Connect with us

ಚುನಾವಣೆ

“ಹೋರಾಟ ಮುಂದುವರಿಸಿ, ಜನರ ಬಳಿಗೆ ಹೋಗಿ”: ಪ್ರಧಾನಿ ನರೇಂದ್ರ ಮೋದಿ

Published

on

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಜಯ ಸಾಧಿಸಲು ಸಂಘಟನೆಯನ್ನು ಮತ್ತಷ್ಟು ಬಲಪಡಿಸಲು ಹಾಗೂ ಹೋರಾಟವನ್ನು ತೀವ್ರಗೊಳಿಸಲು ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟ ಸಂದೇಶ ನೀಡಿದ್ದಾರೆ. ಸಂಸತ್ ಭವನದಲ್ಲಿ ಬಂಗಾಳದ ಬಿಜೆಪಿ ರಾಜ್ಯಸಭಾ ಮತ್ತು ಲೋಕಸಭಾ ಸಂಸದರನ್ನು ಭೇಟಿಯಾದಾಗ ಅವರು ಈ ಮಾರ್ಗದರ್ಶನ ನೀಡಿದರು.

“ಈ ಬಾರಿ ಬಂಗಾಳಕ್ಕೆ ಅವಕಾಶ ಸಿಗಬೇಕು. ನಾವೆಲ್ಲರೂ ಕಷ್ಟಪಟ್ಟು ಕೆಲಸ ಮಾಡಬೇಕು. ನೀವು ಈಗಾಗಲೇ ಗಮನಾರ್ಹ ಪ್ರಗತಿಯನ್ನು ಸಾಧಿಸಿದ್ದೀರಿ. ಈ ಸರ್ಕಾರದ ವಿರುದ್ಧ ಹೋರಾಟ ಮುಂದುವರಿಯಬೇಕು,” ಎಂದು ಸಂಸದರಿಗೆ ಪ್ರಧಾನಿ ಕರೆ ನೀಡಿದರೆಂದು ಮೂಲಗಳು ತಿಳಿಸಿವೆ.

ಮತದಾರರ ಪಟ್ಟಿ ಶುದ್ಧೀಕರಣ ಅಗತ್ಯ ಹೆಜ್ಜೆ ಎಂದು ಮೋದಿ ಹೇಳಿದರು. ಎಸ್‌ಐಆರ್ ಪ್ರಕ್ರಿಯೆ (Systematic Voters List Revision) ಮೂಲಕ ನಿಷ್ಕ್ರಿಯ ಹೆಸರುಗಳನ್ನು ತೆಗೆಯುವುದು, ನಕಲಿ ಮತದಾರರನ್ನು ಪತ್ತೆಹಚ್ಚುವುದು ಮತ್ತು ವಾಸ್ತವಿಕ ಮತದಾರರನ್ನು ಸೇರಿಸುವುದು ಮಹತ್ವದ್ದೆಂದು ಅವರು ಸೂಚಿಸಿದರು.

ಕೇಂದ್ರ ಸರಕಾರದ ಕಲ್ಯಾಣ ಯೋಜನೆಗಳು ನಿಜವಾದ ಫಲಾನುಭವಿಗಳಿಗೆ ತಲುಪುತ್ತಿವೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಸಂಸದರು ಫಲಾನುಭವಿಗಳ ಜೊತೆ ನಿರಂತರ ಸಂಪರ್ಕದಲ್ಲಿರಬೇಕು ಎಂದೂ ಪ್ರಧಾನಮಂತ್ರಿ ಹೇಳಿದರು.

ಸಾಮಾಜಿಕ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸುವ ಅಗತ್ಯವನ್ನೂ ಮೋದಿ ಒತ್ತಿಹೇಳಿದರು. ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವುದು, ಜಾಗೃತಿ ಮೂಡಿಸುವುದು, ತಪ್ಪುಮಾಹಿತಿಗೆ ತಕ್ಷಣ ಪ್ರತಿಕ್ರಿಯಿಸುವುದು ಸಂಸದರ ಜವಾಬ್ದಾರಿ ಎಂದು ಅವರು ತಿಳಿಸಿದರು.

ಇದರೊಂದಿಗೆ, ಬಿಹಾರ ಮಾದರಿಯಲ್ಲೇ ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿ ರಾಜ್ಯಗಳ ಚುನಾವಣಾ ಕಾರ್ಯತಂತ್ರದ ಜವಾಬ್ದಾರಿಯನ್ನು ಗೃಹ ಸಚಿವ ಅಮಿತ್ ಶಾ ವಹಿಸಿಕೊಂಡಿದ್ದಾರೆ. ಈ ತಿಂಗಳಾಂತ್ಯದಲ್ಲಿ ಶಾ ಬಂಗಾಳದ ಪ್ರವಾಸ ಕೈಗೊಂಡು ತಿಂಗಳಿಗೆ ಕನಿಷ್ಠ ಮೂರು ದಿನ ಪ್ರಚಾರ, ಸಂಘಟನೆ ಬಲಪಡಿಸುವುದು ಮತ್ತು ಮಿತ್ರಪಕ್ಷಗಳೊಂದಿಗೆ ಜಂಟಿ ಕಾರ್ಯತಂತ್ರ ರೂಪಿಸುವುದು ಎಂದು ಪಕ್ಷದ ಮೂಲಗಳು ತಿಳಿಸುತ್ತದೆ.

ಚುನಾವಣೆ

ಐದು ನಗರ ಪಾಲಿಕೆ ಚುನಾವಣೆ ಕಾವು: ಕಾಂಗ್ರೆಸ್ ಸೇರಿದಂತೆ ಪಕ್ಷಗಳಲ್ಲಿ ಚಟುವಟಿಕೆ ಜೋರು

Published

on

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಆಗಸ್ಟ್ 31ರೊಳಗೆ ಕಡ್ಡಾಯವಾಗಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದ್ದು, ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆ ಮೂಡಿದೆ.

ಸುಪ್ರೀಂ ಕೋರ್ಟ್ ಮೊದಲು ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸೂಚಿಸಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ, ಸಿಬ್ಬಂದಿ ಕೊರತೆ ಹಾಗೂ ಆಡಳಿತಾತ್ಮಕ ಕಾರಣಗಳನ್ನು ಪರಿಗಣಿಸಿ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿದೆ. ಆದರೆ ಇದೇ ಅಂತಿಮ ಅವಕಾಶವಾಗಿದ್ದು, ಮತ್ತೊಮ್ಮೆ ಯಾವುದೇ ಕಾರಣಕ್ಕೂ ಕಾಲಾವಕಾಶ ನೀಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟ ಎಚ್ಚರಿಕೆ ನೀಡಿದೆ.

ರಾಜ್ಯ ಸರ್ಕಾರವು ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ಕೋರಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಚುನಾವಣಾ ಪ್ರಕ್ರಿಯೆ ವೇಗ ಪಡೆಯಲು ಕಾರಣವಾಗಿದೆ. ಈ ಬೆಳವಣಿಗೆಯ ನಂತರ ರಾಜ್ಯ ಚುನಾವಣಾ ಆಯೋಗ ಸದ್ದಿಲ್ಲದೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.

ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಗುರುತಿಸುವಿಕೆ, ಚುನಾವಣಾ ಸಿಬ್ಬಂದಿ ನಿಯೋಜನೆ ಹಾಗೂ ಇತರೆ ಆಡಳಿತಾತ್ಮಕ ಕಾರ್ಯಗಳು ಈಗಾಗಲೇ ನಡೆಯುತ್ತಿವೆ. ಎಲ್ಲ ಸಿದ್ಧತೆಗಳು ಪೂರ್ಣಗೊಂಡ ಬಳಿಕ ಜುಲೈ 10ರೊಳಗೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ವೇಳಾಪಟ್ಟಿ ಘೋಷಣೆಯಾದ ತಕ್ಷಣ ಜಿಬಿಎ ವ್ಯಾಪ್ತಿಯಲ್ಲಿ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ.

ಇತ್ತ ರಾಜಕೀಯ ಪಕ್ಷಗಳೂ ಚುನಾವಣಾ ಕಣಕ್ಕೆ ಇಳಿಯಲು ಸಜ್ಜಾಗಿವೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಐದು ನಗರ ಪಾಲಿಕೆಗಳ ವ್ಯಾಪ್ತಿಯ ಮುಖಂಡರು ಮತ್ತು ಕಾರ್ಯಕರ್ತರಿಗೆ ಸಂಘಟನಾ ಚಟುವಟಿಕೆಗಳನ್ನು ತೀವ್ರಗೊಳಿಸುವಂತೆ ಸೂಚಿಸಿದೆ. ಮನೆಮನೆಗೆ ಭೇಟಿ, ಸರ್ಕಾರದ ಸಾಧನೆಗಳ ಪ್ರಚಾರ, ಗ್ಯಾರಂಟಿ ಯೋಜನೆಗಳ ಮಾಹಿತಿ ಹಾಗೂ ವಾರ್ಡ್‌ವಾರು ಮತದಾರರ ಸಂಪರ್ಕ ಅಭಿಯಾನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಜಿಬಿಎ ಚುನಾವಣೆಗಳು ಬೆಂಗಳೂರು ನಗರ ಆಡಳಿತದ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಚುನಾವಣೆಗಳಾಗಿದ್ದು, ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ.

Continue Reading

ಚುನಾವಣೆ

GBA ELECTION : ಜುಲೈ ಮೊದಲ ವಾರದಲ್ಲೇ ವೇಳಾಪಟ್ಟಿ? ಬೆಂಗಳೂರು ರಾಜಕೀಯ ಕಣ ರಂಗೇರಲು ಸಜ್ಜು

Published

on

ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗವು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.

ಮೂಲಗಳ ಪ್ರಕಾರ, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಜುಲೈ 10ರೊಳಗೆ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸುವ ಬಗ್ಗೆ ಆಯೋಗ ಚಿಂತನೆ ನಡೆಸಿದೆ.

ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ನ್ಯಾಯಾಲಯವು ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಜೊತೆಗೆ, ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆ ಮುಂದೂಡುವ ಪ್ರಸ್ತಾಪವನ್ನು ತನ್ನ ಮುಂದೆ ತರಬಾರದು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.

ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಸಿದ್ಧತೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದೆ. ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ. ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಬಿಜೆಪಿ, ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸುತ್ತಿದೆ. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿಯೂ ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಪಂಚ ಪಾಲಿಕೆ ಚುನಾವಣೆ ಭಾರೀ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದೆ.

Continue Reading

ಚುನಾವಣೆ

Bhabanipur Shock: 700 ಮತದಾರರ ಬೂತ್‌ನಲ್ಲಿ ಮಮತಾ ಬ್ಯಾನರ್ಜಿ ಪಡೆದದ್ದು ಕೇವಲ 28 ಮತ!

Published

on

ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮುಖ್ಯಮಂತ್ರಿ Mamata Banerjee ಅವರಿಗೆ ಭಾರೀ ಹಿನ್ನಡೆಯಾಗಿದೆ. ಟಿಎಂಸಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ನಾಯಕ Suvendu Adhikari ಐತಿಹಾಸಿಕ ಜಯ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಅವರ ಸ್ವಂತ ವಾರ್ಡ್‌ನಲ್ಲಿಯೇ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬೂತ್‌ವಾರು ಅಂಕಿ-ಅಂಶಗಳ ಪ್ರಕಾರ, ಭವಾನಿಪುರ ಕ್ಷೇತ್ರದ 267 ಬೂತ್‌ಗಳ ಪೈಕಿ 207 ಬೂತ್‌ಗಳಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾಲಿಘಾಟ್ ನಿವಾಸವಿರುವ ವಾರ್ಡ್ ನಂಬರ್ 73ರಲ್ಲಿ ಸುವೇಂದು ಅಧಿಕಾರಿ 8,932 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಕೇವಲ 4,284 ಮತಗಳಿಗೆ ಸೀಮಿತರಾಗಿದ್ದಾರೆ.

ಚುನಾವಣೆಗೆ ಮುನ್ನ Amit Shah ಬಿಜೆಪಿ ಕಾರ್ಯಕರ್ತರಿಗೆ “ಮಮತಾ ಬ್ಯಾನರ್ಜಿಯನ್ನು ಅವರದೇ ಕೋಟೆಯಲ್ಲಿ ಸೋಲಿಸಿ” ಎಂದು ಕರೆ ನೀಡಿದ್ದರು. ಇದೀಗ ಸುವೇಂದು ಅಧಿಕಾರಿ ಆ ಸವಾಲನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ ಎಂದು ಬಿಜೆಪಿ ಪಾಳಯದಲ್ಲಿ ಸಂಭ್ರಮ ವ್ಯಕ್ತವಾಗಿದೆ.

ಸುವೇಂದು ಅಧಿಕಾರಿಗೆ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಮೊದಲಿನಿಂದ ರಾಜಕೀಯ ನೆಲೆ ಕಡಿಮೆ ಇತ್ತು. ಆದರೂ ಕ್ಷೇತ್ರದಲ್ಲಿ ಶೇಕಡಾ 63 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ಶೇಕಡಾ 30 ಮತಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.

ಇನ್ನು ಹಲವು ಬೂತ್‌ಗಳಲ್ಲಿ ಮಮತಾ ಬ್ಯಾನರ್ಜಿ 50 ಮತಗಳ ಗಡಿ ದಾಟಲೂ ವಿಫಲರಾಗಿರುವುದು ಟಿಎಂಸಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ. 2021ರ ಉಪಚುನಾವಣೆಯಲ್ಲಿ ಏಳು ವಾರ್ಡ್‌ಗಳಲ್ಲೂ ಗೆದ್ದಿದ್ದ ದೀದಿ, ಈ ಬಾರಿ ತಮ್ಮ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆದರೆ, ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದು ಟಿಎಂಸಿ ಕೋಟೆಯನ್ನು ಧೂಳೀಪಟ ಮಾಡಿದ್ದಾರೆ.

Continue Reading

Trending