Connect with us

ಬೆಂಗಳೂರು

ಕಲಾಸಿಪಾಳ್ಯ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ: ಜಿಲೆಟಿನ್ ಕಡ್ಡಿ, ಡಿಟೊನೇಟರ್ ವಶ

ಬೆಂಗಳೂರು: ನಗರದ ಜನಸಂಚಾರಯುಕ್ತ ಪ್ರದೇಶವಾಗಿರುವ ಕಲಾಸಿಪಾಳ್ಯ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಶಂಕಾಸ್ಪದ ಬ್ಯಾಗ್‌ನಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾದ ಘಟನೆ ನಗರದಾದ್ಯಂತ ಆತಂಕ ಮೂಡಿಸಿದೆ. ಶೌಚಾಲಯದ ಬಳಿಯ ಈ ಬ್ಯಾಗ್‌ನಲ್ಲಿದ್ದ ಜಿಲೆಟಿನ್ ಕಡ್ಡಿಗಳು ಹಾಗೂ ಡಿಟೊನೇಟರ್ ಪತ್ತೆಯಾಗಿದ್ದು, ತಕ್ಷಣವೇ ಸ್ಥಳಕ್ಕೆ ಪೊಲೀಸರು ಹಾಗೂ ಬಾಂಬ್ ತಪಾಸಣಾ ದಳಗಳು ಆಗಮಿಸಿವೆ.

ಬಾಂಬ್ ನಿಷ್ಕ್ರಿಯ ದಳ ದೌಡಾಯನೆ:
ಘಟನೆಯ ಮಾಹಿತಿ ಲಭುತ್ತಿದ್ದಂತೆ ಕಲಾಸಿಪಾಳ್ಯ ಠಾಣೆಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ (Bomb Disposal Squad) ಸ್ಥಳಕ್ಕೆ ದೌಡಾಯಿಸಿ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ. ಎಡವಟ್ಟಿಲ್ಲದೇ ಸ್ಫೋಟಕ ವಸ್ತುಗಳನ್ನು ಸುರಕ್ಷಿತವಾಗಿ ವಶಕ್ಕೆ ಪಡೆಯಲಾಗಿದೆ.

ಆತಂಕದ ವಾತಾವರಣ:
ಪ್ರಮುಖ ಸಾರಿಗೆ ಕೇಂದ್ರವೊಂದರಲ್ಲಿ ಈ ರೀತಿಯ ಸ್ಫೋಟಕ ಪತ್ತೆಯಾಗಿದೆ ಎಂಬುದು ಸಾರ್ವಜನಿಕರಲ್ಲಿ ಆತಂಕ ಹುಟ್ಟುಹಾಕಿದ್ದು, ಈ ಹಿನ್ನೆಲೆ ಹೆಚ್ಚಿನ ಭದ್ರತೆ ಕೈಗೊಳ್ಳಲಾಗಿದೆ. ಶಂಕಿತರನ್ನು ಪತ್ತೆ ಹಚ್ಚಲು ತನಿಖೆ ಆರಂಭಿಸಲಾಗಿದೆ

Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

ಸಾರಿಗೆ ನೌಕರರ ಮುಷ್ಕರದಿಂದ ಮೆಟ್ರೋ ನಿಲ್ದಾಣಗಳಲ್ಲಿ ಭಾರೀ ಪ್ರಯಾಣಿಕರ ಭೀಡು!

ಬೆಂಗಳೂರು: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಮುಷ್ಕರ ಆರಂಭಿಸಿದ್ದಾರೆ. ಈ ಹೋರಾಟದ ಪರಿಣಾಮವಾಗಿ ಬೆಂಗಳೂರು ನಗರದ ನಾನಾ ಭಾಗಗಳಲ್ಲಿ ಬಸ್‌ಗಳ ಸಂಚಾರದಲ್ಲಿ ತೊಂದರೆ ಉಂಟಾಗಿದೆ.

ಬಸ್ ಸಿಗದ ಹಿನ್ನಲೆಯಲ್ಲಿ ಸಾರ್ವಜನಿಕರು ‘ನಮ್ಮ ಮೆಟ್ರೋ’ ಸೇವೆಗೆ ಧಾವಿಸಿದ್ದಾರೆ. ಇದರಿಂದ ಮೆಟ್ರೋ ನಿಲ್ದಾಣಗಳಲ್ಲಿ, ವಿಶೇಷವಾಗಿ ಮೆಜೆಸ್ಟಿಕ್‌ನಂತಹ ಕೇಂದ್ರ ಬಿಂದುಗಳಲ್ಲಿ, ಭಾರೀ ಸಂಖ್ಯೆಯಲ್ಲಿ ಪ್ರಯಾಣಿಕರು ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬರುತ್ತಿದೆ. ಪ್ರಯಾಣಿಕರ ಭೀಡು ನಿಯಂತ್ರಿಸಲು ಮೆಟ್ರೋ ಸಿಬ್ಬಂದಿ ಮತ್ತು ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.

ಇದರಿಂದಾಗಿ ನಗರದಲ್ಲಿ ಟ್ರಾಫಿಕ್ ದಟ್ಟಣೆಯೂ ಹೆಚ್ಚಳವಾಗಿದ್ದು, ಕೆಲವರು ತಮ್ಮ ಸ್ವಂತ ವಾಹನಗಳನ್ನು ಬಳಸುವ ದಿಕ್ಕಿನಲ್ಲಿ ತಿರುಗಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಕಾರಣ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.

Continue Reading

ಬೆಂಗಳೂರು

ಕೆಆರ್‌ಎಸ್ ಡ್ಯಾಂ ಕಟ್ಟಲು ಮೈಸೂರಿನ ರಾಜಮಾತೆಯ ತ್ಯಾಗ: ಟಿಪ್ಪು ವಿವಾದದ ನಡುವೆ ಪೀಠಾಧಿಪತಿಯ ಸ್ಪಷ್ಟನೆ!

ರಾಯಚೂರು: ಕಾವೇರಿ ನದೀಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ರಾಜಮಾತೆ ತಮ್ಮ ಆಭರಣಗಳನ್ನು ಮಾರಾಟ ಮಾಡಿ ಕೆಆರ್‌ಎಸ್ ಡ್ಯಾಂವನ್ನು ನಿರ್ಮಿಸಿದರು ಎಂದು ಗುರುರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಮಂತ್ರಾಲಯದಲ್ಲಿ ಮಾತನಾಡಿದ ಅವರು, ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದಾರೆ ಎಂಬ ಸಚಿವ ಮಹಾದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಇದು ರಾಜಮನೆತನದ ತ್ಯಾಗದ ಫಲ. ಇತಿಹಾಸವನ್ನು ನಿಖರವಾಗಿ ತಿಳಿದುಕೊಳ್ಳಬೇಕಾದದ್ದು ಇತಿಹಾಸ ತಜ್ಞರ ಕೆಲಸ” ಎಂದು ಹೇಳಿದರು.

ಇದೇ ವೇಳೆ ಧರ್ಮಸ್ಥಳದ ತಾತ್ಕಾಲಿಕ ವಿವಾದಗಳ ಕುರಿತು ಮಾತನಾಡಿದ ಶ್ರೀಗಳು, “ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆಗಿಂತ ವ್ಯವಸ್ಥೆ ಬಗ್ಗೆ ಚರ್ಚೆ ಮಾಡಬೇಕು. ಜನ ಭಕ್ತಿಯಿಂದ ನಂಬುವ ಕ್ಷೇತ್ರಗಳನ್ನು ರಾಜಕೀಯವಾಗಿಸಬಾರದು” ಎಂದು ಎಚ್ಚರಿಸಿದರು.

ಸಾರಿಗೆ ನೌಕರರ ಮುಷ್ಕರದ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, “ಅವರ ಬೇಡಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಭಕ್ತರಿಗೆ ತೊಂದರೆಯಾಗದಂತೆ ಸೂಕ್ತ ಪರಿಹಾರ ಒದಗಿಸಲಿ” ಎಂದಿದ್ದಾರೆ.

ಇದಕ್ಕೂ ಮುನ್ನ ಸಚಿವ ಎಚ್.ಸಿ. ಮಹಾದೇವಪ್ಪ ಟಿಪ್ಪು ಸುಲ್ತಾನ್ ಕನ್ನಂಬಾಡಿ ಡ್ಯಾಂಗೆ ಅಡಿಗಲ್ಲು ಹಾಕಿದರೆಂದು ಹೇಳಿಕೆ ನೀಡಿದ್ದರು. ಆದರೆ, ಇತಿಹಾಸವನ್ನ ತಿರುವುಮಾಡುವುದು ಸರಿಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Continue Reading

ಬೆಂಗಳೂರು

ಆಗಸ್ಟ್ 5ರಂದು ಮುಷ್ಕರ ಇಲ್ಲ: ಹೈಕೋರ್ಟ್‌ನ ಆದೇಶದ ಬಳಿಕ ಸಾರಿಗೆ ನೌಕರರಿಗೆ ಬ್ರೇಕ್!

ಬೆಂಗಳೂರು: ರಾಜ್ಯದ ಸಾರಿಗೆ ನೌಕರರು ಆಗಸ್ಟ್ 5ರಂದು ರಾಜ್ಯಮಟ್ಟದಲ್ಲಿ ಮುಷ್ಕರ ನಡೆಸಲು ಕರೆ ನೀಡಿದ್ದರೆ, ಇದೀಗ ಕರ್ನಾಟಕ ಹೈಕೋರ್ಟ್ ನೀಡಿದ ಆದೇಶದಿಂದ ಆ ಮುಷ್ಕರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.

ಸಾರ್ವಜನಿಕ ಹಿತದೃಷ್ಟಿಯಿಂದ, ಹೈಕೋರ್ಟ್ ನಾಳೆ (ಆಗಸ್ಟ್ 5) ಒಂದೇ ದಿನದ ಮಟ್ಟಿಗೆ ಮುಷ್ಕರ ನಡೆಸದಂತೆ ಸಾರಿಗೆ ನೌಕರರಿಗೆ ಆದೇಶ ನೀಡಿದೆ. ನಾಳಿನ ಮುಷ್ಕರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಪತ್ರ (PIL) ಹೈಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, “ಮುಷ್ಕರ ನಡೆದರೆ ಜನಸಾಮಾನ್ಯರಿಗೆ ತೊಂದರೆ ಆಗುತ್ತದೆ,” ಎಂದು ಹೇಳಿ, ನಾಳಿನ ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್ ಹಾಕಿದೆ.

ಸರ್ಕಾರ ಹಾಗೂ ನಿಗಮಗಳಿಗೆ ನೋಟಿಸ್:
ಈ ಸಂಬಂಧ ರಾಜ್ಯ ಸರ್ಕಾರ ಹಾಗೂ ವಿವಿಧ ಸಾರಿಗೆ ನಿಗಮಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆಯನ್ನು ಆಗಸ್ಟ್ 6ಕ್ಕೆ ಮುಂದೂಡಲಾಗಿದೆ.

ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ವಿಫಲವಾಗಿದೆ ಎಂಬ ಕಾರಣದಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಮುಷ್ಕರದ ನಿರ್ಧಾರ ಕೈಗೊಂಡಿದ್ದರು. ಆದರೆ ಹೈಕೋರ್ಟ್ ಮಧ್ಯಪ್ರವೇಶದೊಂದಿಗೆ ಸಾರ್ವಜನಿಕರಿಗೆ ನಿಟ್ಟುಸಿರು ಸಿಕ್ಕಂತಾಗಿದೆ.

Continue Reading

Trending