Connect with us

ಬೆಂಗಳೂರು

ಗ್ರೇಟರ್ ಬೆಂಗಳೂರು ಪ್ರಾಧಿಕಾರದಡಿ 5 ಪಾಲಿಕೆ ರಚನೆ, ಶೀಘ್ರ ಚುನಾವಣೆ: ಡಿಸಿಎಂ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ ಶೀಘ್ರ ಚುನಾವಣೆ ನಡೆಸುತ್ತೇವೆ ಎಂದು ಡಿಸಿಎಂ ಡಿಕೆಶಿ ಅವರು ತಿಳಿಸಿದರು,
ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಜಿಲ್ಲೆ, ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿಕೆಶಿ ಅವರು ಮಾತನಾಡಿದರು,
ಜೆಬಿಐ ರಚನೆ ಮಾಡಲಾಗಿದೆ ಈ ಮೂಲಕ ಐದು ಪಾಲಿಕೆಗಳನ್ನು ನಾವು ಮಾಡಿಯೇ ತೀರುತ್ತೇವೆ, ಈ ಕುರಿತು ಶಾಸಕ ರಿಜ್ವಾನ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ, ಕೆಲವರು ಸಾರ್ವಜನಿಕವಾಗಿ ವಿರೋಧ ಮಾಡಬಹುದು ಆದರೆ ಆಡಳಿತ ದೃಷ್ಟಿಯಿಂದ ಇದನ್ನು ಮಾಡಲೇಬೇಕಾಗಿದೆ, ಪಾಲಿಕೆಗಳು ರಚನೆಯಾದರೆ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಧಾನ ಮಾನ ನೀಡಲೇಬೇಕು ಎಂದು ನಾವು ತೀರ್ಮಾನಿಸಿದ್ದೇವೆ, ಇದಕ್ಕೆ ಅಡಿಪಾಯ ತಯಾರು ಮಾಡಬೇಕಿದೆ, ಏಕೆಂದರೆ ಡಿ.ಕೆ.ಶಿವಕುಮಾರ್ ಒಬ್ಬನೇ ಸರ್ಕಾರ ತರಲು ಆಗುವುದಿಲ್ಲ, ಕಾರ್ಯಕರ್ತರೇ ಇಲ್ಲ ಜೀವಾಳ, ನಾವು ವಿಧಾನಸೌಧದಲ್ಲಿ ತೀರ್ಮಾನ ಮಾಡಬಹುದು ಆದರೆ ಸರ್ಕಾರದ ರಾಯಭಾರಿಗಳು ನೀವು, ನಮ್ಮ ಭವಿಷ್ಯ ಬೆಂಗಳೂರು ಭವಿಷ್ಯ, ನಿಮ್ಮ ಕೈ ಯಲ್ಲಿದೆ ಎಂದರು.
ನಮ್ಮ ಸರ್ಕಾರ ಸಮಾಜ ಹಾಗೂ ಬಡವರ ಕಲ್ಯಾಣಕ್ಕಾಗಿ 1 ಲಕ್ಷ ಕೋಟಿ ರೋಪಾಯಿ ಹಣ ನೀಡಿದೆ, 50 ಸಾವಿರ ಕೋಟಿ ಗ್ಯಾರಂಟಿಗಳಿಗೆ ವೆಚ್ಚವಾದರೆ, 19 ಸಾವಿರ ಕೋಟಿ ಹಣವನ್ನು ರೈತರ ಪಂಪ್ ಸೆಟ್ ಗಳಿಗೆ ಉಚಿತ ವಿದ್ಯುತ್, ಸುಮಾರು 11 ಸಾವಿರ ಕೋಟಿಯನ್ನು ಪಿಂಚಣಿಗಳಿಗೆ ವೆಚ್ಚ ಮಾಡಲಾಗುತ್ತಿದೆ, ರಾಜ್ಯ ಬಜೆಟ್ಟಿನ 25% ಹಣವನ್ನು ಜನರಿಗೆ ನೀಡುತ್ತಿದ್ದೇವೆ, ಈ ಉಪಕಾರ ಸ್ಮರಣೆಯನ್ನು ಜನರಿಗೆ ಮನದಟ್ಟು ಮಾಡಬೇಕಿರುವುದು ನಿಮ್ಮ ಕರ್ತವ್ಯ ಎಂದರು,
ದೇಶದ ಇತಿಹಾಸದಲ್ಲಿಯೇ ಹೊಸ ಅಧ್ಯಾಯನವನ್ನು ನಮ್ಮ ಸರ್ಕಾರ ಪ್ರಾರಂಭ ಮಾಡಿದೆ, ಬಿಜೆಪಿಯವರು ಭಾವನೆ ಮೇಲೆ ರಾಜಕಾರಣ ಮಾಡಿದರೆ ನಾವು ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ, ರಣದೀಪ್ ಸುರ್ಜೇವಾಲಾ ಅವರಿಗೆ ನಾವು ಮೊದಲು ಧನ್ಯವಾದಗಳನ್ನು ತಿಳಿಸಬೇಕು, ಏಕೆಂದರೆ ಗ್ಯಾರಂಟಿ ಸಮಿತಿಗಳನ್ನು ರಚನೆ ಮಾಡಿ ಕಾರ್ಯಕರ್ತರು ಸರ್ಕಾರದ ಈ ಯೋಜನೆಯ ಭಾಗವಾಗಬೇಕು, ಸರ್ಕಾರ ಮುಖವಾಣಿಯಾಗಿ ಕೆಲಸ ಮಾಡಬೇಕು ಎಂದು ಅವರು ಸೂಚನೆ ನೀಡಿದ ಕಾರಣಕ್ಕೆ ನೀವು ಅತ್ಯತ್ತಮ ಸ್ಧಾನದಲ್ಲಿ ಕುಳಿತ್ತಿದ್ದೀರಿ ಎಂದು ಹೇಳಿದರು,
ನಮ್ಮ ಸರ್ಕಾರ ಐದು ಗ್ಯಾರಂಟಿ ಜೊತೆಗೆ ಭೂ ಗ್ಯಾರಂಟಿ ನೀಡಿದೆ, ಈಗ ಬೆಂಗಳೂರು ನಗರದಲ್ಲಿ ಎಲ್ಲಾ ಆಸ್ತಿ ಖಾತಾ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸಲು ಕಾರ್ಯಕ್ರಮ ರೂಪಿಸಲಾಗಿದೆ, ಅನೇಕ ಆಸ್ತಿ ಮಾಲೀಕರಿಗೆ ತಮ್ಮ ಆಸ್ತಿ ಯಾರ ಹೆಸರಲ್ಲಿದೆ ಎಂಬುದೇ ಗೊತ್ತಿಲ್ಲ, ಅವರ ತಾತ, ಮುತ್ತಾತನ ಹೆಸರಿನಲ್ಲಿ ಖಾತೆಗಳಿವೆ, ಇದನ್ನು ಸರಿಪಡಿಸಿ ದಾಖಲೆಗಳನ್ನು ನೀಡಲು ಮುಂದಾಗಿದೆ, ಕೃಷ್ಣಭೈರೇಗೌಡ ಅವರ ಕ್ಷೇತ್ರದಲ್ಲಿ ಈ ಕಾರ್ಯಕ್ರಮ ಮಾಡಿದ್ದು, ಅಲ್ಲಿ ಪ್ರತಿ ವಾರ್ಡ್ ನಲ್ಲಿ 20-30 ಕಾರ್ಯಕರ್ತರಂತೆ ಇಡೀ ಕ್ಷೇತ್ರದಲ್ಲಿ ಸಾವಿರಾರು ಕಾರ್ಯಕರ್ತರು ಸ್ಧಳೀಯರ ಮನೆಮನೆಗೆ ಹೋಗಿ ಅರ್ಜಿ ಕೊಟ್ಟು ಅದನ್ನು ತುಂಬಿಸಿ ಈ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದರು.

ಕ್ರೀಡೆ

JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ

ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.

ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.

ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.

ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.

ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.

ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.

ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.

ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.

ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

ಅಪರಾಧ

ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.

ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.

ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.

ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ಅಪರಾಧ

BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.

ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.

Continue Reading

Trending