Connect with us

ದೇಶ

ಮೈಸೂರು: ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ

Published

on

ಮೈಸೂರು: ಅರಮನೆಯಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ

ನವರಾತ್ರಿಗೂ ಮುನ್ನ ಭದ್ರತಾ ಕೊಠಡಿಯಲ್ಲಿರಿಸಿದ್ದ ಸಿಂಹಾಸನದ ಬಿಡಿ ಭಾಗಗಳನ್ನು ಹೊರತಂದು ಅದನ್ನು ಜೋಡಿಸಿ ಸಂಪ್ರದಾಯಬದ್ಧ ಪೂಜೆ ಬಳಿಕ ವಿಜಯದಶಮಿಯ ಎಲ್ಲ ಕಾರ್ಯಕ್ರಮಗಳನ್ನು ನೆರವೇರಿಸುವುದು ಹಿಂದಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ ಅದತಂತೆ ಅರಮನೆಯ ದರ್ಬಾರ್ ಹಾಲ್‌ನಲ್ಲಿ ರತ್ನ ಖಚಿತ ಸಿಂಹಾಸನವನ್ನು ಜೋಡಿಸಲಾಗಿದೆ.14 ಬಿಡಿ ಭಾಗಗಳಿಂದ ಕೂಡಿರುವ ಸಿಂಹಾಸನ ಸೋಮವಾರ ಅರಮನೆಯ ಸುಪರ್ಧಿನಲ್ಲಿದ್ದ ಸಿಂಹಾಸನವನ್ನು ಪ್ರಮೋದಾದೇವಿ ಅವರು ಜಿಲ್ಲಾಡಳಿತದ ವಶಕ್ಕೆ ನೀಡಿದ ಬಳಿಕ. ಅರಮನೆಯ ನೆಲಮಾಳಿಗೆಯಲ್ಲಿರುವ ಸ್ಟ್ರಾಂಗ್ ರೂಮ್ ತೆರೆದು ಸಿಂಹಾಸನ ಹಾಗೂ ಭದ್ರಾಸನದ ಬಿಡಿ ಭಾಗಗಳನ್ನು ಪ್ರತ್ಯೇಕಿಸಲಾಯಿತು.ಪೊಲೀಸರ ಕಣ್ಗಾವಲಿನಲ್ಲಿ ಒಂದೊಂದೇ ಬಿಡಿ ಭಾಗವನ್ನು ದರ್ಬಾರ್ ಹಾಲ್‌ಗೆ ತರಲಾಯಿತು.ಸುಮಾರು 14 ಬಿಡಿ ಭಾಗಗಳಾಗಿ ವಿಂಗಡಿಸಲಾಗಿದ್ದ ಈ ಸಿಂಹಾಸನವನ್ನು ಜೋಡಿಸಿ, ಪರದೆ ಬಿಡಲಾಯಿತು. ದರ್ಬಾರ್ ಹಾಲ್‌ನಲ್ಲಿ ಸಿಂಹಾಸನ, ಕನ್ನಡಿ ತೊಟ್ಟಿಯಲ್ಲಿ ಭದ್ರಾಸನ ಜೋಡಿಸಲಾಯಿತು. ಬೆಳಗ್ಗೆ ಶಾಂತಿಹೋಮದೊಂದಿಗೆ ಪೂಜಾ ಕಾರ್ಯಕ್ರಮಗಳನ್ನು ಆರಂಭ ಮಾಡಿ ಕಳಶ ಸ್ಥಾಪನೆ, ಪವಿತ್ರ ಜಲ ಪ್ರೋಕ್ಷಣೆ, ಹೋಮ ಸೇರಿದಂತೆ ಪೂರ್ವ ನಿರ್ಧರಿತ ಮುಹೂರ್ತದಲ್ಲಿ ಸಿಂಹಾಸನ ಜೋಡಣಾ ಕಾರ್ಯ ಸಂಪನ್ನಗೊಳಿಸಲಾಯಿತು.ನಂತರ ಬೆಳಗ್ಗೆ 10.05ರಿಂದ 10.35ರವರೆಗೆ ಸಲ್ಲುವ ಶುಭ ಲಗ್ನದಲ್ಲಿ ಸಿಂಹಾಸನ ಜೋಡಣೆ ಮಾಡಲಾಯಿತು.ಇದಕ್ಕಾಗಿ ಬೆಳಗ್ಗೆ 7 ರಿಂದಲೇ ವಿವಿಧ ಪೂಜಾ ಕೈಂಕರ್ಯ ಜರುಗಿದವು. ಅರಮನೆ ಪುರೋಹಿತರ ನೇತೃತ್ವದಲ್ಲಿ ನವಗ್ರಹ ಹೋಮ, ಗಣಪತಿ ಹೋಮ, ಶ್ರೀ ಚಾಮುಂಡಿ ಪೂಜೆ ನೆರವೇರಿಸಿ, ನಂತರ ಪೂರ್ಣಾಹುತಿ ನೆರವೇರಿಸಲಾಯಿತು. ಅಂತಿಮವಾಗಿ ಶಾಂತಿ ಪೂಜೆ ಮಾಡಲಾಯಿತು. ಬಳಿಕ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಸಮ್ಮುಖದಲ್ಲಿ ಸಿಂಹಾಸನದ ಜೋಡಣೆ ಕಾರ್ಯ ನಡೆಯಿತು. ನಂತರ ಪಟ್ಟದ ಕುದುರೆ, ಪಟ್ಟದ ಹಸುವನ್ನು ಕಲ್ಯಾಣಮಂಟಪದ ಸಮೀಪ ಇರುವ ಅಂಗಳಕ್ಕೆ ಕರೆತಂದು ಪೂಜಿಸಲಾಯಿತು.ಮೈಸೂರು ಅಂಬಾವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್‌ಗಾಗಿ ರತ್ನ ಖಚಿತ ಸಿಂಹಾಸನದ 8 ಬೆಳ್ಳಿಯ ಭದ್ರಾಸನ ಮತ್ತು 6 ಬಿಡಿಭಾಗಗಳನ್ನು ಜೋಡಿಸಿ, ಸಿಂಹಾಸನಕ್ಕೆ ಉಮಾಪಕ್ಷಿ, ಮುತ್ತಿನ ಜಾಲರಿ, ಮಕರ ತೋರಣ, 25 ಜತೆ ನಗಗಳು, 1 ಜೊತೆ ಚಿನ್ನದ ಕುದುರೆ, ತುರಾಯಿ ಜೋಡಿ, 1 ಜೊತೆ ಚಿನ್ನದ ಕಳಶ ಜೋಡಿಸಿ ಅಲಂಕರಿಸುವ ಮೂಲಕ ಸಿಂಹಾಸನವನ್ನು ಜೋಡಿಸಿ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಲಾಯಿತು.ಇನ್ನು ಸಿಂಹಾಸನಕ್ಕೆ ಅ.15ರಂದು ಸಿಂಹದ ಮುಖವನ್ನು ಜೋಡಿಸಿದ ಬಳಿಕ ಸಿಂಹಾಸನವು ದರ್ಬಾರ್‌ಗೆ ಸಜ್ಜಾಗಲಿದೆ. ಈ ಸಿಂಹಾಸನವನ್ನು ದರ್ಬಾರ್ ಹಾಲ್‌ನಲ್ಲಿ ಪ್ರತಿಷ್ಠಾಪಿಸಲಾಗಿದ್ದು, ಅ 15ರಿಂದ ಅ.24ರವರೆಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಖಾಸಗಿ ದರ್ಬಾರ್ ನಡೆಸಲಿದ್ದಾರೆ.

ದೇಶ

ವೀರಕುಮಾರರ ತಪಸ್ಸು, ಭಕ್ತಿಯ ತೇಜಸ್ಸು: ಕೆಂಗೇರಿ ಕರಗದ ವೈಶಿಷ್ಟ್ಯ

Published

on

By

ಬೆಂಗಳೂರು: ನಗರದ ಕೆಂಗೇರಿಯಲ್ಲಿ ಕ್ಷತ್ರಿಯ (ತಿಗಳ ಕ್ಷತ್ರಿಯ) ಸಮುದಾಯದವರಿಂದ ಆಚರಿಸಲ್ಪಡುವ ದ್ರೌಪದಿ ಅಮ್ಮನವರ ಭವ್ಯ ಕರಗ ಶಕ್ತಿ ಉತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಅನಾದಿಕಾಲದಿಂದಲೂ ನಡೆಯುತ್ತಿರುವ ಈ ಸಂಪ್ರದಾಯಿಕ ಹಬ್ಬದಲ್ಲಿ ಭಕ್ತಿ, ಶಕ್ತಿ ಮತ್ತು ಸಂಸ್ಕೃತಿಯ ಸಮ್ಮಿಳನ ಕಂಡುಬರುತ್ತದೆ.

ಈ ಮಹೋತ್ಸವದ ಅಂಗವಾಗಿ ಹಸಿ ಕರಗವನ್ನು ಮುನ್ನಡೆಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಲಾಗುತ್ತದೆ. ಸಮುದಾಯದವರು Draupadi Amman ಅವರನ್ನು ಕುಲದೇವತೆಯಾಗಿ ಆರಾಧಿಸುತ್ತಾರೆ. ಕರಗ ಪೂಜೆಯಲ್ಲಿ ಕುಲಪುರೋಹಿತರು, ವೀರಕುಮಾರರು ಮತ್ತು ಭಕ್ತರು ಭಾಗವಹಿಸಿ ವಿಶೇಷ ವಿಧಿವಿಧಾನಗಳನ್ನು ನೆರವೇರಿಸುತ್ತಾರೆ.

ಹಬ್ಬದ ವಿಶೇಷವೆಂದರೆ ವೀರಕುಮಾರರು ಕೈಯಲ್ಲಿ ಖಡ್ಗಗಳನ್ನು ಹಿಡಿದು ಭಕ್ತಿಯ ಸಂಕೇತವಾಗಿ ತಮ್ಮ ಎದೆಗೆ ತಾವೇ ಪ್ರಹಾರ ಮಾಡಿಕೊಳ್ಳುವುದು. ಗಾಯವಾದಲ್ಲಿ ಔಷಧಿಯ ಬದಲು ಅರಿಶಿನವನ್ನು ಬಳಸಿ ದೇವಿಯ ಮೇಲಿನ ಭಕ್ತಿಯನ್ನು ತೋರಿಸುತ್ತಾರೆ.

ರಾತ್ರಿ ಸುಮಾರು ಮೂರು ಗಂಟೆಗೆ ಹೂವಿನ ಕರಗ ಸಿದ್ಧವಾಗುತ್ತಿದ್ದು, ಕೆಂಪು ವಸ್ತ್ರ ಮತ್ತು ಮಂಗಳ ದ್ರವ್ಯಗಳಿಂದ ಅಲಂಕರಿಸಲಾಗುತ್ತದೆ. ಪೂಜಾರಿ ಮಲ್ಲಿಗೆ ಹೂಗಳಿಂದ ಸಿಂಗರಿಸಿಕೊಂಡು ಕರಗವನ್ನು ಹೊತ್ತು ಭಕ್ತಿಭಾವದಿಂದ ನರ್ತನ ಮಾಡುತ್ತಾ ಸಾಗುತ್ತಾರೆ.

ಈ ಕರಗವು ಕೆಂಗೇರಿ ಸುತ್ತಮುತ್ತಲಿನ ಬಡಾವಣೆಗಳಲ್ಲಿ ಸಂಚರಿಸಿ, ನಂತರ ದೇವಸ್ಥಾನಕ್ಕೆ ಮರಳಿ ಪೂಜೆ ಸ್ವೀಕರಿಸುವ ಮೂಲಕ ಮಹೋತ್ಸವ ಮುಕ್ತಾಯಗೊಳ್ಳುತ್ತದೆ.

ಈ ಸಂದರ್ಭದಲ್ಲಿ ಸಮುದಾಯದ ಅನೇಕ ಮುಖಂಡರು ಹಾಗೂ ಭಕ್ತರು ಭಾಗವಹಿಸಿ ಉತ್ಸವಕ್ಕೆ ಭಕ್ತಿ ಭಾವ ತುಂಬಿದರು.

Continue Reading

ದೇಶ

ಹೊರ್ಮುಜ್ ಜಲಸಂಧಿ ತೆರೆಯಲ್ಲ: ಇರಾನ್ ಕಠಿಣ ನಿಲುವು

Published

on

By

ಟೆಹ್ರಾನ್/ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚುತ್ತಿರುವ ನಡುವೆ, Iran ಹೊರ್ಮುಜ್ ಜಲಸಂಧಿಯನ್ನು ತಾತ್ಕಾಲಿಕ ಯುದ್ಧ ವಿರಾಮಕ್ಕಾಗಿ ತೆರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಹಿರಿಯ ಇರಾನಿ ಅಧಿಕಾರಿಯೊಬ್ಬರು ಈ ಕುರಿತು ಹೇಳಿಕೆ ನೀಡಿದ್ದು, ಅಮೆರಿಕದ ನಿಲುವಿನ ಮೇಲೆ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಯ ಪ್ರಕಾರ, ಅಮೆರಿಕ ಆಡಳಿತ ಶಾಶ್ವತ ಯುದ್ಧ ವಿರಾಮಕ್ಕೆ ಸಿದ್ಧತೆಯಿಲ್ಲ ಎಂದು ಆರೋಪಿಸಲಾಗಿದೆ. ಇದೇ ವೇಳೆ, Pakistan ಕಳುಹಿಸಿದ ಯುದ್ಧ ವಿರಾಮ ಪ್ರಸ್ತಾವವನ್ನು ತಹ್ರಾನ್ ಪರಿಶೀಲಿಸುತ್ತಿದೆ ಎಂದು ತಿಳಿದುಬಂದಿದೆ.

ಇದಕ್ಕೂ ಮೊದಲು ಅಮೆರಿಕದ ಮಾಜಿ ಅಧ್ಯಕ್ಷ Donald Trump ಸಾಮಾಜಿಕ ಜಾಲತಾಣದಲ್ಲಿ ತೀವ್ರ ಪದಗಳಲ್ಲಿ ಎಚ್ಚರಿಕೆ ನೀಡಿದ್ದು, ಹೊರ್ಮುಜ್ ಜಲಸಂಧಿಯನ್ನು ತೆರೆಯಲು ಇರಾನ್‌ಗೆ ಒತ್ತಾಯಿಸಿದ್ದರು. ಅವರು “ಇಲ್ಲವಾದರೆ ನರಕದಲ್ಲಿ ಬದುಕಬೇಕಾಗುತ್ತದೆ” ಎಂದು ಎಚ್ಚರಿಸಿದ್ದು, ಪರಿಸ್ಥಿತಿಗೆ ಮತ್ತಷ್ಟು ತೀವ್ರತೆ ತಂದಿದೆ.

ಇನ್ನೊಂದು ಹೇಳಿಕೆಯಲ್ಲಿ ಟ್ರಂಪ್, ಶಕ್ತಿಸೌಕರ್ಯಗಳ ಮೇಲೆ ದಾಳಿ ನಡೆಸುವ ಸೂಚನೆಯನ್ನೂ ನೀಡಿದ್ದಾರೆ. “ಮಂಗಳವಾರ ಪವರ್ ಪ್ಲಾಂಟ್ ಡೇ ಆಗಲಿದೆ” ಎಂದು ಹೇಳಿರುವುದು ಆತಂಕಕ್ಕೆ ಕಾರಣವಾಗಿದೆ.

ಇದಕ್ಕೂ ನಡುವೆ, ಇರಾನ್ ತನ್ನ ವಾಯುಪ್ರದೇಶದಲ್ಲಿ ಅಮೆರಿಕದ ವಿಮಾನವೊಂದನ್ನು ಹೊಡೆದುರುಳಿಸಿದ ಬಳಿಕ ಇಬ್ಬರು ಪೈಲಟ್‌ಗಳನ್ನು ರಕ್ಷಿಸಿದ ಸೇನಾ ಕಾರ್ಯಾಚರಣೆ ನಡೆದಿರುವುದಾಗಿ ಅಮೆರಿಕ ತಿಳಿಸಿದೆ.

ಈ ಎಲ್ಲಾ ಬೆಳವಣಿಗೆಗಳು ಮಧ್ಯಪ್ರಾಚ್ಯದ ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸುತ್ತಿದ್ದು, ಜಾಗತಿಕ ಮಟ್ಟದಲ್ಲಿ ಯುದ್ಧ ಭೀತಿ ಹೆಚ್ಚುತ್ತಿದೆ.

Continue Reading

ಚುನಾವಣೆ

Davangere By Election 2026 : 25 ಅಭ್ಯರ್ಥಿಗಳ ಕಣ: ಮುಸ್ಲಿಂ ಅಭ್ಯರ್ಥಿಗಳೇ ಗೇಮ್‌ಚೇಂಜರ್?

Published

on

By

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತಿಮ ಹಂತ ತಲುಪಿದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮಾಜಿ ಶಾಸಕ Shamanur Shivashankarappa ಅವರ ನಿಧನದಿಂದ ತೆರವಾದ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಈ ಬಾರಿ ಸವಾಲು ಗಟ್ಟಿಯಾಗಿದೆ.

2008ರ ಕ್ಷೇತ್ರ ಮರುವಿಂಗಡಣೆಯ ನಂತರದಿಂದಲೂ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಈ ಕ್ಷೇತ್ರದಲ್ಲಿ, ಶಾಮನೂರು ಶಿವಶಂಕರಪ್ಪ ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದರು. ಆದರೆ ಈ ಬಾರಿ ಪರಿಸ್ಥಿತಿ ಬದಲಾಗಿರುವುದನ್ನು ಕಾಂಗ್ರೆಸ್ ನಾಯಕರೇ ಒಪ್ಪಿಕೊಳ್ಳುತ್ತಿದ್ದಾರೆ.

ಒಟ್ಟು 2,31,132 ಮತದಾರರಿರುವ ಈ ಕ್ಷೇತ್ರದಲ್ಲಿ ಮುಸ್ಲಿಂ ಮತದಾರರು ನಿರ್ಣಾಯಕ ಪಾತ್ರವಹಿಸುತ್ತಿದ್ದಾರೆ. ಸುಮಾರು 70 ಸಾವಿರ ಮತಗಳು ಯಾರಿಗೆ ಸಿಗುತ್ತವೆ ಎಂಬುದೇ ಗೆಲುವಿನ ಲೆಕ್ಕಾಚಾರವನ್ನು ನಿರ್ಧರಿಸಲಿದೆ.

ಕಾಂಗ್ರೆಸ್ ಪರವಾಗಿ Mallikarjun Shamanur ಕಣಕ್ಕಿಳಿದಿದ್ದು, ಕುಟುಂಬ ರಾಜಕಾರಣದ ಆರೋಪ ಪಕ್ಷಕ್ಕೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಸಚಿವ S. S. Mallikarjun ಮತ್ತು ಸಂಸದೆ Dr. Prabha Mallikarjun ಅವರ ಕುಟುಂಬದ ಮತ್ತೊಬ್ಬರನ್ನು ಅಭ್ಯರ್ಥಿ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಇನ್ನೊಂದೆಡೆ, ಒಟ್ಟು 25 ಅಭ್ಯರ್ಥಿಗಳು ಕಣದಲ್ಲಿದ್ದು, ಅದರಲ್ಲಿ 13 ಮುಸ್ಲಿಂ ಅಭ್ಯರ್ಥಿಗಳಿರುವುದು ಚುನಾವಣೆಗೆ ಹೊಸ ತಿರುವು ನೀಡಿದೆ. Social Democratic Party of India ಅಭ್ಯರ್ಥಿ ಅಪ್ಸರ್ ಕೊಡ್ಲಿಪೇಟೆ ಸೇರಿದಂತೆ ಹಲವರು ಸಕ್ರಿಯ ಪ್ರಚಾರ ನಡೆಸುತ್ತಿದ್ದಾರೆ.

ಬಿಜೆಪಿ ಶಿಬಿರ ಒಗ್ಗಟ್ಟಿನಿಂದ ಪ್ರಚಾರ ನಡೆಸುತ್ತಿದ್ದರೆ, ಕಾಂಗ್ರೆಸ್ ಒಳಗಿನ ಗೊಂದಲ ಇನ್ನೂ ಸಂಪೂರ್ಣವಾಗಿ ಶಮನವಾಗಿಲ್ಲ. ಈ ಹಿನ್ನೆಲೆ, ಕಾಂಗ್ರೆಸ್ ಭದ್ರಕೋಟೆಯಾಗಿದ್ದರೂ, ಗೆಲುವು ಈ ಬಾರಿ ಸುಲಭವಾಗಿಲ್ಲ ಎಂಬ ವಿಶ್ಲೇಷಣೆ ಕೇಳಿಬರುತ್ತಿದೆ.

Continue Reading

Trending