Connect with us

ರಾಜ್ಯ

5 ವರ್ಷದಲ್ಲಿ 109 ಸರ್ಕಾರಿ ಶಾಲೆಗಳಿಗೆ ಬೀಗ!

Published

on

5 ವರ್ಷದಲ್ಲಿ 109 ಸರ್ಕಾರಿ ಶಾಲೆಗಳಿಗೆ ಬೀಗ!
ರಾಮನಗರ: ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಬೇಕು ಎಂಬ ಮಾತುಗಳು ಒಂದೆಡೆ ಬಲವಾಗಿ ಕೇಳಿ ಬರುತ್ತಿದ್ದರೆ, ಮತ್ತೊಂದೆಡೆ ಶೂನ್ಯ ದಾಖಲಾತಿ ಕಾರಣಕ್ಕೆ ಶಿಕ್ಷಣ ಇಲಾಖೆಯ ಹಳ್ಳಿಗಳಲ್ಲಿರುವ ಸರ್ಕಾರಿ ಶಾಲೆಗಳಿಗೆ ಬೀಗ ಜಡಿಯುತ್ತಿದೆ, ಈ ರೀತಿ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ ಬರೋಬ್ಬರಿ 109 ಶಾಲೆಗಳು ಬಂದ್ ಆಗಿವೆ,
ವಿದ್ಯಾರ್ಥಿಗಳ ಕೊರತೆ ಕಾರಣಕ್ಕೆ ಬಾಗಿಲು ಮುಚ್ಚುತ್ತಿರುವ ಶಾಲೆಗಳಲ್ಲಿ ಕಿರಿಯ ಪ್ರಾಥಮಿಕ ಶಾಲೆಗಳಲು ಹೆಚ್ಚು ಎಂಬುದು ಗಮನಾರ್ಹ, ಶಾಲೆಗೆ ಬೀಗ ಬಿದ್ದಿರುವುದರಿಂದ ಪೋಷಕರು ಅತಂತ್ರ ಸ್ಧಿತಿಗೆ ಸಿಲುಕಿದ್ದಾರೆ, ವಿಧಿ ಇಲ್ಲದೆ ತಮ್ಮ ಮಕ್ಕಳನ್ನು ಅಕ್ಕಪಕ್ಕದ ಊರಿನ ಸರ್ಕಾರಿ ಅಥವಾ ಖಾಸಗಿ ಶಾಲೆಗೆ ಕಳಿಸುತ್ತಿದ್ದಾರೆ,
ವರ್ಷದಿಂದ ವರ್ಷಕ್ಕೆ ಶಾಲೆಗಳು ಮುಚ್ಚುತ್ತಿರುವುದು ಶಿಕ್ಷಣ ಇಲಾಖೆಯ ವೈಫಲ್ಯಕ್ಕೆ ಸಾಕ್ಷಿ, ಶಾಲೆಗಳು ಮುಚ್ಚುವುದರಿಂದ ಹಳ್ಳಿಗಾಡಿನ ಬಡ ಮಕ್ಕಳು ಶಿಕ್ಷಣದಿಂದಲೇ ವಂಚಿತರಾಗುವ ಸಾಧ್ಯತೆ ಹೆಚ್ಚು, ಶಕ್ತಿ ಇರುವ ಪೋಷಕರು ಬೇರೆ ಶಾಲೆಗೆ ಕಳಿಸುತ್ತಾರೆ, ಇಲ್ಲದವರು ಮಕ್ಕಳನ್ನು ಶಾಲೆಗೆ ಕಳಿಸುವುದೇ ಇಲ್ಲ ಎಂದು ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿಗಳ ಸಮನ್ವಯ ವೇದಿಕೆ ಅಧ್ಯಕ್ಷ ಉಮೇಶ್ ದೊಡ್ಡಗಂಗವಾಡಿ ಅತಂಕ ವ್ಯಕ್ತಪಡಿಸಿದರು,

ದೇಶ

Big News : ಸಂಪುಟದಲ್ಲಿ ಮೊದಲ ವಿಕೆಟ್ ಪತನ? ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ಘೋಷಣೆ

Published

on

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ನೂತನ ಮುಖ್ಯಮಂತ್ರಿ D. K. Shivakumar ಸಂಪುಟದಲ್ಲಿ ಖಾತೆ ಹಂಚಿಕೆ ನಡೆದ ಬೆನ್ನಲ್ಲೇ ಹಿರಿಯ ಕಾಂಗ್ರೆಸ್ ನಾಯಕ Ramalinga Reddy ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವುದಾಗಿ ತಿಳಿದುಬಂದಿದೆ. ಬೆಂಗಳೂರು ಅಭಿವೃದ್ಧಿ ಖಾತೆ ಸಿಗದಿರುವುದೇ ತಮ್ಮ ಅಸಮಾಧಾನಕ್ಕೆ ಪ್ರಮುಖ ಕಾರಣ ಎಂದು ಅವರು ಬಹಿರಂಗವಾಗಿ ಹೇಳಿದ್ದಾರೆ.

ಬೆಂಗಳೂರಿನ ಕೋರಮಂಗಲದಲ್ಲಿರುವ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಮಲಿಂಗಾ ರೆಡ್ಡಿ, ಜಲಸಂಪನ್ಮೂಲ ಇಲಾಖೆಯ ಖಾತೆ ನೀಡಿದ್ದಕ್ಕೆ ಮಾತ್ರ ರಾಜೀನಾಮೆ ನೀಡುತ್ತಿಲ್ಲ. ಈ ಹಿಂದೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವ ಭರವಸೆ ನೀಡಿದ್ದರು. ಆದರೆ ಆ ಭರವಸೆ ಈಡೇರಿಲ್ಲ ಎಂಬ ಬೇಸರವಿದೆ ಎಂದು ಹೇಳಿದರು.

ಆದಾಗ್ಯೂ, ಕಾಂಗ್ರೆಸ್ ಪಕ್ಷ ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ತಾವು ಕಳೆದ 53 ವರ್ಷಗಳಿಂದ ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇ ಹೊರತು ಪಕ್ಷಕ್ಕೆ ಅಲ್ಲ ಎಂದು ಹೇಳಿದರು.

ತಮ್ಮ ರಾಜಕೀಯ ಪಯಣವನ್ನು ಸ್ಮರಿಸಿದ ರೆಡ್ಡಿ, ತಾವು ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಹಲವು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿರುವುದಾಗಿ ಹೇಳಿದರು. ಯಾವುದೇ ಮುಖ್ಯಮಂತ್ರಿಯ ಬಳಿ ಸಚಿವ ಸ್ಥಾನ ಅಥವಾ ನಿರ್ದಿಷ್ಟ ಖಾತೆಗಾಗಿ ಬೇಡಿಕೆ ಇಟ್ಟಿಲ್ಲ. ಆದರೆ ಈ ಬಾರಿ ನೀಡಿದ್ದ ಭರವಸೆ ಈಡೇರದಿರುವುದು ಬೇಸರ ತಂದಿದೆ ಎಂದು ಹೇಳಿದರು.

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಒಳಗಿನ ಅಸಮಾಧಾನವನ್ನು ಬಹಿರಂಗಪಡಿಸಿದಂತಾಗಿದ್ದು, ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿಸಿದೆ. ಇದೇ ವೇಳೆ Rahul Gandhi ಅವರ ರಾಜ್ಯ ಭೇಟಿ ಸನ್ನಿಹಿತವಾಗಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆಗೆ ಹೆಚ್ಚಿನ ರಾಜಕೀಯ ಮಹತ್ವ ಸಿಕ್ಕಿದೆ.

Continue Reading

ದೇಶ

ರಾತ್ರಿ ವೇಳೆ ಆಸ್ಪತ್ರೆಗೆ ದಿಢೀರ್ ಭೇಟಿ; ಗೈರಾದ ವೈದ್ಯರ ಮೇಲೆ ಸಚಿವರ ಗರಂ

Published

on

ಬೆಂಗಳೂರು: ಖಾತೆ ಹಂಚಿಕೆಯಾದ ಕೆಲವೇ ಗಂಟೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ U. T. Khader ಕಾರ್ಯಪ್ರವೃತ್ತರಾಗಿದ್ದು, ಜಯನಗರದ ಸರ್ಕಾರಿ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯಲ್ಲಿನ ಸ್ವಚ್ಛತೆ, ವೈದ್ಯಕೀಯ ಸೇವೆಗಳ ಗುಣಮಟ್ಟ ಹಾಗೂ ಸಿಬ್ಬಂದಿಯ ಹಾಜರಾತಿ ಕುರಿತು ಸಚಿವರು ನೇರವಾಗಿ ಪರಿಶೀಲನೆ ನಡೆಸಿದ್ದು, ಕೆಲ ಲೋಪದೋಷಗಳು ಬೆಳಕಿಗೆ ಬಂದಿವೆ.

ರಾತ್ರಿ ಪಾಳಿಯ ವೇಳೆ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ರೋಗಿಗಳಿಗೆ ಸೂಕ್ತ ಚಿಕಿತ್ಸೆ ಸಿಗುತ್ತಿದೆಯೇ ಹಾಗೂ ಆಸ್ಪತ್ರೆಯ ಕಾರ್ಯನಿರ್ವಹಣೆ ಹೇಗಿದೆ ಎಂಬುದನ್ನು ಪರಿಶೀಲಿಸಿದರು. ಈ ವೇಳೆ ಸಿಬ್ಬಂದಿ ಕೊರತೆ ಇರುವುದು ಹಾಗೂ ಕರ್ತವ್ಯದಲ್ಲಿರಬೇಕಿದ್ದ ಕೆಲ ಸಿಬ್ಬಂದಿ ಗೈರಾಗಿರುವುದು ಅವರ ಗಮನಕ್ಕೆ ಬಂದಿದೆ.

ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯು.ಟಿ. ಖಾದರ್, “ಆಸ್ಪತ್ರೆಯ ನೈಜ ಸ್ಥಿತಿ ತಿಳಿದುಕೊಳ್ಳುವ ಉದ್ದೇಶದಿಂದಲೇ ಸರ್ಪ್ರೈಸ್ ವಿಸಿಟ್ ಮಾಡಿದ್ದೇನೆ. ಎಲ್ಲ ವಿಭಾಗಗಳನ್ನು ಪರಿಶೀಲಿಸಿದ್ದು, ಕೆಲವು ಲೋಪಗಳು ಕಂಡುಬಂದಿವೆ. ಇಬ್ಬರು ವೈದ್ಯರು ಕರ್ತವ್ಯಕ್ಕೆ ಗೈರಾಗಿದ್ದರು. ಅವರಿಗೆ ಎಚ್ಚರಿಕೆ ನೀಡಿ, ಜವಾಬ್ದಾರಿಯಿಂದ ಕೆಲಸ ನಿರ್ವಹಿಸುವಂತೆ ಸೂಚಿಸಲಾಗುವುದು” ಎಂದು ಹೇಳಿದರು.

ಬೆಳಗಿನ ವೇಳೆಯಲ್ಲಿ ಸಭೆಗಳು ಹಾಗೂ ಆಡಳಿತಾತ್ಮಕ ಕಾರ್ಯಗಳು ಹೆಚ್ಚಾಗಿರುವುದರಿಂದ ರಾತ್ರಿ ವೇಳೆ ಭೇಟಿ ನೀಡಿದ್ದಾಗಿ ತಿಳಿಸಿದ ಸಚಿವರು, “ಆಸ್ಪತ್ರೆಯ ನಿಜವಾದ ಚಿತ್ರಣ ರಾತ್ರಿ ಸಮಯದಲ್ಲೇ ಗೊತ್ತಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುತ್ತಾರೆ. ಎಷ್ಟೇ ಒತ್ತಡ ಇದ್ದರೂ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ದೊರೆಯಬೇಕು” ಎಂದು ಹೇಳಿದರು.

ಆರೋಗ್ಯ ಸಚಿವರ ಈ ದಿಢೀರ್ ಭೇಟಿ ಸರ್ಕಾರಿ ಆಸ್ಪತ್ರೆಗಳ ಕಾರ್ಯವೈಖರಿಯ ಮೇಲೆ ಸರ್ಕಾರ ಕಟ್ಟುನಿಟ್ಟಿನ ನಿಗಾ ಇಟ್ಟಿರುವ ಸಂದೇಶವನ್ನು ರವಾನಿಸಿದ್ದು, ಆರೋಗ್ಯ ಸೇವೆಗಳ ಗುಣಮಟ್ಟ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂಬುದನ್ನು ಸೂಚಿಸಿದೆ.

Continue Reading

ದೇಶ

ಕರ್ನಾಟಕಕ್ಕೆ ಮುಂಗಾರು ಪ್ರವೇಶ ಯಾವಾಗ? ಹವಾಮಾನ ಇಲಾಖೆ ಮಹತ್ವದ ಮಾಹಿತಿ

Published

on

ಬೆಂಗಳೂರು: ನೈಋತ್ಯ ಮುಂಗಾರು ಕೇರಳ ಪ್ರವೇಶಿಸಿದ ಬೆನ್ನಲ್ಲೇ ಕರ್ನಾಟಕದಲ್ಲೂ ಮಳೆಯ ಚಟುವಟಿಕೆಗಳು ತೀವ್ರಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಇಂದು (ಜೂನ್ 4) ಕೇರಳಕ್ಕೆ ಅಧಿಕೃತವಾಗಿ ಮುಂಗಾರು ಪ್ರವೇಶಿಸಿದ್ದು, ವಾಡಿಕೆಗಿಂತ ಸುಮಾರು ಮೂರು ದಿನ ತಡವಾಗಿ ಆಗಮನವಾಗಿದೆ. ಇದರ ಪರಿಣಾಮವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕಕ್ಕೆ ಮುಂಗಾರು ಅಧಿಕೃತವಾಗಿ ಯಾವ ದಿನ ಪ್ರವೇಶಿಸಲಿದೆ ಎಂಬುದರ ಬಗ್ಗೆ ಗುರುವಾರ ಅಂತಿಮ ಘೋಷಣೆ ಮಾಡುವ ಸಾಧ್ಯತೆ ಇದೆ. ಮುಂಗಾರು ಗಾಳಿಯ ಚಲನೆ ಮತ್ತು ವಾತಾವರಣದ ಬೆಳವಣಿಗೆಗಳನ್ನು ಪರಿಶೀಲಿಸಿದ ಬಳಿಕ ಈ ಕುರಿತು ಅಧಿಕೃತ ಮಾಹಿತಿ ಪ್ರಕಟಿಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಈ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಮುಂದಿನ ಐದು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿಂದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಗುಡುಗು, ಮಿಂಚು, ಬಿರುಗಾಳಿ ಹಾಗೂ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸೂಚಿಸಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇದ್ದು, ರೈತರು ಹಾಗೂ ಮೀನುಗಾರರು ಹವಾಮಾನ ಮುನ್ಸೂಚನೆಗಳನ್ನು ಗಮನಿಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಹವಾಮಾನ ತಜ್ಞರ ಪ್ರಕಾರ, ನೈಋತ್ಯ ಮುಂಗಾರು ಅರಬ್ಬಿ ಸಮುದ್ರದ ದಕ್ಷಿಣ ಮತ್ತು ಆಗ್ನೇಯ ಭಾಗಗಳು, ಲಕ್ಷದ್ವೀಪ, ಕೇರಳ, ತಮಿಳುನಾಡು ಹಾಗೂ ಬಂಗಾಳ ಕೊಲ್ಲಿಯ ಕೆಲವು ಪ್ರದೇಶಗಳತ್ತ ವೇಗವಾಗಿ ಮುನ್ನಡೆಯುತ್ತಿದೆ. ಇದರಿಂದ ಕರ್ನಾಟಕದಲ್ಲೂ ವ್ಯಾಪಕ ಮಳೆಯ ವಾತಾವರಣ ನಿರ್ಮಾಣವಾಗಿದ್ದು, ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

Continue Reading

Trending