Connect with us

ದೇಶ

‘ಡ್ಯಾಡಿ ಈಸ್ ಹೋಮ್’ ಎಐ ಟೀಸರ್ ವೈರಲ್

ಬೆಂಗಳೂರು: 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ರಾಜ್ಯ ರಾಜಕಾರಣದಲ್ಲಿ ಚಟುವಟಿಕೆಗಳು ಗರಿಗೆದರಿವೆ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು? ಯಾವ ರೀತಿಯ ರಾಜಕೀಯ ರಣತಂತ್ರ ಅನುಸರಿಸಬೇಕು? ಎಂಬ ಲೆಕ್ಕಾಚಾರದಲ್ಲಿ ಹಲವು ಘಟಾನುಘಟಿ ನಾಯಕರು ತೊಡಗಿಸಿಕೊಂಡಿದ್ದಾರೆ.

ಈಗಾಗಲೇ ಬಿಜೆಪಿಯ ಪ್ರತಾಪ್ ಸಿಂಹ, ಸುಮಲತಾ ಅಂಬರೀಷ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರ ಹೆಸರುಗಳು 2028ರ ಚುನಾವಣಾ ಸಿದ್ಧತೆಯಲ್ಲಿ ಕೇಳಿಬರುತ್ತಿವೆ. ಇದರ ಜೊತೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕ ಹೆಚ್‌.ಡಿ. ಕುಮಾರಸ್ವಾಮಿ ಮತ್ತೆ ರಾಜ್ಯ ರಾಜಕಾರಣಕ್ಕೆ ಭರ್ಜರಿ ರಿಟರ್ನ್‌ ನೀಡುವ ಸಾಧ್ಯತೆಗಳ ಬಗ್ಗೆ ಭಾರಿ ಚರ್ಚೆ ಶುರುವಾಗಿದೆ.

ಇತ್ತೀಚೆಗೆ ಡಿಸಿಎಂ ಡಿಕೆ ಶಿವಕುಮಾರ್, ಜೆಡಿಎಸ್‌ ಬಿಜೆಪಿ ಜೊತೆಗೆ ವಿಲೀನವಾಗುವ ಸಾಧ್ಯತೆ ಇದೆ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಎರಡು ಪ್ರಮುಖ ಪಕ್ಷಗಳೇ ಉಳಿಯಬಹುದು ಎಂಬ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಹೆಚ್‌ಡಿಕೆ ರಾಜಕೀಯವಾಗಿ ಹೆಚ್ಚು ಸಕ್ರಿಯರಾಗುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. 2028ರ ಮಹಾಕದನಕ್ಕೆ ಸಂಬಂಧಿಸಿದಂತೆ ದೆಹಲಿ ಮಟ್ಟದಲ್ಲೇ ರಣತಂತ್ರ ರೂಪಿಸಲಾಗುತ್ತಿದ್ದು, ಕುಮಾರಸ್ವಾಮಿ ರಾಜ್ಯ ರಾಜಕಾರಣಕ್ಕೆ ಮರಳಲು ಹೈಕಮಾಂಡ್ ಕೂಡ ಗ್ರೀನ್‌ ಸಿಗ್ನಲ್ ನೀಡಿದೆ ಎಂಬ ಮಾಹಿತಿ ಪಕ್ಷದ ಆಪ್ತ ಮೂಲಗಳಿಂದ ಹೊರಬಿದ್ದಿದೆ.

ಈ ನಡುವೆ ಹೆಚ್‌ಡಿಕೆ ಅಭಿಮಾನಿಗಳು ʻಟಾಕ್ಸಿಕ್ʼ ಸಿನಿಮಾದ ಟೀಸರ್ ಶೈಲಿಯಲ್ಲಿ ‘ಡ್ಯಾಡಿ ಈಸ್ ಹೋಮ್’ ಎಂಬ ಎಐ ಟೀಸರ್ ಬಿಡುಗಡೆ ಮಾಡಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ವಿಡಿಯೋ ಮೂಲಕ ಕುಮಾರಸ್ವಾಮಿ ಅವರ ರಾಜ್ಯ ರಾಜಕೀಯ ಎಂಟ್ರಿಗೆ ಸುಳಿವು ನೀಡಲಾಗಿದೆ ಎನ್ನಲಾಗುತ್ತಿದೆ.

ಹೀಗಾಗಿ ಹೆಚ್‌ಡಿಕೆ 2026ರಲ್ಲೇ ರಾಜ್ಯ ರಾಜಕೀಯಕ್ಕೆ ಮರಳಲಿದಾರಾ? ಅಥವಾ 2027ರ ಆರಂಭದಲ್ಲಿ ಅಧಿಕೃತ ಘೋಷಣೆ ಮಾಡಲಿದಾರಾ? ಎಂಬ ಪ್ರಶ್ನೆ ಈಗ ರಾಜ್ಯ ರಾಜಕೀಯದ ಹಾಟ್ ಟಾಪಿಕ್ ಆಗಿದೆ.

Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 WORLD CUP : ಡಬಲ್ ಸೂಪರ್ ಓವರ್‌ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು

ಅಹಮದಾಬಾದ್: ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ದಕ್ಷಿಣ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯ ಕ್ರಿಕೆಟ್ ಅಭಿಮಾನಿಗಳಿಗೆ ನಿಜವಾದ ಥ್ರಿಲ್ಲರ್ ಅನುಭವ ನೀಡಿತು. ಕೊನೆಯ ಕ್ಷಣದವರೆಗೂ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ‘ಡಬಲ್ ಸೂಪರ್ ಓವರ್’ನಲ್ಲಿ 4 ರನ್‌ಗಳ ಅಂತರದಿಂದ ಗೆಲುವು ಸಾಧಿಸಿತು.

ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 187 ರನ್ ಗಳಿಸಿತು. 188 ರನ್‌ಗಳ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ 19.4 ಓವರ್‌ಗಳಲ್ಲಿ 187 ರನ್‌ಗಳಿಗೆ ಆಲೌಟ್ ಆಗಿ ಪಂದ್ಯ ಟೈ ಮಾಡಿತು.

ಮೊದಲ ಸೂಪರ್ ಓವರ್‌ನಲ್ಲಿ ಅಜ್ಮತ್ತುಲ್ಲ ಒಮರ್ಜಾಯಿ ಸ್ಫೋಟಕ ಬ್ಯಾಟಿಂಗ್ ಮೂಲಕ 17 ರನ್ ಗಳಿಸಿದರು. 18 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾಗೆ ಕೊನೆಯ ಎಸೆತದಲ್ಲಿ 7 ರನ್ ಬೇಕಾಗಿದ್ದಾಗ ಟ್ರಿಸ್ಟನ್ ಸ್ಟಬ್ಸ್ ಫಜಲ್ಹಕ್ ಫಾರೂಕಿ ಎಸೆತವನ್ನು ಸಿಕ್ಸರ್‌ಗೆ ಬಾರಿಸಿ ಪಂದ್ಯವನ್ನು ಮತ್ತೆ ಟೈ ಮಾಡಿದರು.

ಎರಡನೇ ಸೂಪರ್ ಓವರ್‌ನಲ್ಲಿ ಡೇವಿಡ್ ಮಿಲ್ಲರ್ ಕೇವಲ 4 ಎಸೆತಗಳಲ್ಲಿ 16 ರನ್ ಸಿಡಿಸಿ ತಂಡವನ್ನು 23 ರನ್‌ಗಳಿಗೆ ಕೊಂಡೊಯ್ದರು. 24 ರನ್ ಗುರಿ ಬೆನ್ನಟ್ಟಿದ ಅಫ್ಘಾನಿಸ್ತಾನ ಪರ ರಹಮಾನುಲ್ಲಾ ಗುರ್ಬಾಜ್ ಸತತ ಮೂರು ಸಿಕ್ಸರ್‌ಗಳನ್ನು ಬಾರಿಸಿ ಪಂದ್ಯವನ್ನು ತೀವ್ರ ರೋಚಕಗೊಳಿಸಿದರು. ಆದರೆ ಕೊನೆಯ ಎಸೆತದಲ್ಲಿ ಬೌಂಡರಿ ಯತ್ನದಲ್ಲಿ ಕ್ಯಾಚ್ ನೀಡಿ ಔಟಾದರು. ಹೀಗಾಗಿ ದಕ್ಷಿಣ ಆಫ್ರಿಕಾ ರೋಚಕ 4 ರನ್ ಜಯ ಸಾಧಿಸಿತು.

Continue Reading

ದೇಶ

POK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!

ವಾಷಿಂಗ್ಟನ್: ಪಿಒಕೆ (POK) ಹಾಗೂ ಅಕ್ಸಾಯ್ ಚಿನ್ ಕುರಿತು ದೀರ್ಘಕಾಲದಿಂದ ದ್ವಂದ್ವ ನಿಲುವು ಹೊಂದಿದ್ದ ಅಮೆರಿಕಾ ಇದೀಗ ಮತ್ತೆ ಯು-ಟರ್ನ್ ಹೊಡೆದಂತೆ ಕಾಣುತ್ತಿದೆ. ಇತ್ತೀಚೆಗೆ ಭಾರತ ಮೇಲಿನ ಸುಂಕವನ್ನು ಶೇ.18ಕ್ಕೆ ಇಳಿಕೆ ಮಾಡಿದ ಬೆನ್ನಲ್ಲೇ, ಯುಎಸ್ ಟ್ರೇಡ್ ರೆಪ್ರೆಸೆಂಟೇಟಿವ್ (USTR) ಕಚೇರಿ ತನ್ನ ಅಧಿಕೃತ X ಖಾತೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನ ಸಂಪೂರ್ಣ ಪ್ರದೇಶವನ್ನು ಭಾರತದ ಭೂಭಾಗವೆಂದು ತೋರಿಸುವ ನಕ್ಷೆಯನ್ನು ಪೋಸ್ಟ್ ಮಾಡಿತ್ತು.

ಫೆಬ್ರವರಿ 7ರಂದು ಭಾರತ-ಅಮೆರಿಕಾ ವ್ಯಾಪಾರ ಒಪ್ಪಂದದ ಘೋಷಣೆಯ ನಂತರ ಈ ನಕ್ಷೆ ಪ್ರಕಟವಾಗಿದ್ದು, ಜಾಗತಿಕ ಗಮನ ಸೆಳೆದಿತ್ತು. ವಿಶೇಷವಾಗಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (POK) ಮತ್ತು ಚೀನಾ ಆಕ್ರಮಿತ ಅಕ್ಸಾಯ್ ಚಿನ್ ಪ್ರದೇಶಗಳನ್ನು ಸಹ ಭಾರತದ ಭಾಗವಾಗಿ ಗುರುತಿಸಿರುವುದು ಅಮೆರಿಕದ ಹಳೆಯ ನೀತಿಗೆ ವಿರುದ್ಧವಾಗಿತ್ತು. ಇದರಿಂದ ಇಂಡೋ-ಪೆಸಿಫಿಕ್ ರಾಜಕೀಯ ಸಮೀಕರಣದಲ್ಲಿ ಭಾರತಕ್ಕೆ ಅಮೆರಿಕಾ ಸ್ಪಷ್ಟ ಬೆಂಬಲ ನೀಡಿದೆಯೇ ಎಂಬ ಚರ್ಚೆ ಜೋರಾಗಿತ್ತು.

ಆದರೆ, ಕೆಲವೇ ದಿನಗಳಲ್ಲಿ USTR ತನ್ನ ಅಧಿಕೃತ ಖಾತೆಯಿಂದ ಈ ನಕ್ಷೆ ಪೋಸ್ಟ್ ಅನ್ನು ಡಿಲೀಟ್ ಮಾಡಿದೆ. ಇದರಿಂದ ಅಮೆರಿಕಾ ತನ್ನ ನಿಲುವಿನಲ್ಲಿ ಸ್ಪಷ್ಟತೆ ಕಳೆದುಕೊಂಡಿತೇ ಎಂಬ ಪ್ರಶ್ನೆ ಮೂಡಿದೆ.

ಇದಕ್ಕೆ ಸಂಬಂಧಿಸಿದಂತೆ ಭಾರತ ತನ್ನ ನಿಲುವು ಸ್ಪಷ್ಟಪಡಿಸಿದ್ದು, ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ನ ಸಂಪೂರ್ಣ ಪ್ರದೇಶವು ಭಾರತದ ಅವಿಭಾಜ್ಯ ಅಂಗವಾಗಿದ್ದು, ಅಕ್ಸಾಯ್ ಚಿನ್ ಕೂಡ ಭಾರತದ ಭಾಗವೇ ಎಂದು ಪುನರುಚ್ಚರಿಸಿದೆ.

ಈ ಬೆಳವಣಿಗೆ ಭಾರತ-ಅಮೆರಿಕಾ-ಚೀನಾ-ಪಾಕಿಸ್ತಾನ ನಡುವಿನ ಭೌಗೋಳಿಕ ರಾಜಕೀಯ ಚರ್ಚೆಗೆ ಹೊಸ ತಿರುವು ನೀಡಿದೆ.

Continue Reading

ದೇಶ

ಅಮೆರಿಕ ವಿರುದ್ಧ ಪಾಕ್‌ ರಕ್ಷಣಾ ಸಚಿವ ಖವಾಜಾ ಆಸಿಫ್‌ ಆಕ್ರೋಶ: “ಟಾಯ್ಲೆಟ್‌ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡರು”

ಇಸ್ಲಾಮಾಬಾದ್: ಪಾಕಿಸ್ತಾನವನ್ನು ಅಮೆರಿಕ “ಟಾಯ್ಲೆಟ್‌ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ” ಎಂದು ಪಾಕ್‌ ರಕ್ಷಣಾ ಸಚಿವ ಖವಾಜಾ ಆಸಿಫ್‌ (Khawaja Asif) ಸಂಸತ್ತಿನಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೆರಿಕದ ಬೆಂಬಲವನ್ನು ಅಂಧವಾಗಿ ಅನುಸರಿಸುವುದು ಪಾಕಿಸ್ತಾನ ಮಾಡಿದ ದೊಡ್ಡ ತಪ್ಪು ಎಂದು ಅವರು ಹೇಳಿದ್ದಾರೆ.

ಸಂಸತ್ತಿನಲ್ಲಿ ಮಾತನಾಡಿದ ಆಸಿಫ್‌, 2001ರ ಬಳಿಕ ಅಮೆರಿಕ ನೇತೃತ್ವದಲ್ಲಿ ನಡೆದ ಭಯೋತ್ಪಾದನೆ ವಿರುದ್ಧದ ಯುದ್ಧದಲ್ಲಿ ಪಾಕಿಸ್ತಾನ ಪ್ರಮುಖ ಪಾತ್ರವಹಿಸಿತು. ತಾಲಿಬಾನ್ ವಿರುದ್ಧ ಕಾರ್ಯಾಚರಣೆ ನಡೆಸಿದ ಪರಿಣಾಮ ದೇಶದ ಒಳಗಿನ ಭದ್ರತಾ ಪರಿಸ್ಥಿತಿ ಹದಗೆಟ್ಟಿತು. ಹಿಂಸಾಚಾರ, ಅತಿರೇಕವಾದ ಮತ್ತು ಆರ್ಥಿಕ ಒತ್ತಡದ ಸಂಕಷ್ಟವನ್ನು ಪಾಕಿಸ್ತಾನ ದಶಕಗಳ ಕಾಲ ಅನುಭವಿಸಬೇಕಾಯಿತು ಎಂದು ಹೇಳಿದರು.

“ಅಮೆರಿಕ ತನ್ನ ಉದ್ದೇಶ ಸಾಧಿಸಿದ ಬಳಿಕ ಹಿಂದೆ ಸರಿಯಿತು. ಆದರೆ ಅದರ ಪರಿಣಾಮಗಳನ್ನು ಪಾಕಿಸ್ತಾನ ಇನ್ನೂ ಭರಿಸುತ್ತಿದೆ. ನಾವು ಅನುಭವಿಸಿದ ನಷ್ಟಗಳನ್ನು ಎಂದಿಗೂ ಸರಿದೂಗಿಸಲು ಸಾಧ್ಯವಿಲ್ಲ,” ಎಂದು ಆಸಿಫ್‌ ಬೇಸರ ವ್ಯಕ್ತಪಡಿಸಿದರು.

ಇತರ ರಾಷ್ಟ್ರಗಳ ಸಂಘರ್ಷಗಳಲ್ಲಿ ತೊಡಗಿಸಿಕೊಂಡ ಪರಿಣಾಮ ಪಾಕಿಸ್ತಾನ ಒಂದು ಕೈಗೊಂಬೆಯಂತಾಗಿದೆ. ಆ ಕಾಲದ ನಿರ್ಧಾರಗಳು ಬದಲಾಯಿಸಲಾಗದ ತಪ್ಪುಗಳಾಗಿದ್ದು, ಈಗ ದೇಶದ ಆರ್ಥಿಕ ಮತ್ತು ಭದ್ರತಾ ಪರಿಸ್ಥಿತಿಗೆ ಹೊರೆ ಆಗಿವೆ ಎಂದು ಹೇಳಿದ್ದಾರೆ.

ಈ ಹೇಳಿಕೆ ಪಾಕಿಸ್ತಾನ-ಅಮೆರಿಕ ಸಂಬಂಧಗಳಲ್ಲಿ ಮತ್ತೆ ಚರ್ಚೆ ಹುಟ್ಟುಹಾಕಿದೆ. ಭವಿಷ್ಯದಲ್ಲಿ ವಿದೇಶಾಂಗ ನೀತಿಯಲ್ಲಿ ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳಬೇಕೆಂಬ ಅಗತ್ಯವನ್ನೂ ಅವರು ಒತ್ತಿಹೇಳಿದ್ದಾರೆ.

Continue Reading

Trending