Connect with us

ದೇಶ

ಜೆಡಿಎಸ್ ಸಮಾವೇಶಕ್ಕೂ ಮುನ್ನ ಹರದನಹಳ್ಳಿಯಲ್ಲಿ ದೇವೇಶ್ವರ ದರ್ಶನ ಮಾಡಿದ ಎಚ್.ಡಿ.ದೇವೇಗೌಡ

ಹಾಸನ: ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ಹಿರಿಯ ನಾಯಕ ಎಚ್‌.ಡಿ.ದೇವೇಗೌಡರು (H.D. Devegowda) ಇಂದು ಹೊಳೆನರಸೀಪುರ ತಾಲೂಕಿನ ತಮ್ಮ ಹುಟ್ಟೂರು ಹರದನಹಳ್ಳಿ ಗ್ರಾಮದಲ್ಲಿರುವ ಮನೆ ದೇವರಾದ ದೇವೇಶ್ವರನ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಗ್ರಾಮಕ್ಕೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಅವರು, ದೇವಾಲಯಕ್ಕೆ ಭೇಟಿ ನೀಡಿ ಹೋಮ–ಹವನ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಿದರು.

ಈ ಸಂದರ್ಭ ದೇವೇಗೌಡರಿಗೆ ಪುತ್ರ ಹಾಗೂ ಮಾಜಿ ಸಚಿವ ಎಚ್‌.ಡಿ.ರೇವಣ್ಣ, ಭವಾನಿ ರೇವಣ್ಣ ಹಾಗೂ ಸ್ಥಳೀಯ ಶಾಸಕ ಎಚ್‌.ಪಿ.ಸ್ವರೂಪ್ ಪ್ರಕಾಶ್ ಸಾಥ್ ನೀಡಿದರು. ಪೂಜೆಯ ವೇಳೆ ಕುಟುಂಬ ಸದಸ್ಯರು ಹಾಗೂ ಆಪ್ತರು ಉಪಸ್ಥಿತರಿದ್ದು, ದೇವರ ಅನುಗ್ರಹ ಕೋರಿದರು.

ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳ ಹಿನ್ನೆಲೆ ಹಾಸನ ಜಿಲ್ಲೆಯಲ್ಲಿ ಆಯೋಜಿಸಿದ್ದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸುವ ಉದ್ದೇಶದಿಂದ ದೇವೇಗೌಡರು ಹಾಸನಕ್ಕೆ ಆಗಮಿಸಿದ್ದರು. ರಾಜಕೀಯ ಕಾರ್ಯಕ್ರಮಕ್ಕೆ ಮೊದಲು ಮನೆ ದೇವರ ದರ್ಶನ ಪಡೆದು ಆಶೀರ್ವಾದ ಪಡೆಯುವುದು ತಮ್ಮ ಪರಂಪರೆಯ ಭಾಗವಾಗಿದ್ದು, ಅದೇ ರೀತಿಯಲ್ಲಿ ಇಂದು ದೇವೇಶ್ವರನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಒಂದು ವರ್ಷದ ಹಿಂದೆ ಕೂಡ ದೇವೇಗೌಡರು ದೇವೇಶ್ವರ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇದೀಗ ಮತ್ತೆ ದೇವರ ದರ್ಶನ ಪಡೆದಿರುವುದು ಸ್ಥಳೀಯ ಜೆಡಿಎಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ಸಮಾವೇಶಕ್ಕೂ ಮುನ್ನ ದೇವರ ಮೊರೆ ಹೋದ ಈ ಘಟನೆ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಸ್ಥಳೀಯ ಚುನಾವಣೆಗಳ ಹಿನ್ನೆಲೆಯಲ್ಲಿ ಇದರ ಮಹತ್ವ ಹೆಚ್ಚಾಗಿದೆ.

Continue Reading
Click to comment

Leave a Reply

Your email address will not be published. Required fields are marked *

ಅಪರಾಧ

ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.

ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.

ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.

ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ದೇಶ

LATEST NEWS “ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ”: ಅಮೆರಿಕಾ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ: ಅಮೆರಿಕದೊಂದಿಗೆ ನಡೆದ ವ್ಯಾಪಾರ ಒಪ್ಪಂದದ ಕುರಿತು ಲೋಕಸಭೆಯಲ್ಲಿ ಬಜೆಟ್ ಚರ್ಚೆಯ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಭಾರತ ಯಾರಿಂದ ತೈಲ ಖರೀದಿಸಬೇಕು ಎಂಬುದನ್ನೂ ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡು ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲವೇ?” ಎಂದು ಪ್ರಶ್ನಿಸಿದರು.

ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಂಡಿರುವುದು ಸರ್ಕಾರದ ಶರಣಾಗತಿ ರಾಜಕೀಯ ಎಂದು ಅವರು ಆರೋಪಿಸಿದರು. ಈ ಹಿಂದೆ ಭಾರತದ ಉತ್ಪನ್ನಗಳಿಗೆ 3% ಟ್ಯಾರಿಫ್ ಇದ್ದದ್ದು, ಈಗ ಅದನ್ನು 18%ಕ್ಕೆ ಏರಿಸಲಾಗಿದೆ. ಇದನ್ನು ಸರ್ಕಾರ ಸಾಧನೆ ಎಂದು ಬಿಂಬಿಸುತ್ತಿದೆ ಎಂದು ಟೀಕಿಸಿದರು.

ಟೆಕ್ಸ್‌ಟೈಲ್ ವಸ್ತುಗಳಿಗೆ ಭಾರತಕ್ಕೆ 18% ಟ್ಯಾರಿಫ್ ವಿಧಿಸಿರುವಾಗ, ಬಾಂಗ್ಲಾದೇಶಕ್ಕೆ 0% ಟ್ಯಾರಿಫ್ ನೀಡಲಾಗಿದೆ. “ಇದು ಭಾರತೀಯ ಕೈಗಾರಿಕೆಗಳಿಗೆ ಹಿನ್ನಡೆಯಾಗಿದೆ. ಟ್ರಂಪ್ ಮೋದಿ ಮೇಲೆ ಬಿಗಿಪಟ್ಟು ಹಾಕಿದ್ದಾರೆ” ಎಂದು ಹೇಳಿದರು.

ಈ ಒಪ್ಪಂದದ ಬಳಿಕ ಅಮೆರಿಕದ ಆಮದು 46 ಬಿಲಿಯನ್ ಡಾಲರ್‌ನಿಂದ 146 ಬಿಲಿಯನ್ ಡಾಲರ್‌ಗೆ ಏರಿಕೆಯಾಗಲಿದೆ ಎಂದು ಹೇಳಿದ ರಾಹುಲ್, “ಅಮೆರಿಕಕ್ಕೆ ಭಾರತದ ಬಗ್ಗೆ ಬದ್ಧತೆ ಇಲ್ಲ. ಆದರೆ ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿದೆ. ನಾವು ಮೂರ್ಖರಂತೆ ನಿಂತಿದ್ದೇವೆ” ಎಂದು ಕಿಡಿಕಾರಿದರು.

Continue Reading

ದೇಶ

BIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್‌, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ

ಹೊಸದಿಲ್ಲಿ: ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ 10ಕ್ಕೂ ಹೆಚ್ಚು ಕೇಂದ್ರ ಕಾರ್ಮಿಕ ಸಂಘಟನೆಗಳು ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ. ಈ ಮುಷ್ಕರದಲ್ಲಿ ಕನಿಷ್ಠ 30 ಕೋಟಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ತಿಳಿಸಿದ್ದಾರೆ.

600ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಷ್ಕರದ ಪರಿಣಾಮ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಬ್ಯಾಂಕ್‌, ವಿಮಾ, ರಕ್ಷಣಾ, ರೈಲ್ವೆ, ಬಂದರು, ವಿಮಾನಯಾನ ಹಾಗೂ ವಿವಿಧ ಗುತ್ತಿಗೆ ಕಾರ್ಮಿಕರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರು, ಶಿಕ್ಷಕರು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ಸಹ ಪ್ರತಿಭಟನೆಗಳಲ್ಲಿ ಭಾಗಿಯಾಗಲಿವೆ.

ನವೆಂಬರ್ 2025ರಲ್ಲಿ ಸೂಚಿಸಲಾದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವುದು, ವಿದ್ಯುತ್ ತಿದ್ದುಪಡಿ ಮಸೂದೆ ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಂಘಟನೆಗಳು ಮುಂದಿಟ್ಟಿವೆ. ಒಡಿಶಾ ಮತ್ತು ಅಸ್ಸಾಂ ರಾಜ್ಯಗಳು ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಶಾಲೆ-ಕಾಲೇಜುಗಳ ಮುಚ್ಚುವಿಕೆ ಕುರಿತು ಅಧಿಕೃತ ಘೋಷಣೆ ಇಲ್ಲದಿದ್ದರೂ, ಕೆಲವು ರಾಜ್ಯಗಳಲ್ಲಿ ವ್ಯತ್ಯಯ ಸಾಧ್ಯತೆ ಇದೆ. ಸಾರ್ವಜನಿಕ ಸಾರಿಗೆ ಸೇವೆಗಳು ಅಸ್ತವ್ಯಸ್ತವಾಗಬಹುದು. ಆದರೆ ಹಾಲು, ಆಸ್ಪತ್ರೆ, ಮೆಡಿಕಲ್‌, ಅಗ್ನಿಶಾಮಕ ಮತ್ತು ಆಂಬ್ಯುಲೆನ್ಸ್ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ.

Continue Reading

Trending