ಅಪರಾಧ
ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್ ಮಾಡಿದ್ದ ಉಗ್ರ ನಾಸೀರ್
ಬೆಂಗಳೂರು: ಜೈಲಿನಿಂದಲೇ ಕರ್ನಾಟಕ ಸೇರಿ ದೇಶದ ವಿವಿಧೆಡೆ ಉಗ್ರ ಕೃತ್ಯಕ್ಕೆ ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕೋಲಾರದ 5 ಕಡೆ ದಾಳಿ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ, ಸಿಎಆರ್ ಪೊಲೀಸ್ ಅಧಿಕಾರಿ ಸೇರಿ ಮೂವರು ಶಂಕಿತ ಉಗ್ರರರನ್ನ ಬಂಧಿಸಿದೆ.
ಶಂಕಿತ ಉಗ್ರರನ್ನು ಇಂದು ಕೋರ್ಟ್‌ಗೆ ಹಾಜರುಪಡಿಸಿರುವ ಎನ್‌ಐಎ ಅಧಿಕಾರಿಗಳ ತಂಡ, 14 ದಿನಗಳ ಕಾಲ ಕಸ್ಟಡಿಗೆ ಪಡೆಯಲು ಮುಂದಾಗಿದೆ. ಈ ಮಧ್ಯೆ ಉಗ್ರ ಟಿ.ನಾಸೀರ್ ಕುರಿತು ಹಲವು ಸ್ಫೋಟಕ ವಿಚಾರಗಳನ್ನು ಬಯಲಿಗೆಳೆದಿದೆ.
2023ರಲ್ಲಿ ಹೆಬ್ಬಾಳದ ಮನೆಯಲ್ಲಿ ಜೀವಂತ ಗ್ರೆನೇಡ್‌ಗಳು ಪತ್ತೆಯಾಗಿದ್ದವು. ಜೀವಂತ ಗ್ರೆನೇಡನ್ನು ತರಲು ಟಿ.ನಾಸೀರ್ ಸೂಚಿಸಿದ್ದ. ಜುನೈದ್ ಮೂಲಕ ಇದನ್ನು ತರಿಸಿದ್ದ. ಬಳಿಕ ನಾಸೀರ್‌ನನ್ನು ವಶಕ್ಕೆ ಪಡೆದು ಎನ್‌ಐಎ ವಿಚಾರಣೆ ನಡೆಸಿತ್ತು. ಈಗಾಗಲೇ ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ನಾಸೀರ್ ಜೈಲಿನಲ್ಲಿದ್ದಾನೆ. ಭಯೋತ್ಪಾದನೆ ಬಗ್ಗೆ ಯುವಜನರ ಮೈಂಡ್ ವಾಶ್ ಮಾಡೋದ್ರಲ್ಲಿ ನಿಸ್ಸೀಮನಾಗಿದ್ದ ನಾಸೀರ್, ಹಲವು ಯುವಜನರನ್ನ ಉಗ್ರ ಚಟುವಟಿಕೆಗಳಿಗೆ ಬಳಸಿಕೊಂಡಿದ್ದಾನೆ ಎಂದೂ ಸಹ ಎನ್‌ಐಎ ತನಿಖೆ ವೇಳೆ ತಿಳಿದುಬಂದಿದೆ.
2008ರ ಸರಣಿ ಬಾಂಬ್ ಸ್ಫೋಟ, ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ, ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ, ರಾಮೇಶ್ವರಂ ಕೆಫೆ ಬ್ಲಾಸ್ಟ್ ಸೇರಿ ಹಲವು ಪ್ರಕರಣಗಳಲ್ಲಿ ನಾಸೀರ್ ಕೈವಾಡ ಇದೆ. ಅಷ್ಟೇ ಅಲ್ಲ ಬೆಂಗಳೂರಿನಲ್ಲಿ ದೊಡ್ಡಮಟ್ಟದ ವಿಧ್ವಂಸಕ ಕೃತ್ಯಕ್ಕೆ ಪ್ಲ್ಯಾನ್ ಮಾಡಿದ್ದ ಅನ್ನೋದು ಎನ್‌ಐಎ ತನಿಖೆಯಲ್ಲಿ ಬಯಲಾಗಿದೆ.
ಇನ್ನೂ ಮೂವರು ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲಾರ ತಾಲ್ಲೂಕು ಭಟ್ರಹಳ್ಳಿ ಗ್ರಾಮದ ಸತೀಶ್ ಗೌಡ ಎಂಬಾತನಿಗೆ ಎನ್‌ಐಎ ನೋಟಿಸ್ ನೀಡಿದೆ. ಶಂಕಿತರಿಗೆ ಸಿಮ್ ಕಾರ್ಡ್ ನೀಡಿದ ಆರೋಪದ ಮೇಲೆ ಸತೀಶ್ ಗೌಡಗೆ ನೋಟಿಸ್ ನೀಡಲಾಗಿದೆ. ಸತೀಶ್ ಮನೆಯಲ್ಲಿ ಇಲ್ಲದ ಕಾರಣ ಕಾರಣ ಕುಟುಂಬಸ್ಥರಿಗೆ ನೋಟೀಸ್ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಅಧಿಕಾರಿಗಳು. ಮೂರು ವರ್ಷಗಳ ಹಿಂದೆ ಸತೀಶ್‌ಗೌಡ ಏರ್‌ಟೆಲ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಈ ಕೆಲಸ ಮಾಡಿರುವುದಾಗಿ ಸಂಶಯ ವ್ಯಕ್ತವಾಗಿದೆ.
ಅಪರಾಧ
ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.
ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.
ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.
ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಅಪರಾಧ
BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.
ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.
ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.
ಅಪರಾಧ
ಮನುಷ್ಯತ್ವ ಹೂತುಹೋದ ಎಪ್‌ಸ್ಟೀನ್ ದ್ವೀಪ: ಜಗತ್ತಿನ ಎಲೈಟ್‌ಗಳನ್ನು ನಡುಗಿಸುತ್ತಿರುವ ‘ಲೋಲಿಟಾ ಎಕ್ಸ್‌ಪ್ರೆಸ್’ ರಹಸ್ಯ
ನವದೆಹಲಿ/ವಾಷಿಂಗ್ಟನ್:
ಮನುಷ್ಯತ್ವವೇ ಮರಳಲ್ಲಿ ಹೂತುಹೋದ ದ್ವೀಪವೊಂದು ವರ್ಷಗಳ ಕಾಲ ಜಗತ್ತಿನ ಕಣ್ಣು ತಪ್ಪಿಸಿ ಅನಾಚಾರದ ಸ್ವರ್ಗವಾಗಿ ಬೆಳೆದಿತ್ತು. ‘ಲೋಲಿಟಾ ಎಕ್ಸ್‌ಪ್ರೆಸ್’ ಎಂಬ ಖಾಸಗಿ ಜೆಟ್ ವಿಮಾನ ದಿನವೂ ಲಿಟಲ್ ಸೇಂಟ್ ಜೇಮ್ಸ್ ದ್ವೀಪಕ್ಕೆ ಹಾರಾಟ ನಡೆಸುತ್ತಿತ್ತು. ಹದಿಹರೆಯದ ಹುಡುಗಿಯರನ್ನು ಲೈಂಗಿಕ ದೌರ್ಜನ್ಯಕ್ಕೆ ಬಲಿಕೊಡುತ್ತಿದ್ದ ಈ ದ್ವೀಪವನ್ನು ಇಂದು ಜಗತ್ತು ‘ಎಪ್‌ಸ್ಟೀನ್ ದ್ವೀಪ’ ಅಥವಾ ‘ಪೆಡೋಪೈಲ್ ಐಲ್ಯಾಂಡ್’ ಎಂದೇ ಕರೆಯುತ್ತಿದೆ.
1998ರಲ್ಲಿ ಅಮೆರಿಕದ ಶತಕೋಟ್ಯಧಿಪತಿ ಜೆಫ್ರಿ ಎಪ್‌ಸ್ಟೀನ್ 8 ಮಿಲಿಯನ್ ಡಾಲರ್ ನೀಡಿ ಖರೀದಿಸಿದ 71 ಎಕರೆ ವಿಸ್ತೀರ್ಣದ ಈ ದ್ವೀಪದಲ್ಲಿ ಐಷಾರಾಮಿ ರೆಸಾರ್ಟ್‌ಗಳು, ವಿಲ್ಲಾಗಳು, ಹೆಲಿಪ್ಯಾಡ್‌ಗಳು ನಿರ್ಮಾಣವಾಗಿದ್ದವು. ಹೊರಜಗತ್ತಿನಿಂದ ಸಂಪೂರ್ಣ ಕಡಿದುಹಾಕಲ್ಪಟ್ಟ ಈ ಪ್ರದೇಶದಲ್ಲಿ ನೂರಾರು ಅಪ್ರಾಪ್ತ ಬಾಲಕಿಯರನ್ನು ಬಂಧಿಸಿ, ಜಗತ್ತಿನ ಎಲೈಟ್‌ಗಳಿಗೆ ಪೂರೈಸಲಾಗುತ್ತಿತ್ತು ಎಂಬ ಆರೋಪಗಳು ತನಿಖೆಯಲ್ಲಿ ಬಹಿರಂಗವಾದವು.
2005ರಲ್ಲಿ ಫ್ಲೋರಿಡಾದ 14 ವರ್ಷದ ಬಾಲಕಿಯ ತಾಯಿಯೊಬ್ಬರು ನೀಡಿದ ದೂರು ಈ ಮಹಾ ಲೈಂಗಿಕ ಹಗರಣದ ಮೊದಲ ಕಿಡಿಯಾಗಿತ್ತು. ಬಳಿಕ 50ಕ್ಕೂ ಹೆಚ್ಚು ಅಪ್ರಾಪ್ತೆಯರು ದೂರು ದಾಖಲಿಸಿದರು. 2008ರಲ್ಲಿ ಎಪ್‌ಸ್ಟೀನ್ ತಪ್ಪಿತಸ್ಥನಾಗಿದ್ದರೂ, ಕೇವಲ 13 ತಿಂಗಳ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದನು. 2019ರಲ್ಲಿ ಪುನಃ ಮಕ್ಕಳ ಕಳ್ಳಸಾಗಣೆ ಆರೋಪದ ಮೇಲೆ ಬಂಧನಕ್ಕೊಳಗಾದ ಎಪ್‌ಸ್ಟೀನ್, ವಿಚಾರಣೆಗೆ ಮುನ್ನವೇ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಮೆರಿಕ ಸರ್ಕಾರ ಘೋಷಿಸಿತು. ಆದರೆ, ಈ ಸಾವಿನ ಸುತ್ತ ಇನ್ನೂ ಹಲವು ಅನುಮಾನಗಳಿವೆ.
ಜನವರಿ 30ರಂದು ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಸುಮಾರು 30 ಲಕ್ಷ ಪುಟಗಳ ದಾಖಲೆಗಳು ಜಗತ್ತನ್ನೇ ಬೆಚ್ಚಿಬೀಳುವಂತೆ ಮಾಡಿವೆ. ರಾಜಕೀಯ ನಾಯಕರು, ಬಿಲಿಯನೇರ್‌ಗಳು, ರಾಜಮನೆತನದವರು, ವಿಜ್ಞಾನಿಗಳು, ಉದ್ಯಮಿಗಳೆಂದರೆ ಯಾರೂ ಹೊರತಲ್ಲ. 80ಕ್ಕೂ ಹೆಚ್ಚು ಪ್ರಭಾವಿ ವ್ಯಕ್ತಿಗಳು ತನಿಖೆಗೆ ಒಳಗಾಗಿದ್ದು, ಯುರೋಪ್‌ನ ಹಲವೆಡೆ ರಾಜೀನಾಮೆ ಅಲೆ ಎದ್ದಿದೆ.
ಆದರೆ, ಎಪ್‌ಸ್ಟೀನ್ ಫೈಲ್‌ನಲ್ಲಿ ಹೆಸರು ಕಾಣಿಸಿಕೊಂಡ ಮಾತ್ರಕ್ಕೆ ಅಪರಾಧ ಸಾಬೀತಾಗುವುದಿಲ್ಲ ಎಂದು ಅಮೆರಿಕದ ನ್ಯಾಯಾಲಯ ಸ್ಪಷ್ಟಪಡಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಫೋಟೊ, ವಿಡಿಯೋ ಅಥವಾ ಹಣಕಾಸು ದಾಖಲೆಗಳಿದ್ದಾಗ ಮಾತ್ರ ಕಾನೂನು ಕ್ರಮ ಸಾಧ್ಯವೆಂದು ಹೇಳಿದೆ.
ಈ ಎಲ್ಲದ ನಡುವೆ, ಈ ಮಹಾ ಹಗರಣದ ನಿಜವಾದ ಬಲಿಪಶುಗಳು ನೂರಾರು ಅಪ್ರಾಪ್ತ ಬಾಲಕಿಯರು ಎಂಬ ಸತ್ಯ ಮಾತ್ರ ಬದಲಾಗಿಲ್ಲ. ಅಧಿಕಾರ, ಹಣ ಮತ್ತು ಪ್ರಭಾವದ ಅಡ್ಡೆಗೋಡೆಯ ಹಿಂದೆ ನಡೆದ ಈ ಅಮಾನುಷ ಕೃತ್ಯಗಳು ಇಂದು ಜಗತ್ತಿನ ಅಂತರಾತ್ಮವನ್ನೇ ಪ್ರಶ್ನಿಸುತ್ತಿವೆ.
-
ದೇಶ18 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ16 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ17 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ16 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ಅಪರಾಧ17 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
-
ದೇಶ15 hours agoಎಪ್‌ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ದೇಶ17 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
-
ದೇಶ17 hours agoಅಧಿಕಾರ ಹಂಚಿಕೆ ವಿವಾದ: “ಹೈಕಮಾಂಡ್ ತೀರ್ಮಾನವೇ ಅಂತಿಮ” – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
