Connect with us

ದೇಶ

ಯಲಹಂಕ ಮಾದಪ್ಪನಹಳ್ಳಿಯಲ್ಲಿ ‘ಬಸವಣ್ಣ ಉದ್ಯಾನ’: ಪರಿಸರ ಸಂರಕ್ಷಣೆಗೆ ಹೊಸ ಆಯಾಮ

ಬೆಂಗಳೂರು: ಅರಣ್ಯ ಇಲಾಖೆ ಯಲಹಂಕ ಸಮೀಪದ ಮಾದಪ್ಪನಹಳ್ಳಿಯಲ್ಲಿ 153 ಎಕರೆ ವಿಸ್ತೀರ್ಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಲಾಲ್ ಬಾಗ್ ಹಾಗೂ ಕಬ್ಬನ್ ಪಾರ್ಕ್ ನಂತರ ಮೂರನೇ ಅತಿದೊಡ್ಡ ಉದ್ಯಾನ ನಿರ್ಮಾಣವಾಗಲಿದೆ.

ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, 1760ರಲ್ಲಿ 240 ಎಕರೆ ಪ್ರದೇಶದಲ್ಲಿ ಲಾಲ್ ಬಾಗ್ ಹಾಗೂ 1870ರಲ್ಲಿ 197 ಎಕರೆ ಪ್ರದೇಶದಲ್ಲಿ ಕಬ್ಬನ್ ಪಾರ್ಕ್ ನಿರ್ಮಾಣವಾಗಿದ್ದು, ಕಬ್ಬನ್ ಪಾರ್ಕ್ ನಿರ್ಮಾಣವಾಗಿ 155 ವರ್ಷಗಳಾಗಿವೆ ಎಂದು ನೆನಪಿಸಿದರು. ಇಷ್ಟು ವರ್ಷಗಳ ಬಳಿಕ ಬೆಂಗಳೂರಿನಲ್ಲಿ ಬೃಹತ್ ಉದ್ಯಾನ ನಿರ್ಮಾಣವಾಗುತ್ತಿರುವುದು ಐತಿಹಾಸಿಕ ಹೆಜ್ಜೆ ಎಂದು ಅವರು ಹೇಳಿದರು.

ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿ ಅಭಿವೃದ್ಧಿಗೊಳ್ಳಲಿರುವ ಈ ಉದ್ಯಾನವನ್ನು ಮೊದಲಿಗೆ ನೆಡುತೋಪಿಗಾಗಿ ಬಳಸಲಾಗುತ್ತಿತ್ತು. ಈಗ ಅರಣ್ಯ ಇಲಾಖೆ ಈ ಜಾಗವನ್ನು ಮರಳಿ ಪಡೆದು, ಇಲ್ಲಿನ ನೀಲಗಿರಿ ಮರಗಳನ್ನು ಹಂತಹಂತವಾಗಿ ತೆಗೆದು, ಸ್ಥಳೀಯ ಜಾತಿಯ ಗಿಡಮರಗಳನ್ನು ನೆಟ್ಟು ಜೀವವೈವಿಧ್ಯ ಉದ್ಯಾನವಾಗಿ ರೂಪಿಸಲು ಯೋಜನೆ ಸಿದ್ಧಪಡಿಸಿದೆ. ಮೂರು ವರ್ಷಗಳೊಳಗೆ ಯೋಜನೆ ಪೂರ್ಣಗೊಳಿಸುವ ಗುರಿ ಇಡಲಾಗಿದೆ.

ಈ ಉದ್ಯಾನದಲ್ಲಿ ದಿವ್ಯೌಷಧೀಯ ಸಸ್ಯವನ, ಪಕ್ಷಿ ಲೋಕ, ವೃಕ್ಷೋದ್ಯಾನ ಹಾಗೂ ಇಂಟರ್‌ಪ್ರಿಟೇಶನ್ ಸೆಂಟರ್ ನಿರ್ಮಾಣವಾಗಲಿದೆ. ಪ್ರತಿಯೊಂದು ಮರದ ಬಳಿ ವೈಜ್ಞಾನಿಕ ಮಾಹಿತಿ ಫಲಕ ಅಳವಡಿಸಿ, ಮುಂದಿನ ಪೀಳಿಗೆಗೆ ಪರಿಸರ ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿದೆ. ಶಿವರಾಮಕಾರಂತ ಬಡಾವಣೆಗೆ ಸಮೀಪದಲ್ಲಿರುವ ಈ ಉದ್ಯಾನ ಶೀಘ್ರದಲ್ಲೇ ಸಾರ್ವಜನಿಕರಿಗೆ ಲಭ್ಯವಾಗಲಿದೆ.

ಅಪರಾಧ

ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.

ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.

ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.

ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ದೇಶ

LATEST NEWS “ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ”: ಅಮೆರಿಕಾ ಒಪ್ಪಂದದ ವಿರುದ್ಧ ರಾಹುಲ್ ಗಾಂಧಿ ಕಿಡಿ

ನವದೆಹಲಿ: ಅಮೆರಿಕದೊಂದಿಗೆ ನಡೆದ ವ್ಯಾಪಾರ ಒಪ್ಪಂದದ ಕುರಿತು ಲೋಕಸಭೆಯಲ್ಲಿ ಬಜೆಟ್ ಚರ್ಚೆಯ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಭಾರತ ಯಾರಿಂದ ತೈಲ ಖರೀದಿಸಬೇಕು ಎಂಬುದನ್ನೂ ಅಮೆರಿಕ ನಿರ್ಧರಿಸುತ್ತಿದೆ. ಅಮೆರಿಕದೊಂದಿಗೆ ಒಪ್ಪಂದ ಮಾಡಿಕೊಂಡು ಭಾರತ ಮಾತೆಯನ್ನು ಮಾರಾಟ ಮಾಡಿದ್ದೀರಿ. ನಿಮಗೆ ನಾಚಿಕೆ ಇಲ್ಲವೇ?” ಎಂದು ಪ್ರಶ್ನಿಸಿದರು.

ಸಮಾನ ಪ್ರಯೋಜನಗಳನ್ನು ಪಡೆಯದೇ ಒಪ್ಪಂದ ಮಾಡಿಕೊಂಡಿರುವುದು ಸರ್ಕಾರದ ಶರಣಾಗತಿ ರಾಜಕೀಯ ಎಂದು ಅವರು ಆರೋಪಿಸಿದರು. ಈ ಹಿಂದೆ ಭಾರತದ ಉತ್ಪನ್ನಗಳಿಗೆ 3% ಟ್ಯಾರಿಫ್ ಇದ್ದದ್ದು, ಈಗ ಅದನ್ನು 18%ಕ್ಕೆ ಏರಿಸಲಾಗಿದೆ. ಇದನ್ನು ಸರ್ಕಾರ ಸಾಧನೆ ಎಂದು ಬಿಂಬಿಸುತ್ತಿದೆ ಎಂದು ಟೀಕಿಸಿದರು.

ಟೆಕ್ಸ್‌ಟೈಲ್ ವಸ್ತುಗಳಿಗೆ ಭಾರತಕ್ಕೆ 18% ಟ್ಯಾರಿಫ್ ವಿಧಿಸಿರುವಾಗ, ಬಾಂಗ್ಲಾದೇಶಕ್ಕೆ 0% ಟ್ಯಾರಿಫ್ ನೀಡಲಾಗಿದೆ. “ಇದು ಭಾರತೀಯ ಕೈಗಾರಿಕೆಗಳಿಗೆ ಹಿನ್ನಡೆಯಾಗಿದೆ. ಟ್ರಂಪ್ ಮೋದಿ ಮೇಲೆ ಬಿಗಿಪಟ್ಟು ಹಾಕಿದ್ದಾರೆ” ಎಂದು ಹೇಳಿದರು.

ಈ ಒಪ್ಪಂದದ ಬಳಿಕ ಅಮೆರಿಕದ ಆಮದು 46 ಬಿಲಿಯನ್ ಡಾಲರ್‌ನಿಂದ 146 ಬಿಲಿಯನ್ ಡಾಲರ್‌ಗೆ ಏರಿಕೆಯಾಗಲಿದೆ ಎಂದು ಹೇಳಿದ ರಾಹುಲ್, “ಅಮೆರಿಕಕ್ಕೆ ಭಾರತದ ಬಗ್ಗೆ ಬದ್ಧತೆ ಇಲ್ಲ. ಆದರೆ ಭಾರತ ಅಮೆರಿಕದ ಮೇಲೆ ಅವಲಂಬಿತವಾಗಿದೆ. ನಾವು ಮೂರ್ಖರಂತೆ ನಿಂತಿದ್ದೇವೆ” ಎಂದು ಕಿಡಿಕಾರಿದರು.

Continue Reading

ದೇಶ

BIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್‌, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ

ಹೊಸದಿಲ್ಲಿ: ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ದೇಶಾದ್ಯಂತ 10ಕ್ಕೂ ಹೆಚ್ಚು ಕೇಂದ್ರ ಕಾರ್ಮಿಕ ಸಂಘಟನೆಗಳು ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ. ಈ ಮುಷ್ಕರದಲ್ಲಿ ಕನಿಷ್ಠ 30 ಕೋಟಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮರ್‌ಜೀತ್ ಕೌರ್ ತಿಳಿಸಿದ್ದಾರೆ.

600ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಷ್ಕರದ ಪರಿಣಾಮ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಬ್ಯಾಂಕ್‌, ವಿಮಾ, ರಕ್ಷಣಾ, ರೈಲ್ವೆ, ಬಂದರು, ವಿಮಾನಯಾನ ಹಾಗೂ ವಿವಿಧ ಗುತ್ತಿಗೆ ಕಾರ್ಮಿಕರು ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ರಾಜ್ಯ ಸರ್ಕಾರಿ ನೌಕರರು, ಶಿಕ್ಷಕರು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ಸಹ ಪ್ರತಿಭಟನೆಗಳಲ್ಲಿ ಭಾಗಿಯಾಗಲಿವೆ.

ನವೆಂಬರ್ 2025ರಲ್ಲಿ ಸೂಚಿಸಲಾದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವುದು, ವಿದ್ಯುತ್ ತಿದ್ದುಪಡಿ ಮಸೂದೆ ಹಿಂಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಂಘಟನೆಗಳು ಮುಂದಿಟ್ಟಿವೆ. ಒಡಿಶಾ ಮತ್ತು ಅಸ್ಸಾಂ ರಾಜ್ಯಗಳು ಸಂಪೂರ್ಣ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಶಾಲೆ-ಕಾಲೇಜುಗಳ ಮುಚ್ಚುವಿಕೆ ಕುರಿತು ಅಧಿಕೃತ ಘೋಷಣೆ ಇಲ್ಲದಿದ್ದರೂ, ಕೆಲವು ರಾಜ್ಯಗಳಲ್ಲಿ ವ್ಯತ್ಯಯ ಸಾಧ್ಯತೆ ಇದೆ. ಸಾರ್ವಜನಿಕ ಸಾರಿಗೆ ಸೇವೆಗಳು ಅಸ್ತವ್ಯಸ್ತವಾಗಬಹುದು. ಆದರೆ ಹಾಲು, ಆಸ್ಪತ್ರೆ, ಮೆಡಿಕಲ್‌, ಅಗ್ನಿಶಾಮಕ ಮತ್ತು ಆಂಬ್ಯುಲೆನ್ಸ್ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ.

Continue Reading

Trending