ ಬದಲಾಗಿ ಸ್ಮಾರ್ಟ್ ಕಾರ್ಡ್ ಕಡ್ಡಾಯವಾಗಲಿದೆ. ಈ ಕುರಿತು ಮುಖ್ಯಮಂತ್ರಿ Siddaramaiah ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯದ ನಾಲ್ಕು ಸಾರಿಗೆ ನಿಗಮಗಳು ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಿಸಲಿವೆ. ಈ ಕಾರ್ಡ್ ತೋರಿಸಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಇದರೊಂದಿಗೆ ಆಧಾರ್ ಕಾರ್ಡ್ ತೋರಿಸಿ ಉಚಿತ ಪ್ರಯಾಣಕ್ಕೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ.
ಬೆಂಗಳೂರು ರೇಸ್ ಕೋರ್ಸ್ ಕುಣಿಗಲ್‌ಗೆ ಶಿಫ್ಟ್
ಬೆಂಗಳೂರಿನ ಪ್ರಸಿದ್ಧ Bangalore Turf Club (ರೇಸ್ ಕೋರ್ಸ್) ಅನ್ನು ತುಮಕೂರು ಜಿಲ್ಲೆಯ ಕುಣಿಗಲ್‌ನ ಸ್ಟಡ್ ಫಾರ್ಮ್‌ಗೆ ಸ್ಥಳಾಂತರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಲೀಸ್ ಅವಧಿ ಮುಕ್ತಾಯವಾಗಿರುವುದು ಹಾಗೂ ಬಾಡಿಗೆ ಪರಿಷ್ಕರಣೆ ಆಗಿರದ ಹಿನ್ನೆಲೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ ಕ್ಲಬ್‌ನ ಜಾಗವನ್ನು ಹಾಗೆಯೇ ಉಳಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ.
ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಶೂ–ಸಾಕ್ಸ್
1ರಿಂದ 10ನೇ ತರಗತಿ ತನಕ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾವಿಕಾಸ ಯೋಜನೆಯಡಿ 2026-27ನೇ ಸಾಲಿಗೆ ಒಂದು ಜೊತೆ ಶೂ ಹಾಗೂ ಎರಡು ಜೊತೆ ಸಾಕ್ಸ್ ಉಚಿತವಾಗಿ ನೀಡಲು ಸಂಪುಟ ಸಭೆ ಅನುಮೋದನೆ ನೀಡಿದೆ.
ಇತರೆ ಪ್ರಮುಖ ನಿರ್ಧಾರಗಳು
- ಬಳ್ಳಾರಿ ವಿಮ್ಸ್ ಆವರಣದಲ್ಲಿ 200 ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ
- ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮಗಳ 1777 ಎಕರೆ ಭೂಮಿಯನ್ನು ‘ಶಾಶ್ವತ ವಿಶೇಷ ಕೃಷಿವಲಯ’ವಾಗಿ ಘೋಷಣೆ
- ತಿಕೋಟಾದಲ್ಲಿ ದ್ರಾಕ್ಷಾರಸ ಶೀತಲೀಕರಣ ಘಟಕ ಸ್ಥಾಪನೆ
- ಶಾಸಕರನ್ನು ಅಧ್ಯಕ್ಷರನ್ನಾಗಿ ಮಾಡುವ ಶಿಷ್ಟಾಚಾರ ನಿಯಮ ಜಾರಿಗೆ ಅನುಮೋದನೆ
- ನ್ಯಾಯಾಲಯ ಕಟ್ಟಡ ಉದ್ಘಾಟನಾ ಕಾರ್ಯಕ್ರಮಗಳಿಗೆ ಶಿಷ್ಟಾಚಾರ ಅನುಮತಿ
ವಿಪಕ್ಷಗಳ ಟೀಕೆಗೆ ಗುರಿಯಾಗಿರುವ SIR ವಿಷಯದಲ್ಲಿಯೂ ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆದಿದೆ. ಕಾನೂನು ಇಲಾಖೆ ಸಮಗ್ರ ಅಧ್ಯಯನ ನಡೆಸಿ ಮುಂದಿನ ಸಭೆಯಲ್ಲಿ ಚರ್ಚಿಸಲು ನಿರ್ಧರಿಸಲಾಗಿದೆ.
-
ಕ್ರೀಡೆ20 hours agoIND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ!”
-
ದೇಶ20 hours agoHAL ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?
-
ದೇಶ22 hours ago2026 ಪ್ರೇಮಿಗಳ ದಿನ ಶನಿವಾರ: ರೋಮ್ಯಾಂಟಿಕ್ ವಾರಾಂತ್ಯಕ್ಕೆ ಟಾಪ್ 5 ಪ್ರವಾಸ ತಾಣಗಳು
-
ದೇಶ23 hours agoLATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
-
ದೇಶ19 hours agoವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್ ಎಚ್ಚರಿಕೆ: “ಭಾರತಕ್ಕೆ ಮರಳದಿದ್ದರೆ ಅರ್ಜಿ ವಿಚಾರಣೆ ಇಲ್ಲ”
-
ದೇಶ20 hours agoಜೈರಾಮ್ ರಮೇಶ್ಗೆ ಸುಪ್ರೀಂಕೋರ್ಟ್ ಕಿಡಿ: “ಮಾಧ್ಯಮ ಪ್ರಚಾರಕ್ಕೇ ಅರ್ಜಿ?”
-
ದೇಶ23 hours agoBHARATH BANDH : ದೇಶವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರ ಹೋರಾಟ, ಹಲವು ರಾಜ್ಯಗಳಲ್ಲಿ ಬಂದ್ ಪರಿಣಾಮ
-
ದೇಶ22 hours agoಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ
