ದೇಶ
“RSS ರಾಷ್ಟ್ರದ್ರೋಹಿ ಸಂಘಟನೆ”: ಪ್ರಿಯಾಂಕ್ ಖರ್ಗೆಯ ಪುರಾವೆ ಸಮೇತ ಟ್ವೀಟ್ ವೈರಲ್
ಬೆಂಗಳೂರು: ನಮ್ಮ ರಾಷ್ಟ್ರಧ್ವಜಕ್ಕೆ ಆರ್‌ಎಸ್‌ಎಸ್ ಅಗೌರವ ತೋರಿಸಿ 100 ವರ್ಷಗಳಾಗಿವೆ, ಸ್ವಾತಂತ್ರ್ಯ ಚಳವಳಿಗೆ ದ್ರೋಹ ಬಗೆದು 100 ವರ್ಷಗಳಾಗಿವೆ, ಭಾರತದ ಸಂವಿಧಾನವನ್ನು ವಿರೋಧಿಸಿ 100 ವರ್ಷಗಳು, ರಾಷ್ಟ್ರ ವಿರೋಧಿಯಾಗಿ 100 ವರ್ಷಗಳಾಗಿವೆ ಎಂದು ರಾಜ್ಯದ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.
ಸೋಮವಾರ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆ, ಭಾರತ ಸರ್ಕಾರದ ಗೃಹ ಸಚಿವಾಲಯವು ಪಂಜಾಬ್ ಮುಖ್ಯ ಕಾರ್ಯದರ್ಶಿಗೆ 1948ರ ಫೆಬ್ರವರಿ 24ರಂದು ಬರೆದ ಪತ್ರವನ್ನು ಹಂಚಿಕೊಂಡಿದ್ದಾರೆ. ಆ ಪತ್ರದಲ್ಲಿ ಆರ್‌ಎಸ್‌ಎಸ್ ರಾಷ್ಟ್ರಧ್ವಜಕ್ಕೆ ಹೇಗೆ ಅವಮಾನ ಮಾಡಿತು ಎಂಬುದನ್ನು ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

“ಇತಿಹಾಸವು ಆರ್‌ಎಸ್‌ಎಸ್ ದ್ರೋಹದ ಸಾಕ್ಷ್ಯಗಳಿಂದ ತುಂಬಿದೆ. ಬಿಜೆಪಿ ಎಷ್ಟೇ ಪ್ರಯತ್ನಿಸಿದರೂ ಆರ್‌ಎಸ್‌ಎಸ್ ಸಂವಿಧಾನ ವಿರೋಧಿ ಎನ್ನುವ ಇತಿಹಾಸವನ್ನು ಅಳಿಸಲು ಸಾಧ್ಯವಿಲ್ಲ” ಎಂದು ಖರ್ಗೆ ಟೀಕಿಸಿದರು.
ಆರ್‌ಎಸ್‌ಎಸ್ ನ ನೈಜ ಇತಿಹಾಸವನ್ನು ಬಿಜೆಪಿ ನಾಯಕರು ಮತ್ತು ಸ್ವಯಂಸೇವಕರು ತಿಳಿದುಕೊಳ್ಳುವ ಸಮಯ ಬಂದಿದೆ ಎಂದು ಖರ್ಗೆ ಹೇಳಿದ್ದಾರೆ.
ಇದೇ ವೇಳೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ನಮಾಜ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ರಾಜ್ಯ ಸರ್ಕಾರ ಕಾನೂನು ತರಲು ಯತ್ನಿಸಿದಾಗ ಅದಕ್ಕೆ ಸ್ಟೇ ತಂದವರು ಯಾರು?” ಎಂದು ಪ್ರಶ್ನಿಸಿದರು.
“ಯಾವುದೇ ಧರ್ಮದ ಪ್ರಾರ್ಥನೆಗೆ ಪ್ರತ್ಯೇಕ ಕೊಠಡಿಗಳು ಇರುತ್ತವೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ರಾರ್ಥನೆ ಮಾಡಬಾರದು ಎಂದು ನಾವು ರೂಲ್ ತಂದೆವು. ಆದರೆ ಸ್ಟೇ ತಂದದ್ದು ಅವರು ತಾನೇ” ಎಂದು ಸಚಿವರು ಕಿಡಿಕಾರಿದರು.
ನಗರದ ರಸ್ತೆಗಳಲ್ಲಿನ ಪ್ರತಿಭಟನೆಯ ವಿರುದ್ಧವೂ ಖರ್ಗೆ ಮಾತನಾಡಿದರು. “ಬಿಜೆಪಿ ನಾಯಕರು ಫ್ರೀಡಂ ಪಾರ್ಕ್ ಹೊರಗೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುತ್ತಿದ್ದಾರೆ. ಕಾನೂನು ಎಲ್ಲರಿಗೂ ಒಂದೇ ಆಗಿರಬೇಕು,” ಎಂದು ಹೇಳಿದರು.
ಅಪರಾಧ
ಮನುಷ್ಯತ್ವ ಹೂತುಹೋದ ಎಪ್‌ಸ್ಟೀನ್ ದ್ವೀಪ: ಜಗತ್ತಿನ ಎಲೈಟ್‌ಗಳನ್ನು ನಡುಗಿಸುತ್ತಿರುವ ‘ಲೋಲಿಟಾ ಎಕ್ಸ್‌ಪ್ರೆಸ್’ ರಹಸ್ಯ
ನವದೆಹಲಿ/ವಾಷಿಂಗ್ಟನ್:
ಮನುಷ್ಯತ್ವವೇ ಮರಳಲ್ಲಿ ಹೂತುಹೋದ ದ್ವೀಪವೊಂದು ವರ್ಷಗಳ ಕಾಲ ಜಗತ್ತಿನ ಕಣ್ಣು ತಪ್ಪಿಸಿ ಅನಾಚಾರದ ಸ್ವರ್ಗವಾಗಿ ಬೆಳೆದಿತ್ತು. ‘ಲೋಲಿಟಾ ಎಕ್ಸ್‌ಪ್ರೆಸ್’ ಎಂಬ ಖಾಸಗಿ ಜೆಟ್ ವಿಮಾನ ದಿನವೂ ಲಿಟಲ್ ಸೇಂಟ್ ಜೇಮ್ಸ್ ದ್ವೀಪಕ್ಕೆ ಹಾರಾಟ ನಡೆಸುತ್ತಿತ್ತು. ಹದಿಹರೆಯದ ಹುಡುಗಿಯರನ್ನು ಲೈಂಗಿಕ ದೌರ್ಜನ್ಯಕ್ಕೆ ಬಲಿಕೊಡುತ್ತಿದ್ದ ಈ ದ್ವೀಪವನ್ನು ಇಂದು ಜಗತ್ತು ‘ಎಪ್‌ಸ್ಟೀನ್ ದ್ವೀಪ’ ಅಥವಾ ‘ಪೆಡೋಪೈಲ್ ಐಲ್ಯಾಂಡ್’ ಎಂದೇ ಕರೆಯುತ್ತಿದೆ.
1998ರಲ್ಲಿ ಅಮೆರಿಕದ ಶತಕೋಟ್ಯಧಿಪತಿ ಜೆಫ್ರಿ ಎಪ್‌ಸ್ಟೀನ್ 8 ಮಿಲಿಯನ್ ಡಾಲರ್ ನೀಡಿ ಖರೀದಿಸಿದ 71 ಎಕರೆ ವಿಸ್ತೀರ್ಣದ ಈ ದ್ವೀಪದಲ್ಲಿ ಐಷಾರಾಮಿ ರೆಸಾರ್ಟ್‌ಗಳು, ವಿಲ್ಲಾಗಳು, ಹೆಲಿಪ್ಯಾಡ್‌ಗಳು ನಿರ್ಮಾಣವಾಗಿದ್ದವು. ಹೊರಜಗತ್ತಿನಿಂದ ಸಂಪೂರ್ಣ ಕಡಿದುಹಾಕಲ್ಪಟ್ಟ ಈ ಪ್ರದೇಶದಲ್ಲಿ ನೂರಾರು ಅಪ್ರಾಪ್ತ ಬಾಲಕಿಯರನ್ನು ಬಂಧಿಸಿ, ಜಗತ್ತಿನ ಎಲೈಟ್‌ಗಳಿಗೆ ಪೂರೈಸಲಾಗುತ್ತಿತ್ತು ಎಂಬ ಆರೋಪಗಳು ತನಿಖೆಯಲ್ಲಿ ಬಹಿರಂಗವಾದವು.
2005ರಲ್ಲಿ ಫ್ಲೋರಿಡಾದ 14 ವರ್ಷದ ಬಾಲಕಿಯ ತಾಯಿಯೊಬ್ಬರು ನೀಡಿದ ದೂರು ಈ ಮಹಾ ಲೈಂಗಿಕ ಹಗರಣದ ಮೊದಲ ಕಿಡಿಯಾಗಿತ್ತು. ಬಳಿಕ 50ಕ್ಕೂ ಹೆಚ್ಚು ಅಪ್ರಾಪ್ತೆಯರು ದೂರು ದಾಖಲಿಸಿದರು. 2008ರಲ್ಲಿ ಎಪ್‌ಸ್ಟೀನ್ ತಪ್ಪಿತಸ್ಥನಾಗಿದ್ದರೂ, ಕೇವಲ 13 ತಿಂಗಳ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದನು. 2019ರಲ್ಲಿ ಪುನಃ ಮಕ್ಕಳ ಕಳ್ಳಸಾಗಣೆ ಆರೋಪದ ಮೇಲೆ ಬಂಧನಕ್ಕೊಳಗಾದ ಎಪ್‌ಸ್ಟೀನ್, ವಿಚಾರಣೆಗೆ ಮುನ್ನವೇ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಮೆರಿಕ ಸರ್ಕಾರ ಘೋಷಿಸಿತು. ಆದರೆ, ಈ ಸಾವಿನ ಸುತ್ತ ಇನ್ನೂ ಹಲವು ಅನುಮಾನಗಳಿವೆ.
ಜನವರಿ 30ರಂದು ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಸುಮಾರು 30 ಲಕ್ಷ ಪುಟಗಳ ದಾಖಲೆಗಳು ಜಗತ್ತನ್ನೇ ಬೆಚ್ಚಿಬೀಳುವಂತೆ ಮಾಡಿವೆ. ರಾಜಕೀಯ ನಾಯಕರು, ಬಿಲಿಯನೇರ್‌ಗಳು, ರಾಜಮನೆತನದವರು, ವಿಜ್ಞಾನಿಗಳು, ಉದ್ಯಮಿಗಳೆಂದರೆ ಯಾರೂ ಹೊರತಲ್ಲ. 80ಕ್ಕೂ ಹೆಚ್ಚು ಪ್ರಭಾವಿ ವ್ಯಕ್ತಿಗಳು ತನಿಖೆಗೆ ಒಳಗಾಗಿದ್ದು, ಯುರೋಪ್‌ನ ಹಲವೆಡೆ ರಾಜೀನಾಮೆ ಅಲೆ ಎದ್ದಿದೆ.
ಆದರೆ, ಎಪ್‌ಸ್ಟೀನ್ ಫೈಲ್‌ನಲ್ಲಿ ಹೆಸರು ಕಾಣಿಸಿಕೊಂಡ ಮಾತ್ರಕ್ಕೆ ಅಪರಾಧ ಸಾಬೀತಾಗುವುದಿಲ್ಲ ಎಂದು ಅಮೆರಿಕದ ನ್ಯಾಯಾಲಯ ಸ್ಪಷ್ಟಪಡಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಫೋಟೊ, ವಿಡಿಯೋ ಅಥವಾ ಹಣಕಾಸು ದಾಖಲೆಗಳಿದ್ದಾಗ ಮಾತ್ರ ಕಾನೂನು ಕ್ರಮ ಸಾಧ್ಯವೆಂದು ಹೇಳಿದೆ.
ಈ ಎಲ್ಲದ ನಡುವೆ, ಈ ಮಹಾ ಹಗರಣದ ನಿಜವಾದ ಬಲಿಪಶುಗಳು ನೂರಾರು ಅಪ್ರಾಪ್ತ ಬಾಲಕಿಯರು ಎಂಬ ಸತ್ಯ ಮಾತ್ರ ಬದಲಾಗಿಲ್ಲ. ಅಧಿಕಾರ, ಹಣ ಮತ್ತು ಪ್ರಭಾವದ ಅಡ್ಡೆಗೋಡೆಯ ಹಿಂದೆ ನಡೆದ ಈ ಅಮಾನುಷ ಕೃತ್ಯಗಳು ಇಂದು ಜಗತ್ತಿನ ಅಂತರಾತ್ಮವನ್ನೇ ಪ್ರಶ್ನಿಸುತ್ತಿವೆ.
ದೇಶ
ನಟ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಗೆ ಮತ್ತೊಂದು ಸಂಕಷ್ಟ: ಕ್ರೈಸ್ತ ಧರ್ಮಕ್ಕೆ ಅಪಮಾನ ಆರೋಪ, ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು
ಬೆಂಗಳೂರು: ನಟ ಯಶ್ (Yash) ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ (Toxic Cinema) ಚಿತ್ರಕ್ಕೆ ಒಂದರ ಮೇಲೊಂದು ವಿವಾದಗಳು ಎದುರಾಗುತ್ತಿವೆ. ಕೆಲ ದಿನಗಳ ಹಿಂದೆ ಟೀಸರ್‌ನಲ್ಲಿನ ಅಶ್ಲೀಲ ದೃಶ್ಯಗಳನ್ನು ಖಂಡಿಸಿ ಮಹಿಳಾ ಒಕ್ಕೂಟಗಳು ಆಕ್ರೋಶ ವ್ಯಕ್ತಪಡಿಸಿದ್ದರೆ, ಇದೀಗ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ಚಿತ್ರತಂಡದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.
ಟಾಕ್ಸಿಕ್ ಸಿನಿಮಾದ ಕೆಲವು ದೃಶ್ಯಗಳಲ್ಲಿ ಕ್ರೈಸ್ತ ಧರ್ಮಕ್ಕೆ ಅಪಮಾನ ಮಾಡಲಾಗಿದೆ ಹಾಗೂ ಕ್ರೈಸ್ತ ಸಮುದಾಯಕ್ಕೆ ಮುಜುಗರ ಉಂಟುಮಾಡಲಾಗಿದೆ ಎಂದು ಆರೋಪಿಸಿ ನ್ಯಾಷನಲ್ ಕ್ರಿಶ್ಚಿಯನ್ ಫೆಡರೇಷನ್ (National Christian Federation) ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹಸಚಿವರು ಹಾಗೂ ಸೆನ್ಸಾರ್ ಬೋರ್ಡ್‌ಗೆ ದೂರು ಸಲ್ಲಿಸಿದೆ. ಕ್ರೈಸ್ತರ ದೇವದೂತ ಸಂತ ಮಿಕಯೇಲ್ ಅವರಿಗೆ ಸಂಬಂಧಿಸಿದ ದೃಶ್ಯಗಳಲ್ಲಿ ಅವಮಾನಕಾರಿ ಹಾಗೂ ಅಶ್ಲೀಲ ಚಿತ್ರೀಕರಣ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್, ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಆ ದೃಶ್ಯಗಳನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಸಿನಿಮಾದಲ್ಲಿಯೂ ಸಂತ ಮಿಕಯೇಲ್ ಮುಂದೆ ಚಿತ್ರೀಕರಿಸಿರುವ ದೃಶ್ಯಗಳನ್ನು ತೆಗೆದುಹಾಕಿ, ಕ್ರೈಸ್ತ ಸಮುದಾಯದ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಇದಕ್ಕೂ ಮುನ್ನ ಟಾಕ್ಸಿಕ್ ಟೀಸರ್‌ನಲ್ಲಿನ ಕೆಲವು ದೃಶ್ಯಗಳು ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುತ್ತಿವೆ ಎಂದು ಆರೋಪಿಸಿ ಮಹಿಳಾ ಒಕ್ಕೂಟಗಳು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದವು. ಟೀಸರ್‌ನ ವಿವಾದಾತ್ಮಕ ದೃಶ್ಯಗಳನ್ನು ತೆಗೆದುಹಾಕುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಗೆ ಮನವಿ ಮಾಡಲಾಗಿತ್ತು.
ಒಟ್ಟಾರೆ, ಬಿಡುಗಡೆಗೂ ಮುನ್ನವೇ ‘ಟಾಕ್ಸಿಕ್’ ಸಿನಿಮಾ ಭಾರೀ ವಿವಾದದ ಕೇಂದ್ರಬಿಂದುವಾಗಿದ್ದು, ಮುಂದಿನ ದಿನಗಳಲ್ಲಿ ಈ ವಿವಾದ ಯಾವ ತಿರುವು ಪಡೆಯಲಿದೆ ಎಂಬುದರ ಮೇಲೆ ಚಿತ್ರತಂಡದ ನಡೆ ಮಹತ್ವ ಪಡೆದುಕೊಂಡಿದೆ.
ದೇಶ
ಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
ಬೆಂಗಳೂರು, ಫೆ.10: ಶೋಷಿತರು, ಹಿಂದುಳಿದ ವರ್ಗಗಳು, ದಲಿತರು ಹಾಗೂ ಅಹಿಂದ ಸಮುದಾಯದ ಹಕ್ಕುಗಳಿಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ರಾಷ್ಟ್ರೀಯ ಅಹಿಂದ ಸಂಘಟನೆ ಸರ್ಕಾರವನ್ನು ಒತ್ತಾಯಿಸಿದೆ. ರಾಷ್ಟ್ರೀಯ ಅಹಿಂದ ಸಂಘಟನೆಯ ಅಧ್ಯಕ್ಷ ಮುತ್ತಣ್ಣ ಶಿವಳ್ಳಿ ಹಾಗೂ ಕರ್ನಾಟಕ ರಾಜ್ಯ ಒಬಿಸಿ ಘಟಕದ ಅಧ್ಯಕ್ಷ ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ಈ ಬೇಡಿಕೆ ಮುಂದಿಡಲಾಗಿದೆ.
ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯಕರು, ಬಿ.ಕೆ. ಹರಿಪ್ರಸಾದ್ ಅವರು ಕೇವಲ ರಾಜಕೀಯ ನಾಯಕನಲ್ಲ, ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದಾರೆ ಎಂದು ಬಣ್ಣಿಸಿದರು. ಜಾತಿ ಗಣತಿಯಂತಹ ಸಂವೇದನಾಶೀಲ ಹಾಗೂ ಐತಿಹಾಸಿಕ ಮಹತ್ವದ ವಿಷಯದಲ್ಲಿ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಶೋಷಿತ ಸಮುದಾಯಗಳ ಪರವಾಗಿ ಅವರು ದಿಟ್ಟ ನಿಲುವು ತಳೆದಿದ್ದಾರೆ ಎಂದು ಹೇಳಿದರು. ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನದ ಮೌಲ್ಯಗಳನ್ನು ರಾಜಕೀಯದ ಕೇಂದ್ರಬಿಂದುವಾಗಿಸಿಕೊಂಡು ನಡೆಸಿರುವ ಅವರ ಹೋರಾಟ ಅಹಿಂದ ಚಳವಳಿಗೆ ಹೊಸ ಬಲ ನೀಡಿದೆ ಎಂದು ಅಭಿಪ್ರಾಯಪಟ್ಟರು.
ಹಿಂದುಳಿದ ವರ್ಗದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರ ಆಡಳಿತಕ್ಕೆ ರಾಜಕೀಯ ಹಾಗೂ ನೈತಿಕವಾಗಿ ಬಲ ತುಂಬಿದ ನಾಯಕರಲ್ಲಿ ಬಿ.ಕೆ. ಹರಿಪ್ರಸಾದ್ ಪ್ರಮುಖರು ಎಂದು ಹೇಳಿದರು. ಪಕ್ಷದ ಒಳಗೂ ಹೊರಗೂ ಅಹಿಂದ ಧ್ವನಿಯನ್ನು ಸ್ಪಷ್ಟವಾಗಿ ಪ್ರತಿನಿಧಿಸಿರುವ ಇಂತಹ ನಾಯಕನನ್ನು ಸಂಪುಟಕ್ಕೆ ಸೇರಿಸುವುದರಿಂದ ಸರ್ಕಾರದ ವಿಶ್ವಾಸಾರ್ಹತೆ ಇನ್ನಷ್ಟು ಹೆಚ್ಚಲಿದೆ ಎಂದರು.
ಬಿ.ಕೆ. ಹರಿಪ್ರಸಾದ್ ಅವರು ಸಂಪುಟ ಸೇರಿದ್ದಲ್ಲಿ ಅಹಿಂದ ಸಂಘಟನೆಗಳಿಗೆ ಹೊಸ ಶಕ್ತಿ ಸಿಗಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆಗಳು, ಚರ್ಚೆಗಳು ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನಾಯಕರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಬಿ. ಶಿವಣ್ಣ ಸೇರಿದಂತೆ ಅಹಿಂದ ಕಾರ್ಯಕರ್ತರು ಮತ್ತು ಬಿ.ಕೆ. ಹರಿಪ್ರಸಾದ್ ಬೆಂಬಲಿಗರು ಉಪಸ್ಥಿತರಿದ್ದರು.
-
ದೇಶ23 hours agoBENGALURU : BCCI Centre of Excellence ಬೆಂಗಳೂರಿನಲ್ಲಿ 10 ಹುದ್ದೆಗಳ ನೇಮಕಾತಿ
-
ಅಪರಾಧ22 hours agoಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಶಿಗೆ ನ್ಯಾಯಾಲಯ ನೋಟಿಸ್
-
ಕ್ರೀಡೆ22 hours ago“ಈ ನಾಟಕ ಮೊದಲೇ ಗೊತ್ತಿತ್ತು” – ರಿಕಿ ಪಾಂಟಿಂಗ್
-
ಅಪರಾಧ23 hours agoಮದುವೆ ವೇದಿಕೆಯಲ್ಲಿ ಗನ್ ಹಿಡಿದು ಕಾಂಗ್ರೆಸ್ ನಾಯಕ ಡ್ಯಾನ್ಸ್
-
Blog22 hours agoBIG NEWS : ಹೈಕಮಾಂಡ್ ಹೇಳಿದಂತೆ ನಡೆಯುತ್ತೇನೆ: ಸಿಎಂ ಸಿದ್ದರಾಮಯ್ಯ
-
ಚುನಾವಣೆ5 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ಅಪರಾಧ22 hours agoಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡ್ರೋನ್ ಹಾರಿಸಿದ ಯೂಟ್ಯೂಬರ್ ವಿರುದ್ಧ FIR
-
ದೇಶ5 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
