Connect with us

ರಾಜ್ಯ

ಮೈಸೂರು ದಸರಾ ಮಹೋತ್ಸವ: ಯುವ ಪೀಳಿಗೆಯನ್ನು ಸೆಳೆಯುವ ಟಾಂಗಾ ಉತ್ಸವ

ಮೈಸೂರು: ಮೈಸೂರು ದಸರಾ ಮಹೋತ್ಸವವು ಶನಿವಾರ ಟಾಂಗಾ ಸವಾರಿ ಕಾರ್ಯಕ್ರಮದೊಂದಿಗೆ ಸಂಭ್ರಮ ತುಂಬಿದಂತೆ ಆಯೋಜಿಸಲ್ಪಟ್ಟಿತು. ಬೆಳಿಗ್ಗೆ 20ಕ್ಕೂ ಹೆಚ್ಚು ಟಾಂಗಾ ಗಾಡಿಗಳು ಸಾಂಪ್ರದಾಯಿಕ ಉಡುಗೆ ತೊಟ್ಟ ನವ ವಧವರನ್ನು ಕೂರಿಸಿಕೊಂಡು ನಗರದಲ್ಲಿನ ಪ್ರಮುಖ ಪಾರಂಪರಿಕ ಕಟ್ಟಡಗಳ ಮೂಲಕ ಸಂಚಾರ ನಡೆಸಿದವು. ಈ ಮೂಲಕ ಅರಸರ ಇತಿಹಾಸ ಮತ್ತು ಸಂಸ್ಕೃತಿಯ ಪಾಠವನ್ನು ನಾಗರಿಕರಿಗೆ ಹಂಚಿದರು.

ಕಾರ್ಯಕ್ರಮವನ್ನು ಪುರಾತತ್ವ ಸಂಗ್ರಹಾಲಯ ಮತ್ತು ಪ್ರವಾಸೋದ್ಯಮ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಿರ್ವಹಿಸಲಾಯಿತು. ಉದ್ದೇಶ, ನಶಿಸಿಹೋಗುತ್ತಿರುವ ಪಾರಂಪರಿಕ ಟಾಂಗಾಗಳ ಸಂರಕ್ಷಣೆಯ ಜೊತೆಗೆ ಯುವ ಪೀಳಿಗೆಯನ್ನು ದಸರಾ ಮಹೋತ್ಸವದ ಸಂಸ್ಕೃತಿಯೊಂದಿಗೆ ಸಂಪರ್ಕ ಮಾಡಿಸುವುದು.

ಕನ್ನಡದ ಪ್ರಸಿದ್ಧ ಚಿತ್ರ ಸು ಫ್ರಂ ಸೋ ಚಿತ್ರದ ನಟರು ಮತ್ತು ನಿರ್ದೇಶಕರಾದ ಪ್ರಕಾಶ್ ತುಮಿನಾಡು ದಂಪತಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಟಾಂಗಾ ಸವಾರಿ ಭಾಗವಹಿಸಿದ ದಂಪತಿಗಳು, ಮೈಸೂರು ಪೇಟೆ, ಪಂಚೆ, ಶಲ್ಯ ಮತ್ತು ಉತ್ತರ ಕರ್ನಾಟಕ, ಕೊಡುಗು, ಗೌಡರ ಶೈಲಿಯಲ್ಲಿನ ಪಾರಂಪರಿಕ ಉಡುಗೆಯಲ್ಲಿ ಮದುವೆಗೆ ಸಿದ್ಧವಂತೆ ಕಂಗೊಳಿಸುತ್ತಿದ್ದರು. ಸುಮಾರು 50 ಜೋಡಿಗಳು ಭಾಗವಹಿಸಿ ಮದುವೆ ಸಂಪ್ರದಾಯವನ್ನು ಪುನರುಜ್ಜೀವನ ನೀಡಿದಂತೆ ಕಾಣಿಸಿತು.

ಪ್ರಕಾಶ್ ತುಮಿನಾಡು ಹೇಳಿದರು, “ಮೈಸೂರು ದಸರಾ ಮಹೋತ್ಸವವು ವಿಶ್ವಮಟ್ಟದಲ್ಲಿ ಪ್ರಸಿದ್ಧಿ ಹೊಂದಿದೆ. ಇಂದಿನ ಕಾರ್ಯಕ್ರಮವು ನಾಡಿನ ಸಂಸ್ಕೃತಿ ಮತ್ತು ಆಚಾರವನ್ನು ಜನರಿಗೆ ಪರಿಚಯಿಸಲಿದೆ. ಸಾಂಪ್ರದಾಯಿಕ ಉಡುಗೊರೆ ಮತ್ತಷ್ಟು ಪ್ರಚಲಿತವಾಗಬೇಕು ಮತ್ತು ನಮ್ಮ ಯುವ ಪೀಳಿಗೆಯನ್ನು ಸೆಳೆಯಬೇಕು.”

ಈ ಟಾಂಗಾ ಸವಾರಿ ಕಾರ್ಯಕ್ರಮವು ಮೈಸೂರು ದಸರಾ 2025ರ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಿದ್ದು, ಪಾರಂಪರಿಕ ಸಂಸ್ಕೃತಿಯನ್ನು ಜೀವಂತಗೊಳಿಸುವ ಒಂದು ವಿಶೇಷ ಕ್ಷಣವಾಗಿ ನೆನಪಿನಲ್ಲಿ ಉಳಿಯಲಿದೆ.

ಅಪರಾಧ

ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.

ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.

ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.

ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ಅಪರಾಧ

BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.

ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.

Continue Reading

ದೇಶ

638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ

ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.

ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.

Continue Reading

Trending