Connect with us

ದೇಶ

ಅತ್ಯಂತ ಜನಪ್ರಿಯ ಹಬ್ಬಗಳಲ್ಲಿ ಒಂದಾದ ಮೈಸೂರು ದಸರಾ ವೇಳಪಟ್ಟಿ.

ಅತ್ಯಂತ ಜನಪ್ರಿಯ ಹಬ್ಬಗಳಲ್ಲಿ ಒಂದಾದ ಮೈಸೂರು ದಸರಾ ವೇಳಪಟ್ಟಿ.

ಮೈಸೂರು ದಸರಾ ಕರ್ನಾಟಕದ ರಾಜ್ಯ ಉತ್ಸವ ಮತ್ತು ಜನರು ಎದುರು ನೋಡುತ್ತಿರುವ ಅತ್ಯಂತ ಜನಪ್ರಿಯ ಹಬ್ಬಗಳಲ್ಲಿ ಒಂದಾಗಿದೆ. ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಪ್ರತಿವರ್ಷ ದಸರಾವನ್ನು ಆಚರಿಸಲಾಗುತ್ತದೆ. ದಸರಾ ಹಬ್ಬ 10 ದಿನಗಳ ಕಾಲ ದಸರಾ ಆಚರಣೆಗಳು ನಡೆಯುತ್ತವೆ.
ದಸರಾ ಹಬ್ಬದಲ್ಲಿ ದುಷ್ಟಶಕ್ತಿಯ ಮೇಲೆ ಒಳ್ಳೆಯತನದ ಜಯಿಸುವಿಕೆಯನ್ನು ಆಚರಿಸಲಾಗುತ್ತದೆ. ಚಾಮುಂಡೇಶ್ವರಿ ದೇವಿಯು ಮಹಿಷಾಸುರ ಎಂಬ ರಾಕ್ಷಸನನ್ನು ವಧಿಸಿ ಶಾಂತಿ ಪಾಲನೆಗೆ ಕಾರಣವಾದದ್ದು ದಸರಾ ಹಬ್ಬಕ್ಕೆ ಸ್ಪೂರ್ತಿಯಾಗಿದೆ. 15 ನೇ ಶತಮಾನದಲ್ಲಿ ವಿಜಯನಗರ ಆಳ್ವಿಕೆಯಲ್ಲಿ ದಸರಾ ಉತ್ಸವ ಪ್ರಾರಂಭವಾಯಿತು,ಮೈಸೂರು ದಸರಾ ಸಮಯದಲ್ಲಿ ಸಂಪೂರ್ಣ ಮೈಸೂರು ನಗರವು ಅತ್ಯುತ್ತಮವಾಗಿ ಮದುವಣಗಿತ್ತಿಯಂತೆ ಶೃಂಗಾರಗೊಳ್ಳುತ್ತದೆ.

ಈ ಬಾರಿಯೂ ವಿದ್ಯುದ್ದೀಪಗಳಿಂದ ಝಗಮಗಿಸಲಿದೆ. ಅಲ್ಲದೇ ಕಾಂಗ್ರೆಸ್‌ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳೊಂದಿಗೆ ಚಂದ್ರಯಾನ ಅನಾವರಣಗೊಳ್ಳಲಿವೆ. ನಗರದ ಪ್ರಮುಖ ಆಯ್ದ ಸ್ಥಳಗಳಲ್ಲಿ ಕಾಂಗ್ರೆಸ್‌ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಬಿಂಬಿಸುವ ಮಾದರಿಯಲ್ಲಿ ದೀಪಾಲಂಕಾರ ವ್ಯವಸ್ಥೆ ಮಾಡಲು ಸಿದ್ಧತೆ ನಡೆಸಲಾಗಿದೆ. ಇಸ್ರೋದ ಚಂದ್ರಯಾನ, ಯುನೆಸ್ಕೋದಿಂದ ಗುರುತಿಸಿರುವ ಸೋಮನಾಥಪುರದ ಸೋಮನಾಥೇಶ್ವರ ದೇವಸ್ಥಾನದ ಮಾದರಿಗಳನ್ನು ನಿರ್ಮಿಸುತ್ತಿರುವುದು ಈ ಬಾರಿಯ ವಿಶೇಷವಾಗಿದೆ.

ದಸರಾ ಮಹೋತ್ಸವದ ಅಂಗವಾಗಿ ಮೈಸೂರು ಅರಮನೆಯಲ್ಲಿ ನಡೆಯಲಿರುವ ಶರನ್ನವರಾತ್ರಿ ಉತ್ಸವದ ವೇಳಾಪಟ್ಟಿಯನ್ನು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಬಿಡುಗಡೆಗೊಳಿಸಿದ್ದಾರೆ. ಅ. 9 ರಿಂದ ನ. 8 ರವರೆಗೆ ಖಾಸಗಿ ದರ್ಬಾರ್‌ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಲಿವೆ.ಅ. 9 ರಂದು ಬೆಳಗ್ಗೆ 7.15ಕ್ಕೆ ನವಗ್ರಹ ಹೋಮ ಮತ್ತು ಇತರೆ ಶಾಂತಿ ಪೂಜೆ ನಡೆಯಲಿದೆ. ಬೆಳಗ್ಗೆ 10.05ರಿಂದ 10.35 ರವರೆಗೆ ಅಂಬಾವಿಲಾಸ ದರ್ಬಾರ್‌ ಹಾಲ್‌ನಲ್ಲಿಸಿಂಹಾಸನ ಜೋಡಣೆ ಮತ್ತು ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಕಾರ್ಯಕ್ರಮ ನಡೆಯಲಿದೆ. 11ಕ್ಕೆ ಪಟ್ಟದ ಆನೆ, ಕುದುರೆ, ಹಸುಗಳನ್ನು ಗೋಶಾಲೆಗೆ ಕರೆತರಲಾಗುವುದು. ಅ. 15ರಂದು ಬೆಳಗ್ಗೆ 7.05ರಿಂದ 7.45ರವರೆಗೆ ವಾಣಿ ವಿಲಾಸ ದೇವರ ಮನೆಯಿಂದ ಚಾಮುಂಡಿ ತೊಟ್ಟಿಗೆ ಆಗಮಿಸಿ, ಕಂಕಣ ಧಾರಣೆ, 9.45ಕ್ಕೆ ಸಾವರ್‌ ತೊಟ್ಟಿಗೆ ಪಟ್ಟದ ಆನೆ, ಪಟ್ಟದ ಕುದುರೆ ಮತ್ತೆ ಪಟ್ಟದ ಹಸು ಆಗಮನ.

10.15ಕ್ಕೆ ಕಳಶ ಪೂಜೆ ಮತ್ತು ಸಿಂಹಾಸನ ಪೂಜೆ ಆರಂಭ. ಮಧ್ಯಾಹ್ನ 1.45ರಿಂದ 2.05ವರೆಗೆ ತಾಯಿ ಚಾಮುಂಡೇಶ್ವರಿ ಅಮ್ಮನವರನ್ನು ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ಕರೆತರಲಾಗುವುದು.ಅ. 20ರಂದು ಬೆಳಗ್ಗೆ 10.05ರಿಂದ 10.25ರವರೆಗೆ ಸರಸ್ವತಿ ಪೂಜೆ, 21ರಂದು ಸಂಜೆ ನಂತರ ಕನ್ನಡಿ ತೊಟ್ಟಿಯಲ್ಲಿ ಕಾಳರಾತ್ರಿ, 22ರಂದು ದುರ್ಗಾಷ್ಟಮಿ, 23ರ ಮಹಾನವಮಿಯಂದು ಬೆಳಗ್ಗೆ 5.30ಕ್ಕೆ ಚಂಡಿ ಹೋಮ ಆರಂಭ, 6.05ರಿಂದ 6.15ರವರೆಗೆ ಆನೆ ಬಾಗಿಲು ಮೂಲಕ ಶ್ರೀಕೋಡಿ ಸೋಮೇಶ್ವರ ಸ್ವಾಮಿ ದೇವಸ್ಥಾನಕ್ಕೆ ಖಾಸಗಿ ಆಯುಧಗಳನ್ನು ಕೊಂಡೊಯ್ಯಲಾಗುತ್ತದೆ. 7.15ಕ್ಕೆ ಶ್ರೀ ಕೋಡಿ ಸೋಮೇಶ್ವರಸ್ವಾಮಿ ದೇವಸ್ಥಾನದಿಂದ ಆನೆ ಬಾಗಿಲು ಮೂಲಕ ಕಲ್ಯಾಣ ಮಂಟಪಕ್ಕೆ ಖಾಸಗಿ ಆಯುಧಗಳನ್ನು ವಾಪಸ್‌ ತರುವುದು, 9.30ಕ್ಕೆ ಚಂಡಿ ಹೋಮದ ಪೂರ್ಣಾಹುತಿ, 12.20ರಿಂದ 12.45ರವರೆಗೆ ಕಲ್ಯಾಣ ಮಂಟಪದಲ್ಲಿಆಯುಧ ಪೂಜೆ ನಡೆಯಲಿದೆ. ಸಂಜೆ ದರ್ಬಾರ್‌ ಹಾಗೂ ಸಿಂಹ ವಿಸರ್ಜನೆ, ಕಂಕಣ ವಿಸರ್ಜನೆಯು ಖಾಸ ದೇವರ ಮನೆ ಹಾಗೂ ವಾಣಿವಿಲಾಸ ದೇವರ ಮನೆಯಲ್ಲಿ ನಡೆಯುತ್ತದೆ.ಅ. 24ರ ವಿಜಯದಶಮಿಯಂದು ಬೆಳಗ್ಗೆ 9.45ಕ್ಕೆ ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಕುದುರೆ ಪಟ್ಟದ ಹಸು ಆಗಮನ ಕಲ್ಯಾಣ ಮಂಟಪದಲ್ಲಿಖಾಸ ಆಯುಧಗಳಿಗೆ ಉತ್ತರ ಪೂಜೆ, 11.10ರಿಂದ 11.45ರವರೆಗೆ ವಿಜಯ ಯಾತ್ರೆ ಮತ್ತು ಶಮಿ ಪೂಜೆ ನಡೆಯಲಿದೆ. ನ. 8ರಂದು ಬೆಳಗ್ಗೆ 10.15ರಿಂದ 10.45ರವರೆಗೆ ತೋರಣವನ್ನು ತೋರಣ ಕೊಠಡಿಗೆ ಸೇರಿಸಲಾಗುತ್ತದೆ.

ದೇಶ

ಎಪ್ಸ್ಟೀನ್ ಫೈಲ್ಸ್‌ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ

ಹೊಸದಿಲ್ಲಿ: ಜಗತ್ತಿನಾದ್ಯಂತ ಸಂಚಲನ ಮೂಡಿಸಿರುವ ಜೆಫ್ರಿ ಎಪ್ಸ್ಟೀನ್‌ (Jeffrey Epstein) ಲೈಂಗಿಕ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆಗೊಳಿಸಿರುವ ಮಿಲಿಯನ್‌ಗಟ್ಟಲೆ ಇಮೇಲ್‌ಗಳು ಮತ್ತು ದಾಖಲೆಗಳು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿವೆ. ಈ ದಾಖಲೆಗಳಲ್ಲಿ ಕೆಲವು ಭಾರತೀಯರ ಹೆಸರುಗಳು ಕಾಣಿಸಿಕೊಂಡಿರುವುದು ಸಂಸತ್ತಿನಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಪಟ್ಟಿಯಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಅವರ ಹೆಸರು ಉಲ್ಲೇಖವಾಗಿರುವುದಾಗಿ ವರದಿಯಾಗುತ್ತಿದ್ದಂತೆಯೇ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಸಂಸತ್ತಿನೊಳಗೂ ಹೊರಗೂ ಮಾತನಾಡಿದ ಅವರು, ಎಪ್ಸ್ಟೀನ್ ಪ್ರಕರಣದ ಉಲ್ಲೇಖದೊಂದಿಗೆ ಕೇಂದ್ರ ಸರ್ಕಾರವನ್ನು ಟೀಕಿಸಿದರು.

ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಹರ್ದೀಪ್ ಪುರಿ, “ನಾನು ಜೆಫ್ರಿ ಎಪ್ಸ್ಟೀನ್ ಅವರನ್ನು ಕೆಲವೇ ಬಾರಿ, ಅದೂ ಔಪಚಾರಿಕ ಸಂದರ್ಭಗಳಲ್ಲಿ ಮಾತ್ರ ಭೇಟಿ ಮಾಡಿದ್ದೇನೆ. ಅವರ ಅಕ್ರಮ ಚಟುವಟಿಕೆಗಳಿಗೆ ನನ್ನೊಂದಿಗೆ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.

ಮೂರು ಮಿಲಿಯನ್‌ ಇಮೇಲ್‌ಗಳಲ್ಲಿ ತಮ್ಮ ಹೆಸರು ಕೇವಲ 3-4 ಬಾರಿ ಮಾತ್ರ ಉಲ್ಲೇಖವಾಗಿದೆ. ನಿಯೋಗದ ಭಾಗವಾಗಿ ಕೆಲ ಸಂದರ್ಭಗಳಲ್ಲಿ ಭೇಟಿಯಾಗಿದ್ದು, ಕೇವಲ ಒಂದು ಇಮೇಲ್ ವಿನಿಮಯ ಮಾಡಿಕೊಂಡಿದ್ದೇನೆ ಅಷ್ಟೇ ಹೊರತು, ಯಾವುದೇ ಅಕ್ರಮ ಸಂಬಂಧ ಇಲ್ಲ ಎಂದು ಹೇಳಿದರು.

ಇದೇ ವೇಳೆ, 2017ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇಸ್ರೇಲ್ ಭೇಟಿ ಕುರಿತ ಉಲ್ಲೇಖಗಳನ್ನೂ ವಿದೇಶಾಂಗ ಸಚಿವಾಲಯ ತಳ್ಳಿಹಾಕಿದೆ. “ಇದು ಅಧಿಕೃತ ಭೇಟಿಯೇ ಹೊರತು, ಉಳಿದ ಉಲ್ಲೇಖಗಳು ಶಿಕ್ಷೆಗೊಳಗಾದ ಅಪರಾಧಿಯ ವ್ಯರ್ಥ ಕಲ್ಪನೆಗಳಾಗಿವೆ” ಎಂದು ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

ಎಪ್ಸ್ಟೀನ್ ಫೈಲ್ಸ್ ಪ್ರಕರಣ ಇದೀಗ ಭಾರತೀಯ ರಾಜಕೀಯದಲ್ಲೂ ಚರ್ಚೆಯ ಕೇಂದ್ರಬಿಂದುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಪ್ರತಿಕ್ರಿಯೆಗಳು ಎದುರಾಗುವ ಸಾಧ್ಯತೆ ಇದೆ.

Continue Reading

ಕ್ರೀಡೆ

JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ

ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.

ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.

ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.

ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.

ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.

ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.

ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.

ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.

ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

ದೇಶ

LATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ

ನವದೆಹಲಿ: ಸದನಕ್ಕೆ ತಪ್ಪು ಮಾಹಿತಿ ನೀಡಿದ್ದು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿರುವ ಹಿನ್ನೆಲೆಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ಹಕ್ಕುಚ್ಯುತಿ (Breach of Privilege) ಪ್ರಸ್ತಾವನೆ ಮಂಡಿಸಲಾಗುವುದು ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜುಜು (Kiren Rijiju) ತಿಳಿಸಿದ್ದಾರೆ.

ಬಜೆಟ್ ಮೇಲಿನ ಚರ್ಚೆ ವೇಳೆ ರಾಹುಲ್ ಗಾಂಧಿ ಕೇಂದ್ರ ಸರ್ಕಾರವು ‘ಭಾರತ ಮಾತೆಯನ್ನು ಮಾರಿಬಿಟ್ಟಿದೆ’ ಎಂದು ಆರೋಪಿಸಿದ್ದರು. ಭಾರತ–ಅಮೆರಿಕ ವಾಣಿಜ್ಯ ಒಪ್ಪಂದವನ್ನು ‘ಸಂಪೂರ್ಣ ಶರಣಾಗತಿ’ ಎಂದು ಟೀಕಿಸಿದ ಅವರು, ದೇಶದ ಶಕ್ತಿ ಸುರಕ್ಷತೆ ಅಮೆರಿಕಕ್ಕೆ ಒಪ್ಪಿಸಲಾಗಿದೆ ಹಾಗೂ ರೈತರ ಹಿತಾಸಕ್ತಿಗಳನ್ನು ರಾಜಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈ ಹೇಳಿಕೆಗಳಿಗೆ ತೀವ್ರ ಪ್ರತಿಕ್ರಿಯೆ ನೀಡಿದ ಕಿರಣ್ ರಿಜುಜು, ರಾಹುಲ್ ಗಾಂಧಿ ಸರ್ಕಾರ ಮತ್ತು ಪ್ರಧಾನಮಂತ್ರಿ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪ ಮಾಡಿದ್ದಾರೆ ಎಂದು ಆರೋಪಿಸಿದರು. “ಭಾರತವನ್ನು ಯಾರೂ ಮಾರಲಾರರು, ಖರೀದಿಸಲಾರರು. ಗಂಭೀರ ಆರೋಪ ಮಾಡಲು ನಿಯಮಾನುಸಾರ ಮುಂಚಿತ ನೋಟಿಸ್ ನೀಡಬೇಕು ಮತ್ತು ಪುರಾವೆ ಸಲ್ಲಿಸಬೇಕು. ಆದರೆ ರಾಹುಲ್ ಗಾಂಧಿ ಯಾವುದೇ ಪುರಾವೆ ಇಲ್ಲದೆ ಆರೋಪ ಮಾಡಿದ್ದಾರೆ,” ಎಂದು ರಿಜುಜು ಹೇಳಿದರು.

ಇದಲ್ಲದೆ, ರಾಹುಲ್ ಗಾಂಧಿ ಅವರ ಭಾಷಣದಲ್ಲಿ ದಾಖಲಾಗಿರುವ ತಪ್ಪು ಹೇಳಿಕೆಗಳು ಮತ್ತು ಅಸಭ್ಯ ಪದಗಳನ್ನು ಸದನದ ದಾಖಲೆಗಳಿಂದ ತೆಗೆದುಹಾಕಬೇಕು ಎಂದು ಅವರು ಒತ್ತಾಯಿಸಿದರು. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ವಿರುದ್ಧವೂ ನೋಟಿಸ್ ಇಲ್ಲದೆ ಗಂಭೀರ ಆರೋಪ ಮಾಡಲಾಗಿದೆ ಎಂದು ರಿಜುಜು ತಿಳಿಸಿದರು.

ಈ ಬೆಳವಣಿಗೆಗಳ ನಡುವೆ ಸಂಸತ್ ಕಲಾಪದಲ್ಲಿ ಮತ್ತಷ್ಟು ರಾಜಕೀಯ ಉದ್ವಿಗ್ನತೆ ಉಂಟಾಗುವ ಸಾಧ್ಯತೆ ಇದೆ.

Continue Reading

Trending