Connect with us

ಚುನಾವಣೆ

ವರುಣಾದಲ್ಲಿ ಕುಕ್ಕರ್ ಇಸ್ತ್ರಿಪೆಟ್ಟಿಗೆ ವಿತರಣೆ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈರಲ್

Published

on

ವರುಣಾದಲ್ಲಿ ಕುಕ್ಕರ್ ಇಸ್ತ್ರಿಪೆಟ್ಟಿಗೆ ವಿತರಣೆ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈರಲ್
ವರುಣಾದಲ್ಲಿ ಕುಕ್ಕರ್ ಇಸ್ತ್ರಿಪೆಟ್ಟಿಗೆ ವಿತರಣೆ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈರಲ್

ಮೈಸೂರು: ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿರುವುದಾಗಿ ಹೇಳಿರುವ ವಿಡಿಯೋ ವೈರಲ್ ಆಗಿದ್ದು ವಿವಾದಕ್ಕೆ ಕಾರಣವಾಗಿದೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದಲ್ಲಿ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಅವರೆಲ್ಲರಿಗೂ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯ ಘಟಕದ ಅಧ್ಯಕ್ಷ ನಂಜಪ್ಪ ನನ್ನ ತಂದೆ ಸಿದ್ದರಾಮಯ್ಯ ಅವರ ಕೈಯಿಂದಲೇ ಅವುಗಳನ್ನು ಕೊಡಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ, ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಂಜನಗೂಡಿನಲ್ಲಿ ಶುಕ್ರವಾರ ನಡೆದ ‌ತಾಲ್ಲೂಕು ಮಡಿವಾಳರ ಸಮುದಾಯ ಭವನದ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ನೀಡಿರುವ ಹೇಳಿಕೆಯು ಮಂಗಳವಾರ ಸಾಮಾಜಿಕ ಜಾಲತಾಣದಲ್ಲಿ ಹರಡಿದೆ.
ಅನುಕೂಲವಾಗಲೆಂದು ನಂಜಪ್ಪ ಈ ಈ ಕಾರ್ಯಕ್ರಮ ಮಾಡಿದ್ದರು. ತಂದೆಯವರು ಪ್ರಚಾರದ ಬ್ಯುಸಿಯಲ್ಲಿದ್ದರೂ, 2–3 ಬಾರಿ ಬಂದು ಭೇಟಿಯಾಗಿ, ಹಲವು ಬಾರಿ ದಿನಾಂಕ ನಿಗದಿಯಾಗಿ ರದ್ದಾದರೂ ಪಟ್ಟು ಬಿಡದೇ ನನ್ನ ತಂದೆಯವರಿಂದಲೇ ಕೊಡಿಸಿ ಕಾರ್ಯಕ್ರಮ ಯಶಸ್ವಿಯಾಗಿಸಿದರು. ಸಮಾಜದ ಮತಗಳು ನಮಗೆ ಹೆಚ್ಚಿನ ಪ್ರಮಾಣದಲ್ಲಿ ಸಿಗುವಂತೆ ಮಾಡಿದರು. ನಾನು ಆ ಕಾರ್ಯಕ್ರಮಕ್ಕೆ ಬರಲಾಗಿರಲಿಲ್ಲ’ ಎಂದು ಹೇಳಿದ್ದಾರೆ. ನಾವು ಗೆಲ್ಲಲು ಮಡಿವಾಳ ಸಮಾಜದ ದೊಡ್ಡ ಕೊಡುಗೆ ನೀಡಿದೆ. ಈ ಸಮುದಾಯದ ಬೇಡಿಕೆಗಳನ್ನು ಈಡೇರಿಸಲು ನಮ್ಮ ಸರ್ಕಾರ ಕ್ರಮ ಕೈಗೊಳ್ಳಲಿದೆ’ ಎಂದು ಭರವಸೆ ನೀಡಿದ್ದಾರೆ.
ಈ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯೊಂದಿಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ವರುಣಾ ಕ್ಷೇತ್ರದಲ್ಲಿ ನಡೆದ ಜಿಲ್ಲಾ ಸಮಾವೇಶದ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಪದಾಧಿಕಾರಿಗಳು ಉಡುಗೊರೆಗಳನ್ನು ವಿತರಿಸಿದ್ದಾರೆ. ಪಕ್ಷದಿಂದ ಅಥವಾ ನಮ್ಮ ಕಡೆಯಿಂದ ನೀಡಿಲ್ಲ, ಈ ವೇಳೆ ನಮ್ಮ ತಂದೆ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲು ನಿರ್ಧರಿಸಿದ್ದರು. “ನನಗೆ ಸಾಧ್ಯವಾಗದ ಕಾರಣ ನನ್ನ ತಂದೆ ಸಮಾವೇಶಕ್ಕೆ ಹಾಜರಿದ್ದರು ಎಂದು ಸ್ಪಷ್ಟನೆ ನೀಡಿದ್ದಾರೆ. ಯತೀಂದ್ರ ಅವರ ಹೇಳಿಕೆಯನ್ನು ಚುನಾವಣಾ ಆಯೋಗ ಗಮನಿಸಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಒತ್ತಾಯಿಸಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ವಿರುದ್ಧ ಚುನಾವಣಾ ಅರ್ಜಿ ವಿಚಾರಣೆ ಬಾಕಿ ಇದೆ. ಯತೀಂದ್ರ ಅವರ ಹೇಳಿಕೆಯನ್ನು ಸಾಬೀತುಪಡಿಸಲು ಪುರಾವೆಗಳಿದ್ದರೆ, ಇಸಿಐ ಅದನ್ನು ಗಂಭೀರವಾಗಿ ಪರಿಗಣಿಸಬೇಕು, ಉಚಿತ ವಿತರಣೆಯು ಗಂಭೀರ ಅಪರಾಧವಾಗಿದೆ ಎಂದು ಅವರು ಹೇಳಿದರು.

ಚುನಾವಣೆ

Bhabanipur Shock: 700 ಮತದಾರರ ಬೂತ್‌ನಲ್ಲಿ ಮಮತಾ ಬ್ಯಾನರ್ಜಿ ಪಡೆದದ್ದು ಕೇವಲ 28 ಮತ!

Published

on

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮುಖ್ಯಮಂತ್ರಿ Mamata Banerjee ಅವರಿಗೆ ಭಾರೀ ಹಿನ್ನಡೆಯಾಗಿದೆ. ಟಿಎಂಸಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ನಾಯಕ Suvendu Adhikari ಐತಿಹಾಸಿಕ ಜಯ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಅವರ ಸ್ವಂತ ವಾರ್ಡ್‌ನಲ್ಲಿಯೇ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬೂತ್‌ವಾರು ಅಂಕಿ-ಅಂಶಗಳ ಪ್ರಕಾರ, ಭವಾನಿಪುರ ಕ್ಷೇತ್ರದ 267 ಬೂತ್‌ಗಳ ಪೈಕಿ 207 ಬೂತ್‌ಗಳಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾಲಿಘಾಟ್ ನಿವಾಸವಿರುವ ವಾರ್ಡ್ ನಂಬರ್ 73ರಲ್ಲಿ ಸುವೇಂದು ಅಧಿಕಾರಿ 8,932 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಕೇವಲ 4,284 ಮತಗಳಿಗೆ ಸೀಮಿತರಾಗಿದ್ದಾರೆ.

ಚುನಾವಣೆಗೆ ಮುನ್ನ Amit Shah ಬಿಜೆಪಿ ಕಾರ್ಯಕರ್ತರಿಗೆ “ಮಮತಾ ಬ್ಯಾನರ್ಜಿಯನ್ನು ಅವರದೇ ಕೋಟೆಯಲ್ಲಿ ಸೋಲಿಸಿ” ಎಂದು ಕರೆ ನೀಡಿದ್ದರು. ಇದೀಗ ಸುವೇಂದು ಅಧಿಕಾರಿ ಆ ಸವಾಲನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ ಎಂದು ಬಿಜೆಪಿ ಪಾಳಯದಲ್ಲಿ ಸಂಭ್ರಮ ವ್ಯಕ್ತವಾಗಿದೆ.

ಸುವೇಂದು ಅಧಿಕಾರಿಗೆ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಮೊದಲಿನಿಂದ ರಾಜಕೀಯ ನೆಲೆ ಕಡಿಮೆ ಇತ್ತು. ಆದರೂ ಕ್ಷೇತ್ರದಲ್ಲಿ ಶೇಕಡಾ 63 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ಶೇಕಡಾ 30 ಮತಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.

ಇನ್ನು ಹಲವು ಬೂತ್‌ಗಳಲ್ಲಿ ಮಮತಾ ಬ್ಯಾನರ್ಜಿ 50 ಮತಗಳ ಗಡಿ ದಾಟಲೂ ವಿಫಲರಾಗಿರುವುದು ಟಿಎಂಸಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ. 2021ರ ಉಪಚುನಾವಣೆಯಲ್ಲಿ ಏಳು ವಾರ್ಡ್‌ಗಳಲ್ಲೂ ಗೆದ್ದಿದ್ದ ದೀದಿ, ಈ ಬಾರಿ ತಮ್ಮ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆದರೆ, ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದು ಟಿಎಂಸಿ ಕೋಟೆಯನ್ನು ಧೂಳೀಪಟ ಮಾಡಿದ್ದಾರೆ.

Continue Reading

ಚುನಾವಣೆ

ಜಿಬಿಎ ಚುನಾವಣೆಗೆ ಕೌಂಟ್‌ಡೌನ್ ಶುರು! ಜೂನ್‌ನಲ್ಲಿ ಡೇಟ್ ಫಿಕ್ಸ್

Published

on

ಬೆಂಗಳೂರು: ಬಹುನಿರೀಕ್ಷಿತ Greater Bengaluru Authority (GBA) ಚುನಾವಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಜೂನ್ 14ರಿಂದ 24ರೊಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ G. A. Sangreshi ಸೂಚನೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ Maheshwar Rao ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಆದರೆ ಜಿಬಿಎ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಭೆಗೆ ಗೈರಾಗಿದ್ದರು.

ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಎ ಸಂಗ್ರೇಶಿ, “ರಾಜ್ಯ ಚುನಾವಣಾ ಆಯೋಗ ಮತ್ತು ಜಿಬಿಎ ಸಮಾಲೋಚನೆ ನಡೆಸಿ ದಿನಾಂಕ ನಿಗದಿಪಡಿಸುವುದು ಕಾನೂನುಬದ್ಧ ಪ್ರಕ್ರಿಯೆ. ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ದಿನಾಂಕ ನಿಗದಿ ಮಾತ್ರ ಬಾಕಿಯಿದೆ” ಎಂದು ತಿಳಿಸಿದರು.

ಜನಗಣತಿ, ಮನೆ ಸಮೀಕ್ಷೆ ಸೇರಿದಂತೆ ಹಲವು ಆಡಳಿತಾತ್ಮಕ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆ ಸಮಯ ಪರಿಶೀಲಿಸಿ ದಿನಾಂಕ ಘೋಷಿಸುವಂತೆ ಜಿಬಿಎಗೆ ಸೂಚಿಸಲಾಗಿದೆ. ಆದರೆ ಜೂನ್ 30ರೊಳಗೆ ಚುನಾವಣೆ ದಿನಾಂಕ ನಿಗದಿಪಡಿಸಲೇಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಬೇಕಿರುವುದಾಗಿ ಆಯುಕ್ತರು ಹೇಳಿದರು.

ಇನ್ನೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಾತನಾಡಿ, ವಾರ್ಡ್ ವಿಂಗಡಣೆ, ಮತದಾರರ ಪಟ್ಟಿ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು. ಚುನಾವಣಾ ಕಾರ್ಯಕ್ಕಾಗಿ RO, AERO ಮತ್ತು BLOಗಳ ನೇಮಕಾತಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು.

Continue Reading

ಚುನಾವಣೆ

‘ನೀವು ಸೋತಿಲ್ಲ, ಗೆದ್ದಿದ್ದೀರಿ’ – ಮಮತಾ ಭೇಟಿ ಬಳಿಕ ಅಖಿಲೇಶ್ ಯಾದವ್ ಹೇಳಿಕೆ

Published

on

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ Akhilesh Yadav ಕೋಲ್ಕತ್ತಾಗೆ ಭೇಟಿ ನೀಡಿ Mamata Banerjee ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಗುರುವಾರ ಕಾಲಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದಲ್ಲಿ ನಡೆದ ಭೇಟಿಯ ವೇಳೆ ಅಖಿಲೇಶ್ ಯಾದವ್, “ನೀವು ಸೋತಿಲ್ಲ, ಗೆದ್ದಿದ್ದೀರಿ” ಎಂದು ಹೇಳಿ ಮಮತಾಗೆ ಸನ್ಮಾನ ಸಲ್ಲಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಈ ವೇಳೆ ಮಾತನಾಡಿದ ಅಖಿಲೇಶ್ ಯಾದವ್, ಬಂಗಾಳದಲ್ಲಿ ಚುನಾವಣೆಗಳನ್ನು ಉತ್ತರ ಪ್ರದೇಶ ಮಾದರಿಯಲ್ಲಿ ನಡೆಸಲಾಗಿದ್ದು, ಬೆದರಿಕೆ ಹಾಗೂ ಕುತಂತ್ರದ ರಾಜಕಾರಣ ಬಳಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ, ಚುನಾವಣಾ ಆಯೋಗ ಹಾಗೂ ಭೂಗತ ಶಕ್ತಿಗಳ ಸಂಚುಗಳಿಂದ ಚುನಾವಣೆ ಪ್ರಭಾವಿತವಾಗಿದೆ ಎಂದು ಆರೋಪಿಸಿದರು.

ಅಲ್ಲದೇ, ಮಮತಾ ಬ್ಯಾನರ್ಜಿ ಮತ್ತು Abhishek Banerjee ಅವರ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದು ಟೀಕಿಸಿದರು. ದೇಶದ ಪ್ರಜಾಪ್ರಭುತ್ವ ಶಕ್ತಿಗಳು ಒಂದಾಗಬೇಕೆಂದು ಕರೆ ನೀಡಿದರು.

ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ ಟಿಎಂಸಿ ಕೇವಲ 80 ಸ್ಥಾನಗಳಲ್ಲಿ ಜಯ ಸಾಧಿಸಿತು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ.

ಟಿಎಂಸಿ ಸೋಲಿನ ಬಳಿಕ ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ನಾಯಕರು ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವುದು ಇದೀಗ ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

Trending