Connect with us

ರಾಜಕೀಯ

ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ದಿ ಬಂದಂತೆ ಕಾಣುತ್ತಿದೆ – ಈಶ್ವರಪ್ಪ ಟೀಕೆ

Published

on

ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ದಿ ಬಂದಂತೆ ಕಾಣುತ್ತಿದೆ – ಈಶ್ವರಪ್ಪ ಟೀಕೆ

ಶಿವಮೊಗ್ಗ : ಕಾವೇರಿ ವಿವಾದದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕು ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ, ಚೆನ್ನಾಗಿ ಒದೆ ತಿಂದ ಕಳ್ಳನಿಗೆ ಕೊನೆಗೆ ಬುದ್ದಿ ಬಂದಂತೆ ಕಾಣುತ್ತಿದ ಎಂದು ಟೀಕಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿದ್ದಕ್ಕೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಕಾವೇರಿ ನೀರು ಕಳ್ಳತನದಿಂದ ಬಿಡದೇ ಇದ್ದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಕಿಡಿಕಾರಿದ್ದಾರೆ.ಕಳ್ಳತನದಿಂದ ನೀರು ಬಿಟ್ಟಿದ್ದಕ್ಕೆ ಕಳ್ಳ ಎಂದರೆ ತಪ್ಪು ಇವರಿಗೆ.ಈಗ ದಡ್ಡರು ಎನ್ನಬೇಕಾಗಿದೆ. ಎಲ್ಲರ ಜೊತೆ ಮಾತುಕತೆ ನಡೆಸಿದ್ದರೆ ರಾಜ್ಯದ ಜನರು ಅವರ ಜೊತೆಗಿರುತ್ತಿದ್ದರು ಎಂದು ನುಡಿದ ಈಶ್ವರಪ್ಪ, ಸ್ಟಾಲಿನ್ ಎಂಬ ಪುಣ್ಯಾತ್ಮನಿಗೆ ಒಪ್ಪಿಸಲು, ಇಂಡಿಯಾ ಸಂಸ್ಥೆ ಓಲೈಸಲು ಡಿ.ಕೆ. ಶಿವಕುಮಾರ್ ನೀರು ಬಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.ಸಿದ್ಧರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರಾಜ್ಯದ ಜನರಿಗೆ ದ್ರೋಹ ಮಾಡಿದ್ದಾರೆ ಎಂದು ನುಡಿದ ಈಶ್ವರಪ್ಪ, ಈಗ ವಕೀಲರು, ತಜ್ಞರು ಹಾಗೂ ಹಲವರನ್ನು ಕರೆದು ಮಾತುಕತೆ ನಡೆಸಿದ್ದಾರೆ. ಇದಕ್ಕಿಂತ ಅನ್ಯಾಯ ಮತ್ತೇನಿದೆ ಎಂದು ಪ್ರಶ್ನಿಸಿದರು.ರೈತರು, ವಕೀಲರು ಹಾಗೂ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹಿಂದೆ ಮುಖ್ಯಮಂತ್ರಿಗಳು ನೀರು ಬಿಟ್ಟಿದ್ದ ಉದಾಹರಣೆ ಇದೆ. ಇವರಿಬ್ಬರು ರಾಜ್ಯದ ಜನರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ ಈಶ್ವರಪ್ಪ,ನೀರೆಲ್ಲಾ ಬಿಟ್ಟಾದ ಮೇಲೆ ಈಗ ಸಭೆ ನಡೆಸಿ ಉಪಯೋಗವೇನು ಎಂದು ಪ್ರಶ್ನಿಸಿದ್ದು, ಎಲ್ಲವೂ ಸಂವಿಧಾನಬದ್ಧವಾಗಿ ಆಗಬೇಕು. ಸದ್ಯದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಚರ್ಚೆ ನಡೆಸದೇ ನೀರು ಬಿಟ್ಟಿದ್ದೆ ತಪ್ಪು. ಎಲ್ಲ ಪಕ್ಷದವರ ಜೊತೆ ಚರ್ಚಿಸಿ ನೀರು ಬಿಡಬೇಕಿತ್ತು ಎಂದರು.ಎಲ್ಲದಕ್ಕೂ ಪ್ರಧಾನಿ ಮಧ್ಯಸ್ಥಿಕೆ ವಹಿಸಬೇಕೆಂಬುದು ಕೂಡ ತಪ್ಪು. ಬರ ಕೂಡ ಇದ್ದು, ರಾಜ್ಯಕ್ಕೆ ಎಷ್ಟು ನೀರು ಬೇಕು ಎಂದು ಸರ್ವೆ ಮಾಡಿಲ್ಲ. ಇದು ನೂರಾರು ವರ್ಷಗಳ ಸಮಸ್ಯೆ ಎಂದು ನುಡಿದ ಈಶ್ವರಪ್ಪ, ಚಲನಚಿತ್ರ ನಟರು ಬರಲಿಲ್ಲ ಎಂದು ಈಗ ಬೊಬ್ಬೆ ಹೊಡೆಯುತ್ತಿದ್ದರು. ಈಗ ಇವರು 3 ಜನ ಉಪಮುಖ್ಯಮಂತ್ರಿಗಳ ಬಡಿದಾಟ ಮಾಡಿಕೊಂಡು ಕೂತಿದ್ದಾರೆ. ಈಗಲಾದರೂ ತಜ್ಞರು, ಸರ್ವಪಕ್ಷಗಳನ್ನು, ವಕೀಲರನ್ನು ಕರೆಸಿ ತೀರ್ಮಾನಿಸಲಿ ಎಂದರು.

ದೇಶ

ಬಿಜೆಪಿ ಹೈಕಮಾಂಡ್‌ನ ದೊಡ್ಡ ಪ್ಲಾನ್! ಕರ್ನಾಟಕದಲ್ಲಿ ಹೊಸ ನಾಯಕತ್ವಕ್ಕೆ ವೇದಿಕೆ?

Published

on

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಇದೀಗ ಕರ್ನಾಟಕ ಬಿಜೆಪಿಯಲ್ಲಿ ಹೊಸ ಚರ್ಚೆಗೆ ಕಾರಣವಾಗಿವೆ. ಪ್ರಧಾನಿ Narendra Modi ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಜೂನ್ ಮಧ್ಯಭಾಗದಲ್ಲಿ ಮಹತ್ವದ ಪುನಾರಚನೆ ನಡೆಯುವ ಸಾಧ್ಯತೆಗಳಿದ್ದು, ಇದರ ಪರಿಣಾಮ ರಾಜ್ಯ ಬಿಜೆಪಿ ಸಂಘಟನೆಯ ಮೇಲೂ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ.

ಮುಂಬರುವ ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಬಿಜೆಪಿ ಹೈಕಮಾಂಡ್ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಒಬ್ಬ ಪ್ರಮುಖ ಕೇಂದ್ರ ಸಚಿವರನ್ನು ಮಂತ್ರಿಮಂಡಲದಿಂದ ಬಿಡುಗಡೆಗೊಳಿಸಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ನೇಮಿಸುವ ಸಾಧ್ಯತೆಗಳ ಕುರಿತು ಪಕ್ಷದ ವಲಯದಲ್ಲಿ ಚರ್ಚೆಗಳು ಜೋರಾಗಿವೆ.

ಬಹುಕಾಲದಿಂದ ಖಾಲಿ ಇರುವ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಭರ್ತಿಗೆ ಇದೀಗ ವೇದಿಕೆ ಸಿದ್ಧವಾಗುತ್ತಿರುವಂತೆ ಕಾಣುತ್ತಿದ್ದು, ಕೇಂದ್ರ ಸಚಿವರಾದ Pralhad Joshi ಹಾಗೂ V. Somanna ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಇಬ್ಬರೂ ನಾಯಕರು ರಾಜ್ಯ ರಾಜಕೀಯದಲ್ಲಿ ಪ್ರಭಾವಿ ಸ್ಥಾನ ಹೊಂದಿದ್ದು, ಸಂಘಟನೆ ಮತ್ತು ಆಡಳಿತ ಎರಡರಲ್ಲೂ ಅನುಭವ ಹೊಂದಿದ್ದಾರೆ.

ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ನಾಯಕರು ಕರ್ನಾಟಕಕ್ಕೆ ಭೇಟಿ ನೀಡಿದ ಬಳಿಕ ರಾಜ್ಯ ಘಟಕದ ಪುನರ್‌ಸಂಘಟನೆ ಕುರಿತ ಚರ್ಚೆಗಳು ಮತ್ತಷ್ಟು ವೇಗ ಪಡೆದುಕೊಂಡಿವೆ. ಹೀಗಾಗಿ ಕೇಂದ್ರ ಸಂಪುಟ ಪುನಾರಚನೆ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆ ಒಂದಕ್ಕೊಂದು ಸಂಬಂಧ ಹೊಂದಿದೆಯೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ.

ಆದರೆ ಈ ಕುರಿತು ಬಿಜೆಪಿ ಹೈಕಮಾಂಡ್ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ. ಕೇಂದ್ರ ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಉಳಿಯಲಿದೆ, ಯಾರಿಗೆ ಹೊಸ ಸಂಘಟನಾ ಜವಾಬ್ದಾರಿ ಸಿಗಲಿದೆ ಎಂಬುದು ಮುಂದಿನ ಕೆಲ ದಿನಗಳಲ್ಲಿ ಸ್ಪಷ್ಟವಾಗುವ ಸಾಧ್ಯತೆಯಿದೆ.

Continue Reading

ದೇಶ

ಅಮಾನತು ಬಳಿಕ ಜಮೀರ್ ಸರದಿ? ಕಾಂಗ್ರೆಸ್‌ನಲ್ಲಿ ಶಿಸ್ತು ಕ್ರಮದ ಚರ್ಚೆ

Published

on

ಧಾರವಾಡ: ಕರ್ನಾಟಕ ರಾಜಕೀಯದಲ್ಲಿ ಹೊಸ ವಿವಾದವೊಂದು ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ವಸತಿ ಸಚಿವ B. Z. Zameer Ahmed Khan ಅವರಿಗೆ ಸಂಬಂಧಿಸಿದೆ ಎನ್ನಲಾದ ಆಡಿಯೋ ಲೀಕ್ ಪ್ರಕರಣ ಇದೀಗ ಕಾಂಗ್ರೆಸ್ ಹೈಕಮಾಂಡ್ ಮಟ್ಟಕ್ಕೆ ತಲುಪಿದ್ದು, ಪಕ್ಷದ ಆಂತರಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಯ ವೇಳೆ ಅಧಿಕೃತ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಒಳಸಂಚು ನಡೆಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ. ಅಲ್ಲದೆ, ಎಸ್‌ಡಿಪಿಐಗೆ ಪರೋಕ್ಷ ಬೆಂಬಲ ನೀಡುವಂತೆ ಚರ್ಚೆ ನಡೆದಿರುವುದಾಗಿ ಆರೋಪಿಸಲಾಗಿದ್ದು, ಲೀಕ್ ಆಗಿರುವ ಆಡಿಯೋ ಇದೇ ವಿವಾದಕ್ಕೆ ಇಂಧನ ನೀಡಿದೆ.

ಆಡಿಯೋದಲ್ಲಿ ಏನಿದೆ?

ಮೂಲಗಳ ಪ್ರಕಾರ, ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯದ ನಾಯಕರಿಗೆ ಕಾಂಗ್ರೆಸ್ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಕೆಲ ಅಲ್ಪಸಂಖ್ಯಾತ ಮುಖಂಡರು ಅಸಮಾಧಾನಗೊಂಡಿದ್ದರು. ಈ ನಡುವೆ ಬಹಿರಂಗಗೊಂಡಿರುವ ಆಡಿಯೋದಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸಮರ್ಥ್ ಶಾಮನೂರು ವಿರುದ್ಧ ಮತಗಳ ವಿಭಜನೆಗೆ ಸಂಬಂಧಿಸಿದ ಮಾತುಕತೆ ನಡೆದಿರುವ ಆರೋಪ ಕೇಳಿಬಂದಿದೆ.

ಆಡಿಯೋದಲ್ಲಿ ಕೆಲವು ಮತದಾರರನ್ನು ಕಾಂಗ್ರೆಸ್ ಪರವಾಗಿ ಸೆಳೆಯುವ ಬದಲು ಪಕ್ಷೇತರ ಅಭ್ಯರ್ಥಿಯತ್ತ ಒಲಿಸುವ ಕುರಿತು ಚರ್ಚೆ ನಡೆದಿದೆ ಎಂಬ ಆರೋಪವೂ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಆಡಿಯೋ ದಾಖಲೆಗಳು ಕಾಂಗ್ರೆಸ್ ಹೈಕಮಾಂಡ್ ಕೈಸೇರಿದ್ದು, ನವದೆಹಲಿಯಲ್ಲಿ ಗಂಭೀರ ಮಟ್ಟದ ಪರಿಶೀಲನೆ ನಡೆಯುತ್ತಿದೆ ಎನ್ನಲಾಗಿದೆ.

ಆರೋಪ ತಳ್ಳಿಹಾಕಿದ ಜಮೀರ್

ವಿವಾದದ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ತಮ್ಮ ವಿರುದ್ಧದ ಆರೋಪಗಳನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ. “ಈ ಆಡಿಯೋ ಲೀಕ್ ಪ್ರಕರಣ ರಾಜಕೀಯ ಪ್ರೇರಿತವಾಗಿದೆ. ನಾನು ಯಾವಾಗಲೂ ಕಾಂಗ್ರೆಸ್ ಪಕ್ಷದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡೇ ಕೆಲಸ ಮಾಡಿದ್ದೇನೆ” ಎಂದು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಇಬ್ಬರ ವಿರುದ್ಧ ಕ್ರಮ

ಈ ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಈಗಾಗಲೇ ಇಬ್ಬರು ಅಲ್ಪಸಂಖ್ಯಾತ ನಾಯಕರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದೆ. ಹಿರಿಯ ನಾಯಕ ಅಬ್ದುಲ್ ಜಬ್ಬಾರ್ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿದ್ದ Naseer Ahmed ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಹೀಗಾಗಿ ಜಮೀರ್ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆಯೇ ಎಂಬ ಪ್ರಶ್ನೆ ಇದೀಗ ಕಾಂಗ್ರೆಸ್ ವಲಯದಲ್ಲಿ ಚರ್ಚೆಯಾಗುತ್ತಿದೆ.

Continue Reading

ದೇಶ

ನೂತನ ಕಾಂಗ್ರೆಸ್ ಸರ್ಕಾರಕ್ಕೆ ಕೌಂಟ್‌ಡೌನ್: 14 ಶಾಸಕರು ಸಚಿವರಾಗಿ ಪ್ರಮಾಣವಚನ ಸಾಧ್ಯತೆ

Published

on

ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಗೆ ಮುನ್ನವೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಉಪ ಮುಖ್ಯಮಂತ್ರಿ D. K. Shivakumar ಅವರು ಶನಿವಾರ ಬೆಳಗ್ಗೆ ಲೋಕಭವನದಲ್ಲಿ ರಾಜ್ಯಪಾಲ Thawar Chand Gehlot ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ರಾಜ್ಯಪಾಲರು ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ. ಈ ವೇಳೆ ಜೂನ್ 1, 3 ಅಥವಾ 5ರಂದು ನೂತನ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಸುವ ಕುರಿತು ಚರ್ಚೆ ನಡೆದಿರುವ ಮಾಹಿತಿ ಲಭ್ಯವಾಗಿದೆ. ಪ್ರಮಾಣವಚನ ಸಮಾರಂಭ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆಯೇ ನಡೆಯಲಿದೆಯೇ ಅಥವಾ ಲೋಕಭವನದಲ್ಲಿ ನಡೆಯಲಿದೆಯೇ ಎಂಬುದು ಇನ್ನೂ ಅಂತಿಮವಾಗಿಲ್ಲ.

ಇನ್ನೊಂದೆಡೆ, ಸಂಜೆ 4 ಗಂಟೆಗೆ ವಿಧಾನಸೌಧದ ಕೊಠಡಿ ಸಂಖ್ಯೆ 334ರಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಎಐಸಿಸಿ ಉಸ್ತುವಾರಿ Randeep Singh Surjewala ಹಾಗೂ K. C. Venugopal ಅವರ ಸಮ್ಮುಖದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ Siddaramaiah ಅವರು ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ಪ್ರಸ್ತಾಪಿಸಲಿದ್ದಾರೆ ಎನ್ನಲಾಗಿದೆ.

ನೂತನ ಸಚಿವ ಸಂಪುಟದಲ್ಲಿ ಡಿಸಿಎಂ ಹುದ್ದೆಗಳ ಸಂಖ್ಯೆಯ ಕುರಿತು ಇನ್ನೂ ಸ್ಪಷ್ಟತೆ ಇಲ್ಲ. ಎರಡಕ್ಕಿಂತ ಹೆಚ್ಚು ಡಿಸಿಎಂ ಹುದ್ದೆಗಳು ಬೇಡ ಎಂಬುದು ಡಿ.ಕೆ. ಶಿವಕುಮಾರ್ ಅವರ ನಿಲುವು ಎನ್ನಲಾಗುತ್ತಿದೆಯಾದರೂ, ಹೈಕಮಾಂಡ್ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಅವರು ಸಹಕರಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದೇ ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಹೊಸ ಮುಖದ ಆಯ್ಕೆ ಕುರಿತು ಚರ್ಚೆ ನಡೆಯುತ್ತಿದ್ದು, Satish Jarkiholi ಹಾಗೂ Santosh Lad ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ.

ಸಂಭಾವ್ಯ ಸಚಿವರ ಪಟ್ಟಿಯಲ್ಲಿ Priyank Kharge, G. Parameshwara, M. B. Patil, Zameer Ahmed Khan, Eshwar Khandre, K. J. George, Ramalinga Reddy, K. H. Muniyappa, Lakshmi Hebbalkar ಹಾಗೂ Krishna Byre Gowda ಸೇರಿದಂತೆ ಹಲವು ಹಿರಿಯ ನಾಯಕರ ಹೆಸರುಗಳು ಕೇಳಿಬರುತ್ತಿವೆ.

ಆದರೆ ಸಚಿವ ಸಂಪುಟದ ಅಂತಿಮ ಪಟ್ಟಿ ಮತ್ತು ಡಿಸಿಎಂ ಹುದ್ದೆಗಳ ಕುರಿತ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ನ ಅಂತಿಮ ಒಪ್ಪಿಗೆಯ ಬಳಿಕವೇ ಸ್ಪಷ್ಟವಾಗಲಿದೆ.

Continue Reading

Trending