ರಾಜ್ಯ
ಕನ್ನಡಿಗರಿಗೆ ಬೀರು ತಮಿಳುನಾಡಿಗೆ ನೀರು ಸರ್ಕಾರದ ವಿರುದ್ಧ ಮಹಿಳೆಯರ ಆಕ್ರೋಶ
ಚಾಮರಾಜನಗರ : ರಾಜ್ಯ ಸರ್ಕಾರ ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಮುಂದಾಗುತ್ತಿದೆ ಎಂದು ಆರೋಪಿಸಿ ಚಾಮರಾಜನಗರ ಬಿಜೆಪಿ ಮಹಿಳಾ ಮೋರ್ಚಾ ಅಣಕು ಶವಯಾತ್ರೆ ನಡೆಸಿ ಆಕ್ರೋಶ ಹೊರಹಾಕಿದರು.
ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರದ ಸಂತೇಮರಹಳ್ಳಿ ವೃತ್ತದಲ್ಲಿ ಖಾಲಿ ಮದ್ಯದ ಬಾಟಲಿಗಳ ಜೊತೆ ಅಣಕು ಶವಯಾತ್ರೆ ನಡೆಸಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು,
ಸಂತೇಮರಹಳ್ಳಿ ವೃತ್ತದಿಂದ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಶವಯಾತ್ರೆ ನಡೆಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ವಿರುದ್ಧ ಆಕ್ರೋಶ ಹೊರಹಾಕಿದ ಪ್ರತಿಭಟನಾಕರರು ಕನ್ನಡಿಗರಿಗೆ ಬೀರು ತಮಿಳುನಾಡಿಗೆ ನೀರು ಕೊಟ್ಟ ಸರ್ಕಾರ ಎಂದು ಘೋಷಣೆಗಳನ್ನು ಕೂಗಿದರು,
ಅಪರಾಧ
ವೈರಲ್ ವಿಡಿಯೋ: ಲಾರಿ ಡಿಕ್ಕಿ ಹೊಡೆದರೂ ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿನಿ
ತುಮಕೂರು: ಜಿಲ್ಲೆಯ ತಿಪಟೂರು ನಗರದ ಐಬಿ ಸರ್ಕಲ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಿಯಂತ್ರಣ ತಪ್ಪಿದ ಲಾರಿಯೊಂದು ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಗುದ್ದಿದೆ. ಈ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ವೇಗವಾಗಿ ಬಂದ ಲಾರಿಯು ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ನಂತರ ವಿದ್ಯಾರ್ಥಿನಿಯತ್ತ ನುಗ್ಗಿದೆ. ಡಿಕ್ಕಿಯ ತೀವ್ರತೆಗೆ ವಿದ್ಯಾರ್ಥಿನಿ ಲಾರಿಯ ಕೆಳಗೆ ಸಿಲುಕಿದ್ದರೂ, ಅದೃಷ್ಟವಶಾತ್ ವಾಹನದ ಚಕ್ರ ಆಕೆಯ ಮೇಲೆ ಹರಿಯದೆ ಮಧ್ಯಭಾಗದಲ್ಲಿ ಸಿಲುಕಿದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ.
ಅಪಘಾತ ಕಂಡ ಸ್ಥಳೀಯರು ಕೂಡಲೇ ಲಾರಿಯನ್ನು ನಿಲ್ಲಿಸಿ ವಿದ್ಯಾರ್ಥಿನಿಯನ್ನು ಸುರಕ್ಷಿತವಾಗಿ ಹೊರತೆಗೆದರು. ಬಳಿಕ ಗಾಯಗೊಂಡ ವಿದ್ಯಾರ್ಥಿನಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ ಆಕೆಯ ಆರೋಗ್ಯ ಸ್ಥಿರವಾಗಿದ್ದು ಚಿಕಿತ್ಸೆ ಮುಂದುವರಿದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ತಿಪಟೂರು ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಲಾರಿಯನ್ನು ವಶಕ್ಕೆ ಪಡೆದು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಆರಂಭಿಸಲಾಗಿದೆ.
ಈ ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಲಾರಿ ಕೆಳಗೆ ಸಿಲುಕಿದ್ದರೂ ವಿದ್ಯಾರ್ಥಿನಿ ಅದೃಷ್ಟವಶಾತ್ ಜೀವಂತವಾಗಿ ಪಾರಾಗಿರುವುದು ಹಲವರಲ್ಲಿ ಆಶ್ಚರ್ಯ ಮೂಡಿಸಿದೆ. ವಾಹನ ಚಾಲಕರು ವೇಗ ಮಿತಿಯನ್ನು ಪಾಲಿಸಬೇಕು ಹಾಗೂ ನಗರ ಪ್ರದೇಶಗಳಲ್ಲಿ ಹೆಚ್ಚಿನ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂಬ ಒತ್ತಾಯವೂ ಸಾರ್ವಜನಿಕರಿಂದ ವ್ಯಕ್ತವಾಗಿದೆ.
ದೇಶ
ಮದ್ಯಪ್ರಿಯರಿಂದ ಸರ್ಕಾರಕ್ಕೆ ಬಂಪರ್ ಆದಾಯ: ಬಿಯರ್ ಬೆಲೆ ಇಳಿಕೆ, ಮಾರಾಟ ಏರಿಕೆ
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಆಲ್ಕೋಹಾಲ್ ಇನ್ ಬಿವರೇಜ್ (AIB)’ ಆಧಾರಿತ ಹೊಸ ತೆರಿಗೆ ವ್ಯವಸ್ಥೆಯು ಅಬಕಾರಿ ಇಲಾಖೆಯ ಆದಾಯದಲ್ಲಿ ಗಮನಾರ್ಹ ಏರಿಕೆಗೆ ಕಾರಣವಾಗಿದೆ. ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣವನ್ನು ಆಧರಿಸಿ ತೆರಿಗೆ ವಿಧಿಸುವ ಈ ಹೊಸ ನೀತಿಯ ಪರಿಣಾಮವಾಗಿ ಲಘು ಆಲ್ಕೋಹಾಲ್ ಹೊಂದಿರುವ ಬಿಯರ್‌ಗಳ ಮಾರಾಟ ಹೆಚ್ಚಾಗಿದ್ದು, ಸರ್ಕಾರದ ಆದಾಯವೂ ಹೊಸ ದಾಖಲೆ ಬರೆದಿದೆ.
ಅಬಕಾರಿ ಇಲಾಖೆಯ ಅಂಕಿಅಂಶಗಳ ಪ್ರಕಾರ, ಏಪ್ರಿಲ್‌ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕದಲ್ಲೇ ಸರ್ಕಾರಕ್ಕೆ ಒಟ್ಟು ₹10,599.29 ಕೋಟಿ ಅಬಕಾರಿ ಆದಾಯ ಸಂಗ್ರಹವಾಗಿದೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಶೇ 14.39ರಷ್ಟು ಹೆಚ್ಚಳವಾಗಿದೆ.
ಬಿಯರ್ ಮಾರಾಟದಿಂದ ಮಾತ್ರ ₹1,914.81 ಕೋಟಿ ಆದಾಯ ಬಂದಿದ್ದು, ಕಳೆದ ವರ್ಷದ ಇದೇ ಅವಧಿಗಿಂತ ₹312.67 ಕೋಟಿ ಹೆಚ್ಚುವರಿ ಆದಾಯ ದಾಖಲಾಗಿದೆ. ಭಾರತೀಯ ಮದ್ಯ (IML) ಮಾರಾಟದಿಂದ ₹8,394.32 ಕೋಟಿ ಆದಾಯ ಹರಿದುಬಂದಿದೆ.
ಹೊಸ ತೆರಿಗೆ ವ್ಯವಸ್ಥೆಯಿಂದ ಕಡಿಮೆ ಆಲ್ಕೋಹಾಲ್ ಹೊಂದಿರುವ ಪ್ರೀಮಿಯಂ ಲಾಗರ್ ಬಿಯರ್‌ಗಳ ಬೆಲೆ ಇಳಿಕೆಯಾಗಿರುವುದು ಗ್ರಾಹಕರ ಖರೀದಿ ಹೆಚ್ಚಲು ಕಾರಣವಾಗಿದೆ. ವ್ಯಾಪಾರಿಗಳ ಪ್ರಕಾರ, ಕಳೆದ ಕೆಲವು ವಾರಗಳಲ್ಲಿ ಬಿಯರ್ ಮಾರಾಟದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ದಾಸ್ತಾನು ವೇಗವಾಗಿ ಖಾಲಿಯಾಗಿದೆ.
ರಾಜ್ಯ ಸರ್ಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ₹45,000 ಕೋಟಿ ಅಬಕಾರಿ ಆದಾಯ ಸಂಗ್ರಹಿಸುವ ಗುರಿ ಹೊಂದಿದೆ. ಇದರ ಭಾಗವಾಗಿ ಬಳಕೆಯಾಗದೆ ಉಳಿದಿರುವ 483 ಚಿಲ್ಲರೆ ಮದ್ಯದ ಅಂಗಡಿ (CL-2A) ಹಾಗೂ 96 ಬಾರ್ (CL-9A) ಪರವಾನಗಿಗಳನ್ನು ಇದೇ ತಿಂಗಳ ಕೊನೆಯಲ್ಲಿ ಆನ್‌ಲೈನ್ ಹರಾಜು ಮೂಲಕ ವಿತರಿಸಲು ಇಲಾಖೆ ಯೋಜನೆ ರೂಪಿಸಿದೆ. ಈ ಪರವಾನಗಿಗಳನ್ನು ಐದು ವರ್ಷಗಳ ಅವಧಿಗೆ ನೀಡಲಾಗಲಿದ್ದು, ಇದರಿಂದ ಸರ್ಕಾರದ ಆದಾಯ ಮತ್ತಷ್ಟು ಹೆಚ್ಚುವ ನಿರೀಕ್ಷೆಯಿದೆ.
ಹಣಕಾಸು ಇಲಾಖೆ ಅಧಿಕಾರಿಗಳ ಪ್ರಕಾರ, ಹೊಸ AIB ತೆರಿಗೆ ನೀತಿಯ ಉದ್ದೇಶ ಹೆಚ್ಚಿನ ಆಲ್ಕೋಹಾಲ್ ಹೊಂದಿರುವ ಪಾನೀಯಗಳ ಬಳಕೆಯನ್ನು ಕಡಿಮೆ ಮಾಡಿ, ಕಡಿಮೆ ಆಲ್ಕೋಹಾಲ್ ಹೊಂದಿರುವ ಪಾನೀಯಗಳ ಬಳಕೆಗೆ ಉತ್ತೇಜನ ನೀಡುವುದಾಗಿದೆ.
ಅಪರಾಧ
ಆಸ್ಪತ್ರೆ ದೌರ್ಜನ್ಯ ಪ್ರಕರಣ: ವೈರಲ್ ದೃಶ್ಯಗಳ ನಡುವೆ ಕಾರ್ಪೊರೇಟರ್ ಸ್ಪಷ್ಟನೆ ಏನು?
ನವದೆಹಲಿ: ಮುಂಬೈ ಸಮೀಪದ ಆಸ್ಪತ್ರೆಯೊಂದರಲ್ಲಿ ಮಹಿಳಾ ವೈದ್ಯೆ ಹಾಗೂ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಶಿವಸೇನಾ ಕಾರ್ಪೊರೇಟರ್ ರಮೇಶ್ ಮ್ಹಾತ್ರೆ ಹಾಗೂ ಅವರ ಬೆಂಬಲಿಗರ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ.
ಆಸ್ಪತ್ರೆಯ ಮೂಲಗಳ ಪ್ರಕಾರ, ನವಜಾತ ಶಿಶುಗಳ ತೀವ್ರ ನಿಗಾ ಘಟಕ (NICU)ದಲ್ಲಿ ಹಾಸಿಗೆಗಳ ಕೊರತೆಯ ವಿಚಾರದಿಂದ ಆರಂಭವಾದ ಮಾತಿನ ಚಕಮಕಿ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ವೈದ್ಯರು ಸಂಬಂಧಿಕರಿಗೆ ಆಸ್ಪತ್ರೆಯಲ್ಲಿ ಸದ್ಯ ಯಾವುದೇ NICU ಹಾಸಿಗೆ ಲಭ್ಯವಿಲ್ಲ ಎಂದು ತಿಳಿಸಿದ್ದಾಗಿ ವರದಿಯಾಗಿದೆ. ಬಳಿಕ ಈ ವಿಚಾರಕ್ಕೆ ಸಂಬಂಧಿಸಿ ಕಾರ್ಪೊರೇಟರ್ ಆಸ್ಪತ್ರೆಗೆ ಆಗಮಿಸಿದ್ದು, ಗಲಾಟೆ ನಡೆದಿದೆ ಎನ್ನಲಾಗಿದೆ.
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಮಹಿಳಾ ವೈದ್ಯೆಯೊಬ್ಬರು ತಮ್ಮ ಮೊಬೈಲ್ ಬಳಸಲು ಪ್ರಯತ್ನಿಸುವ ವೇಳೆ ಅವರತ್ತ ಧಾವಿಸುವ ವ್ಯಕ್ತಿ ಕಾಣಿಸಿಕೊಂಡಿದ್ದು, ಬಳಿಕ ಆಸ್ಪತ್ರೆಯ ಸಿಬ್ಬಂದಿ ಮತ್ತು ನರ್ಸ್‌ಗಳೊಂದಿಗೆ ತಳ್ಳಾಟ-ನೂಕಾಟ ನಡೆದಿರುವ ದೃಶ್ಯಗಳು ಗೋಚರಿಸುತ್ತವೆ. ಈ ವಿಡಿಯೋ ಆಧರಿಸಿ ವೈದ್ಯರ ಸಂಘಟನೆಗಳು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ರಮೇಶ್ ಮ್ಹಾತ್ರೆ, ಮಹಿಳಾ ವೈದ್ಯೆಯ ಮೇಲೆ ಹಲ್ಲೆ ನಡೆಸಿಲ್ಲ ಎಂದು ಹೇಳಿದ್ದಾರೆ. ವೈದ್ಯರು ತಮ್ಮ ದೂರುಗಳಿಗೆ ಸ್ಪಂದಿಸದ ಕಾರಣ ಅವರ ಕೈಯಲ್ಲಿದ್ದ ಮೊಬೈಲ್ ಕೆಳಗೆ ಬೀಳುವಂತೆ ಮಾಡಿದ್ದೇನೆ ಎಂದು ಅವರು ಸಮರ್ಥಿಸಿಕೊಂಡಿದ್ದಾರೆ. ಜೊತೆಗೆ ತಮ್ಮ ಕ್ರಮದಿಂದ ರೋಗಿಯ ಜೀವ ಉಳಿದಿದೆ ಎಂಬ ವಾದವನ್ನೂ ಮುಂದಿಟ್ಟಿದ್ದಾರೆ.
ಈ ಘಟನೆ ವೈದ್ಯರ ಸುರಕ್ಷತೆ, ಆಸ್ಪತ್ರೆಗಳಲ್ಲಿ ಭದ್ರತಾ ವ್ಯವಸ್ಥೆ ಹಾಗೂ ಸಾರ್ವಜನಿಕ ಪ್ರತಿನಿಧಿಗಳ ವರ್ತನೆ ಕುರಿತು ಮತ್ತೆ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದ್ದು, ವೈರಲ್ ವಿಡಿಯೋ ಸೇರಿದಂತೆ ಲಭ್ಯವಿರುವ ಸಾಕ್ಷ್ಯಗಳನ್ನು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.
-
ದೇಶ22 hours agoಅಂಜನಾದ್ರಿ ಹುಂಡಿ ಎಣಿಕೆ ಬಳಿಕ 4 ದಿನ ಮೌನ! ಈಗ ಪ್ರಕಟಣೆ ಹೊರಬಿದ್ದಿದ್ದು ಏಕೆ?
-
ದೇಶ8 hours agoಬ್ಯಾಂಕ್ ಅಕೌಂಟ್ ಕ್ಲೋಸ್ ಮಾಡಿದರೆ ಕ್ರೆಡಿಟ್ ಕಾರ್ಡ್ ಬಂದ್ ಆಗುತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ
-
ದೇಶ3 hours agoರಸ್ತೆ ಮಧ್ಯೆ ಹೆಡೆ ಎತ್ತಿ ನಿಂತ ನಾಗರಹಾವು: ಪ್ಯಾಲೇಸ್ ರಸ್ತೆಯಲ್ಲಿ ಅರ್ಧ ಗಂಟೆ ಸಂಚಾರ ಅಸ್ತವ್ಯಸ್ತ
-
ದೇಶ22 hours ago‘ಕಿಂಗ್100’ನಲ್ಲಿ ಟಬು ವಿಲನ್! ನಾಗಾರ್ಜುನ ವಿರುದ್ಧ ಹೊಸ ಅವತಾರ
-
ಅಪರಾಧ3 hours agoಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಮತ್ತೆ ರೌಡಿಗಳ ದಾಳಿ: ಫ್ಲೈ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ
-
ದೇಶ3 hours ago‘ಮೋದಿ ಒಂದೂವರೆ ಗಂಟೆ ನನಗೆ ಬುದ್ಧಿ ಹೇಳಿದರು’ : ಎಚ್.ಡಿ.ಕುಮಾರಸ್ವಾಮಿ
-
ಆರೋಗ್ಯ8 hours agoಥೈರಾಯ್ಡ್ಗೆ ಕೊತ್ತಂಬರಿ ಬೀಜ ಮತ್ತು ತ್ರಿಕಾಟು ಚೂರ್ಣ: ಆಯುರ್ವೇದದ ಪರಿಣಾಮಕಾರಿ ಮನೆಮದ್ದು
-
ದೇಶ4 hours agoಗೃಹಜ್ಯೋತಿ ಯೋಜನೆಗೆ ಹೊಸ ರೂಲ್ಸ್: ಬಾಡಿಗೆ ಒಪ್ಪಂದ ಇಲ್ಲದಿದ್ದರೂ ಉಚಿತ ವಿದ್ಯುತ್ ಪಡೆಯಬಹುದು!
