Connect with us

ದೇಶ

Jio Happy New Year Plan 2026: AI–OTT ಜೊತೆಗೆ ಹೊಸ ವರ್ಷದ ವಿಶೇಷ ರೀಚಾರ್ಜ್‌ಗಳು ಬಿಡುಗಡೆ

ಹೊಸ ವರ್ಷಕ್ಕೂ ಮುನ್ನ ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಬಳಕೆದಾರರಿಗಾಗಿ Happy New Year 2026 ವಿಶೇಷ ರೀಚಾರ್ಜ್ ಯೋಜನೆಗಳನ್ನು ಘೋಷಿಸಿದೆ. ಈ ಬಾರಿ ಜಿಯೋ ಕೇವಲ ಡೇಟಾ ಮತ್ತು ಕರೆ ಸೇವೆಗಳಲ್ಲದೇ, AI ತಂತ್ರಜ್ಞಾನ ಮತ್ತು OTT ಮನರಂಜನೆ ಮೇಲೂ ವಿಶೇಷ ಗಮನ ಹರಿಸಿದೆ. ಬಳಕೆದಾರರಿಗೆ ತಡೆರಹಿತ ಸಂಪರ್ಕ, ಪ್ರೀಮಿಯಂ ಮನರಂಜನೆ ಹಾಗೂ ಆಧುನಿಕ AI ಅನುಭವ ಒದಗಿಸುವ ಉದ್ದೇಶದಿಂದ ಈ ಪ್ಲಾನ್‌ಗಳನ್ನು ವಿನ್ಯಾಸಗೊಳಿಸಲಾಗಿದೆ ಎಂದು ಜಿಯೋ ತಿಳಿಸಿದೆ.

🎉 ₹500 ಹ್ಯಾಪಿ ನ್ಯೂ ಇಯರ್ ಪ್ಲಾನ್

ಜಿಯೋ ಬಿಡುಗಡೆ ಮಾಡಿದ ಪ್ರಮುಖ ಆಫರ್‌ಗಳಲ್ಲಿ ₹500 ಹ್ಯಾಪಿ ನ್ಯೂ ಇಯರ್ ಪ್ಲಾನ್ ಹೆಚ್ಚು ಗಮನ ಸೆಳೆದಿದೆ. ಈ ಯೋಜನೆ 28 ದಿನಗಳ ಮಾನ್ಯತೆಯೊಂದಿಗೆ ದಿನಕ್ಕೆ 2GB ಡೇಟಾ ಮತ್ತು ಅನಿಯಮಿತ 5G ಡೇಟಾ ನೀಡುತ್ತದೆ. ಜೊತೆಗೆ ಅನ್ಲಿಮಿಟೆಡ್ ವಾಯ್ಸ್ ಕಾಲ್ಸ್ ಮತ್ತು ದಿನಕ್ಕೆ 100 SMS ಸೌಲಭ್ಯವೂ ಲಭ್ಯ.

OTT ಪ್ರಿಯರಿಗೆ ಈ ಪ್ಲಾನ್ ಭರ್ಜರಿ ಪ್ಯಾಕೇಜ್ ಆಗಿದ್ದು, Lionsgate Play, Discovery Plus, Sun NXT, Hoichoi, FanCode, JioTV, JioAICloud ಸೇರಿದಂತೆ ಹಲವು ಪ್ಲಾಟ್‌ಫಾರ್ಮ್‌ಗಳಿಗೆ ಪ್ರವೇಶ ಒದಗಿಸುತ್ತದೆ. ಇದಲ್ಲದೆ, ಸುಮಾರು ₹35,100 ಮೌಲ್ಯದ Google Gemini Pro AIಗೆ 18 ತಿಂಗಳ ಉಚಿತ ಚಂದಾದಾರಿಕೆ ಈ ಪ್ಲಾನ್‌ನಲ್ಲಿದೆ. (18 ವರ್ಷ ಮೇಲ್ಪಟ್ಟ ಬಳಕೆದಾರರಿಗೆ ಮಾತ್ರ ಲಭ್ಯ)

₹3,599 ವಾರ್ಷಿಕ ಪ್ಲಾನ್

ಜಿಯೋ ಹೊಸದಾಗಿ ₹3,599 ಬೆಲೆಯ ವಾರ್ಷಿಕ ಪ್ರಿಪೇಯ್ಡ್ ಪ್ಲಾನ್‌ನ್ನೂ ಪರಿಚಯಿಸಿದೆ. ಇದು 365 ದಿನಗಳ ಮಾನ್ಯತೆ, ದಿನಕ್ಕೆ 2.5GB ಡೇಟಾ, ಅನಿಯಮಿತ 5G ಡೇಟಾ, ಕಾಲ್ಸ್, SMS ಹಾಗೂ JioTV ಮತ್ತು JioAICloud ಪ್ರವೇಶವನ್ನು ಒಳಗೊಂಡಿದೆ. ಈ ಪ್ಲಾನ್‌ನಲ್ಲೂ 18 ತಿಂಗಳ Google Gemini Pro AI ಚಂದಾದಾರಿಕೆ ಲಭ್ಯ.

Flexi Data Add-On

ಹೆಚ್ಚುವರಿ ಡೇಟಾ ಮತ್ತು OTT ಪ್ರವೇಶ ಬೇಕಾದವರಿಗೆ ಜಿಯೋ ₹103 ಬೆಲೆಯ Flexi Data Add-On ಪರಿಚಯಿಸಿದೆ. ಇದು 28 ದಿನಗಳ ಮಾನ್ಯತೆಯೊಂದಿಗೆ 5GB ಡೇಟಾ ನೀಡುತ್ತದೆ. ಬಳಕೆದಾರರು ತಮ್ಮ ಇಷ್ಟದ OTT ಬಂಡಲ್ ಆಯ್ಕೆ ಮಾಡಿಕೊಳ್ಳಬಹುದಾಗಿದೆ.

ದೇಶ

LATEST NEWS “ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ”: ಅಮೆರಿಕಾ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ: ಅಮೆರಿಕದೊಂದಿಗೆ ನಡೆದ ವ್ಯಾಪಾರ ಒಪ್ಪಂದದ ಕುರಿತು ಲೋಕಸಭೆಯಲ್ಲಿ ಬಜೆಟ್ ಚರ್ಚೆಯ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಭಾರತ ಯಾರಿಂದ ತೈಲ ಖರೀದಿಸಬೇಕು ಎಂಬುದನ್ನೂ ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡು ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲವೇ?” ಎಂದು ಪ್ರಶ್ನಿಸಿದರು.

ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಂಡಿರುವುದು ಸರ್ಕಾರದ ಶರಣಾಗತಿ ರಾಜಕೀಯ ಎಂದು ಅವರು ಆರೋಪಿಸಿದರು. ಈ ಹಿಂದೆ ಭಾರತದ ಉತ್ಪನ್ನಗಳಿಗೆ 3% ಟ್ಯಾರಿಫ್ ಇದ್ದದ್ದು, ಈಗ ಅದನ್ನು 18%ಕ್ಕೆ ಏರಿಸಲಾಗಿದೆ. ಇದನ್ನು ಸರ್ಕಾರ ಸಾಧನೆ ಎಂದು ಬಿಂಬಿಸುತ್ತಿದೆ ಎಂದು ಟೀಕಿಸಿದರು.

ಟೆಕ್ಸ್‌ಟೈಲ್ ವಸ್ತುಗಳಿಗೆ ಭಾರತಕ್ಕೆ 18% ಟ್ಯಾರಿಫ್ ವಿಧಿಸಿರುವಾಗ, ಬಾಂಗ್ಲಾದೇಶಕ್ಕೆ 0% ಟ್ಯಾರಿಫ್ ನೀಡಲಾಗಿದೆ. “ಇದು ಭಾರತೀಯ ಕೈಗಾರಿಕೆಗಳಿಗೆ ಹಿನ್ನಡೆಯಾಗಿದೆ. ಟ್ರಂಪ್ ಮೋದಿ ಮೇಲೆ ಬಿಗಿಪಟ್ಟು ಹಾಕಿದ್ದಾರೆ” ಎಂದು ಹೇಳಿದರು.

ಈ ಒಪ್ಪಂದದ ಬಳಿಕ ಅಮೆರಿಕದ ಆಮದು 46 ಬಿಲಿಯನ್ ಡಾಲರ್‌ನಿಂದ 146 ಬಿಲಿಯನ್ ಡಾಲರ್‌ಗೆ ಏರಿಕೆಯಾಗಲಿದೆ ಎಂದು ಹೇಳಿದ ರಾಹುಲ್, “ಅಮೆರಿಕಕ್ಕೆ ಭಾರತದ ಬಗ್ಗೆ ಬದ್ಧತೆ ಇಲ್ಲ. ಆದರೆ ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿದೆ. ನಾವು ಮೂರ್ಖರಂತೆ ನಿಂತಿದ್ದೇವೆ” ಎಂದು ಕಿಡಿಕಾರಿದರು.

Continue Reading

ದೇಶ

BIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್‌, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ

ಹೊಸದಿಲ್ಲಿ: ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ 10ಕ್ಕೂ ಹೆಚ್ಚು ಕೇಂದ್ರ ಕಾರ್ಮಿಕ ಸಂಘಟನೆಗಳು ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ. ಈ ಮುಷ್ಕರದಲ್ಲಿ ಕನಿಷ್ಠ 30 ಕೋಟಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ತಿಳಿಸಿದ್ದಾರೆ.

600ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಷ್ಕರದ ಪರಿಣಾಮ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಬ್ಯಾಂಕ್‌, ವಿಮಾ, ರಕ್ಷಣಾ, ರೈಲ್ವೆ, ಬಂದರು, ವಿಮಾನಯಾನ ಹಾಗೂ ವಿವಿಧ ಗುತ್ತಿಗೆ ಕಾರ್ಮಿಕರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರು, ಶಿಕ್ಷಕರು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ಸಹ ಪ್ರತಿಭಟನೆಗಳಲ್ಲಿ ಭಾಗಿಯಾಗಲಿವೆ.

ನವೆಂಬರ್ 2025ರಲ್ಲಿ ಸೂಚಿಸಲಾದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವುದು, ವಿದ್ಯುತ್ ತಿದ್ದುಪಡಿ ಮಸೂದೆ ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಂಘಟನೆಗಳು ಮುಂದಿಟ್ಟಿವೆ. ಒಡಿಶಾ ಮತ್ತು ಅಸ್ಸಾಂ ರಾಜ್ಯಗಳು ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಶಾಲೆ-ಕಾಲೇಜುಗಳ ಮುಚ್ಚುವಿಕೆ ಕುರಿತು ಅಧಿಕೃತ ಘೋಷಣೆ ಇಲ್ಲದಿದ್ದರೂ, ಕೆಲವು ರಾಜ್ಯಗಳಲ್ಲಿ ವ್ಯತ್ಯಯ ಸಾಧ್ಯತೆ ಇದೆ. ಸಾರ್ವಜನಿಕ ಸಾರಿಗೆ ಸೇವೆಗಳು ಅಸ್ತವ್ಯಸ್ತವಾಗಬಹುದು. ಆದರೆ ಹಾಲು, ಆಸ್ಪತ್ರೆ, ಮೆಡಿಕಲ್‌, ಅಗ್ನಿಶಾಮಕ ಮತ್ತು ಆಂಬ್ಯುಲೆನ್ಸ್ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ.

Continue Reading

ದೇಶ

638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ

ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.

ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.

Continue Reading

Trending