ದೇಶ
ಡಿಕೆ ಶಿವಕುಮಾರ್ ವಿಚಾರಕ್ಕೆ ಗರಂ ಆದ ಸಿಎಂ
ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವ ಸಂಪುಟ ಪುನಾರಚನೆ ವಿಷಯದ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ನಡೆಸುತ್ತೇನೆ. ಅದಕ್ಕಾಗಿ ನವೆಂಬರ್ 15ರಂದು ದೆಹಲಿಗೆ ತೆರಳುತ್ತೇನೆ” ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂಬ ಬಿಹಾರ ಮುಖಂಡರ ಹೇಳಿಕೆ ಕುರಿತು ಪ್ರಶ್ನೆ ಕೇಳಿದಾಗ ಮಾಧ್ಯಮಗಳ ವಿರುದ್ಧ ಗರಂ ಆಗಿದರು. “ಯಾರು ಏನೇ ಹೇಳಿದ್ರೂ ಅದು ಮುಖ್ಯವಲ್ಲ. ಕಾಂಗ್ರೆಸ್ ಹೈಕಮಾಂಡ್ ಹೇಳುವುದಷ್ಟೇ ಮುಖ್ಯ. ಮಾಧ್ಯಮದವರು ಪದೇ ಪದೇ ಅದನ್ನೇ ಪ್ರಶ್ನಿಸುತ್ತಿದ್ದಾರೆ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.
“ನಾನು ಬಿಹಾರ ಚುನಾವಣೆ ಬಳಿಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಸಂಪುಟ ಪುನಾರಚನೆ ಕುರಿತು ಚರ್ಚೆ ಮಾಡುತ್ತೇನೆ. ಹೈಕಮಾಂಡ್ ಏನು ತೀರ್ಮಾನಿಸುತ್ತದೆಯೋ ಅದನ್ನು ನಾನು ಅನುಸರಿಸುತ್ತೇನೆ,” ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಬಿಹಾರ ಚುನಾವಣಾ ಪ್ರಚಾರದ ಕುರಿತು ಮಾತನಾಡಿದ ಅವರು, “ಇಲ್ಲಿಯವರೆಗೆ ನನ್ನನ್ನು ಪ್ರಚಾರಕ್ಕೆ ಕರೆದಿಲ್ಲ, ಆದರೆ ಕರೆದರೆ ಹೋಗುತ್ತೇನೆ. ಈ ಬಾರಿ ಬಿಹಾರದಲ್ಲಿ ಇಂಡಿ ಒಕ್ಕೂಟ ಅಧಿಕಾರಕ್ಕೆ ಬರುತ್ತದೆ ಎಂದು ನನಗೆ ವಿಶ್ವಾಸವಿದೆ. ಜನರಿಗೆ ನಿತೀಶ್ ಕುಮಾರ್ ಬಗ್ಗೆ ಬೇಸರ ಬಂದಿದೆ, ಏಕೆಂದರೆ ಅವರಿಗೆ ಯಾವುದೇ ಸಿದ್ಧಾಂತವಿಲ್ಲ. ಅವರು ಪಕ್ಷಗಳನ್ನು ಬದಲಾಯಿಸುತ್ತಾ ಬಂದಿದ್ದಾರೆ,” ಎಂದರು.
ಅದೇ ವೇಳೆ, “ನಮ್ಮ ಗ್ಯಾರೆಂಟಿ ಯೋಜನೆಗಳನ್ನು ನಿತೀಶ್ ಕುಮಾರ್ ಕೂಡ ಬಿಹಾರದಲ್ಲಿ ಘೋಷಿಸಿದ್ದಾರೆ, ಆದರೆ ಅಲ್ಲಿ ಜನರು ಅವರ ಕೈ ಹಿಡಿಯುವುದಿಲ್ಲ. ಕರ್ನಾಟಕದಲ್ಲಿರುವ ಬಿಹಾರದ ಮತದಾರರು ಕೂಡ ಇಂಡಿ ಒಕ್ಕೂಟಕ್ಕೆ ಬೆಂಬಲ ನೀಡಲಿ ಎಂದು ಕೇಳುತ್ತಿದ್ದೇವೆ,” ಎಂದರು ಸಿಎಂ.
ರಾಜ್ಯ ರಾಜಕೀಯದಲ್ಲಿ ಹೈಕಮಾಂಡ್ ಪಾತ್ರದ ಬಗ್ಗೆ ಮತ್ತೊಮ್ಮೆ ಒತ್ತಿ ಹೇಳಿದ ಸಿದ್ದರಾಮಯ್ಯ ಅವರ ಹೇಳಿಕೆ, ಕಾಂಗ್ರೆಸ್ ಒಳಚರಿತ್ರೆಯ ಕುರಿತ ಚರ್ಚೆಗೆ ಮತ್ತಷ್ಟು ಹೊತ್ತು ತಂದಿದೆ.
ಕ್ರೀಡೆ
ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.
ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.
ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.
ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.
ಆರ್ಸಿಬಿ ಬ್ಯಾಟಿಂಗ್ ವಿವರ:
- ವಿರಾಟ್ ಕೊಹ್ಲಿ – 28 (18)
- ಫಿಲ್ ಸಾಲ್ಟ್ – 46 (30)
- ದೇವದತ್ತ ಪಡಿಕಲ್ – 50 (29)
- ರಜತ್ ಪಾಟೀದಾರ್ – 48* (19)
- ಟಿಮ್ ಡೇವಿಡ್ – 70* (25)
ದೇಶ
ಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ
ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಕ್ಕೂ ಜಗಳ-ಕೇಸು ಸಾಮಾನ್ಯವಾಗಿರುವ ಸಂದರ್ಭದಲ್ಲೇ, ಬಿಹಾರದ ಒಂದು ಹಳ್ಳಿ ದೇಶಕ್ಕೆ ಮಾದರಿಯಾಗಿ ಹೊರಹೊಮ್ಮಿದೆ. ಕಲಿಯಾಚಕ್ ಗ್ರಾಮ ಕಳೆದ 118 ವರ್ಷಗಳಿಂದ ಯಾವುದೇ ಅಪರಾಧ ದಾಖಲಾಗದೇ ಶಾಂತಿಯುತ ಜೀವನ ನಡೆಸುತ್ತಿರುವುದು ವಿಶೇಷ.
ನಳಂದ ಜಿಲ್ಲೆಯ ಈ ಗ್ರಾಮದಲ್ಲಿ ಸ್ಥಾಪನೆಯಾದ ದಿನದಿಂದಲೂ ಗಂಭೀರ ಅಪರಾಧಗಳೇ ನಡೆದಿಲ್ಲ. ಅಷ್ಟೇ ಅಲ್ಲ, ಇಷ್ಟು ವರ್ಷಗಳಲ್ಲಿ ಪೊಲೀಸ್ ಸೈರನ್ ಕೂಡ ಕೇಳಿಸಿಲ್ಲ ಎಂಬುದು ಆಶ್ಚರ್ಯಕರ ಸಂಗತಿ. ಗ್ರಾಮದಲ್ಲಿ ಯಾವುದೇ ಸಣ್ಣಪುಟ್ಟ ವಿವಾದಗಳು ಉಂಟಾದರೂ, ಹಿರಿಯರು ಕೂತು ಸಮಸ್ಯೆಯನ್ನು ಪರಿಹರಿಸುತ್ತಾರೆ.
ಈ ಗ್ರಾಮ ಹಿಲ್ಸಾ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ. ಆದರೆ ಪೊಲೀಸ್ ದಾಖಲೆಗಳಲ್ಲಿ ಈ ಗ್ರಾಮದಿಂದ ಒಂದೇ ಒಂದು ದೂರು ಕೂಡ ಇಲ್ಲದಿರುವುದು ಅಧಿಕಾರಿಗಳನ್ನೇ ಅಚ್ಚರಿಗೊಳಿಸಿದೆ.
ಗ್ರಾಮದಲ್ಲಿ ಸುಮಾರು 60 ಕುಟುಂಬಗಳು, 500 ಜನರು ವಾಸಿಸುತ್ತಿದ್ದು, ವಿವಿಧ ಜಾತಿ-ವರ್ಗಗಳ ಜನರು ಸಹೋದರತ್ವದಿಂದ ಬದುಕುತ್ತಿದ್ದಾರೆ. “ಗ್ರಾಮದ ಸಮಸ್ಯೆಗಳನ್ನು ಗ್ರಾಮದಲ್ಲೇ ಬಗೆಹರಿಸಬೇಕು” ಎಂಬುದು ಇವರ ಮೂಲ ತತ್ವವಾಗಿದೆ.
ಈ ಶಾಂತಿಯುತ ವಾತಾವರಣಕ್ಕೆ ಪ್ರಮುಖ ಕಾರಣ ಮಾಜಿ ಪಂಚಾಯಿತಿ ಅಧ್ಯಕ್ಷ ಸಾಧು ಶರಣ್ ಸಿಂಗ್ ಅವರ ಮಾರ್ಗದರ್ಶನ. ಅವರ ಪ್ರಯತ್ನದಿಂದ ಈ ಗ್ರಾಮ ಮಾದರಿಯಾಗಿ ರೂಪುಗೊಂಡಿದೆ.
ಇಲ್ಲಿನ ಯುವಕರು ಕೆಟ್ಟ ಅಭ್ಯಾಸಗಳಿಂದ ದೂರವಿದ್ದು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳತ್ತ ಗಮನ ಹರಿಸುತ್ತಿದ್ದಾರೆ.
ಗಮನಿಸಿ: ಮೇಲಿನ ವಿವರಗಳು ಬಿಹಾರದ ಕಲಿಯಾಚಕ್ ಗ್ರಾಮದ ಕುರಿತು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಒದಗಿಸಿದ ಮಾಹಿತಿಯನ್ನು ಆಧರಿಸಿವೆ. ಇದು ಅಪರಾಧ ಮುಕ್ತ ಗ್ರಾಮವಾಗಿ ದೇಶದಲ್ಲಿ ವಿಶೇಷ ಮನ್ನಣೆಯನ್ನು ಗಳಿಸಿದೆ.
ಒಟ್ಟಿನಲ್ಲಿ, ಕಲಿಯಾಚಕ್ ಗ್ರಾಮವು ಒಗ್ಗಟ್ಟು, ಸಹೋದರತ್ವ ಮತ್ತು ಶಾಂತಿಯುತ ಬದುಕಿನ ನಿಜವಾದ ಮಾದರಿಯಾಗಿ ಇಡೀ ದೇಶಕ್ಕೆ ಪ್ರೇರಣೆಯಾಗಿದೆ.
ದೇಶ
ಯುದ್ಧ ಮಧ್ಯೆ ಸಾಹಸ ಕಾರ್ಯಾಚರಣೆ: ಅಮೆರಿಕಾ ಪೈಲಟ್ ರಕ್ಷಣೆ ಘೋಷಣೆ
-
ದೇಶ4 hours ago“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್ ಟಾಂಗ್, ದಾವಣಗೆರೆ ರಾಜಕೀಯ ಕುತೂಹಲ
-
ದೇಶ3 hours agoಕಾಗದ-ಇಂಕ್ ಬೆಲೆ ಏರಿಕೆ: ಪ್ರಿಂಟಿಂಗ್ ಪ್ರೆಸ್ಗಳಿಗೆ ಶಾಕ್
-
ದೇಶ4 hours ago‘I Love My Daughter’ ಟೀ ಶರ್ಟ್ನಲ್ಲಿ ಸಂಭ್ರಮ: ವಿಚ್ಛೇದನಕ್ಕೆ ಹೊಸ ಅರ್ಥ ನೀಡಿದ ಕುಟುಂಬ
-
ದೇಶ3 hours agoIndian Railways: ರೈಲಲ್ಲೇ ಮದುವೆ ಸಂಭ್ರಮ: Indian Railwaysನಲ್ಲಿ ಹೊಸ ಟ್ರೆಂಡ್!
-
ದೇಶ3 hours agoಎನ್ಎಂಎಸಿಸಿ ವೇದಿಕೆಯಲ್ಲಿ ನೀತಾ ಅಂಬಾನಿ ಸೀರೆ ಸದ್ದು: ಐವರಿ-ಗೋಲ್ಡ್ ಲುಕ್ ವೈರಲ್
-
ದೇಶ2 hours agoಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ
-
ದೇಶ3 hours agoಟ್ರಂಪ್ ದೇಶದಲ್ಲಿ ಭಾರತೀಯರ ಸದ್ದು: ಮೇಯರ್ ರೇಸ್ನಲ್ಲಿ ತಮಿಳುನಾಡಿನ ಕುವರಿ
-
ಚುನಾವಣೆ2 hours ago“ಟ್ರಂಪ್ ಅನುಮತಿ ಇಲ್ಲದೆ ತೈಲ ಖರೀದಿ ಸಾಧ್ಯವಿಲ್ಲ”: ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
