ಬೆಂಗಳೂರು
ಸಾರಿಗೆ ನೌಕರರ ಮುಷ್ಕರದಿಂದ ಮೆಟ್ರೋ ನಿಲ್ದಾಣಗಳಲ್ಲಿ ಭಾರೀ ಪ್ರಯಾಣಿಕರ ಭೀಡು!

ಬೆಂಗಳೂರು: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರು ಇಂದು ಮುಷ್ಕರ ಆರಂಭಿಸಿದ್ದಾರೆ. ಈ ಹೋರಾಟದ ಪರಿಣಾಮವಾಗಿ ಬೆಂಗಳೂರು ನಗರದ ನಾನಾ ಭಾಗಗಳಲ್ಲಿ ಬಸ್‌ಗಳ ಸಂಚಾರದಲ್ಲಿ ತೊಂದರೆ ಉಂಟಾಗಿದೆ.
ಬಸ್ ಸಿಗದ ಹಿನ್ನಲೆಯಲ್ಲಿ ಸಾರ್ವಜನಿಕರು ‘ನಮ್ಮ ಮೆಟ್ರೋ’ ಸೇವೆಗೆ ಧಾವಿಸಿದ್ದಾರೆ. ಇದರಿಂದ ಮೆಟ್ರೋ ನಿಲ್ದಾಣಗಳಲ್ಲಿ, ವಿಶೇಷವಾಗಿ ಮೆಜೆಸ್ಟಿಕ್‌ನಂತಹ ಕೇಂದ್ರ ಬಿಂದುಗಳಲ್ಲಿ, ಭಾರೀ ಸಂಖ್ಯೆಯಲ್ಲಿ ಪ್ರಯಾಣಿಕರು ಸಾಲಿನಲ್ಲಿ ನಿಂತಿರುವ ದೃಶ್ಯ ಕಂಡುಬರುತ್ತಿದೆ. ಪ್ರಯಾಣಿಕರ ಭೀಡು ನಿಯಂತ್ರಿಸಲು ಮೆಟ್ರೋ ಸಿಬ್ಬಂದಿ ಮತ್ತು ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.
ಇದರಿಂದಾಗಿ ನಗರದಲ್ಲಿ ಟ್ರಾಫಿಕ್ ದಟ್ಟಣೆಯೂ ಹೆಚ್ಚಳವಾಗಿದ್ದು, ಕೆಲವರು ತಮ್ಮ ಸ್ವಂತ ವಾಹನಗಳನ್ನು ಬಳಸುವ ದಿಕ್ಕಿನಲ್ಲಿ ತಿರುಗಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಕಾರಣ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ.