Connect with us

ದೇಶ

‘ಕಲೆಕ್ಷನ್ ಕಿಂಗ್ ಅಂದ್ರೆ ವಿಜಯೇಂದ್ರ’ – ಡಿಕೆಶಿ ಕಿಡಿ

ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿರುವ ಆರೋಪಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕಲೆಕ್ಷನ್ ಕಿಂಗ್ ಅಂದ್ರೆ ಅದು ವಿಜಯೇಂದ್ರ. ಅವರ ಕಲೆಕ್ಷನ್ ಮತ್ತು ವರ್ಗಾವಣೆ ದಂಧೆ ಎಲ್ಲವನ್ನೂ ಬಿಚ್ಚಿಡಬೇಕಾ?” ಎಂದು ಬೆಳಗಾವಿಯಲ್ಲಿ ಡಿಕೆಶಿ ಕಿಡಿಕಾರಿದರು.

“ರಾಜ್ಯದ ಖಜಾನೆ ಲೂಟಿ ಮಾಡಿ ಕಾಂಗ್ರೆಸ್ ಹೈಕಮಾಂಡ್ ತೃಪ್ತಿ ಪಡಿಸುತ್ತಿದೆ” ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, “ವಿಜಯೇಂದ್ರಗೆ ಅನುಭವವೇ ಇಲ್ಲ. ಯಾವ ಖಜಾನೆ ಖಾಲಿಯಾಗಿದೆ ಎಂದು ಸದನಕ್ಕೆ ಬಂದು ಪ್ರಶ್ನೆ ಮಾಡಲಿ. ಹೊರಗಿಂದ ತಪ್ಪಿಸಿಕೊಂಡು ಮಾತನಾಡೋದು ಬೇಡ” ಎಂದು ಸವಾಲು ಹಾಕಿದರು.

“ಅವರಪ್ಪನ ಹೆಸರು ಕೆಡಿಸಿದ್ದು ವಿಜಯೇಂದ್ರನೇ. ಅವರ ಕಲೆಕ್ಷನ್ ಹಾಗೂ ವರ್ಗಾವಣೆ ದಂದೆಗಳ ಬಗ್ಗೆ ಮಾತನಾಡಬೇಕಾ?” ಎಂದು ಪ್ರಶ್ನಿಸಿದ ಡಿಕೆಶಿ, ಬಿಜೆಪಿ ನಾಯಕತ್ವದ ಮೇಲೆ ಗಂಭೀರ ಆರೋಪಗಳನ್ನು ಹೊರಿಸಿದರು.

ಇದೇ ವೇಳೆ ಉತ್ತರ ಕರ್ನಾಟಕ ಅಭಿವೃದ್ಧಿ ವಿಚಾರ ಕುರಿತು ಮಾತನಾಡಿದ ಅವರು, “ಮುಖ್ಯಮಂತ್ರಿ ಮತ್ತು ಕಂದಾಯ ಸಚಿವರು ಉತ್ತರ ಕರ್ನಾಟಕದ ಅಭಿವೃದ್ಧಿ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ. ಮಹದಾಯಿ ಮತ್ತು ನೀರಾವರಿ ಯೋಜನೆಗಳ ಬಗ್ಗೆ ನಾನು ಸಹ ಸದನದಲ್ಲಿ ಉತ್ತರ ಕೊಡುತ್ತೇನೆ” ಎಂದರು.

ರಾಜ್ಯ ಸರ್ಕಾರ ರೈತರ ಪರವಾಗಿ ನಿಂತಿದೆ ಎಂದು ಸ್ಪಷ್ಟಪಡಿಸಿದ ಡಿಕೆ ಶಿವಕುಮಾರ್, “ಕಬ್ಬು ಮತ್ತು ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಿದ್ದೇವೆ. ಇದರಿಂದ ಸರ್ಕಾರಕ್ಕೆ ಹಾಗೂ ಸಕ್ಕರೆ ಕಾರ್ಖಾನೆಗಳಿಗೆ ಭಾರೀ ಹೊರೆಯಾಗಿದ್ದರೂ, ರೈತರ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಂಡಿದ್ದೇವೆ. ಇದನ್ನು ರೈತರು ಅರ್ಥ ಮಾಡಿಕೊಳ್ಳಬೇಕು” ಎಂದು ಹೇಳಿದರು.

ಡಿಕೆಶಿಯ ಈ ಹೇಳಿಕೆಗಳು ಬೆಳಗಾವಿ ಅಧಿವೇಶನದ ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವೇರಿಸಿವೆ.

Continue Reading
Click to comment

Leave a Reply

Your email address will not be published. Required fields are marked *

ಅಪರಾಧ

ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.

ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.

ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.

ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ದೇಶ

LATEST NEWS “ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ”: ಅಮೆರಿಕಾ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ: ಅಮೆರಿಕದೊಂದಿಗೆ ನಡೆದ ವ್ಯಾಪಾರ ಒಪ್ಪಂದದ ಕುರಿತು ಲೋಕಸಭೆಯಲ್ಲಿ ಬಜೆಟ್ ಚರ್ಚೆಯ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಭಾರತ ಯಾರಿಂದ ತೈಲ ಖರೀದಿಸಬೇಕು ಎಂಬುದನ್ನೂ ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡು ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲವೇ?” ಎಂದು ಪ್ರಶ್ನಿಸಿದರು.

ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಂಡಿರುವುದು ಸರ್ಕಾರದ ಶರಣಾಗತಿ ರಾಜಕೀಯ ಎಂದು ಅವರು ಆರೋಪಿಸಿದರು. ಈ ಹಿಂದೆ ಭಾರತದ ಉತ್ಪನ್ನಗಳಿಗೆ 3% ಟ್ಯಾರಿಫ್ ಇದ್ದದ್ದು, ಈಗ ಅದನ್ನು 18%ಕ್ಕೆ ಏರಿಸಲಾಗಿದೆ. ಇದನ್ನು ಸರ್ಕಾರ ಸಾಧನೆ ಎಂದು ಬಿಂಬಿಸುತ್ತಿದೆ ಎಂದು ಟೀಕಿಸಿದರು.

ಟೆಕ್ಸ್‌ಟೈಲ್ ವಸ್ತುಗಳಿಗೆ ಭಾರತಕ್ಕೆ 18% ಟ್ಯಾರಿಫ್ ವಿಧಿಸಿರುವಾಗ, ಬಾಂಗ್ಲಾದೇಶಕ್ಕೆ 0% ಟ್ಯಾರಿಫ್ ನೀಡಲಾಗಿದೆ. “ಇದು ಭಾರತೀಯ ಕೈಗಾರಿಕೆಗಳಿಗೆ ಹಿನ್ನಡೆಯಾಗಿದೆ. ಟ್ರಂಪ್ ಮೋದಿ ಮೇಲೆ ಬಿಗಿಪಟ್ಟು ಹಾಕಿದ್ದಾರೆ” ಎಂದು ಹೇಳಿದರು.

ಈ ಒಪ್ಪಂದದ ಬಳಿಕ ಅಮೆರಿಕದ ಆಮದು 46 ಬಿಲಿಯನ್ ಡಾಲರ್‌ನಿಂದ 146 ಬಿಲಿಯನ್ ಡಾಲರ್‌ಗೆ ಏರಿಕೆಯಾಗಲಿದೆ ಎಂದು ಹೇಳಿದ ರಾಹುಲ್, “ಅಮೆರಿಕಕ್ಕೆ ಭಾರತದ ಬಗ್ಗೆ ಬದ್ಧತೆ ಇಲ್ಲ. ಆದರೆ ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿದೆ. ನಾವು ಮೂರ್ಖರಂತೆ ನಿಂತಿದ್ದೇವೆ” ಎಂದು ಕಿಡಿಕಾರಿದರು.

Continue Reading

ದೇಶ

BIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್‌, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ

ಹೊಸದಿಲ್ಲಿ: ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ 10ಕ್ಕೂ ಹೆಚ್ಚು ಕೇಂದ್ರ ಕಾರ್ಮಿಕ ಸಂಘಟನೆಗಳು ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ. ಈ ಮುಷ್ಕರದಲ್ಲಿ ಕನಿಷ್ಠ 30 ಕೋಟಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ತಿಳಿಸಿದ್ದಾರೆ.

600ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಷ್ಕರದ ಪರಿಣಾಮ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಬ್ಯಾಂಕ್‌, ವಿಮಾ, ರಕ್ಷಣಾ, ರೈಲ್ವೆ, ಬಂದರು, ವಿಮಾನಯಾನ ಹಾಗೂ ವಿವಿಧ ಗುತ್ತಿಗೆ ಕಾರ್ಮಿಕರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರು, ಶಿಕ್ಷಕರು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ಸಹ ಪ್ರತಿಭಟನೆಗಳಲ್ಲಿ ಭಾಗಿಯಾಗಲಿವೆ.

ನವೆಂಬರ್ 2025ರಲ್ಲಿ ಸೂಚಿಸಲಾದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವುದು, ವಿದ್ಯುತ್ ತಿದ್ದುಪಡಿ ಮಸೂದೆ ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಂಘಟನೆಗಳು ಮುಂದಿಟ್ಟಿವೆ. ಒಡಿಶಾ ಮತ್ತು ಅಸ್ಸಾಂ ರಾಜ್ಯಗಳು ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಶಾಲೆ-ಕಾಲೇಜುಗಳ ಮುಚ್ಚುವಿಕೆ ಕುರಿತು ಅಧಿಕೃತ ಘೋಷಣೆ ಇಲ್ಲದಿದ್ದರೂ, ಕೆಲವು ರಾಜ್ಯಗಳಲ್ಲಿ ವ್ಯತ್ಯಯ ಸಾಧ್ಯತೆ ಇದೆ. ಸಾರ್ವಜನಿಕ ಸಾರಿಗೆ ಸೇವೆಗಳು ಅಸ್ತವ್ಯಸ್ತವಾಗಬಹುದು. ಆದರೆ ಹಾಲು, ಆಸ್ಪತ್ರೆ, ಮೆಡಿಕಲ್‌, ಅಗ್ನಿಶಾಮಕ ಮತ್ತು ಆಂಬ್ಯುಲೆನ್ಸ್ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ.

Continue Reading

Trending