ಬೆಂಗಳೂರು
‘ಕಂಗ್ರಾಜುಲೇಷನ್ಸ್ ಬ್ರದರ್’ ಸಿನಿಮಾ ಯಾವ ಕಾರಣಕ್ಕೆ ವಿಶೇಷ? ಇಲ್ಲಿದೆ ಫುಲ್ ಡೀಟೈಲ್ಸ್
ಬೆಂಗಳೂರು: ‘ಕಂಗ್ರಾಜುಲೇಷನ್ಸ್ ಬ್ರದರ್’—ಈಗಾಗಲೇ ಯೂತ್ ನಡುವೆ ಸಂಚಲನ ಸೃಷ್ಟಿಸಿರುವ ಚಿತ್ರ ಇದೀಗ ನವೆಂಬರ್ 21ರಂದು ತೆರೆಗೆ ಬರಲು ಸಿದ್ಧವಾಗಿದೆ. ಇತ್ತೀಚೆಗೆ ಬಿಡುಗಡೆಯಾದ ಟ್ರೈಲರ್‌ಗೆ ಉತ್ತಮ ಪ್ರತಿಕ್ರಿಯೆ ಲಭಿಸಿದ್ದು, ಇಬ್ಬರು ನಟಿಯರ ಜೊತೆ ಹೀರೋ ರೊಮ್ಯಾಂಸ್, ಯಂಗ್ ಜನರೇಷನ್‌ಗೆ ಕೇಂದ್ರೀಕರಿಸಿದ ಕಥೆ ಮತ್ತು ಸೆಳೆಯುವ ಸಂಭಾಷಣೆಗಳು ಸಿನಿಮಾದ ಬಗ್ಗೆ ನಿರೀಕ್ಷೆ ಹೆಚ್ಚಿಸಿವೆ.
ವಿಧಾನಸೌಧದ ಎದುರು ಎಣ್ಣೆ ಬಾಟಲ್ ಶೈಲಿಯ ಫ್ಲೆಕ್ಸ್ ಹಿಡಿದು ಮಾಡಿದ ಪ್ರಮೋಶನ್ ವೈರಲ್ ಆಗಿದ್ದು, ಚಿತ್ರತಂಡದ ಕ್ರಿಯೇಟಿವಿಟಿ ಗಮನ ಸೆಳೆದಿದೆ. ಪ್ರತಾಪ್ ಗಂಧರ್ವ ನಿರ್ದೇಶಿಸಿದ್ದಈ ಸಿನಿಮಾಗೆ ಸ್ಟೇಟ್ ಅವಾರ್ಡ್ ವಿಜೇತ ಅಲೆಮಾರಿ ಸಂತು ಕಥೆ ಬರೆದಿದ್ದು, ಕ್ರಿಯೇಟಿವ್ ಹೆಡ್ ಆಗಿಯೂ ಸೇರಿಕೊಂಡಿದ್ದಾರೆ. ರಕ್ಷಿತ್ ನಾಗ್ ಈ ಸಿನಿಮಾದ ಮೂಲಕ ಸೀರಿಯಲ್ ಹೀರೋದಿಂದ ಬೆಳ್ಳಿಪರದೆ ಹೀರೋ ಆಗಿ ಎಂಟ್ರಿ ಕೊಡುತ್ತಿದ್ದಾರೆ.
ಸಂಜನಾ ಡೋಸ್ ಮತ್ತು ಅನುಷಾ ಇಬ್ಬರೂ ನಾಯಕಿಯರಾಗಿ ಕಾಣಿಸಿಕೊಂಡಿದ್ದು, ರಕ್ಷಿತ್ ಅವರೊಂದಿಗೆ ಡಬಲ್ ರೊಮ್ಯಾಂಸ್ ಸಿನಿಮಾ ವಿಶೇಷ. ಲವ್, ಡೇಟ್, ಮದುವೆ, ಡಬಲ್ ಡೇಟ್, ಡಬಲ್ ಮದುವೆ—ಈ ಪೀಳಿಗೆಯ ಯುವ ಮನಸ್ಸಿನ ಹಲವು ಅಂಶಗಳನ್ನು ಚಿತ್ರ ಮುಟ್ಟಿದೆ.
ಚಿತ್ರದ ಟ್ರೈಲರ್ ನೋಡಿ ರಿಯಲ್ ಬ್ರದರ್ ಜಮೀರ್ ಖಾನ್ ನೀಡಿದ ‘ಕಂಗ್ರಾಜುಲೇಷನ್ಸ್ ಬ್ರದರ್’ ಶುಭಾಶಯಗಳು ಮತ್ತಷ್ಟು ಕುತೂಹಲ ತಂದಿವೆ. ಇನ್ನೂ ಇಂಟರೆಸ್ಟಿಂಗ್ ಅಂಶವೆಂದರೆ—ಸ್ವಂತ ಮಗ ಝೈದ್ ಖಾನ್ ಅವರ ಸಿನಿಮಾಗೆ ಸಹ ಈ ರೀತಿಯಾಗಿ ಪ್ರಶಂಸೆ ನೀಡದ ಜಮೀರ್, ಹೊಸಬ ರಕ್ಷಿತ್ ಮತ್ತು ತಂಡಕ್ಕೆ ಬೆನ್ನು ತಟ್ಟಿದ್ದಾರೆ. ಈ ಉದಾರತೆ ನೆಟ್ಟಿಗರ ಮೆಚ್ಚುಗೆ ಗಳಿಸಿದೆ.
ಇದರ ಜೊತೆಗೆ ರಕ್ಷಿತ್ ನಟಿಸುವುದಕ್ಕಿಂತ ಹೆಚ್ಚಾಗಿ ಚಿತ್ರಕ್ಕೆ ಮ್ಯೂಸಿಕ್ ಕಂಪೋಸ್ ಮಾಡಿದ್ದು, ಹಾಡುಗಳನ್ನು ಬರೆದಿದ್ದು, ತಾವೇ ಹಾಡಿರುವುದು ವಿಶೇಷ. ಪೆನ್ ಅಂಡ್ ಪೇಪರ್ ಸ್ಟುಡಿಯೋಸ್ ಹಾಗೂ ಕಲ್ಲೂರ್ ಸಿನಿಮಾಸ್ ನಿರ್ಮಿಸಿರುವ ಈ ಯೂತ್-ಎಂಟರ್‌ಟೈನರ್ ಪ್ರೇಕ್ಷಕರ ನಿರೀಕ್ಷೆ ತೀವ್ರ ಮಾಡಿದೆ.
ದೇಶ
Sakkath Santhe 2026: ಗೃಹ ಉತ್ಪನ್ನಗಳಿಗೆ ವೇದಿಕೆ, ಇಂದಿರಾನಗರದಲ್ಲಿ ಜನಸಾಗರ
ಬೆಂಗಳೂರು: ನಗರದ ಇಂದಿರಾನಗರ ಬಡಾವಣೆಯಲ್ಲಿ ಆಯೋಜಿಸಲಾದ ‘ಸಕ್ಕತ್ ಸಂತೆ 2026’ (Sakkath Santhe 2026) ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದೆ. ನೂರಾರು ವೈವಿಧ್ಯಮಯ ಮಳಿಗೆಗಳಲ್ಲಿ ಪ್ರದರ್ಶನಗೊಂಡ ಗೃಹ ಉತ್ಪನ್ನಗಳು, ಕೈಗಾರಿಕಾ ವಸ್ತುಗಳು ಹಾಗೂ ಸ್ಥಳೀಯ ಉದ್ಯಮಿಗಳ ಉತ್ಪನ್ನಗಳನ್ನು ವೀಕ್ಷಿಸಲು ಸಾವಿರಾರು ಜನರು ಭೇಟಿ ನೀಡಿ ಖರೀದಿಸಿದರು.
ವಿಶೇಷವಾಗಿ ಮಹಿಳಾ ಕಿರು ಉದ್ಯಮಿಗಳು, ಗೃಹಾಧಾರಿತ ಉದ್ಯಮಿಗಳು ಹಾಗೂ ಸ್ಥಳೀಯ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ಉದ್ದೇಶದಿಂದ ಈ ಸಂತೆ ಆಯೋಜಿಸಲಾಗಿತ್ತು. ತಮ್ಮ ಉತ್ಪನ್ನಗಳನ್ನು ನೇರವಾಗಿ ಗ್ರಾಹಕರಿಗೆ ಪರಿಚಯಿಸುವ ಅವಕಾಶ ದೊರೆತಿದ್ದು, ಉತ್ತಮ ವ್ಯಾಪಾರವೂ ನಡೆದಿರುವುದಾಗಿ ಭಾಗವಹಿಸಿದ ಉದ್ಯಮಿಗಳು ಸಂತಸ ವ್ಯಕ್ತಪಡಿಸಿದರು.
ಕಾರ್ಯಕ್ರಮಕ್ಕೆ ಮಿಸೆಸ್ ಇಂಡಿಯಾ 2021 ವಿಜೇತೆ ಡಾ. ಸ್ಮಿತಾ ಪ್ರಭು ಚಾಲನೆ ನೀಡಿದರು. ಬಳಿಕ ವಿವಿಧ ಮಳಿಗೆಗಳಿಗೆ ಭೇಟಿ ನೀಡಿ ಪ್ರದರ್ಶನಗೊಂಡಿದ್ದ ನವೀನ ಮತ್ತು ಗುಣಮಟ್ಟದ ಉತ್ಪನ್ನಗಳನ್ನು ವೀಕ್ಷಿಸಿದರು. ಅಲ್ಲದೆ ಮಹಿಳಾ ಉದ್ಯಮಿಗಳು ಹಾಗೂ ಪ್ರತಿಭಾವಂತ ಕಿರು ಉದ್ಯಮಿಗಳೊಂದಿಗೆ ಸಂವಾದ ನಡೆಸಿ, ಅವರ ಪ್ರಯತ್ನಗಳನ್ನು ಶ್ಲಾಘಿಸಿ ಇನ್ನಷ್ಟು ಬೆಳೆಯುವಂತೆ ಪ್ರೋತ್ಸಾಹಿಸಿದರು.
ಈ ಯಶಸ್ವಿ ಕಾರ್ಯಕ್ರಮದ ಹಿಂದೆ ಶ್ರಮಿಸಿದ ಸ್ವಾತಿ ಶೆಟ್ಟಿ ಹಾಗೂ ಅವರ ಸಂಪೂರ್ಣ ತಂಡಕ್ಕೆ ಸಾರ್ವಜನಿಕರು, ಭಾಗವಹಿಸಿದ ಉದ್ಯಮಿಗಳು ಮತ್ತು ಅತಿಥಿಗಳು ಅಭಿನಂದನೆ ಸಲ್ಲಿಸಿದರು. ಮಹಿಳಾ ಉದ್ಯಮಶೀಲತೆಗೆ ಉತ್ತೇಜನ ನೀಡುವ ಇಂತಹ ಕಾರ್ಯಕ್ರಮಗಳು ಸ್ಥಳೀಯ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ನಿರ್ಮಿಸುವುದರ ಜೊತೆಗೆ ಸಣ್ಣ ಉದ್ಯಮಗಳ ಬೆಳವಣಿಗೆಗೂ ನೆರವಾಗಲಿವೆ ಎಂಬ ಅಭಿಪ್ರಾಯ ವ್ಯಕ್ತವಾಯಿತು. ಮುಂದಿನ ದಿನಗಳಲ್ಲಿ ಇನ್ನಷ್ಟು ದೊಡ್ಡ ಮಟ್ಟದಲ್ಲಿ ‘ಸಕ್ಕತ್ ಸಂತೆ’ ಆಯೋಜಿಸಲು ತಂಡಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ದೇಶ
SIR ಎಂದರೇನು? ಕರ್ನಾಟಕದ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸಂಪೂರ್ಣ ಮಾಹಿತಿ
ಬೆಂಗಳೂರು: ಕರ್ನಾಟಕದಲ್ಲಿ Special Intensive Revision (SIR) ಅಥವಾ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆರಂಭವಾಗಿದ್ದು, ಮತದಾರರ ಪಟ್ಟಿಯನ್ನು ಹೆಚ್ಚು ನಿಖರಗೊಳಿಸುವ ಉದ್ದೇಶದಿಂದ ಚುನಾವಣಾ ಆಯೋಗ (ECI) ರಾಜ್ಯಾದ್ಯಂತ ಮನೆ-ಮನೆ ಪರಿಶೀಲನೆ ನಡೆಸುತ್ತಿದೆ.
ಈ ಪ್ರಕ್ರಿಯೆಯ ಪ್ರಮುಖ ಉದ್ದೇಶ ಸತ್ತವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ನಕಲಿ ಹಾಗೂ ಅನರ್ಹ ಮತದಾರರ ಹೆಸರುಗಳನ್ನು ತೆಗೆದುಹಾಕುವುದು ಮತ್ತು ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ನೋಡಿಕೊಳ್ಳುವುದಾಗಿದೆ. ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರು ನೋಂದಾಯಿತರಾಗಿದ್ದು, ಅವರಲ್ಲಿ ಸುಮಾರು 91.61% ಮತದಾರರ ವಿವರಗಳು ಈಗಾಗಲೇ ಮ್ಯಾಪ್ ಆಗಿವೆ. ಉಳಿದ ಮತದಾರರ ಮಾಹಿತಿಯನ್ನು ಬೂತ್ ಮಟ್ಟದ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಚುನಾವಣಾ ಆಯೋಗದ ಮಾಹಿತಿ ಪ್ರಕಾರ, ರಾಜ್ಯದಲ್ಲಿ ಸಾವಿರಾರು ಅಧಿಕಾರಿಗಳು ಹಾಗೂ 5,950 BLOಗಳು ಈ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಮತದಾರರಿಗೆ ಅಗತ್ಯ ದಾಖಲೆಗಳು ಹಾಗೂ ಪ್ರಮಾಣಪತ್ರಗಳನ್ನು ಸೇವಾ ಸಿಂಧು, ನಾಡಕಚೇರಿ, ಬೆಂಗಳೂರು ಒನ್, ಕರ್ನಾಟಕ ಒನ್ ಹಾಗೂ ಗ್ರಾಮ ಒನ್ ಕೇಂದ್ರಗಳ ಮೂಲಕ ಪಡೆಯುವ ವ್ಯವಸ್ಥೆಯನ್ನೂ ಸರ್ಕಾರ ಕಲ್ಪಿಸಿದೆ.
ಇದೀಗ SIR ಪ್ರಕ್ರಿಯೆ ರಾಜಕೀಯ ವಿವಾದಕ್ಕೂ ಕಾರಣವಾಗಿದೆ. ಕೆಲವು ರಾಜಕೀಯ ಪಕ್ಷಗಳು ಮನೆ-ಮನೆ ಪರಿಶೀಲನೆಯ ಬದಲು ಸಾರ್ವಜನಿಕ ಸ್ಥಳಗಳಲ್ಲಿ ಅರ್ಜಿ ವಿತರಣೆ, ನಿಯಮ ಉಲ್ಲಂಘನೆ ಹಾಗೂ ರಾಜಕೀಯ ಹಸ್ತಕ್ಷೇಪದ ಆರೋಪಗಳನ್ನು ಮಾಡಿವೆ. ಆದರೆ, ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು, ಇನ್ನೂ ಮ್ಯಾಪ್ ಆಗದ ಮತದಾರರ ಹೆಸರುಗಳು ತಕ್ಷಣವೇ ಪಟ್ಟಿಯಿಂದ ಕೈಬಿಡಲಾಗುವುದಿಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕ ದಾಖಲೆ ಸಲ್ಲಿಸಲು ಮತ್ತು ಆಕ್ಷೇಪಣೆ ಸಲ್ಲಿಸಲು ಸೂಕ್ತ ಅವಕಾಶ ನೀಡಲಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮತದಾರರ ಪಟ್ಟಿಯನ್ನು ಪಾರದರ್ಶಕ ಹಾಗೂ ನಿಖರವಾಗಿಡುವ ಉದ್ದೇಶದಿಂದ ನಡೆಯುತ್ತಿರುವ ಈ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮತದಾರರು ತಮ್ಮ ವಿವರಗಳನ್ನು ಪರಿಶೀಲಿಸಿ ಅಗತ್ಯ ದಾಖಲೆಗಳನ್ನು ಸಮಯಕ್ಕೆ ಸರಿಯಾಗಿ ಸಲ್ಲಿಸುವಂತೆ ಚುನಾವಣಾ ಆಯೋಗ ಮನವಿ ಮಾಡಿದೆ.
ದೇಶ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅವ್ಯವಸ್ಥೆ? ಬಿಎಲ್‌ಒಗಳ ಮೇಲೆ ಒತ್ತಡ ಆರೋಪಿಸಿದ ವಿಜಯೇಂದ್ರ
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಗಂಭೀರ ಅವ್ಯವಸ್ಥೆ ನಡೆಯುತ್ತಿದ್ದು, ರಾಜ್ಯ ಸರ್ಕಾರ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲೆ ಒತ್ತಡ ಹೇರುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮನೆ ಮನೆಗೆ ತೆರಳಿ ನಮೂನೆಗಳನ್ನು ವಿತರಿಸುವ ಬದಲು ಕಲ್ಯಾಣ ಮಂಟಪ, ಚೌಲ್ಟ್ರಿ ಹಾಗೂ ಮಸೀದಿಗಳಲ್ಲಿ ಕುಳಿತು ಅರ್ಜಿಗಳನ್ನು ಹಂಚುತ್ತಿರುವುದು ನಿಯಮ ಉಲ್ಲಂಘನೆಯಾಗಿದೆ ಎಂದು ದೂರಿದರು. ಕೆಲವು ಶಾಸಕರ ಕಚೇರಿಗಳಲ್ಲೇ ಬಿಎಲ್‌ಒಗಳನ್ನು ಕೂರಿಸಿ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿ, ಈ ಕುರಿತು ಸಾಕ್ಷ್ಯ ಸಮೇತ ದೂರು ಸಲ್ಲಿಸಿರುವುದಾಗಿ ತಿಳಿಸಿದರು.
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ವಿತರಿಸಲಾಗುತ್ತಿರುವ ಅರ್ಜಿಗಳ ಮೇಲೆ ಕಾಂಗ್ರೆಸ್ ಮುಖಂಡರ ಫೋಟೋಗಳು ಮುದ್ರಣಗೊಂಡಿರುವ ವಿಚಾರವನ್ನೂ ಚುನಾವಣಾ ಆಯೋಗದ ಗಮನಕ್ಕೆ ತಂದಿರುವುದಾಗಿ ವಿಜಯೇಂದ್ರ ಹೇಳಿದರು. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿರುವ ಎಲ್ಲೆಡೆ ಮರುಪರಿಷ್ಕರಣೆ ನಡೆಸುವಂತೆ ಆಗ್ರಹಿಸಿದರು.
ಮೈಸೂರು ಸಂಸದ ಯದುವೀರ್ ಒಡೆಯರ್ ಮಾತನಾಡಿ, ನರಸಿಂಹರಾಜ ಕ್ಷೇತ್ರದಲ್ಲಿ ಮತದಾರರ ಸಂಖ್ಯೆಯಲ್ಲಿ ಅಸಹಜ ಏರಿಕೆ ಕಂಡುಬಂದಿದ್ದು, ಮನೆಗಳ ಸಂಖ್ಯೆ ಹೆಚ್ಚಳವಾಗದೆ ಮತದಾರರ ಸಂಖ್ಯೆ ಮಾತ್ರ ಹೆಚ್ಚಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದರು. ಅಕ್ರಮ ಮತದಾರರನ್ನು ತಡೆಯಲು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವುದು ಅಗತ್ಯ ಎಂದು ಒತ್ತಾಯಿಸಿದರು.
ಇದೇ ವೇಳೆ, ಬರ ಪರಿಸ್ಥಿತಿಯಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಆಯೋಜನೆಗೆ ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡುವ ಬದಲು ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆ ನಡೆಸುವುದು ಸೂಕ್ತ ಎಂದು ಯದುವೀರ್ ಒಡೆಯರ್ ಅಭಿಪ್ರಾಯಪಟ್ಟರು.
-
ದೇಶ23 hours agoSIR ಎಂದರೇನು? ಕರ್ನಾಟಕದ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸಂಪೂರ್ಣ ಮಾಹಿತಿ
-
ದೇಶ23 hours agoಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅವ್ಯವಸ್ಥೆ? ಬಿಎಲ್‌ಒಗಳ ಮೇಲೆ ಒತ್ತಡ ಆರೋಪಿಸಿದ ವಿಜಯೇಂದ್ರ
-
ದೇಶ23 hours agoಅಲಿ ಖಮೇನಿ ಅಂತ್ಯಕ್ರಿಯೆ ಬಗ್ಗೆ ಟ್ರಂಪ್ ವಿವಾದಾತ್ಮಕ ಹೇಳಿಕೆ: “ಅದು ಮೊಸಳೆ ಕಣ್ಣೀರು
-
ದೇಶ18 minutes agoಇಂದಿನ ರಾಶಿ ಭವಿಷ್ಯ: ಮೇಷದಿಂದ ಮೀನದವರೆಗೆ ಯಾರಿಗೆ ಶುಭ? ಯಾರಿಗೆ ಎಚ್ಚರಿಕೆ?
-
ದೇಶ12 minutes agoSakkath Santhe 2026: ಗೃಹ ಉತ್ಪನ್ನಗಳಿಗೆ ವೇದಿಕೆ, ಇಂದಿರಾನಗರದಲ್ಲಿ ಜನಸಾಗರ
