Connect with us

ಆರೋಗ್ಯ

ಗರುಡಾಸನ

Published

on

ಗರುಡಾಸನ

ಗರುಡಾಸನ ಯೋಗವನ್ನು ಹದ್ದಿನ ಭಂಗಿ ಎಂದೂ ಕರೆಯುತ್ತಾರೆ ಏಕೆಂದರೆ ದೇಹದ ಅಂತಿಮ ಸ್ಥಾನವು ಹದ್ದಿನ ಕೊಕ್ಕನ್ನು ಹೋಲುತ್ತದೆ. ಹದ್ದು ಯೋಗಾಸನವು ಏಕಾಗ್ರತೆ, ಜಾಗರೂಕತೆ ಮತ್ತು ಮನಸ್ಸಿನ ಅರಿವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.ಈ ಹೆಸರನ್ನು ಮಧ್ಯಕಾಲೀನ ಹಠ ಯೋಗದಲ್ಲಿ ವಿಭಿನ್ನ ಭಂಗಿಗಾಗಿ ಬಳಸಲಾಯಿತು. ಗರುಡಾಸನ, ಭಿನ್ನ ಕೈ ಸ್ಥಾನ.ಗರುಡಾಸನವು ನಿಂತಿರುವ ಭಂಗಿಯಲ್ಲಿ ಸಮತೋಲನದ ಭಂಗಿಯಾಗಿದೆ .ಗರುಡಾಸನದಿಂದ ಮೀನಖಂಡ ಮತ್ತು ತೊಡೆಗಳಲ್ಲಿರುವ ಕೊಬ್ಬಿನಂಶ ಕರಗುವುದು. ಕಾಲಿನ ಮಣಿಗಂಟು ಸಡಿಲವಾಗುವುದು.ಯೋಗ ನಮ್ಮ ಆರೋಗ್ಯವನ್ನು ಕಾಪಾಡುತ್ತದೆ. ಮಾನಸಿಕ-ದೈಹಿಕ ಆರೋಗ್ಯದ ಜೊತೆಗೆ ಯೋಗದಿಂದ ಅನೇಕ ಉಪಯೋಗಗಳಿವೆ. ಅದ್ರಲ್ಲಿ ಗರುಡಾಸನ ಪುರುಷರಿಗೆ ಹೇಳಿ ಮಾಡಿಸಿದಂತ ಆಸನ. ನೀವು ಒಮ್ಮೆ ಟ್ರೈ ಮಾಡಿ. ಗರುಡಾಸನ ಪುರುಷರಿಗೆ ಹೆಚ್ಚು ಉಪಯುಕ್ತವಾಗಿದೆ.

ಗರುಡಾಸನ ಮಾಡುವ ವಿಧಾನ:
⦁ ಈ ಆಸನದಲ್ಲಿ ಮೊದಲಿಗೆ ಎಡಗಾಲನ್ನು ಮಡಿಸಿ.
⦁ ಎಡ ಮಂಡಿಗೆ ಬಲಪಾದವನ್ನು ಸುತ್ತಿಸಿ.
⦁ ಬಲಗಾಲಿನ ಹೆಬ್ಬೆರಳಿನಿಂದ ಎಡಗಾಲಿನ ಮೀನಖಂಡವನ್ನು ಸುತ್ತಿ.
⦁ ಬೆನ್ನು ನೇರವಾಗಿರಲಿ.
⦁ ಎಡ ಮೊಣಕೈಯ ಮೇಲೆ ಬಲ ಮೊಣಕೈಯನ್ನು ತೆಗೆದುಕೊಂಡು ಎರಡು ಕೈಗಳನ್ನು ಒಂದಕ್ಕೊಂದು ಸುತ್ತಿ ಎರಡೂ ಕೈಗಳು ನಮಸ್ಕಾರ ಸ್ಥಿತಿಯಲ್ಲಿರಲಿ.
⦁ ದೃಷ್ಟಿ ನೇರವಾಗಿರಲಿ.
⦁ ಈ ಸಮಯದಲ್ಲಿ ಸ್ವಲ್ಪ ಕೆಳಗೆ ಕುಳಿತಿರಬೇಕು. ಎಡ ಪಾದವನ್ನು ಚೆನ್ನಾಗಿ ನೆಲಕ್ಕೆ ಒತ್ತಿ.
⦁ ಎಡ ಪಾದದ ಒಳ ಅಂಚನ್ನು ನೆಲಕ್ಕೆ ಒತ್ತಿ. ನಂತರ ನಿಧಾನವಾಗಿ ಕೈಗಳನ್ನು ಬಿಡಿಸಿ.
⦁ ಕಾಲುಗಳನ್ನೂ ಬಿಡಿಸಿ ಸಮಸ್ಥಿತಿಗೆ ಬನ್ನಿ.
⦁ ಕೆಲವು ಸೆಕೆಂಡುಗಳ ಕಾಲ ಅದೇ ಭಂಗಿಯಲ್ಲಿರಿ ಮತ್ತು ನಂತರ ವಿಶ್ರಾಂತಿ ಸ್ಥಿತಿಗೆ ಹಿಂತಿರುಗಿ.
⦁ ಇದೇ ರೀತಿ ಬಲಗಡೆಯಿಂದಲೂ ಮಾಡಿ.
⦁ ನಿಲ್ಲಲು ಆಗದಿದ್ದಲ್ಲಿ, ಗೋಡೆಯ ಸಹಯ ಪಡೆದುಕೋಳ್ಳಿ.

ಗರುಡಾಸನ ಅನುಕೂಲಗಳು:
⦁ ಈ ಆಸನದಿಂದ ಮೀನಖಂಡ ಮತ್ತು ತೊಡೆಗಳಲ್ಲಿರುವ ಕೊಬ್ಬಿನಂಶ ಕರಗುವುದು.
⦁ ಕಾಲಿನ ಮಣಿಗಂಟು ಸಡಿಲವಾಗುವುದು.
⦁ ಮಂಡಿನೋವು ಬಾರದಂತೆ ತಡೆಯಲು ಉತ್ತಮ ಆಸನವಿದು.
⦁ ಕೈಯ ಮಣಿಗಂಟು, ಮೊಣಕೈ, ಭುಜಗಳಲ್ಲಿನ ಬಿಗಿತ ಮತ್ತು ನೋವು ನಿವಾರಣೆಯಾಗುವುದು.
⦁ ಕಾಲುಗಳು ಬಲಿಷ್ಠವಾಗುವುದು.
⦁ ಪಕ್ಕೆಲುಬು ರಟ್ಟೆಯಲ್ಲಿನ ಕೊಬ್ಬಿನಂಶ ಕರಗುವುದು.
⦁ ಗರುಡಾಸನ ಮಾಡುವುದ್ರಿಂದ ಪ್ರಾಸ್ಟೇಟ್ ಗ್ರಂಥಿಯ ಸಮಸ್ಯೆ ದೂರವಾಗುತ್ತದೆ.
⦁ ಪುರುಷರ ದೌರ್ಬಲ್ಯವನ್ನು ಹೋಗಲಾಡಿಸಲು ಈ ಆಸನವು ವರದಾನವಾಗಿದೆ.
⦁ ಗರುಡಾಸನವು ಮೂತ್ರದ ಅಸ್ವಸ್ಥತೆಗಳನ್ನು ತೆಗೆದುಹಾಕಲು ತುಂಬಾ ಪ್ರಯೋಜನಕಾರಿ.

ಎಚ್ಚರಿಕೆ:
⦁ ಮೊಣಕಾಲಿನಲ್ಲಿ ನೋವು ಇರುವವರು ಈ ಆಸನವನ್ನು ಮಾಡದಿರುವುದು ಒಳ್ಳೆಯದು.
⦁ ಮೊದಲ ಬಾರಿ ಆಸನ ಮಾಡಲು ಸಮಸ್ಯೆಯಾಗ್ತಿದ್ದರೆ ಗೋಡೆಯನ್ನು ಹಿಡಿದು ಅಭ್ಯಾಸ ಮಾಡಬಹುದು.
⦁ ಎರಡು ತಿಂಗಳ ಮೇಲ್ಪಟ್ಟ ಗರ್ಭಿಣಿಯರು ಈ ಆಸನದಿಂದ ದೂರವಿರಬೇಕು.
⦁ ಕಡಿಮೆ ರಕ್ತದೊತ್ತಡ ಇರುವವರು ಇದನ್ನು ಅಭ್ಯಾಸ ಮಾಡಬಾರದು.
⦁ ಪ್ಲಾಂಟರ್ ಫ್ಯಾಸಿಟಿಸ್ ನಿಂದ ಬಳಲುತ್ತಿರುವವರು ಇದನ್ನು ಮಾಡಬಾರದು.

ಆರೋಗ್ಯ

Meditation Benefits : ಮಾನಸಿಕ ಆರೋಗ್ಯ ಕಾಪಾಡಲು ಧ್ಯಾನ ಯಾಕೆ ಅಗತ್ಯ ಗೊತ್ತಾ?

Published

on

ಧ್ಯಾನ (Meditation) ಇತ್ತೀಚಿನ ದಿನಗಳಲ್ಲಿ ಕೇವಲ ಆಧ್ಯಾತ್ಮಿಕ ಅಭ್ಯಾಸವಾಗಿಯೇ ಉಳಿದಿಲ್ಲ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಅತ್ಯುತ್ತಮ ವಿಧಾನವಾಗಿಯೂ ಪರಿಗಣಿಸಲಾಗುತ್ತಿದೆ. ಇಂದಿನ ಬ್ಯುಸಿ ಜೀವನಶೈಲಿ, ಕೆಲಸದ ಒತ್ತಡ, ಕುಟುಂಬದ ಜವಾಬ್ದಾರಿ ಮತ್ತು ಹಣಕಾಸಿನ ಚಿಂತೆಗಳಿಂದ ಅನೇಕರು ಮಾನಸಿಕವಾಗಿ ಕುಗ್ಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರತಿದಿನ ಕೇವಲ 10 ನಿಮಿಷ ಧ್ಯಾನ ಮಾಡುವ ಅಭ್ಯಾಸ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ತರಬಹುದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಧ್ಯಾನ ಮಾಡುವುದರಿಂದ ದೇಹದಲ್ಲಿ ಉತ್ಪತ್ತಿಯಾಗುವ ಕಾರ್ಟಿಸೋಲ್ ಹಾರ್ಮೋನ್ ಮಟ್ಟ ಕಡಿಮೆಯಾಗುತ್ತದೆ. ಇದರಿಂದ ಒತ್ತಡ, ಆತಂಕ ಮತ್ತು ಮಾನಸಿಕ ಅಶಾಂತಿ ಕಡಿಮೆಯಾಗಲು ಸಹಾಯವಾಗುತ್ತದೆ. ಜೊತೆಗೆ ಕೆಲಸದ ಮೇಲೆ ಏಕಾಗ್ರತೆ ಹೆಚ್ಚಾಗಿ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವೂ ಉತ್ತಮಗೊಳ್ಳುತ್ತದೆ.

ನಿತ್ಯ ಧ್ಯಾನ ಮಾಡುವವರು ಭಾವನಾತ್ಮಕವಾಗಿ ಹೆಚ್ಚು ಸಮತೋಲನದಲ್ಲಿರುತ್ತಾರೆ. ಮನೆಯ ಸಮಸ್ಯೆಗಳು, ಕೆಲಸದ ಒತ್ತಡ ಅಥವಾ ಹಣಕಾಸಿನ ಗೊಂದಲಗಳ ನಡುವೆಯೂ ಮನಸ್ಸನ್ನು ಶಾಂತವಾಗಿಟ್ಟುಕೊಳ್ಳಲು ಧ್ಯಾನ ಸಹಕಾರಿಯಾಗುತ್ತದೆ. ಕೋಪ ಕಡಿಮೆಯಾಗುವುದರ ಜೊತೆಗೆ ಸಕಾರಾತ್ಮಕ ಚಿಂತನೆಗಳು ಹೆಚ್ಚಾಗುತ್ತವೆ.

ಆರೋಗ್ಯದ ದೃಷ್ಟಿಯಿಂದಲೂ ಧ್ಯಾನ ಬಹಳ ಪ್ರಯೋಜನಕಾರಿ. ನಿಯಮಿತ ಧ್ಯಾನದಿಂದ ರಕ್ತದೊತ್ತಡ ನಿಯಂತ್ರಣದಲ್ಲಿರಲು ಸಹಾಯವಾಗುತ್ತದೆ. ಹೃದಯದ ರಕ್ತಪರಿಚಲನೆ ಸುಧಾರಿಸಿ ದೇಹದ ಶಕ್ತಿ ಕುಂದುವುದನ್ನು ತಡೆಯುತ್ತದೆ. ಹೀಗಾಗಿ ಪ್ರತಿದಿನ ಕೆಲ ನಿಮಿಷ ಧ್ಯಾನ ಮಾಡುವ ಅಭ್ಯಾಸ ಬೆಳೆಸಿಕೊಳ್ಳುವುದು ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡಕ್ಕೂ ಉತ್ತಮ ಎಂದು ವೈದ್ಯರು ಸಲಹೆ ನೀಡಿದ್ದಾರೆ.

Continue Reading

ಆರೋಗ್ಯ

WHO ಎಚ್ಚರಿಕೆ ಬಳಿಕ ಭಾರತದಲ್ಲೂ ಮುನ್ನೆಚ್ಚರಿಕೆ ಕ್ರಮ; ವಿಜಯವಾಡದಲ್ಲಿ ಕ್ಯಾಂಪ್

Published

on

ವಿಜಯವಾಡ: ಜಾಗತಿಕ ಮಟ್ಟದಲ್ಲಿ ಎಬೋಲಾ ವೈರಸ್‌ ಕುರಿತ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ಆಂಧ್ರ ಪ್ರದೇಶ ಆರೋಗ್ಯ ಇಲಾಖೆ ವಿಜಯವಾಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಎಬೋಲಾ ತಪಾಸಣಾ ಶಿಬಿರ ಆರಂಭಿಸಿದೆ. ಸಿಂಗಾಪುರದಿಂದ ಆಗಮಿಸುವ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಆಂಧ್ರ ಸರ್ಕಾರ ನಿಯೋಜಿಸಿರುವ ವೈದ್ಯಕೀಯ ತಂಡಗಳು ಪ್ರಯಾಣಿಕರ ದೇಹದ ಉಷ್ಣಾಂಶ ಪರೀಕ್ಷೆ, ಆರೋಗ್ಯ ಲಕ್ಷಣಗಳ ಪರಿಶೀಲನೆ ಹಾಗೂ ಶಂಕಿತ ಸೋಂಕಿನ ಗುರುತು ಪತ್ತೆ ಕಾರ್ಯ ನಡೆಸುತ್ತಿವೆ. ಜ್ವರ, ವಾಂತಿ, ದೌರ್ಬಲ್ಯ ಅಥವಾ ರಕ್ತಸ್ರಾವದಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಇದು ಕೇವಲ ಮುನ್ನೆಚ್ಚರಿಕಾ ಕ್ರಮವಾಗಿದ್ದು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆ (WHO) ಹೊರಡಿಸಿರುವ ಆರೋಗ್ಯ ಎಚ್ಚರಿಕೆ ಹಿನ್ನೆಲೆಯಲ್ಲಿ ನಿಗಾ ಕ್ರಮ ಬಲಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ಮಾಜಿ WHO ಮುಖ್ಯ ವಿಜ್ಞಾನಿ Soumya Swaminathan ಭಾರತವು ಎಬೋಲಾ ವಿರುದ್ಧದ ಸಂಶೋಧನೆ, ಲಸಿಕೆ ಅಭಿವೃದ್ಧಿ ಹಾಗೂ ರೋಗ ಪತ್ತೆ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸಬಹುದು ಎಂದು ಹೇಳಿದ್ದಾರೆ. WHO ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಸಹಯೋಗದೊಂದಿಗೆ ಭಾರತ ಹೆಚ್ಚಿನ ಸಂಶೋಧನೆ ಕೈಗೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಸ್ತುತ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಹಾಗೂ ಉಗಾಂಡಾದ ಕೆಲವು ಭಾಗಗಳಲ್ಲಿ ಎಬೋಲಾ ಸೋಂಕು ಹೆಚ್ಚಳ ಕಂಡುಬಂದಿದೆ. WHO ಮಹಾನಿರ್ದೇಶಕ Tedros Adhanom Ghebreyesus ನೀಡಿರುವ ಮಾಹಿತಿಯಂತೆ, ಕಾಂಗೋದಲ್ಲಿ ಈಗಾಗಲೇ 101 ಪ್ರಕರಣಗಳು ದೃಢಪಟ್ಟಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಇನ್ನೂ ನೂರಾರು ಶಂಕಿತ ಪ್ರಕರಣಗಳ ತನಿಖೆ ನಡೆಯುತ್ತಿದೆ.

ಎಬೋಲಾ ವೈರಸ್‌ನ ‘ಬುಂಡಿಬುಗ್ಯೋ’ ರೂಪಾಂತರಿ ತಳಿಯು ಪತ್ತೆ ಹಾಗೂ ಚಿಕಿತ್ಸೆ ಕಾರ್ಯಕ್ಕೆ ಸವಾಲು ಎಸೆದಿರುವುದರಿಂದ ಜಾಗತಿಕ ಆರೋಗ್ಯ ಸಂಸ್ಥೆಗಳು ಎಚ್ಚರಿಕೆಯಿಂದ ಪರಿಸ್ಥಿತಿಯನ್ನು ಗಮನಿಸುತ್ತಿವೆ.

Continue Reading

ಆರೋಗ್ಯ

ಇನ್ಸುಲಿನ್‌ಗೆ ಗುಡ್‌ಬೈ? ಸಕ್ಕರೆ ನಿಯಂತ್ರಣಕ್ಕೆ ಬಂದಿದೆ ‘ಓಬೆಡಾ’ ಮಾತ್ರೆ!

Published

on

ಬೆಂಗಳೂರು: ಜಾಗತಿಕ ಖ್ಯಾತಿಯ ಔಷಧ ತಯಾರಿಕಾ ಸಂಸ್ಥೆಯಾದ Dr. Reddy’s Laboratories ಭಾರತದಲ್ಲಿ ಟೈಪ್-2 ಮಧುಮೇಹ ರೋಗಿಗಳಿಗಾಗಿ ‘ಓಬೆಡಾ’ (Obeda) ಎಂಬ ಹೊಸ ಮಾತ್ರೆಯನ್ನು ಬಿಡುಗಡೆ ಮಾಡಿದೆ. ಈ ಹೊಸ ಔಷಧವು ‘ಓರಲ್ ಸೆಮಾಗ್ಲುಟೈಡ್ ಬಯೋಸಿಮಿಲರ್’ ರೂಪದಲ್ಲಿದ್ದು, ಬಾಯಿಯ ಮೂಲಕ ಸೇವಿಸಬಹುದಾದ ಮಧುಮೇಹ ನಿಯಂತ್ರಣ ಟ್ಯಾಬ್ಲೆಟ್ ಆಗಿದೆ.

ಇತ್ತೀಚೆಗೆ ಇದೇ ಸಂಸ್ಥೆ ಭಾರತ ಮತ್ತು ಕೆನಡಾದಲ್ಲಿ ಸೆಮಾಗ್ಲುಟೈಡ್ ಇಂಜೆಕ್ಷನ್ ಬಿಡುಗಡೆ ಮಾಡಿದ್ದರೆ, ಇದೀಗ ಅದೇ ಔಷಧಿಯನ್ನು ಮಾತ್ರೆಯ ರೂಪದಲ್ಲಿ ಪರಿಚಯಿಸುವ ಮೂಲಕ ರೋಗಿಗಳಿಗೆ ಹೆಚ್ಚು ಸುಲಭ ಮತ್ತು ಅನುಕೂಲಕರ ಚಿಕಿತ್ಸೆಯನ್ನು ಒದಗಿಸಲು ಮುಂದಾಗಿದೆ.

ಭಾರತದಲ್ಲಿ ಮಧುಮೇಹದ ಆತಂಕಕಾರಿ ಚಿತ್ರಣ

Indian Council of Medical Research ನಡೆಸಿದ ‘ಇಂಡಿಯಾಬ್’ ಅಧ್ಯಯನದ ಪ್ರಕಾರ, ಭಾರತದಲ್ಲಿ 10.1 ಕೋಟಿಗೂ ಅಧಿಕ ವಯಸ್ಕರು ಮಧುಮೇಹದಿಂದ ಬಳಲುತ್ತಿದ್ದಾರೆ. ಜೊತೆಗೆ ಸುಮಾರು 13.6 ಕೋಟಿ ಜನರು ಪ್ರೀ-ಡಯಾಬಿಟಿಕ್ ಸ್ಥಿತಿಯಲ್ಲಿದ್ದು, ಭವಿಷ್ಯದಲ್ಲಿ ಮಧುಮೇಹಕ್ಕೆ ತುತ್ತಾಗುವ ಅಪಾಯ ಎದುರಿಸುತ್ತಿದ್ದಾರೆ. ದೇಶದಲ್ಲಿ ಹೆಚ್ಚುತ್ತಿರುವ ಹೊಟ್ಟೆ ಬೊಜ್ಜು ಮತ್ತು ಜೀವನಶೈಲಿ ಬದಲಾವಣೆಗಳು ಮಧುಮೇಹ ಪ್ರಕರಣಗಳನ್ನು ಮತ್ತಷ್ಟು ಹೆಚ್ಚಿಸುತ್ತಿವೆ.

‘ಓಬೆಡಾ’ ಮಾತ್ರೆ ಹೇಗೆ ಕೆಲಸ ಮಾಡುತ್ತದೆ?

‘ಓಬೆಡಾ’ ಔಷಧವು ಜಿಎಲ್‌ಪಿ-1 ಆರ್‌ಎ (GLP-1 RA) ವರ್ಗಕ್ಕೆ ಸೇರಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ವೈದ್ಯರ ಸಲಹೆಯಂತೆ ಆಹಾರ ನಿಯಂತ್ರಣ ಮತ್ತು ವ್ಯಾಯಾಮದ ಜೊತೆಗೆ ಈ ಮಾತ್ರೆಯನ್ನು ಸೇವಿಸಿದರೆ:

  • ರಕ್ತದಲ್ಲಿನ ಗ್ಲೂಕೋಸ್ ಮಟ್ಟ ನಿಯಂತ್ರಣಕ್ಕೆ ಬರುತ್ತದೆ
  • ತೂಕ ಇಳಿಕೆಗೆ ಸಹಕಾರಿ
  • ದೀರ್ಘಕಾಲೀನ ಮಧುಮೇಹ ಸಂಬಂಧಿತ ಸಮಸ್ಯೆಗಳ ಅಪಾಯ ಕಡಿಮೆಯಾಗುತ್ತದೆ
  • HbA1c ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ

ಕ್ಲಿನಿಕಲ್ ಟ್ರಯಲ್‌ನಲ್ಲಿ ಯಶಸ್ಸು

Central Drugs Standard Control Organisation ಅನುಮತಿಯೊಂದಿಗೆ 288 ಮಧುಮೇಹ ರೋಗಿಗಳ ಮೇಲೆ ನಡೆದ ಮೂರನೇ ಹಂತದ ಕ್ಲಿನಿಕಲ್ ಪರೀಕ್ಷೆಗಳಲ್ಲಿ ‘ಓಬೆಡಾ’ ಉತ್ತಮ ಫಲಿತಾಂಶ ನೀಡಿದೆ ಎಂದು ಕಂಪನಿ ತಿಳಿಸಿದೆ. ರಕ್ತದಲ್ಲಿನ ಸಕ್ಕರೆ ನಿಯಂತ್ರಣ, ತೂಕ ಇಳಿಕೆ ಹಾಗೂ ಸುರಕ್ಷಿತ ಬಳಕೆಯಲ್ಲಿ ಈ ಔಷಧ ಪರಿಣಾಮಕಾರಿ ಎಂಬುದು ದೃಢಪಟ್ಟಿದೆ.

ಬೆಲೆ ಎಷ್ಟು?

‘ಓಬೆಡಾ’ ದಿನಕ್ಕೊಮ್ಮೆ ಸೇವಿಸುವ ಮಾತ್ರೆಯಾಗಿದ್ದು, ಮೂರು ವಿಭಿನ್ನ ಸಾಮರ್ಥ್ಯಗಳಲ್ಲಿ ಲಭ್ಯವಿದೆ:

  • 3 mg – ₹99
  • 7 mg – ₹135
  • 14 mg – ₹225

ಕಂಪನಿ ಹೇಳಿದ್ದೇನು?

M. V. Ramana ಮಾತನಾಡಿ, “ಮಧುಮೇಹ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಸುಧಾರಿತ ಚಿಕಿತ್ಸೆ ನೀಡುವುದು ನಮ್ಮ ಉದ್ದೇಶ. ಪ್ರತಿಯೊಬ್ಬ ರೋಗಿಯ ಆರೋಗ್ಯ ಸ್ಥಿತಿ ವಿಭಿನ್ನವಾಗಿರುವುದರಿಂದ ಅವರಿಗೆ ಸೂಕ್ತ ಆಯ್ಕೆಯನ್ನು ಒದಗಿಸುವುದು ನಮ್ಮ ಆದ್ಯತೆ” ಎಂದು ತಿಳಿಸಿದ್ದಾರೆ.

1984ರಲ್ಲಿ ಸ್ಥಾಪನೆಯಾದ Dr. Reddy’s Laboratories ಜಠರ, ಹೃದಯ, ಮಧುಮೇಹ, ಕ್ಯಾನ್ಸರ್ ಮತ್ತು ಚರ್ಮರೋಗ ಚಿಕಿತ್ಸಾ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಮುಖ ಫಾರ್ಮಾ ಕಂಪನಿಯಾಗಿ ಗುರುತಿಸಿಕೊಂಡಿದೆ.

Continue Reading

Trending