Connect with us

ರಾಜಕೀಯ

ಆರ್ಸೆಲರ್ ಮಿತ್ತಲ್ ಬಳ್ಳಾರಿ ಕೈಬಿಟ್ಟಿದೆ: 60,000 ಕೋಟಿ ಹೂಡಿಕೆ ಆಂಧ್ರಕ್ಕೆ ಸ್ಧಳಾಂತರ!

ಬಳ್ಳಾರಿ: ಜಿಲ್ಲೆಯ ಕೈಗಾರಿಕಾ ಬೆಳವಣಿಗೆಗೆ ನಿರೀಕ್ಷಿತವಾಗಿದ್ದ ಆರ್ಸೆಲರ್ ಮಿತ್ತಲ್ ಕಂಪನಿಯ ₹60,000 ಕೋಟಿ ಹೂಡಿಕೆ ಯೋಜನೆ ಇದೀಗ ಆಂಧ್ರಪ್ರದೇಶದ ವಿಶಾಖಪಟ್ಟಣಂಗೆ ಸ್ಥಳಾಂತರಗೊಂಡಿದ್ದು, ಬಳ್ಳಾರಿ ಜನರಲ್ಲಿ ಭಾರೀ ನಿರಾಸೆ ಉಂಟಾಗಿದೆ.

2010 ರಲ್ಲಿ ಕುಡತಿನಿ ತಾಲ್ಲೂಕಿನಲ್ಲಿ ಕೈಗಾರಿಕಾ ಸ್ಥಾಪನೆಯ ಉದ್ದೇಶದಿಂದ 2,643 ಎಕರೆ ಜಮೀನು ಪಡೆದಿದ್ದರೂ, ಕಳೆದ 15 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾರ್ಯವಿಲ್ಲದೆ, ಕಂಪನಿಯು ಈ ಯೋಜನೆಯಿಂದ ಸಂಪೂರ್ಣವಾಗಿ ಹಿಂದೆ ಸರಿದಿರುವುದಾಗಿ ಘೋಷಿಸಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಂದಾಲ್ ಕಂಪನಿಯ ವಿಸ್ತರಣೆ ಉದ್ದೇಶದಿಂದ 12,500 ಎಕರೆ ಜಮೀನು ಕೆಐಎಡಿಬಿ ಮೂಲಕ ಕಡಿಮೆ ದರದಲ್ಲಿ ಸ್ವಾಧೀನಪಡಿಸಲಾಗಿತ್ತು. ಆದರೆ ಆರ್ಸೆಲರ್ ಮಿತ್ತಲ್ ಪಾಲಿಗೆ ಬಂದ ಜಮೀನಿನಲ್ಲಿ ಕೈಗಾರಿಕೆ ಸ್ಥಾಪನೆಯಾಗದೇ, ಈ ಹೂಡಿಕೆ ಆಂಧ್ರಕ್ಕೆ ಸರಿದಿದೆ.

ಬ್ರಾಹ್ಮಣಿ ಸ್ಟೀಲ್ಸ್ ತನ್ನ ಪಾಲಿನ ಜಮೀನನ್ನು ಉತ್ತಮ ಗಾಲ್ವಾ ಕಂಪನಿಗೆ ಮಾರಾಟ ಮಾಡಿದರೆ, ಎನ್‌ಎಂಡಿಸಿ ಈಗಾಗಲೇ 280 ಎಕರೆ ಜಮೀನಿನ ಜೊತೆಗೆ ಮಿತ್ತಲ್ ಬಿಟ್ಟ 2,643 ಎಕರೆ ಜಮೀನಿನಲ್ಲಿ ಕೈಗಾರಿಕೆ ಸ್ಥಾಪನೆಗೆ ಮುಂದಾಗಿದೆ.

ರಾಜ್ಯ ಸರ್ಕಾರ ಇದೀಗ ಉಳಿದ ಜಮೀನನ್ನು ಇತರ ಖಾಸಗಿ ಕಂಪನಿಗಳು ಅಥವಾ ಎನ್‌ಎಂಡಿಸಿಗೆ ಹಂಚಿಕೆ ನೀಡಿ ಕೈಗಾರಿಕೀಕರಣಕ್ಕೆ ಮುಂದಾಗುತ್ತಿದೆ. ಈ ನಡುವೆ ಬಳ್ಳಾರಿಯ ಜನತೆ, ತಮ್ಮ ಭವಿಷ್ಯದ ಕನಸುಗಳೂ, ಹೂಡಿಕೆ ಆಶೆಗಳೂ ಮಸುಕಾದಂತೆ ನೋಡುವ ಪರಿಸ್ಥಿತಿ ನಿರ್ಮಾಣವಾಗಿದೆ.

Continue Reading
Click to comment

Leave a Reply

Your email address will not be published. Required fields are marked *

ಚುನಾವಣೆ

BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.

ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.

ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Continue Reading

ದೇಶ

ಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ

ಬೆಂಗಳೂರು, ಫೆ.10: ಶೋಷಿತರು, ಹಿಂದುಳಿದ ವರ್ಗಗಳು, ದಲಿತರು ಹಾಗೂ ಅಹಿಂದ ಸಮುದಾಯದ ಹಕ್ಕುಗಳಿಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ರಾಷ್ಟ್ರೀಯ ಅಹಿಂದ ಸಂಘಟನೆ ಸರ್ಕಾರವನ್ನು ಒತ್ತಾಯಿಸಿದೆ. ರಾಷ್ಟ್ರೀಯ ಅಹಿಂದ ಸಂಘಟನೆಯ ಅಧ್ಯಕ್ಷ ಮುತ್ತಣ್ಣ ಶಿವಳ್ಳಿ ಹಾಗೂ ಕರ್ನಾಟಕ ರಾಜ್ಯ ಒಬಿಸಿ ಘಟಕದ ಅಧ್ಯಕ್ಷ ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ಈ ಬೇಡಿಕೆ ಮುಂದಿಡಲಾಗಿದೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯಕರು, ಬಿ.ಕೆ. ಹರಿಪ್ರಸಾದ್ ಅವರು ಕೇವಲ ರಾಜಕೀಯ ನಾಯಕನಲ್ಲ, ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದಾರೆ ಎಂದು ಬಣ್ಣಿಸಿದರು. ಜಾತಿ ಗಣತಿಯಂತಹ ಸಂವೇದನಾಶೀಲ ಹಾಗೂ ಐತಿಹಾಸಿಕ ಮಹತ್ವದ ವಿಷಯದಲ್ಲಿ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಶೋಷಿತ ಸಮುದಾಯಗಳ ಪರವಾಗಿ ಅವರು ದಿಟ್ಟ ನಿಲುವು ತಳೆದಿದ್ದಾರೆ ಎಂದು ಹೇಳಿದರು. ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನದ ಮೌಲ್ಯಗಳನ್ನು ರಾಜಕೀಯದ ಕೇಂದ್ರಬಿಂದುವಾಗಿಸಿಕೊಂಡು ನಡೆಸಿರುವ ಅವರ ಹೋರಾಟ ಅಹಿಂದ ಚಳವಳಿಗೆ ಹೊಸ ಬಲ ನೀಡಿದೆ ಎಂದು ಅಭಿಪ್ರಾಯಪಟ್ಟರು.

ಹಿಂದುಳಿದ ವರ್ಗದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರ ಆಡಳಿತಕ್ಕೆ ರಾಜಕೀಯ ಹಾಗೂ ನೈತಿಕವಾಗಿ ಬಲ ತುಂಬಿದ ನಾಯಕರಲ್ಲಿ ಬಿ.ಕೆ. ಹರಿಪ್ರಸಾದ್ ಪ್ರಮುಖರು ಎಂದು ಹೇಳಿದರು. ಪಕ್ಷದ ಒಳಗೂ ಹೊರಗೂ ಅಹಿಂದ ಧ್ವನಿಯನ್ನು ಸ್ಪಷ್ಟವಾಗಿ ಪ್ರತಿನಿಧಿಸಿರುವ ಇಂತಹ ನಾಯಕನನ್ನು ಸಂಪುಟಕ್ಕೆ ಸೇರಿಸುವುದರಿಂದ ಸರ್ಕಾರದ ವಿಶ್ವಾಸಾರ್ಹತೆ ಇನ್ನಷ್ಟು ಹೆಚ್ಚಲಿದೆ ಎಂದರು.

ಬಿ.ಕೆ. ಹರಿಪ್ರಸಾದ್ ಅವರು ಸಂಪುಟ ಸೇರಿದ್ದಲ್ಲಿ ಅಹಿಂದ ಸಂಘಟನೆಗಳಿಗೆ ಹೊಸ ಶಕ್ತಿ ಸಿಗಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆಗಳು, ಚರ್ಚೆಗಳು ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನಾಯಕರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಬಿ. ಶಿವಣ್ಣ ಸೇರಿದಂತೆ ಅಹಿಂದ ಕಾರ್ಯಕರ್ತರು ಮತ್ತು ಬಿ.ಕೆ. ಹರಿಪ್ರಸಾದ್ ಬೆಂಬಲಿಗರು ಉಪಸ್ಥಿತರಿದ್ದರು.

Continue Reading

ದೇಶ

DCM D K SHIVKUMAR ಖರ್ಗೆ ಸೂಚನೆ ಪಾಲಿಸಬೇಕು: ಡಿಕೆ ಶಿವಕುಮಾರ್

ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಮಾತುಕತೆ ಬಗ್ಗೆ ಸ್ಪಷ್ಟನೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar), “ನಾನು ಸಿದ್ದರಾಮಯ್ಯ ಅವರೊಂದಿಗೆ ಏನು ಮಾತನಾಡಿದ್ದೇವೆ ಎನ್ನುವುದು ನನಗೆ ಚೆನ್ನಾಗಿ ಗೊತ್ತಿದೆ. ನಾವು ಯಾವತ್ತೂ ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ” ಎಂದು ಹೇಳಿದರು.

ದೆಹಲಿಗೆ ತೆರಳುವ ಮುನ್ನ ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೊಂದಲ ಬೇರೆಯವರಿಗೆ ಇರಬಹುದು, ಆದರೆ ನನಗೆ ಯಾವುದೇ ಗೊಂದಲ ಇಲ್ಲ ಎಂದು ಸ್ಪಷ್ಟಪಡಿಸಿದರು. “ನಾವು ನಮ್ಮ ವರಿಷ್ಠ ನಾಯಕರೊಂದಿಗೆ ಚರ್ಚೆ ಮಾಡಿಕೊಂಡಿದ್ದೇವೆ. ಇತರರು ಟೆನ್ಶನ್ ತೆಗೆದುಕೊಳ್ಳುವುದರಿಂದಲೋ ಅಥವಾ ಹೇಳಿಕೆ ನೀಡುವುದರಿಂದಲೋ ಯಾರಿಗೂ ಪ್ರಯೋಜನವಿಲ್ಲ” ಎಂದು ಹೇಳಿದರು.

ಶಾಸಕರು ಹಾಗೂ ಸಚಿವರು ಪರ–ವಿರುದ್ಧ ಹೇಳಿಕೆ ನೀಡುವುದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಚನೆ ನೀಡಿದ್ದಾರೆ. ಆ ಸೂಚನೆಯನ್ನು ಎಲ್ಲರೂ ಪಾಲಿಸಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಇಂದು ಸಂಜೆ ಎಐಸಿಸಿಯವರು ಚರ್ಚೆಗೆ ಕರೆದಿದ್ದಾರೆ. ಕೇರಳ ಪ್ರವಾಸ ಮುಗಿಸಿಕೊಂಡು ಅಸ್ಸಾಂಗೆ ತೆರಳಬೇಕಿದೆ ಎಂದರು. ಬಜೆಟ್ ಸಭೆಗೆ ಗೈರಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಮುಖ್ಯಮಂತ್ರಿಯವರೊಂದಿಗೆ ಮಾತನಾಡಿದ್ದೇನೆ. ದೆಹಲಿಯಿಂದ ವಾಪಸ್ಸಾದ ನಂತರ ಮತ್ತಷ್ಟು ಚರ್ಚೆ ಮಾಡುತ್ತೇನೆ ಎಂದು ಹೇಳಿದರು.

ದೆಹಲಿಯಿಂದ ‘ಗುಡ್ ನ್ಯೂಸ್’ ತರುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ, “ಪ್ರತಿ ದಿನವೂ ಜೀವನದಲ್ಲಿ ಸಂತೋಷವೂ ಇದೆ, ಕಷ್ಟವೂ ಇದೆ. ಜನರ ಸಮಸ್ಯೆ ಬಗೆಹರಿಸಲು ಅನೇಕ ತೊಡಕುಗಳು ಬರುತ್ತವೆ. ಟೀಕೆಗಳನ್ನು ಎದುರಿಸುತ್ತಾ ನಮ್ಮ ಕೆಲಸ ಮಾಡಿಕೊಂಡು ಹೋಗಬೇಕು” ಎಂದು ಮಾರ್ಮಿಕವಾಗಿ ಹೇಳಿದರು.

ಯತೀಂದ್ರಗೆ ನೋಟಿಸ್ ನೀಡದ ಕುರಿತು ಶಾಸಕ ಇಕ್ಬಾಲ್ ಹುಸೇನ್ ಹೇಳಿಕೆಯ ಪ್ರಶ್ನೆಗೆ, “ಅದನ್ನು ಹೈಕಮಾಂಡ್ ಬಳಿ ಕೇಳೋಣ” ಎಂದು ಹೇಳಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದರು.

Continue Reading

Trending