Connect with us

ಕ್ರೀಡೆ

2023ರ ಏಷ್ಯಾನ್‌ ಗೇಮ್ಸ್‌ನಲ್ಲಿ ವಿಶ್ವ ದಾಖಲೆ ನಿರ್ಮಿಸಿ ಚಿನ್ನದ ಪದಕ ಗೆದ್ದ,ಪಂಜಾಬ್‌ ನ ಮಹಿಳಾ ಶೂಟರ್ ಸಿಫ್ಟ್ ಕೌರ್ ಸಮ್ರಾ

Published

on

2023ರ ಏಷ್ಯಾನ್‌ ಗೇಮ್ಸ್‌ನಲ್ಲಿ ವಿಶ್ವ ದಾಖಲೆ ನಿರ್ಮಿಸಿ ಚಿನ್ನದ ಪದಕ ಗೆದ್ದಿದ್ದಾರೆ,ಪಂಜಾಬ್‌ ನ ಮಹಿಳಾ ಶೂಟರ್ ಸಿಫ್ಟ್ ಕೌರ್ ಸಮ್ರಾ

2023ರ ಏಷ್ಯಾನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದು,ಜಗತ್ತಿನಾದ್ಯಂತ ಚರ್ಚೆಯಾಲ್ಲಿರುವ ಪಂಜಾಬ್‌ ನ ಮಹಿಳಾ ಶೂಟರ್ ಸಿಫ್ಟ್ ಕೌರ್ ಸಮ್ರಾ.ಚೀನಾದ ಹ್ಯಾಂಗ್‌ಝೌ ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ 50 ಮೀಟರ್ ತ್ರಿ-ಪೊಸಿಷನ್ ರೈಫಲ್ ವೈಯಕ್ತಿಕ ಸ್ಪರ್ಧೆಯಲ್ಲಿ ಅವರು ಭಾರತಕ್ಕೆ ಚಿನ್ನದ ಪದಕವನ್ನು ಗೆದ್ದು,ಪ್ರಪಂಚದಾದ್ಯಂತ ಭಾರತಕ್ಕೆ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಚಿನ್ನದ ಪದಕ ಗೆಲ್ಲುವುದರೊಂದಿಗೆ ಸಿಫ್ಟ್ ಕೌರ್ ಸಮ್ರಾ ಹೊಸ ಪಂಜಾಬ್‌ ನ ಮಹಿಳಾ ಶೂಟರ್ ಸಿಫ್ಟ್ ಕೌರ್ ಸಮ್ರಾದ್ದಾರೆ. ಮಹಿಳೆಯರ 50 ಮೀಟರ್ ರೈಫಲ್ ತ್ರೀ ಪೊಸಿಷನ್ ವೈಯಕ್ತಿಕ ವಿಭಾಗದಲ್ಲಿ ಸ್ಕಿಫ್ಟ್ ಸಮ್ರಾ ಕೌರ್ (469.6 ಅಂಕ) ವಿಶ್ವ ದಾಖಲೆ ನಿರ್ಮಿಸಿ ಚಿನ್ನದ ಪದಕ ಗೆದ್ದಿದ್ದಾರೆ.ಚೀನಾದ ಶೂಟರ್ ಜಂಗ್ (462.3 ಅಂಕ) ಬೆಳ್ಳಿ ಹಾಗೂ ಭಾರತದ ಶೂಟರ್ ಆಶಿ ಚೌಷ್ಕಿ (451.9 ಅಂಕ) ಕಂಚಿನ ಪದಕ ಗೆದ್ದಿದ್ದಾರೆ.
ಸಿಫ್ಟ್ ಕೌರ್ ಸಮ್ರಾ ಅವರು 09 ಸೆಪ್ಟೆಂಬರ್ 2001 ರಂದು ಪಂಜಾಬ್‌ನಲ್ಲಿ ಜನಿಸಿದರು. ಅವರು ಕೇವಲ 22ನೇ ವಯಸ್ಸಿನಲ್ಲಿ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.ಸಿಫ್ಟ್ ಕೌರ್ ಸಮ್ರಾ Instagram ನಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಶೂಟರ್ ಸಿಫ್ಟ್ ಕೌರ್ ಸಮ್ರಾರವರು 2021 ರಲ್ಲಿ NEET ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದಾರೆ.ನಂತರ, ಸಿಫ್ಟ್ ಕೌರ್ ಫರೀದ್‌ಕೋಟ್‌ನ GGS ವೈದ್ಯಕೀಯ ಕಾಲೇಜಿನಲ್ಲಿ MBBS ಕೋರ್ಸ್‌ಗೆ ಪ್ರವೇಶ ಪಡೆದಿದ್ದಾರೆ.ಅದರ ನಂತರ ಕೌರ್‌ ಶೂಟರ್ ಆಗಿ ತನ್ನ ವೃತ್ತಿಜೀವನವನ್ನು ಮುಂದುವರಿಸಲು ನಿರ್ಧರಿಸಿದರು. ಕೌರ್‌ ಸಾಮ್ರಾ ಎಂಬ ರೈತ ಕುಟುಂಬಕ್ಕೆ ಸೇರಿದವರು.ಸ್ಟೆತಸ್ಕೋಪ್‌‌ ಬಿಟ್ಟು ಬಂದೂಕು ಹಿಡಿದ ರೈತನ ಮಗಳು, ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಕೌರ್‌,ಪ್ರಸ್ತುತ ಅವರು ಗುರುನಾನಕ್ ದೇವ್ ವಿಶ್ವವಿದ್ಯಾಲಯದಿಂದ ದೈಹಿಕ ಶಿಕ್ಷಣ ಮತ್ತು ಕ್ರೀಡೆಯಲ್ಲಿ ಪದವಿ ಪಡೆಯುತ್ತಿದ್ದಾರೆ. ಶೂಟಿಂಗ್‌ನಲ್ಲಿ ಗಮನಹರಿಸಲು MBBSನಿಂದ ಹೊರಬಿದ್ದಿದ್ದಾರೆ.ಕೌರ್‌ ಅವರ ಈ ಸಾಧನೆಗೆ ಇದೀಗ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದು, ಚಿನ್ನ ಗೆದ್ದ ಸಾಧನೆಗಾಗಿ ಕೌರ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಸಚಿನ್ ತೆಂಡೂಲ್ಕರ್‌ ಸೇರಿದಂತೆ ಗಣ್ಯರು ಶುಭಕೋರುತ್ತಿದ್ದಾರೆ.

Continue Reading

ಕ್ರೀಡೆ

ಗ್ಯಾಸ್‌ಗಾಗಿ ಜನ ಸಾಲು, ಟಿಕೆಟ್‌ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!

Published

on

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆ, ಜನಪ್ರತಿನಿಧಿಗಳ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಆಟೋ ಚಾಲಕರು ಗ್ಯಾಸ್‌ಗಾಗಿ ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವಾಗ, ಇನ್ನೊಂದು ಕಡೆ ಶಾಸಕರು IPL 2026 ಟಿಕೆಟ್ ಪಡೆಯಲು ತಮ್ಮ ಪಿಎಗಳನ್ನು ಕ್ಯೂನಲ್ಲಿ ನಿಲ್ಲಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮಾಹಿತಿಯ ಪ್ರಕಾರ, ಸರ್ಕಾರ ಮತ್ತು Karnataka State Cricket Association (KSCA) ನಡುವೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಒಪ್ಪಂದವಾಗಿದೆ. ಇದರ ಹಿನ್ನೆಲೆಯಲ್ಲಿ, Royal Challengers Bengaluru ಮತ್ತು Chennai Super Kings ನಡುವಿನ ಪಂದ್ಯಕ್ಕೆ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಗಮನ ಸೆಳೆದಿವೆ.

ಸ್ಪೀಕರ್ ಕಚೇರಿಯಲ್ಲೇ ಟಿಕೆಟ್ ವಿತರಣೆ ನಡೆಯುತ್ತಿರುವುದರಿಂದ, ಶಾಸಕರ ಸೂಚನೆ ಮೇರೆಗೆ ಪಿಎಗಳು ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.

ಇದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಗ್ಯಾಸ್ ಕೊರತೆ, ದೈನಂದಿನ ಸಮಸ್ಯೆಗಳ ನಡುವೆ ಈ ರೀತಿಯ ಘಟನೆಗಳು ಸಾರ್ವಜನಿಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿವೆ.

ರಾಜಕೀಯ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Continue Reading

ಅಪರಾಧ

ಐಪಿಎಲ್ ಟಿಕೆಟ್ ಕ್ರೇಜ್ ನಡುವೆ ದೊಡ್ಡ ಮೋಸ: ಟೆಕ್ಕಿಗೆ ₹1.46 ಲಕ್ಷ ನಷ್ಟ!

Published

on

ಬೆಂಗಳೂರು, ಏಪ್ರಿಲ್ 04: ನಗರದಲ್ಲಿ IPL 2026 ಟಿಕೆಟ್ ಕ್ರೇಜ್ ಜೋರಾಗಿರುವ ನಡುವೆ ಆನ್‌ಲೈನ್ ಮೋಸದ ಪ್ರಕರಣವೂ ಬೆಳಕಿಗೆ ಬಂದಿದೆ. ಅನಧಿಕೃತ ಪ್ಲಾಟ್‌ಫಾರ್ಮ್ ಮೂಲಕ ಟಿಕೆಟ್ ಖರೀದಿಸಲು ಯತ್ನಿಸಿದ ಟೆಕ್ಕಿ ಒಬ್ಬರು ₹1.46 ಲಕ್ಷ ಕಳೆದುಕೊಂಡಿರುವ ಘಟನೆ ಕ್ರಿಕೆಟ್ ಅಭಿಮಾನಿಗಳಿಗೆ ಎಚ್ಚರಿಕೆಯ ಗಂಟೆಯಾಗಿದೆ.

Bengaluruನ ಬಿ. ನಾರಾಯಣಪುರ ನಿವಾಸಿಯಾದ 25 ವರ್ಷದ ಟೆಕ್ಕಿ, Instagramನಲ್ಲಿ ಪರಿಚಯವಾದ ವ್ಯಕ್ತಿಯಿಂದ ಮೋಸಕ್ಕೆ ಒಳಗಾಗಿದ್ದಾರೆ. ಆತ ತನ್ನನ್ನು M. Chinnaswamy Stadium ಟಿಕೆಟ್ ಕೌಂಟರ್ ಹಿರಿಯ ಮೇಲ್ವಿಚಾರಕ ಸುಮಿತ್ ಬಿಸ್ವಾಲ್ ಎಂದು ಪರಿಚಯಿಸಿಕೊಂಡು ನಂಬಿಕೆ ಮೂಡಿಸಿದ್ದಾನೆ.

ಮೊದಲಿಗೆ ಎರಡು ಟಿಕೆಟ್‌ಗಳಿಗೆ ₹3,700 ಕೇಳಿದ ಆರೋಪಿಯು, ಬಳಿಕ ಭದ್ರತಾ ಠೇವಣಿ, ಐಡಿ ಕಾರ್ಡ್ ಮತ್ತು ಫುಡ್ ಕೂಪನ್ ಹೆಸರಿನಲ್ಲಿ ಹಂತ ಹಂತವಾಗಿ ಹಣ ಪಡೆದುಕೊಂಡಿದ್ದಾನೆ. ಪಂದ್ಯದ ದಿನ ಗೇಟ್ ನಂ.10 ಬಳಿ ಬರಲು ಹೇಳಿ ನಕಲಿ ಇಮೇಲ್ ದೃಢೀಕರಣವನ್ನೂ ಕಳುಹಿಸಿದ್ದಾನೆ.

ಆತನ ಮಾತು ನಂಬಿದ ಟೆಕ್ಕಿ, ತನ್ನ ಹಾಗೂ ತಾಯಿಯ ಖಾತೆಯಿಂದ ಯುಪಿಐ ಮೂಲಕ ಒಟ್ಟು ₹1.46 ಲಕ್ಷ ವರ್ಗಾವಣೆ ಮಾಡಿದ್ದಾರೆ. ಆದರೆ ಹಣ ಪಡೆದ ಬಳಿಕ ಆರೋಪಿಯು ಟಿಕೆಟ್ ನೀಡದೆ ಸಂಪರ್ಕ ಕಡಿತಗೊಳಿಸಿದ್ದಾನೆ.

ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದು, ಐಪಿಎಲ್ ಟಿಕೆಟ್ ಖರೀದಿಸುವಾಗ ಅಧಿಕೃತ ವೆಬ್‌ಸೈಟ್ ಅಥವಾ ಮಾನ್ಯ ಮಾರಾಟಗಾರರ ಮೂಲಕವೇ ಖರೀದಿಸಲು ಸಲಹೆ ನೀಡಿದ್ದಾರೆ. ಅನಧಿಕೃತ ಲಿಂಕ್‌ಗಳು ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವ್ಯವಹಾರ ಮಾಡುವುದರಿಂದ ಇಂತಹ ಮೋಸಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.

Continue Reading

ಕ್ರೀಡೆ

“ಆ ಮಾತುಗಳು ನನ್ನದಲ್ಲ”: ಯುವಿ ಸ್ಪಷ್ಟನೆ, ಧೋನಿ-ಕಪಿಲ್‌ಗೆ ಕ್ಷಮೆ

Published

on

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ Yuvraj Singh ಅವರು ವಿಶ್ವಕಪ್ ವಿಜೇತ ನಾಯಕರುಗಳಾದ Mahendra Singh Dhoni ಮತ್ತು Kapil Dev ಅವರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.

ಇತ್ತೀಚಿನ ಪಾಡ್‌ಕಾಸ್ಟ್‌ನಲ್ಲಿ ಮಾತನಾಡಿದ ಯುವರಾಜ್, ತಮ್ಮ ತಂದೆ Yograj Singh ನೀಡಿದ್ದ ವಿವಾದಾತ್ಮಕ ಹೇಳಿಕೆಗಳಿಗೆ ಸಂಬಂಧಿಸಿದಂತೆ ಈ ಕ್ಷಮೆಯಾಚನೆ ಮಾಡಿದ್ದಾರೆ. “ನನ್ನ ತಂದೆಯ ಮಾತುಗಳಿಗಾಗಿ ನಾನು ಹೃತ್ಪೂರ್ವಕವಾಗಿ ಕ್ಷಮೆ ಕೇಳುತ್ತೇನೆ. ಆ ಮಾತುಗಳು ನನ್ನವು ಅಲ್ಲ ಎಂಬುದು ನಿಮಗೆ ತಿಳಿದಿದೆ. ನೀವು ಇಬ್ಬರೂ ಭಾರತಕ್ಕೆ ನೀಡಿದ ಕೊಡುಗೆ ಅಪಾರ” ಎಂದು ಯುವರಾಜ್ ಹೇಳಿದ್ದಾರೆ.

ಈ ಹಿಂದೆ ಯೋಗರಾಜ್ ಸಿಂಗ್ ಹಲವಾರು ಬಾರಿ ಧೋನಿ ಮತ್ತು ಕಪಿಲ್ ದೇವ್ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದರು. ವಿಶೇಷವಾಗಿ, ಯುವರಾಜ್ ಅವರ ವೃತ್ತಿಜೀವನದ ಸಂಕಷ್ಟದ ಸಂದರ್ಭದಲ್ಲಿ ಕೆಲವು ಆಟಗಾರರು ಬೆಂಬಲ ನೀಡಲಿಲ್ಲ ಎಂದು ಆರೋಪಿಸಿದ್ದರು. 2011ರ ವಿಶ್ವಕಪ್ ವೇಳೆ ತಂಡದ ಆಯ್ಕೆ ವಿಚಾರದಲ್ಲಿ ಧೋನಿ ವಿರುದ್ಧವೂ ಯೋಗರಾಜ್ ಟೀಕಿಸಿದ್ದರು.

ಇದೇ ವೇಳೆ, 1983ರ ವಿಶ್ವಕಪ್ ಸಮಯದಲ್ಲಿ ಕಪಿಲ್ ದೇವ್ ವಿರುದ್ಧವೂ ಗಂಭೀರ ಆರೋಪಗಳನ್ನು ಮಾಡಿದ್ದರಿಂದ ಈ ವಿಚಾರ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಈ ಎಲ್ಲಾ ಹೇಳಿಕೆಗಳಿಂದ ಕ್ರಿಕೆಟ್ ವಲಯದಲ್ಲಿ ವಿವಾದ ಉಂಟಾಗಿತ್ತು.

ಈಗ ಯುವರಾಜ್ ಸಿಂಗ್ ಸ್ವತಃ ಮುಂದಾಗಿ ಕ್ಷಮೆ ಕೇಳಿರುವುದು ವಿವಾದಕ್ಕೆ ತೆರೆ ಬೀಳುವ ಸೂಚನೆ ನೀಡಿದೆ. ಕ್ರೀಡಾ ವಲಯದಲ್ಲಿ ಪರಸ್ಪರ ಗೌರವ ಮುಖ್ಯ ಎಂಬ ಸಂದೇಶವನ್ನು ಅವರು ಈ ಮೂಲಕ ನೀಡಿದ್ದಾರೆ ಎಂದು ಅಭಿಪ್ರಾಯ ವ್ಯಕ್ತವಾಗುತ್ತಿದೆ.

Continue Reading

Trending