ಕಾವೇರಿ
ಕಾವೇರಿ ಕಿಚ್ಚು: ಸೆ:26ಕ್ಕೆ ರಾಜ್ಯ ರಾಜಧಾನಿ ಸಂಪರ್ಣ ಸ್ತಬ್ಧವಾಗಲಿದೆ!
ಸೆಪ್ಟೆಂಬರ್ 26ರಂದು ರಾಜ್ಯ ರಾಜಧಾನಿ ಬೆಂಗಳೂರು ಸಂಪರ್ಣ ಸ್ತಬ್ಧವಾಗಲಿದೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬಹುತೇಕ ಸೇವೆಗಳು ಇರುವುದಿಲ್ಲ. ಕಾವೇರಿ ನೀರಿಗಾಗಿ ಪ್ರತಿಭಟನೆ ಮತ್ತಷ್ಟು ತೀವ್ರಗೊಳಿಸಲು ವಿವಿಧ ಸಂಘಟನೆಗಳು ತೀರ್ಮಾನಿಸಿದ್ದು, ಸೆಪ್ಟೆಂಬರ್ 26 ಮಂಗಳವಾರ ಬೆಂಗಳೂರು ಬಂದ್ ಮಾಡಲು ನಿರ್ಧರಿಸಿವೆ. ಬೆಂಗಳೂರು ಬಂದ್‌ಗೆ ಒಮ್ಮತದ ತೀರ್ಮಾನ ಕೈಗೊಳ್ಳಲಾಗಿದ್ದು, ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಿಸಿವೆ. ಹೀಗಾಗಿ ಮಂಗಳವಾರ ಬೆಂಗಳೂರು ಸಂಪೂರ್ಣವಾಗಿ ಸ್ತಬ್ದವಾಗಲಿದೆ.
ಫ್ರೀಡಂಪಾರ್ಕ್‌ನಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರುರವರು ಸೆಪ್ಟೆಂಬರ್ 26ರಂದು ಬೆಂಗಳೂರಿನಲ್ಲಿ ಬೆಳಗ್ಗೆ 6 ಗಂಟೆ ಯಿಂದ ಸಂಜೆ 6ಗಂಟೆಯ ವರೆಗೆ ಬಂದ್ ಆಚರಣೆ ಮಾಡುತ್ತೇವೆ. ಟೌನ್‌ಹಾಲ್‌ನಿಂದ ಮೈಸೂರು ಬ್ಯಾಂಕ್ ಸರ್ಕಲ್‌ವರೆಗೆ rally ನಡೆಸುತ್ತೇವೆ ಎಂದು ಮಾಹಿತಿ ನೀಡಿದರು.
ಬೆಂಗಳೂರು ಬಂದ್‌ಗೆ ನಮ್ಮ ಸಂಪೂರ್ಣ ಬೆಂಬಲ ಇರುತ್ತೆ ಎಂದು ಕೆಎಸ್ಆರ್ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಅನಂತ್ ಸುಬ್ಬರಾವ್ ತಿಳಿಸಿದ್ದಾರೆ.
ಮಂಗಳವಾರ ಬೆಂಗಳೂರಿನಲ್ಲಿ ಸಾರಿಗೆ ಬಸ್ ರಸ್ತೆಗಿಳಿಯುವುದಿಲ್ಲ. ಬಿಎಂಟಿಸಿ ಸಾರಿಗೆ ಸಿಬ್ಬಂದಿ ಮಂಗಳವಾರ ಬಂದ್‌ಗೆ ಬೆಂಬಲಿಸಲಿದ್ದಾರೆ.
ಖಾಸಗಿ ಸಾರಿಗೆ ಸಂಘಟನೆಗಳು ಕೂಡ ಬೆಂಬಲ ಸೂಚಿಸಿವೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದರು.ಬಂದ್‌ಗೆ ಖಾಸಗಿ ಶಿಕ್ಷಣ ಸಂಸ್ಥೆಗಳು ನೈತಿಕ ಬೆಂಬಲ ನೀಡಿವೆ. ಶಾಲೆಗಳಿಗೆ ರಜೆ ನೀಡುವ ನಿರ್ಧಾರ ಸರ್ಕಾರದ ಹೆಗಲಿಗೆ ಹಾಕಿದ್ದಾರೆ.ಮಂಗಳವಾರ ಬೆಂಗಳೂರು ಬಂದ್‌ಗೆ ಓಲಾ, ಉಬರ್ ಸಂಘದಿಂದ ಬೆಂಬಲ ವ್ಯಕ್ತವಾಗಿದೆ.ಬೆಂಗಳೂರಿನಾದ್ಯಂತ ಓಲಾ, ಉಬರ್ ಕ್ಯಾಬ್ ರಸ್ತೆಗಿಳಿಸದಿರಲು ನಿರ್ಧಾರ ಮಾಡಲಾಗಿದೆ ಓಲಾ, ಉಬರ್ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಮಾಹಿತಿ ನೀಡಿದರು.
ಕಾವೇರಿ
ಕಾವೇರಿ ತೀರದ ಗ್ರಾಮಗಳಿಗೆ ಎಚ್ಚರಿಕೆ!
ಮಂಡ್ಯ: ಮುಂಗಾರು ಮಳೆಯ ನಂತರ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕುಗೊಂಡಿದೆ. ಈ ಪರಿಣಾಮವಾಗಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪ್ರಸಿದ್ಧ ಕೆಆರ್‌ಎಸ್ ಅಣೆಕಟ್ಟು (KRS Dam) ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ.
ಸದ್ಯ ಕೆಆರ್‌ಎಸ್ ಡ್ಯಾಂಗೆ 20,797 ಕ್ಯೂಸೆಕ್ ನೀರು ಒಳಹರಿಯುತ್ತಿದ್ದು, ಈಗಾಗಲೇ 25 ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಬಿಡಲಾಗುತ್ತಿದೆ. ಡ್ಯಾಂನ ಗರಿಷ್ಠ ಮಟ್ಟವಾದ 124.80 ಅಡಿ ತಲುಪಿರುವುದರಿಂದ ಯಾವುದೇ ಕ್ಷಣದಲ್ಲಾದರೂ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡುವ ಸಾಧ್ಯತೆ ಇದೆ ಎಂದು ಕಾವೇರಿ ನೀರಾವರಿ ನಿಗಮ ಎಚ್ಚರಿಕೆ ನೀಡಿದೆ.
ಡ್ಯಾಂನಲ್ಲಿ 49.452 ಟಿಎಂಸಿ ನೀರು ಸಂಗ್ರಹವಾಗಿದ್ದು, ಇದು ಸಂಪೂರ್ಣ ಸಾಮರ್ಥ್ಯದ ಮಟ್ಟವಾಗಿದೆ. ಹೀಗಾಗಿ ಕಾವೇರಿ ನದಿ ತೀರದ ಗ್ರಾಮಸ್ಥರು ಎಚ್ಚರಿಕೆಯಿಂದ ಇರಲು ಕಾವೇರಿ ನೀರಾವರಿ ನಿಗಮ ವಿನಂತಿಸಿದೆ.
ಕೆಆರ್‌ಎಸ್‌ನಿಂದ ನೀರು ಬಿಡುಗಡೆ ಮಾಡಿದರೆ, ಮೈಸೂರು, ಮಡ್ಡೂರು, ಪಾಂಡವಪುರ ಹಾಗೂ ಶ್ರಿರಂಗಪಟ್ಟಣದ ನದಿ ಪಾತ್ರ ಪ್ರದೇಶಗಳಲ್ಲಿ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾವೇರಿ
ತಲಕಾವೇರಿಯಲ್ಲಿ ಪವಿತ್ರ ಕ್ಷಣ: ಕಾವೇರಿಮಾತೆಯ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭ
ಕರುನಾಡಿನ ಜೀವನದಿ ಕಾವೇರಿಯ (Kaveri) ಪವಿತ್ರ ತೀರ್ಥೋದ್ಭವ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಸಹಸ್ರಾರು ಭಕ್ತರು ತೀರ್ಥಸ್ವರೂಪಿಣಿ ಕಾವೇರಿಮಾತೆಯ ದರ್ಶನಕ್ಕಾಗಿ ತಲಕಾವೇರಿಗೆ ಆಗಮಿಸಲು ಸಿದ್ಧರಾಗಿದ್ದಾರೆ.
ಪ್ರತಿ ವರ್ಷ ಘಟಿಸುವ ಈ ಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ದೇಶದ ನಾನಾ ಭಾಗಗಳಿಂದ ಭಕ್ತರು ಕೊಡಗಿಗೆ ಆಗಮಿಸುತ್ತಿದ್ದಾರೆ. ಕೊಡಗಿನ ಜನರ ಕುಲದೇವತೆ ಹಾಗೂ ಕರ್ನಾಟಕದ ಜೀವನಾಡಿಯಾದ ಕಾವೇರಿಯ ತೀರ್ಥೋದ್ಭವದ ಸಿದ್ಧತೆಗಳನ್ನು ಜಿಲ್ಲಾಡಳಿತ ಭರ್ಜರಿಯಾಗಿ ಕೈಗೊಂಡಿದೆ.
ಶುಕ್ರವಾರ (ಅ.17) ಮಧ್ಯಾಹ್ನ 1:44ಕ್ಕೆ ಮಕರ ಲಗ್ನದಲ್ಲಿ ಬ್ರಹ್ಮಕುಂಡಿಕೆಯಿಂದ ಪವಿತ್ರ ತೀರ್ಥ ಉಕ್ಕಿಬರಲಿದೆ. ಈ ವೇಳೆ ಧಾರ್ಮಿಕ ವಿಧಿವಿಧಾನಗಳು, ಮಂತ್ರಪಠಣ ಮತ್ತು ಮಹಾಮಂಗಳಾರತಿ ನೆರವೇರಲಿವೆ. ಬೆಳಿಗ್ಗೆ 11:30ರಿಂದ ತೀರ್ಥೋದ್ಭವದ ತನಕ ಕ್ಷೇತ್ರದಲ್ಲಿ ಪೂಜೆಗಳು ನಡೆಯಲಿವೆ.
ತೀರ್ಥೋದ್ಭವದ ಪವಿತ್ರ ಕ್ಷಣವನ್ನು ಕಣ್ತುಂಬಿಕೊಳ್ಳಲು ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ರಾಮಲಿಂಗಾರೆಡ್ಡಿ ತಲಕಾವೇರಿಗೆ ಆಗಮಿಸಲಿದ್ದಾರೆ. ಭಕ್ತರು ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಸ್ನಾನಮಾಡಿ ಭಗಂಢೇಶ್ವರನಿಗೆ ಪೂಜೆ ಸಲ್ಲಿಸಿದ ನಂತರ ಕಾವೇರಿಮಾತೆಯ ದರ್ಶನ ಪಡೆಯಲಿದ್ದಾರೆ.
ಸದ್ಯ ತಲಕಾವೇರಿಯಲ್ಲಿ ತೀರ್ಥೋದ್ಭವದ ಭದ್ರತೆಗಾಗಿ 500ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕಾವಲು ವ್ಯವಸ್ಥೆ ಮಾಡಲಾಗಿದೆ. ಈ ವರ್ಷದ ತೀರ್ಥೋದ್ಭವವನ್ನು ಕಣ್ತುಂಬಿಕೊಳ್ಳಲು ಭಕ್ತರ ಸಂಭ್ರಮ ತಲಕಾವೇರಿಯಲ್ಲಿ ತಾರಕ್ಕೇರಿದೆ.
ಕಾವೇರಿ
ಕೆಆರ್‍ಎಸ್‍ಗೆ ಮುತ್ತಿಗೆ ಹಾಕಲು ಯತ್ನಿಸಿದ ವಾಟಾಳ್ ಅರೆಸ್ಟ್
ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟಗಳ ಕಿಚ್ಚು ಇನ್ನೂ ಕಡಿಮೆಯಗಿಲ್ಲ, ಹೋರಾಟಕ ಭಾಗವಾಗಿ ಕೆ ಆರ್ ಎಸ್ ಡ್ಯಾಂಗೆ ಮುತ್ತಿಗೆ ಹಾಕಲು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಯತ್ನಿಸಿದರು, ಡ್ಯಾಂ ಪ್ರವೇಶಿಸಲು ಪೊಲೀಸರು ತಡೆಯೊಡ್ಡಿದ್ದು ವಾಟಾಳ್ ನಾಗರಾಜ್ ಅವರು ಜೊತೆಗೆ 30ಕ್ಕೂ ಹೆಚ್ಚು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ,
ಪೊಲೀಸರ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ ವಾಟಾಳ್ ನಮ್ಮ ಹೋರಾಟ ಯಾವತ್ತೂ ವಿಫಲವಾಗಲ್ಲ ಯಾವ ಪೊಲೀಸರು ಏನೂ ಮಾಡೋಕೆ ಆಗಲ್ಲ ಎಂದು ಆಕ್ರೋಶವನ್ನು ಹರ ಹಾಕಿದ್ದಾರೆ, ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲಲ್ಲ, ಕಾವೇರಿ ನಮ್ಮದು ಹೋರಾಟ ನಿರಂತರ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ದೇಶ19 minutes ago“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
-
ದೇಶ13 minutes agoಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
-
ದೇಶ23 minutes ago‘I Love My Daughter’ ಟೀ ಶರ್ಟ್ನಲ್ಲಿ ಸಂಭ್ರಮ: ವಿಚ್ಛೇದನಕ್ಕೆ ಹೊಸ ಅರ್ಥ ನೀಡಿದ ಕುಟುಂಬ
-
ದೇಶ8 minutes agoIndian Railways: ರೈಲಲ್ಲೇ ಮದುವೆ ಸಂಭ್ರಮ: Indian Railwaysನಲ್ಲಿ ಹೊಸ ಟ್ರೆಂಡ್!
-
ದೇಶ2 minutes agoಟ್ರಂಪ್ ದೇಶದಲ್ಲಿ ಭಾರತೀಯರ ಸದ್ದು: ಮೇಯರ್ ರೇಸ್ನಲ್ಲಿ ತಮಿಳುನಾಡಿನ ಕುವರಿ
