Connect with us

ಬಿಬಿಎಂಪಿ

ಬೆಂಗಳೂರು ಬಂದ್ ಗೆ ಮಿಶ್ರ ಪ್ರತಿಕ್ರಿಯೆ:ಎಂದಿನಂತೆ ಬಸ್ ಗಳ ಓಡಾಟ!

Published

on

ಬೆಂಗಳೂರು ಬಂದ್ ಗೆ ಆಟೋ, ಟ್ಯಾಕ್ಸಿ ಸಂಘಟನೆಗಳ ಬೆಂಬಲ ಇಲ್ಲದ ಪರಿಣಾಮ ಆಟೋಗಳು ರಸ್ತೆಗಿಳಿದಿವೆ. ನಗರದಲ್ಲಿ ಆಟೋ ಸಂಚಾರ ಎಂದಿನಂತೆ ಇವೆ. ಟ್ಯಾಕ್ಸಿಗಳು ಕೂಡಾ ಸಂಚಾರ ನಡೆಸುತ್ತಿವೆ.ಜನರ ಓಡಾಟ ಕೊಂಚ ಕಡಿಮೆ ಬಂದ್ ಬಿಸಿ ತೀವ್ರವಾಗಿ ಕಾಣಿಸುತ್ತಿಲ್ಲ.ನಗರದ ಪ್ರಮುಖ ಜಂಕ್ಷನ್ ಗಳು ಹಾಗೂ ಪ್ರಸಿದ್ದ ಕಟ್ಟಡಗಳು, ಸೂಕ್ಷ್ಮ ಪ್ರದೇಶಗಳಲ್ಲಿ ರಾತ್ರಿಯಿಂದಲೇ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.ಬೆಂಗಳೂರು ಬಂದ್ ಕರೆ ಹಿನ್ನೆಲೆ ಎಲ್ಲಾ ಸಂಘಟನೆಗಳ ಮುಖಂಡರನ್ನು ಪೊಲೀಸರು ಸಂಪರ್ಕಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾದ ವೇಳೆ ಸಂಘಟನೆಗಳ ವ್ಯಕ್ತಿಗಳು ಪ್ರಚೋದನಕಾರಿ ಹಾಗೂ ಸಮಸ್ಯೆ ಮಾಡಿದ್ದಲ್ಲಿ ಶಿಸ್ತುಕ್ರಮದ ಎಚ್ಚರಿಕೆ ನೀಡಿದ್ದಾರೆ. ಆಯಾ ಠಾಣಾ ವ್ಯಾಪ್ತಿಯಲ್ಲಿ ಸಂಘಟನೆಗಳ ಬಗ್ಗೆ ಎಚ್ಚರಿಕೆ ವಹಿಸಲು ಹಿರಿಯ ಅಧಿಕಾರಿಗಳ ಸೂಚನೆ ನೀಡಿದ್ದಾರೆ.ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮಧ್ಯರಾತ್ರಿ 12 ಗಂಟೆಯಿಂದಲೇ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಮಂಗಳವಾರ ಮಧ್ಯೆ ರಾತ್ರಿ 12 ಗಂಟೆಯವರೆಗೆ ಇರಲಿದೆ.
ಬಂದ್‌ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್‌ ಸರ್ಪಗಾವಲು ಹಾಕಲಾಗಿದೆ. ಎಲ್ಲೆಡೆ ಪೊಲೀಸರು ತೀವ್ರ ಕಟ್ಟೆಚ್ಚರ ವಹಿಸಿದ್ದು, ತಮಿಳು ಭಾಷಿಕರಿರುವ ಪ್ರದೇಶಗಳಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಲಾಗಿದೆ. ಕೆಎಸ್‌ಆರ್‌ಪಿಯ 60 ತುಕಡಿ ಮತ್ತು ಸಿಎಆರ್‌ನ 40 ತುಕಡಿಗಳನ್ನು ಹೆಚ್ಚುವರಿಯಾಗಿ ಭದ್ರತಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ಸಿವಿಲ್‌ ಪೊಲೀಸರೊಂದಿಗೆ ಸಿಐಡಿ, ಐಎಸ್‌ಡಿ ಅಧಿಕಾರಿಗಳೂ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದಾರೆ.ಮಧ್ಯರಾತ್ರಿಯೇ ಪೊಲೀಸರು ನಗರದ ಪ್ರಮುಖ ಪ್ರದೇಶಗಳಲ್ಲಿ ಗಸ್ತು ಹೆಚ್ಚಿಸಿದ್ದರು. ಇನ್ನು ಮೆಜೆಸ್ಟಿಕ್‌, ರೈಲು ನಿಲ್ದಾಣಗಳಲ್ಲಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿ ನಿಗಾವಹಿಸಲಾಗಿತ್ತು.ಯಾವುದೇ ಒಂದು ಪ್ರದೇಶಲ್ಲಿ ಸೆಕ್ಷನ್‌ 144 ಜಾರಿ ಮಾಡಿದರೆ ಸಂಬಂಧಿತ ಪ್ರದೇಶದಲ್ಲಿ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧವಾಗಿದೆ. ಒಂದು ವೇಳೆ ಆ ರೀತಿಯಲ್ಲಿ ಅನುಮತಿ ಇಲ್ಲದೆ ಗುಂಪು ಸೇರಿದರೆ ಪೊಲೀಸ್‌ ಪ್ರಕರಣ ದಾಖಲಿಸಲಿದ್ದಾರೆ.’ಬಂದ್‌ಗೆ ಕರೆ ಕೊಟ್ಟಿರುವ ಸಂಘಟನೆಗಳು ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್‌ ವರೆರೆಗೆ ಜಾಥ ಮಾಡಲು ಅವಕಾಶ ಕೇಳಿವೆ. ಆದರೆ, ಕೋರ್ಟ್‌ನ ಆದೇಶದ ಕಾರಣಕ್ಕೆ ಜಾಥಾ ಅವಕಾಶ ಕೊಟ್ಟಿಲ್ಲ. ಬಂದ್‌ ವೇಳೆ ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡಬಾರದು. ಸರಕಾರಿ ಮತ್ತು ಸಾರ್ವಜನಿಕ ಆಸ್ತಿಗಳಿಗೆ ಹಾನಿಯುಂಟಾಗಬಾರದು, ಜನರಿಗೆ ತೊಂದರೆಯಾಗುವುದನ್ನೂ ಸಹಿಸುವುದಿಲ್ಲ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್‌ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಿಂದ ತಮಿಳುನಾಡಿಗೆ ಸಂಚರಿಸುತ್ತಿದ್ದ ರಾಜ್ಯದ ಸುಮಾರು 500 ಬಸ್​ಗಳ ಸಂಚಾರ ಸ್ಥಗಿತಗೊಂಡಿದೆ. ಬೆರಳಣಿಕೆಯಷ್ಟು ತಮಿಳುನಾಡಿನ ಬಸ್​ಗಳು ಸಂಚಾರ ನಡೆಸುತ್ತಿವೆ. ತುರ್ತು ಪರಿಸ್ಥಿತಿ ನಿರ್ಮಾಣವಾದ್ರೆ ತಮಿಳುನಾಡಿನ ಬಸ್​ಗಳಿಗೆ ಎಸ್ಕಾರ್ಟ್​ ನೀಡಲು ಪೊಲೀಸರು ಸಿದ್ಧರಾಗಿದ್ದಾರೆ.

ಚುನಾವಣೆ

ಪೆರಂಬೂರ್ ಕಣಕ್ಕೆ ನಟ ವಿಜಯ್ ಎಂಟ್ರಿ: ತಮಿಳುನಾಡು ರಾಜಕೀಯದಲ್ಲಿ ಸಂಚಲನ

Published

on

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ನಟ Vijay ನೇತೃತ್ವದ Tamilaga Vettri Kazhagam (TVK) ಪಕ್ಷದ ರಾಜಕೀಯ ಪ್ರವೇಶ ರಾಜ್ಯ ರಾಜಕೀಯ ಸಮೀಕರಣಗಳಲ್ಲಿ ಭಾರೀ ಬದಲಾವಣೆ ತಂದಿದೆ. ವಿಶೇಷವಾಗಿ, ವಿಜಯ್ ಅವರು ಪೆರಂಬೂರ್ ವಿಧಾನಸಭಾ ಕ್ಷೇತ್ರವನ್ನು ತಮ್ಮ ಚೊಚ್ಚಲ ಚುನಾವಣಾ ಕಣವಾಗಿ ಆರಿಸಿಕೊಂಡಿರುವುದು ದೊಡ್ಡ ಚರ್ಚೆಗೆ ಕಾರಣವಾಗಿದೆ.

Perambur ಕ್ಷೇತ್ರವು ಸಾಂಪ್ರದಾಯಿಕವಾಗಿ ದ್ರಾವಿಡ ಪಕ್ಷಗಳ ಭದ್ರಕೋಟೆಯಾಗಿದ್ದರೂ, ಈ ಬಾರಿ ವಿಜಯ್ ಪ್ರವೇಶದಿಂದಾಗಿ ಹೈ-ಪ್ರೊಫೈಲ್ ಕಣವಾಗಿ ಪರಿಣಮಿಸಿದೆ. Dravida Munnetra Kazhagam (DMK) ಮತ್ತು All India Anna Dravida Munnetra Kazhagam (AIADMK) ಪಕ್ಷಗಳಿಗೆ ಇದು ಹೊಸ ಸವಾಲಾಗಿ ಪರಿಣಮಿಸಿದೆ.

ಈ ಕ್ಷೇತ್ರದಲ್ಲಿ ಡಿಎಂಕೆ ಒಂಬತ್ತು ಬಾರಿ ಗೆಲುವು ಸಾಧಿಸಿದ್ದು, ಸತ್ಯವಾಣಿ ಮುತ್ತು ಮತ್ತು ಪರಿಥಿ ಇಲಂವಝುತಿ ಅವರಂತಹ ನಾಯಕರಿಂದ ರಾಜಕೀಯ ಇತಿಹಾಸ ರೂಪುಗೊಂಡಿದೆ. 2016ರಲ್ಲಿ ಎಐಎಡಿಎಂಕೆ ಅಲ್ಪ ಅಂತರದಲ್ಲಿ ಗೆಲುವು ಸಾಧಿಸಿದರೂ, 2019ರ ಉಪಚುನಾವಣೆ ಮತ್ತು 2021ರ ಚುನಾವಣೆಯಲ್ಲಿ ಡಿಎಂಕೆ ಮತ್ತೆ ತನ್ನ ಪ್ರಾಬಲ್ಯವನ್ನು ಸ್ಥಾಪಿಸಿತ್ತು.

ಸುಮಾರು 2.22 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಪೆರಂಬೂರ್ ಕ್ಷೇತ್ರದಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿರುವುದು ಗಮನಾರ್ಹ. ಯುವಕರು ಮತ್ತು ಕಾರ್ಮಿಕ ವರ್ಗದ ಪ್ರಭಾವ ಹೆಚ್ಚಿರುವ ಈ ಪ್ರದೇಶದಲ್ಲಿ ಉದ್ಯೋಗ, ಹಣದುಬ್ಬರ ನಿಯಂತ್ರಣ, ವಸತಿ ಮತ್ತು ಮೂಲಸೌಕರ್ಯ ಪ್ರಮುಖ ಚುನಾವಣಾ ವಿಷಯಗಳಾಗಿವೆ.

ವಿಜಯ್ ಅವರ ಯುವಜನಪ್ರಿಯತೆ ಈ ಬಾರಿ ದ್ರಾವಿಡ ಪಕ್ಷಗಳ ದೀರ್ಘಕಾಲದ ಹಿಡಿತವನ್ನು ಸವಾಲು ಮಾಡಬಹುದು ಎಂದು ರಾಜಕೀಯ ವೀಕ್ಷಕರು ಅಭಿಪ್ರಾಯಪಟ್ಟಿದ್ದಾರೆ. ಪೆರಂಬೂರ್ ಕಣ ಇದೀಗ ಸಾಮಾನ್ಯ ಚುನಾವಣೆ ಮಾತ್ರವಲ್ಲ, ಹೊಸ ರಾಜಕೀಯ ಶಕ್ತಿಯ ಪರೀಕ್ಷೆಯಾಗಿ ಪರಿಣಮಿಸಿದೆ.

Continue Reading

ದೇಶ

ಬೆಂಗಳೂರು ದಕ್ಷಿಣ ಪಾಲಿಕೆಯಲ್ಲಿ ಪೌರಕಾರ್ಮಿಕರ ಆರೋಗ್ಯ ತಪಾಸಣೆ: ಮಧುಮೇಹ, ರಕ್ತದೊತ್ತಡ ಪ್ರಕರಣ ಹೆಚ್ಚಳ

Published

on

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಲ್ಲಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಗಳು ಹೆಚ್ಚಾಗಿ ಕಂಡುಬಂದಿರುವುದು ಆರೋಗ್ಯ ತಪಾಸಣೆಯಲ್ಲಿ ಬೆಳಕಿಗೆ ಬಂದಿದೆ. ಸ್ವಚ್ಛತಾ ಯೋಧರೆಂದು ಗುರುತಿಸಲಾದ ಪೌರಕಾರ್ಮಿಕರ ಆರೋಗ್ಯದ ಜವಾಬ್ದಾರಿಯನ್ನು ಪಾಲಿಕೆ ವಹಿಸಿಕೊಂಡಿದ್ದು, ನಿಯಮಿತ ಆರೋಗ್ಯ ತಪಾಸಣೆಗಳನ್ನು ನಡೆಸುತ್ತಿದೆ.

ದಕ್ಷಿಣ ಕಾರ್ಪೋರೇಷನ್ ವ್ಯಾಪ್ತಿಯ 25 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ 49 ನಮ್ಮ ಕ್ಲಿನಿಕ್‌ಗಳಲ್ಲಿ ಬುಧವಾರ ಸಮೂಹ ಆರೋಗ್ಯ ತಪಾಸಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.


1,934 ಮಂದಿಗೆ ಆರೋಗ್ಯ ತಪಾಸಣೆ

ಒಟ್ಟು 1,934 ಪೌರಕಾರ್ಮಿಕರು ತಪಾಸಣೆಗೆ ಒಳಪಟ್ಟಿದ್ದು, ಈ ಪೈಕಿ 605 ಪುರುಷರು ಮತ್ತು 1,348 ಮಹಿಳೆಯರು ಸೇರಿದ್ದಾರೆ. ತಪಾಸಣಾ ಕಾರ್ಯಕ್ಕಾಗಿ 56 ವೈದ್ಯಾಧಿಕಾರಿಗಳು ಮತ್ತು 168 ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು ಎಂದು ದಕ್ಷಿಣ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ತಿಳಿಸಿದ್ದಾರೆ.


ತಪಾಸಣೆಯಲ್ಲಿ ಪತ್ತೆಯಾದ ಕಾಯಿಲೆಗಳು

ಆರೋಗ್ಯ ತಪಾಸಣೆಯಲ್ಲಿ ಕಂಡುಬಂದ ಪ್ರಮುಖ ಸಮಸ್ಯೆಗಳ ವಿವರ ಹೀಗಿದೆ:

  • ಮಧುಮೇಹ: 256 ಪ್ರಕರಣ
  • ಅಧಿಕ ರಕ್ತದೊತ್ತಡ: 254 ಪ್ರಕರಣ
  • ರಕ್ತಹೀನತೆ: 67 ಪ್ರಕರಣ
  • ದಂತ ಸಮಸ್ಯೆ: 57 ಪ್ರಕರಣ
  • ಜ್ವರ: 43 ಪ್ರಕರಣ
  • ಕಣ್ಣಿನ ಸಮಸ್ಯೆ: 39 ಪ್ರಕರಣ
  • ಶ್ರವಣ ಸಮಸ್ಯೆ: 16 ಪ್ರಕರಣ
  • ಹೃದಯ ಸಮಸ್ಯೆ: 4 ಪ್ರಕರಣ
  • ಜನರಲ್ ಓಪಿಡಿ: 1,198
  • ಪೌರಕಾರ್ಮಿಕರ ಆರೋಗ್ಯದ ಮೇಲೆ ವಿಶೇಷ ಗಮನ
  • ಪೌರಕಾರ್ಮಿಕರು ನಗರ ಸ್ವಚ್ಛತೆಗೆ ಮಹತ್ವದ ಕೊಡುಗೆ ನೀಡುತ್ತಿರುವ ಹಿನ್ನೆಲೆ, ಅವರ ಆರೋಗ್ಯ ರಕ್ಷಣೆಗಾಗಿ ಪಾಲಿಕೆ ನಿರಂತರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆ ಸೌಲಭ್ಯ ಒದಗಿಸುತ್ತಿದೆ. ಮಧುಮೇಹ ಮತ್ತು ರಕ್ತದೊತ್ತಡ ಪ್ರಕರಣಗಳು ಹೆಚ್ಚುತ್ತಿರುವುದು ಗಮನಾರ್ಹವಾಗಿದ್ದು, ಮುಂದಿನ ದಿನಗಳಲ್ಲಿ ವಿಶೇಷ ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಯೋಜನೆ ರೂಪಿಸಲಾಗುತ್ತಿದೆ.

Continue Reading

ಬಿಬಿಎಂಪಿ

ಬಿಬಿಎಂಪಿ ಘನತ್ಯಾಜ್ಯ ಆಟೋ ಟಿಪ್ಪರ್‌ಗಳಿಗೆ ನೂತನ ಸಮಯ: ಈಗಿನಿಂದ ಬೆಳಿಗ್ಗೆ 5:30ಕ್ಕೆ ಸ್ಕ್ಯಾನಿಂಗ್ ಆರಂಭ

Published

on

ಬೆಂಗಳೂರು: ನಗರದಲ್ಲಿ ಸ್ವಚ್ಛತಾ ಕಾರ್ಯಗಳ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಿರ್ಧಾರ ಕೈಗೊಂಡಿದೆ. ನಗರದ ವಿವಿಧ ವಾರ್ಡ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಘನತ್ಯಾಜ್ಯ ಸಂಗ್ರಹಣೆಯ ಆಟೋ ಟಿಪ್ಪರ್‌ ವಾಹನಗಳ ಮಸ್ಟರಿಂಗ್ (ಹಾಜರಾತಿ ಸ್ಕ್ಯಾನಿಂಗ್) ಸಮಯವನ್ನು ಪರಿಷ್ಕರಿಸಲಾಗಿದ್ದು, ಇಂದಿನಿಂದ ಈ ಹೊಸ ವೇಳಾಪಟ್ಟಿ ಜಾರಿಗೆ ಬಂದಿದೆ.

ಈ ಮೊದಲು ಬೆಳಿಗ್ಗೆ 6:00 ರಿಂದ 7:30 ರವರೆಗೆ ನಡೆಯುತ್ತಿದ್ದ ಮಸ್ಟರಿಂಗ್ ಸಮಯವನ್ನು ಈಗ ಬೆಳಿಗ್ಗೆ 5:30 ರಿಂದ 6:30 ರವರೆಗೆ ಮುಂಚಿತಗೊಳಿಸಲಾಗಿದೆ.


🧹 ಬದಲಾವಣೆ ಉದ್ದೇಶ ಏನು?

  • ನಿವಾಸಿಗಳು ತಮ್ಮ ತ್ಯಾಜ್ಯವನ್ನು ಕೆಲಸಕ್ಕೆ ಹೊರಡುವ ಮೊದಲು ನೀಡಲು ಅನುಕೂಲ.
  • ಜನರ ದೈನಂದಿನ ಕಾರ್ಯವೈಖರಿಯೊಂದಿಗೆ ತ್ಯಾಜ್ಯ ಸಂಗ್ರಹಣೆ ಜೋಡಣೆ.
  • ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದು ಕಪ್ಪು ಚುಕ್ಕಿ (Black Spot) ರೂಪುಗೊಳ್ಳುವಿಕೆ ತಡೆಯುವುದು.

🤝 ಸಾರ್ವಜನಿಕರ ಸಹಕಾರಕ್ಕೆ ಕರೆ:

ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ಅವರು ಈ ಹೊಸ ಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ನಗರದ ನಾಗರಿಕರಿಂದ ಸಹಕಾರ ಕೋರಿದ್ದಾರೆ.

Continue Reading

Trending