ಸಿನಿಮಾ
ಮಲಯಾಳಂ ನಟ ಶನ್ವಾಜ್ ನಿಧನ: ಸುಮಲತಾ ಅವರಿಂದ ಭಾವುಕ ಶ್ರದ್ಧಾಂಜಲಿ
ತಿರುವನಂತಪುರಂ: ಮಲಯಾಳಂ ಚಿತ್ರರಂಗದ ದಂತಕಥೆ ಪ್ರೇಮ್ ನಜೀರ್ ಅವರ ಪುತ್ರ, ಹಿರಿಯ ನಟ ಅಬ್ದುಲ್ ಶನ್ವಾಜ್ (71) ಅವರು ನಿಧನರಾಗಿದ್ದಾರೆ. ಹಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಇಂದು ನಿಶ್ಶಬ್ದವಾಗಿ ಬದುಕು ಬಿಟ್ಟು ಬಾರದ ಲೋಕಕ್ಕೆ ಪಯಣಿಸಿದ್ದಾರೆ.
ಶನ್ವಾಜ್ ಅವರ ನಿಧನಕ್ಕೆ ಹಲವು ಹಳೆಯ ಸಹನಟರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸುತ್ತಿದ್ದು, ಹಿರಿಯ ನಟಿ ಹಾಗೂ ಸಂಸದೆಯಾಗಿರುವ ಸುಮಲತಾ ಅಂಬರೀಶ್ ಭಾವುಕವಾಗಿ ಪ್ರತಿಕ್ರಿಯಿಸಿದ್ದಾರೆ.
“ಅಬ್ದುಲ್ ಶನ್ವಾಜ್ ನಿಧನ ಸುದ್ದಿ ನನಗೆ ತುಂಬಾ ದುಃಖ ತಂದಿದೆ. ನಾವು 80ರ ದಶಕದಲ್ಲಿ ಅನೇಕ ಸಿನಿಮಾಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದೇವೆ. ಅವರ ತಂದೆ ಪ್ರೇಮ್ ನಜೀರ್ ಜೊತೆಗೂ ನಟನೆಗೆ ಅವಕಾಶ ಲಭ್ಯವಾಗಿತ್ತು. ಶೂಟಿಂಗ್ ಬಿಡುವಿನ ಸಮಯದಲ್ಲಿ ಶನ್ವಾಜ್ ಜತೆ ಬ್ಯಾಡ್ಮಿಂಟನ್ ಅಥವಾ ಕ್ಯಾರಮ್ ಆಡುತ್ತಿದ್ದೆವು. ಅವರು ಬಹಳ ಶ್ರದ್ಧಾ ಹಾಗೂ ಶಿಸ್ತಿನಿಂದ ಜೀವನ ನಡೆಸುತ್ತಿದ್ದವರು. ಪರಿಪೂರ್ಣ ವ್ಯಕ್ತಿತ್ವದ ಮಾದರಿ,” ಎಂದು ಸುಮಲತಾ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಚಿತ್ರರಂಗ ಹಾಗೂ ಅಭಿಮಾನಿಗಳ ಹೃದಯದಲ್ಲಿ ಶನ್ವಾಜ್ ಅವರು ಅಮರರಾಗಿದ್ದು, ಅವರ ಕೊಡುಗೆ ಸದಾ ನೆನಪಾಗಿರಲಿದೆ.
ದೇಶ
ACTOR SRI LEELA : ಬಹುಭಾಷಾ ನಟಿ ಶ್ರೀಲೀಲಾ ಎಂಬಿಬಿಎಸ್ ಪದವಿ ಪೂರ್ಣ
ಬೆಂಗಳೂರು/ಮುಂಬೈ: ಬಹುಭಾಷಾ ನಟಿ ಶ್ರೀಲೀಲಾ ತಮ್ಮ ಎಂಬಿಬಿಎಸ್ ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಮುಂಬೈನ ಡಿ.ವೈ. ಪಾಟೀಲ್ ವಿಶ್ವವಿದ್ಯಾಲಯದಲ್ಲಿ ನಡೆದ ಘಟಿಕೋತ್ಸವ ಸಮಾರಂಭದಲ್ಲಿ ಅವರು ಅಧಿಕೃತವಾಗಿ ಪದವಿ ಸ್ವೀಕರಿಸಿದ್ದಾರೆ. ಫೆಬ್ರವರಿ 10ರಂದು ನಡೆದ ಸಮಾರಂಭದ ಫೋಟೋಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ದೇಶಾದ್ಯಂತ ಅಭಿಮಾನಿಗಳಿಂದ ಪ್ರಶಂಸೆಯ ಸುರಿಮಳೆ ಹರಿದುಬಂದಿದೆ.
24 ವರ್ಷದ ನಟಿ ಮೆರೂನ್ ಬಣ್ಣದ ಪದವಿ ಗೌನ್ ಮತ್ತು ಕ್ಯಾಪ್ ಧರಿಸಿ ವೇದಿಕೆಯ ಮೇಲೆ ಹೆಜ್ಜೆ ಹಾಕಿದ ದೃಶ್ಯಗಳು ಅಭಿಮಾನಿಗಳ ಮನಸೆಳೆದಿವೆ. ಒಂದು ವಿಡಿಯೋದಲ್ಲಿ ತಮ್ಮ ಹೆಸರನ್ನು ಘೋಷಿಸುವ ಮೊದಲು ಸಹಪಾಠಿಗಳೊಂದಿಗೆ ಸಾಲಿನಲ್ಲಿ ನಿಂತು ಕಾಯುತ್ತಿರುವುದು ಕಾಣಿಸುತ್ತದೆ. ನಂತರ ಪ್ರಮಾಣಪತ್ರವನ್ನು ನಗುಮೊಗದಿಂದ ಸ್ವೀಕರಿಸಿದ ಅವರು, ವೇದಿಕೆಯಿಂದ ಇಳಿಯುವಾಗ ಕುಟುಂಬ ಸದಸ್ಯರನ್ನು ಅಪ್ಪಿಕೊಂಡು ಸಂತಸ ವ್ಯಕ್ತಪಡಿಸಿದರು.
ಬಿಡುವಿಲ್ಲದ ಚಿತ್ರರಂಗದ ವೃತ್ತಿಜೀವನದ ನಡುವೆಯೂ ವೈದ್ಯಕೀಯ ಶಿಕ್ಷಣವನ್ನು ಸಮತೋಲನಗೊಳಿಸಿರುವ ಶ್ರೀಲೀಲಾ ಅವರ ಸಾಧನೆಗೆ ಅಭಿಮಾನಿಗಳು ಹಾಗೂ ಸಿನಿ ವಲಯದ ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಹಲವು ಭಾಷೆಗಳ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದರೂ ವಿದ್ಯಾಭ್ಯಾಸವನ್ನು ಕಡೆಗಣಿಸದೇ ಯಶಸ್ವಿಯಾಗಿ ಮುಗಿಸಿರುವುದು ಯುವಜನತೆಗೆ ಸ್ಪೂರ್ತಿಯಾಗಿದೆ.
ನಟನೆ ಜೊತೆಗೆ ವೈದ್ಯಕೀಯ ಕ್ಷೇತ್ರದಲ್ಲೂ ತಮ್ಮ ಹೆಜ್ಜೆ ಇಟ್ಟಿರುವ ಶ್ರೀಲೀಲಾ ಅವರ ಈ ಸಾಧನೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯ ವಿಷಯವಾಗಿದ್ದು, “ಡಾಕ್ಟರ್ ಶ್ರೀಲೀಲಾ” ಎಂದು ಅಭಿಮಾನಿಗಳು ಕರೆದಾಡುತ್ತಿದ್ದಾರೆ.
ದೇಶ
ನಟ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಗೆ ಮತ್ತೊಂದು ಸಂಕಷ್ಟ: ಕ್ರೈಸ್ತ ಧರ್ಮಕ್ಕೆ ಅಪಮಾನ ಆರೋಪ, ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು
ಬೆಂಗಳೂರು: ನಟ ಯಶ್ (Yash) ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ (Toxic Cinema) ಚಿತ್ರಕ್ಕೆ ಒಂದರ ಮೇಲೊಂದು ವಿವಾದಗಳು ಎದುರಾಗುತ್ತಿವೆ. ಕೆಲ ದಿನಗಳ ಹಿಂದೆ ಟೀಸರ್‌ನಲ್ಲಿನ ಅಶ್ಲೀಲ ದೃಶ್ಯಗಳನ್ನು ಖಂಡಿಸಿ ಮಹಿಳಾ ಒಕ್ಕೂಟಗಳು ಆಕ್ರೋಶ ವ್ಯಕ್ತಪಡಿಸಿದ್ದರೆ, ಇದೀಗ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ಚಿತ್ರತಂಡದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಟಾಕ್ಸಿಕ್ ಸಿನಿಮಾದ ಕೆಲವು ದೃಶ್ಯಗಳಲ್ಲಿ ಕ್ರೈಸ್ತ ಧರ್ಮಕ್ಕೆ ಅಪಮಾನ ಮಾಡಲಾಗಿದೆ ಹಾಗೂ ಕ್ರೈಸ್ತ ಸಮುದಾಯಕ್ಕೆ ಮುಜುಗರ ಉಂಟುಮಾಡಲಾಗಿದೆ ಎಂದು ಆರೋಪಿಸಿ ನ್ಯಾಷನಲ್ ಕ್ರಿಶ್ಚಿಯನ್ ಫೆಡರೇಷನ್ (National Christian Federation) ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹಸಚಿವರು ಹಾಗೂ ಸೆನ್ಸಾರ್ ಬೋರ್ಡ್‌ಗೆ ದೂರು ಸಲ್ಲಿಸಿದೆ. ಕ್ರೈಸ್ತರ ದೇವದೂತ ಸಂತ ಮಿಕಯೇಲ್ ಅವರಿಗೆ ಸಂಬಂಧಿಸಿದ ದೃಶ್ಯಗಳಲ್ಲಿ ಅವಮಾನಕಾರಿ ಹಾಗೂ ಅಶ್ಲೀಲ ಚಿತ್ರೀಕರಣ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್, ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಆ ದೃಶ್ಯಗಳನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಸಿನಿಮಾದಲ್ಲಿಯೂ ಸಂತ ಮಿಕಯೇಲ್ ಮುಂದೆ ಚಿತ್ರೀಕರಿಸಿರುವ ದೃಶ್ಯಗಳನ್ನು ತೆಗೆದುಹಾಕಿ, ಕ್ರೈಸ್ತ ಸಮುದಾಯದ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದಕ್ಕೂ ಮುನ್ನ ಟಾಕ್ಸಿಕ್ ಟೀಸರ್‌ನಲ್ಲಿನ ಕೆಲವು ದೃಶ್ಯಗಳು ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುತ್ತಿವೆ ಎಂದು ಆರೋಪಿಸಿ ಮಹಿಳಾ ಒಕ್ಕೂಟಗಳು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದವು. ಟೀಸರ್‌ನ ವಿವಾದಾತ್ಮಕ ದೃಶ್ಯಗಳನ್ನು ತೆಗೆದುಹಾಕುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಗೆ ಮನವಿ ಮಾಡಲಾಗಿತ್ತು.
ಒಟ್ಟಾರೆ, ಬಿಡುಗಡೆಗೂ ಮುನ್ನವೇ ‘ಟಾಕ್ಸಿಕ್’ ಸಿನಿಮಾ ಭಾರೀ ವಿವಾದದ ಕೇಂದ್ರಬಿಂದುವಾಗಿದ್ದು, ಮುಂದಿನ ದಿನಗಳಲ್ಲಿ ಈ ವಿವಾದ ಯಾವ ತಿರುವು ಪಡೆಯಲಿದೆ ಎಂಬುದರ ಮೇಲೆ ಚಿತ್ರತಂಡದ ನಡೆ ಮಹತ್ವ ಪಡೆದುಕೊಂಡಿದೆ.
ದೇಶ
ಭಾರತೀಯ OTT ಇತಿಹಾಸದಲ್ಲೇ ಅಪರೂಪದ ಘಟನೆ
ಬೆಂಗಳೂರು: ಪ್ರಭಾಸ್ (Prabhas) ಎಂದರೆ ಕೇವಲ ಸ್ಟಾರ್ ಅಲ್ಲ, ಅದು ಒಂದು ಬ್ರ್ಯಾಂಡ್. ಭಾರತದ ನಂಬರ್ 1 ಪ್ಯಾನ್ ಇಂಡಿಯಾ ಸ್ಟಾರ್ ಆಗಿರುವ ಪ್ರಭಾಸ್ ಅವರಿಗೆ ದೇಶದಾದ್ಯಂತ ಕೋಟ್ಯಂತರ ಅಭಿಮಾನಿಗಳಿದ್ದಾರೆ. ಅವರ ಸಿನಿಮಾಗಳು ಹೇಗೇ ಇರಲಿ, ಬಾಕ್ಸ್ ಆಫೀಸ್‌ನಲ್ಲಿ ಭಾರೀ ಕಲೆಕ್ಷನ್ ಮಾಡುವುದು ಈಗ ಸಾಮಾನ್ಯವಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಪ್ರಭಾಸ್ ನಟನೆಯ ಹಾರರ್ ಕಾಮಿಡಿ ಸಿನಿಮಾ ‘ದಿ ರಾಜಾ ಸಾಬ್’ ಕೂಡ ಅದಕ್ಕೆ ಹೊರತಲ್ಲ.
ಸಂಕ್ರಾಂತಿ ಹಬ್ಬದ ಪ್ರಯುಕ್ತ ಜನವರಿ 9ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಈ ಸಿನಿಮಾ ನಿರೀಕ್ಷಿಸಿದ ಮಟ್ಟದ ಮೆಚ್ಚುಗೆ ಪಡೆಯಲಿಲ್ಲ. ಕಥೆ, ಚಿತ್ರಕಥೆ ಹಾಗೂ ವಿಎಫ್‌ಎಕ್ಸ್ ಬಗ್ಗೆ ಟೀಕೆಗಳು ಕೇಳಿಬಂದರೂ, ಸಿನಿಮಾ ಮೊದಲ ವಾರದಲ್ಲೇ ಸುಮಾರು 300 ಕೋಟಿ ರೂಪಾಯಿಗೂ ಅಧಿಕ ಮೊತ್ತ ಗಳಿಸಿತ್ತು. ಇದರಿಂದಲೇ ಪ್ರಭಾಸ್ ಕ್ರೇಜ್ ಯಾವ ಮಟ್ಟದಲ್ಲಿದೆ ಎಂಬುದು ಸ್ಪಷ್ಟವಾಗುತ್ತದೆ.
ಇದೀಗ ‘ದಿ ರಾಜಾ ಸಾಬ್’ ಒಟಿಟಿಯಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದ್ದು, ಇಲ್ಲಿ ಕೂಡ ಬಿಡುಗಡೆಯಿಗೂ ಮುಂಚೆಯೇ ದಾಖಲೆ ಮಟ್ಟದ ಕ್ರೇಜ್ ಸೃಷ್ಟಿಸಿದೆ. ಈ ಸಿನಿಮಾ ಜಿಯೋ ಹಾಟ್‌ಸ್ಟಾರ್ನಲ್ಲಿ ಫೆಬ್ರವರಿ 6ರಿಂದ ಪ್ರಸಾರವಾಗಲಿದೆ. ಒಟಿಟಿ ಪ್ಲಾಟ್‌ಫಾರ್ಮ್ ತನ್ನ ಅಧಿಕೃತ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡ ಮಾಹಿತಿಯಂತೆ, ಲಕ್ಷಾಂತರ ಮಂದಿ ‘Remind Me’ ಬಟನ್ ಕ್ಲಿಕ್ ಮಾಡಿದ್ದಾರೆ. ಈ ಭಾರೀ ಟ್ರಾಫಿಕ್ ನಿಭಾಯಿಸಲು ಜಿಯೋ ಹಾಟ್‌ಸ್ಟಾರ್ ತನ್ನ ಸರ್ವರ್‌ಗಳನ್ನು ಅಪ್‌ಗ್ರೇಡ್ ಮಾಡಿರುವುದು ಭಾರತೀಯ ಒಟಿಟಿ ಇತಿಹಾಸದಲ್ಲೇ ಅಪರೂಪದ ಘಟನೆ ಎನ್ನಲಾಗಿದೆ.
ಒಟಿಟಿ ಆವೃತ್ತಿಯಲ್ಲಿ ಪ್ರೇಕ್ಷಕರಿಗೆ ವಿಶೇಷ ಉಡುಗೊರೆಯೂ ಇದೆ. ಚಿತ್ರಮಂದಿರಗಳಲ್ಲಿ ತಾಂತ್ರಿಕ ಕಾರಣಗಳಿಂದ ಕೈಬಿಡಲಾಗಿದ್ದ 4 ರಿಂದ 8 ನಿಮಿಷಗಳ ಹೆಚ್ಚುವರಿ ದೃಶ್ಯಗಳನ್ನು ಸೇರಿಸಲಾಗಿದೆ. ಇದರಲ್ಲಿ ಪ್ರಭಾಸ್ ಅವರ ‘ಓಲ್ಡ್ ಗೆಟಪ್’ ಹಾಗೂ ಒಂದು ಸಾಹಸ ದೃಶ್ಯ ಪ್ರಮುಖ ಆಕರ್ಷಣೆಯಾಗಲಿದೆ.
ಮಾರುತಿ ನಿರ್ದೇಶನದ ಈ ಚಿತ್ರದಲ್ಲಿ ನಿಧಿ ಅಗರ್ವಾಲ್, ಮಾಳವಿಕಾ ಮೋಹನನ್ ಮತ್ತು ಸಂಜಯ್ ದತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ‘ದಿ ರಾಜಾ ಸಾಬ್’ ತೆಲುಗು, ಕನ್ನಡ, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿರಲಿದೆ.
-
ಬೆಂಗಳೂರು3 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ21 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ20 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ21 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ19 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ದೇಶ18 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ಅಪರಾಧ20 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
-
ದೇಶ21 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
