ಚುನಾವಣೆ
ಬೆಂಗಳೂರು:ಗೊಂದಲ ಹೆಚ್ಚಿಸಿದ ಬಿಬಿಎಂಪಿ ಚುನಾವಣೆ
ಬಿಬಿಎಂಪಿ ಚುನಾವಣೆ ನಡೆಯುತ್ತದೆಯೇ, ಇಲ್ಲವೇ ಎಂಬ ಗೊಂದಲ ದಿನೇ ದಿನೇ ಹೆಚ್ಚಾಗುತ್ತಿದೆ,ಎರಡು ವರ್ಷಗಳಿಂದ ಈ ಪ್ರಶ್ನೆಗೆ ಇಂದಿಗೂ ಸ್ಪಷ್ಟ ಉತ್ತರ ಸಿಕ್ಕಿಲ್ಲ.243 ವಾರ್ಡ್ ಗಳನ್ನು 225 ಕ್ಕೆ ಇಳಿಸಿ ಅಂತಿಮ ಅಧಿಸೂಚನೆ ಹೊರಡಿಸಿದರೂ ಗೊಂದಲ ಮತ್ತಷ್ಟು ಹೆಚ್ಚಾಗಿದೆ.
ಕಾರ್ಪೊರೇಟರ್ ಆಕಾಂಕ್ಷಿಯಾಗಿರುವವರು ಚುನಾವಣೆಯ ಬಗ್ಗೆ ಕೇಳಿದರೆ ಚುನಾವಣೆ ನಡೆಯುವ ಬಗ್ಗೆ ಫಿಫ್ಟಿ ಫಿಫ್ಟಿ ಚಾನ್ಸ್ ಮಾತ್ರ ಇದೆ ಮೊದಲು ವಿಧಾನಸಭೆ ಚುನಾವಣೆ ಎನ್ನಲಾಗುತ್ತಿತ್ತು ಈಗ ಲೋಕಸಭೆ ಚುನಾವಣೆ ಮುಗಿದ ಮೇಲೆ ಚುನಾವಣೆ ನಡೆಸಲಾಗುವುದು ಎನ್ನುತ್ತಿದ್ದಾರೆ.
ಕಳೆದ ಬಾರಿ 225 ವಾರ್ಡ್ ಗಳಲ್ಲ 245 ವಾರ್ಡ್ ಗಳಿಗೆ ಚುನಾವಣೆ ನಡೆಯುತ್ತದೆ ಎಂದು ಆಕಾಂಕ್ಷಿಗಳು ಸಾಕಷ್ಟು ಕೆಲಸಗಳನ್ನು ತಮ್ಮ ವ್ಯಾಪ್ತಿಯಲ್ಲಿ ಮಾಡಿದ್ದರು ಆದರೆ ಈ ಬಾರಿ ಅಂತಹ ಸಾಹಸ ಮಾಡುವುದಿಲ್ಲ ಎಂಬುದು ಅವರ ಸ್ಪಷ್ಟಮಾತು. ಚುನಾವಣೆ ನಡೆಯುವ ಬಗ್ಗೆ ಮೊದಲು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ ಮೇಲೆ ಕೆಲಸವನ್ನು ಆರಂಭಿಸುತ್ತೇವೆ. ಅಲ್ಲಿಯವರೆಗೂ ಯಾರ ಮೇಲೂ ನಂಬಿಕೆ ಇಲ್ಲ ಬಿಬಿಎಂಪಿ ಚುನಾವಣೆಯನ್ನು ಮುಂದೂಡುವಲ್ಲಿ ನಗರದ ಎಲ್ಲಾ ಶಾಸಕರು ಒಂದಾಗಿಯೇ ಇರುತ್ತಾರೆ ಒಂದಿಬ್ಬರನ್ನು ಬಿಟ್ಟರೆ ಯಾವ ಶಾಸಕರಿಗೂ ಪಾಲಿಕೆ ಚುನಾವಣೆ ಸದ್ಯಕ್ಕೆ ಬೇಕಾಗಿಲ್ಲ ಎಂದು ಕಾರ್ಪೊರೇಟ್ ಆಕಾಂಕ್ಷಿಗಳ ಅಭಿಪ್ರಾಯವಾಗಿದೆ. ಒಂದೊಂದು ಪಕ್ಷಗಳು ಅಧಿಕಾರದಲ್ಲಿದ್ದಾಗ ಒಂದೊಂದು ರೀತಿಯ ವಾಡ್ ಗಳನ್ನು ರಚಿಸುತ್ತಾರೆ ಹಾಗೆಯೇ ಕಳೆದ ಬಾರಿ ಬಿಜೆಪಿ ಅಧಿಕಾರದಲ್ಲಿದ್ದಾಗ ರಚಿಸಿದ್ದ 243 ವಾರ್ಡ್ಗಳನ್ನು ಈಗ ರದ್ದುಪಡಿಸಿ. ಈಗಿನ ಕಾಂಗ್ರೆಸ್ ಸರ್ಕಾರ 225 ವಾರ್ಡ್ಗಳನ್ನು ಸೂಚಿಸಿದೆ. ಕಾಂಗ್ರೆಸ್ ಆಕಾಂಕ್ಷಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ವಾರ್ಡ್ ಗಳನ್ನು ಬದಲಾಯಿಸಲಾಗಿದೆ,ಎಂಬುದು ಬಿಜೆಪಿಯವರ ದೂರಾಗಿದೆ, ಈ ಹಿಂದೆ ನೀವು ಮಾಡಿಕೊಂಡಿದ್ದು ಅದೇ ಎಂಬುದು ಕಾಂಗ್ರೆಸ್ ನ ಪ್ರಶ್ನೆ. ಹೀಗಾಗಿ ಈ ವಾರ್ಡ್ ಗೊಂದಲ ಮತ್ತೆ ನ್ಯಾಯಾಲಯದ ಮೆಟ್ಟಿಲು ಏರುವ ಸಂಭವ ಹೆಚ್ಚಾಗಿದ್ದು ಬಿಬಿಎಂಪಿ ಚುನಾವಣೆ ಸದ್ಯ ಗೊಂದಲದಲ್ಲಿದೆ.ಇನ್ನು ಬಿಬಿಎಂಪಿ ಚುನಾವಣೆಯ ಮೀಸಲಾತಿಯ ಬಗ್ಗೆಯೂ ಗೊಂದಲ ಹೆಚ್ಚಾಗಿದೆ.ಹಿಂದುಳಿದ ವರ್ಗಗಳಿಗೆ ಸೇರಿದ ಜಾತಿಗಳನ್ನು ಅಧಿಸೂಚಿಸಿ ಅದನ್ನು ಸುಪ್ರೀಂಕೋರ್ಟಿಗೆ ಸಲ್ಲಿಸಬೇಕಾಗಿದೆ ಕರ್ನಾಟಕವು ಸೇರಿದಂತೆ ಇನ್ನೂ ಅನೇಕ ರಾಜ್ಯಗಳು ಜಾತಿಗಳ ಅಧಿಸೂಚನೆಯನ್ನು ಸಲ್ಲಿಸಿಲ್ಲ
ಕೇಂದ್ರ ಸಚಿವ ಸಂಪುಟ ಸ್ವೀಕರಿಸಿದ ನಂತರ ರಾಷ್ಟ್ರಪತಿಯವರು ಅಂಕಿತ ಹಾಕಬೇಕು ಆಗಷ್ಟೇ ಗೊಂದಲ ಪರಿಹಾರವಾಗಲಿದೆ ಎಂದು ಮಾಹಿತಿ ನೀಡಲಾಗಿದೆ
ಚುನಾವಣೆ
Bhabanipur Shock: 700 ಮತದಾರರ ಬೂತ್‌ನಲ್ಲಿ ಮಮತಾ ಬ್ಯಾನರ್ಜಿ ಪಡೆದದ್ದು ಕೇವಲ 28 ಮತ!
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮುಖ್ಯಮಂತ್ರಿ Mamata Banerjee ಅವರಿಗೆ ಭಾರೀ ಹಿನ್ನಡೆಯಾಗಿದೆ. ಟಿಎಂಸಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ನಾಯಕ Suvendu Adhikari ಐತಿಹಾಸಿಕ ಜಯ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಅವರ ಸ್ವಂತ ವಾರ್ಡ್‌ನಲ್ಲಿಯೇ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.
ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬೂತ್‌ವಾರು ಅಂಕಿ-ಅಂಶಗಳ ಪ್ರಕಾರ, ಭವಾನಿಪುರ ಕ್ಷೇತ್ರದ 267 ಬೂತ್‌ಗಳ ಪೈಕಿ 207 ಬೂತ್‌ಗಳಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾಲಿಘಾಟ್ ನಿವಾಸವಿರುವ ವಾರ್ಡ್ ನಂಬರ್ 73ರಲ್ಲಿ ಸುವೇಂದು ಅಧಿಕಾರಿ 8,932 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಕೇವಲ 4,284 ಮತಗಳಿಗೆ ಸೀಮಿತರಾಗಿದ್ದಾರೆ.
ಚುನಾವಣೆಗೆ ಮುನ್ನ Amit Shah ಬಿಜೆಪಿ ಕಾರ್ಯಕರ್ತರಿಗೆ “ಮಮತಾ ಬ್ಯಾನರ್ಜಿಯನ್ನು ಅವರದೇ ಕೋಟೆಯಲ್ಲಿ ಸೋಲಿಸಿ” ಎಂದು ಕರೆ ನೀಡಿದ್ದರು. ಇದೀಗ ಸುವೇಂದು ಅಧಿಕಾರಿ ಆ ಸವಾಲನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ ಎಂದು ಬಿಜೆಪಿ ಪಾಳಯದಲ್ಲಿ ಸಂಭ್ರಮ ವ್ಯಕ್ತವಾಗಿದೆ.
ಸುವೇಂದು ಅಧಿಕಾರಿಗೆ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಮೊದಲಿನಿಂದ ರಾಜಕೀಯ ನೆಲೆ ಕಡಿಮೆ ಇತ್ತು. ಆದರೂ ಕ್ಷೇತ್ರದಲ್ಲಿ ಶೇಕಡಾ 63 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ಶೇಕಡಾ 30 ಮತಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.
ಇನ್ನು ಹಲವು ಬೂತ್‌ಗಳಲ್ಲಿ ಮಮತಾ ಬ್ಯಾನರ್ಜಿ 50 ಮತಗಳ ಗಡಿ ದಾಟಲೂ ವಿಫಲರಾಗಿರುವುದು ಟಿಎಂಸಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ. 2021ರ ಉಪಚುನಾವಣೆಯಲ್ಲಿ ಏಳು ವಾರ್ಡ್‌ಗಳಲ್ಲೂ ಗೆದ್ದಿದ್ದ ದೀದಿ, ಈ ಬಾರಿ ತಮ್ಮ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆದರೆ, ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದು ಟಿಎಂಸಿ ಕೋಟೆಯನ್ನು ಧೂಳೀಪಟ ಮಾಡಿದ್ದಾರೆ.
ಚುನಾವಣೆ
ಜಿಬಿಎ ಚುನಾವಣೆಗೆ ಕೌಂಟ್‌ಡೌನ್ ಶುರು! ಜೂನ್‌ನಲ್ಲಿ ಡೇಟ್ ಫಿಕ್ಸ್
ಬೆಂಗಳೂರು: ಬಹುನಿರೀಕ್ಷಿತ Greater Bengaluru Authority (GBA) ಚುನಾವಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಜೂನ್ 14ರಿಂದ 24ರೊಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ G. A. Sangreshi ಸೂಚನೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ Maheshwar Rao ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಆದರೆ ಜಿಬಿಎ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಭೆಗೆ ಗೈರಾಗಿದ್ದರು.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಎ ಸಂಗ್ರೇಶಿ, “ರಾಜ್ಯ ಚುನಾವಣಾ ಆಯೋಗ ಮತ್ತು ಜಿಬಿಎ ಸಮಾಲೋಚನೆ ನಡೆಸಿ ದಿನಾಂಕ ನಿಗದಿಪಡಿಸುವುದು ಕಾನೂನುಬದ್ಧ ಪ್ರಕ್ರಿಯೆ. ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ದಿನಾಂಕ ನಿಗದಿ ಮಾತ್ರ ಬಾಕಿಯಿದೆ” ಎಂದು ತಿಳಿಸಿದರು.
ಜನಗಣತಿ, ಮನೆ ಸಮೀಕ್ಷೆ ಸೇರಿದಂತೆ ಹಲವು ಆಡಳಿತಾತ್ಮಕ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆ ಸಮಯ ಪರಿಶೀಲಿಸಿ ದಿನಾಂಕ ಘೋಷಿಸುವಂತೆ ಜಿಬಿಎಗೆ ಸೂಚಿಸಲಾಗಿದೆ. ಆದರೆ ಜೂನ್ 30ರೊಳಗೆ ಚುನಾವಣೆ ದಿನಾಂಕ ನಿಗದಿಪಡಿಸಲೇಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಬೇಕಿರುವುದಾಗಿ ಆಯುಕ್ತರು ಹೇಳಿದರು.
ಇನ್ನೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಾತನಾಡಿ, ವಾರ್ಡ್ ವಿಂಗಡಣೆ, ಮತದಾರರ ಪಟ್ಟಿ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು. ಚುನಾವಣಾ ಕಾರ್ಯಕ್ಕಾಗಿ RO, AERO ಮತ್ತು BLOಗಳ ನೇಮಕಾತಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಚುನಾವಣೆ
‘ನೀವು ಸೋತಿಲ್ಲ, ಗೆದ್ದಿದ್ದೀರಿ’ – ಮಮತಾ ಭೇಟಿ ಬಳಿಕ ಅಖಿಲೇಶ್ ಯಾದವ್ ಹೇಳಿಕೆ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ Akhilesh Yadav ಕೋಲ್ಕತ್ತಾಗೆ ಭೇಟಿ ನೀಡಿ Mamata Banerjee ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಗುರುವಾರ ಕಾಲಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದಲ್ಲಿ ನಡೆದ ಭೇಟಿಯ ವೇಳೆ ಅಖಿಲೇಶ್ ಯಾದವ್, “ನೀವು ಸೋತಿಲ್ಲ, ಗೆದ್ದಿದ್ದೀರಿ” ಎಂದು ಹೇಳಿ ಮಮತಾಗೆ ಸನ್ಮಾನ ಸಲ್ಲಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅಖಿಲೇಶ್ ಯಾದವ್, ಬಂಗಾಳದಲ್ಲಿ ಚುನಾವಣೆಗಳನ್ನು ಉತ್ತರ ಪ್ರದೇಶ ಮಾದರಿಯಲ್ಲಿ ನಡೆಸಲಾಗಿದ್ದು, ಬೆದರಿಕೆ ಹಾಗೂ ಕುತಂತ್ರದ ರಾಜಕಾರಣ ಬಳಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ, ಚುನಾವಣಾ ಆಯೋಗ ಹಾಗೂ ಭೂಗತ ಶಕ್ತಿಗಳ ಸಂಚುಗಳಿಂದ ಚುನಾವಣೆ ಪ್ರಭಾವಿತವಾಗಿದೆ ಎಂದು ಆರೋಪಿಸಿದರು.
ಅಲ್ಲದೇ, ಮಮತಾ ಬ್ಯಾನರ್ಜಿ ಮತ್ತು Abhishek Banerjee ಅವರ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದು ಟೀಕಿಸಿದರು. ದೇಶದ ಪ್ರಜಾಪ್ರಭುತ್ವ ಶಕ್ತಿಗಳು ಒಂದಾಗಬೇಕೆಂದು ಕರೆ ನೀಡಿದರು.
ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ ಟಿಎಂಸಿ ಕೇವಲ 80 ಸ್ಥಾನಗಳಲ್ಲಿ ಜಯ ಸಾಧಿಸಿತು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ.
ಟಿಎಂಸಿ ಸೋಲಿನ ಬಳಿಕ ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ನಾಯಕರು ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವುದು ಇದೀಗ ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
-
ಕ್ರೀಡೆ7 hours agoಹಾಂಗ್ ಕಾಂಗ್ನಲ್ಲಿ ನಡೆಯುವ ಏಷ್ಯನ್ ಚಾಂಪಿಯನ್ಶಿಪ್ಗೆ ಕರ್ನಾಟಕದ ಇಬ್ಬರು ಆಯ್ಕೆ
-
ದೇಶ11 hours ago59 ವರ್ಷಗಳ ಬಳಿಕ ತಮಿಳುನಾಡು ಸಚಿವ ಸಂಪುಟಕ್ಕೆ ಕಾಂಗ್ರೆಸ್ ಎಂಟ್ರಿ! ಇಂದು ವಿಜಯ್ ಕ್ಯಾಬಿನೆಟ್ ವಿಸ್ತರಣೆ
-
ದೇಶ10 hours agoಬಿಜೆಪಿಗಿಂತ ವೇಗವಾಗಿ ಬೆಳೆದ ‘Cockroach Janta Party’!
-
ದೇಶ5 hours ago“ನಾವು ಯಾರೂ ಸುರಕ್ಷಿತರಲ್ಲ”: ಮುಂದಿನ ಮಹಾಮಾರಿಯ ಬಗ್ಗೆ ಜಾಗತಿಕ ವರದಿ ಆತಂಕ
-
ದೇಶ5 hours agoCockroach Janata Party ಖಾತೆ ತಡೆ: ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ
-
ಅಪರಾಧ9 hours agoLatest : ನಿಪ್ಪಾಣಿಯಲ್ಲಿ ಆಶ್ರಯ ಮನೆ ಹಂಚಿಕೆ ವೇಳೆ ಗಲಾಟೆ: ಕಣ್ಣೀರಿಟ್ಟ ಶಾಸಕಿ ಶಶಿಕಲಾ ಜೊಲ್ಲೆ
-
ದೇಶ9 hours agoಮೆಲೊಡಿ ಟ್ರೆಂಡ್ಗೆ ಎಂಟ್ರಿ ಕೊಟ್ಟ ಬಾಲಿವುಡ್ ಜೋಡಿ: ಸೋನಾಕ್ಷಿ ವಿಡಿಯೋ ಸದ್ದು
-
ದೇಶ9 hours ago‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಯಾದರೆ ₹7 ಲಕ್ಷ ಕೋಟಿ ಉಳಿತಾಯ: ಜೆಪಿಸಿ ಸಮಿತಿ
