ಬೆಂಗಳೂರು

ಕೆಆರ್‌ಎಸ್ ಡ್ಯಾಂ ಕಟ್ಟಲು ಮೈಸೂರಿನ ರಾಜಮಾತೆಯ ತ್ಯಾಗ: ಟಿಪ್ಪು ವಿವಾದದ ನಡುವೆ ಪೀಠಾಧಿಪತಿಯ ಸ್ಪಷ್ಟನೆ!

ರಾಯಚೂರು: ಕಾವೇರಿ ನದೀಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮೈಸೂರಿನ ರಾಜಮಾತೆ ತಮ್ಮ ಆಭರಣಗಳನ್ನು ಮಾರಾಟ ಮಾಡಿ ಕೆಆರ್‌ಎಸ್ ಡ್ಯಾಂವನ್ನು ನಿರ್ಮಿಸಿದರು ಎಂದು ಗುರುರಾಘವೇಂದ್ರ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಮಂತ್ರಾಲಯದಲ್ಲಿ ಮಾತನಾಡಿದ ಅವರು, ಕೆಆರ್‌ಎಸ್ ಜಲಾಶಯಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದಾರೆ ಎಂಬ ಸಚಿವ ಮಹಾದೇವಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಇದು ರಾಜಮನೆತನದ ತ್ಯಾಗದ ಫಲ. ಇತಿಹಾಸವನ್ನು ನಿಖರವಾಗಿ ತಿಳಿದುಕೊಳ್ಳಬೇಕಾದದ್ದು ಇತಿಹಾಸ ತಜ್ಞರ ಕೆಲಸ” ಎಂದು ಹೇಳಿದರು.

ಇದೇ ವೇಳೆ ಧರ್ಮಸ್ಥಳದ ತಾತ್ಕಾಲಿಕ ವಿವಾದಗಳ ಕುರಿತು ಮಾತನಾಡಿದ ಶ್ರೀಗಳು, “ಧಾರ್ಮಿಕ ಕ್ಷೇತ್ರಗಳ ಪಾವಿತ್ರ್ಯತೆಗಿಂತ ವ್ಯವಸ್ಥೆ ಬಗ್ಗೆ ಚರ್ಚೆ ಮಾಡಬೇಕು. ಜನ ಭಕ್ತಿಯಿಂದ ನಂಬುವ ಕ್ಷೇತ್ರಗಳನ್ನು ರಾಜಕೀಯವಾಗಿಸಬಾರದು” ಎಂದು ಎಚ್ಚರಿಸಿದರು.

ಸಾರಿಗೆ ನೌಕರರ ಮುಷ್ಕರದ ವಿಚಾರಕ್ಕೂ ಪ್ರತಿಕ್ರಿಯೆ ನೀಡಿದ ಅವರು, “ಅವರ ಬೇಡಿಕೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು. ಭಕ್ತರಿಗೆ ತೊಂದರೆಯಾಗದಂತೆ ಸೂಕ್ತ ಪರಿಹಾರ ಒದಗಿಸಲಿ” ಎಂದಿದ್ದಾರೆ.

ಇದಕ್ಕೂ ಮುನ್ನ ಸಚಿವ ಎಚ್.ಸಿ. ಮಹಾದೇವಪ್ಪ ಟಿಪ್ಪು ಸುಲ್ತಾನ್ ಕನ್ನಂಬಾಡಿ ಡ್ಯಾಂಗೆ ಅಡಿಗಲ್ಲು ಹಾಕಿದರೆಂದು ಹೇಳಿಕೆ ನೀಡಿದ್ದರು. ಆದರೆ, ಇತಿಹಾಸವನ್ನ ತಿರುವುಮಾಡುವುದು ಸರಿಯಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Leave a Reply

Your email address will not be published. Required fields are marked *

Trending

Exit mobile version