Connect with us

ಆರೋಗ್ಯ

ವೀರಭದ್ರಾಸನ

Published

on

ವೀರಭದ್ರಾಸನ

ಯೋಗಾಸನದಲ್ಲಿ ಪ್ರತಿಯೊಂದು ಆಸನವು ದೇಹದ ಯಾವುದಾದರೂ ಒಂದು ಅಂಗವನ್ನು ಬಲಪಡಿಸುವುದು. ಅದೇ ರೀತಿಯಾಗಿ ಈ ಆಸನವು ಹೆಸರೇ ಸೂಚಿಸುವಂತೆ ವೀರರಂತೆ ದೇಹವನ್ನು ಸಜ್ಜುಗೊಳಿಸುವುದು. ಇದು ಮುಖ್ಯವಾಗಿ ಕೈಗಳು, ಭುಜ, ತೊಡೆ ಮತ್ತು ಬೆನ್ನಿನ ಸ್ನಾಯುಗಳನ್ನು ಬಲಪಡಿಸುವುದು. ಈ ಆಸನವೇ ವೀರಭದ್ರಾಸನ.ಮುಖ್ಯವಾಗಿ ಕೈಗಳು, ಭುಜ, ತೊಡೆ ಮತ್ತು ಬೆನ್ನಿನ ಸ್ನಾಯುಗಳನ್ನು ಬಲಪಡಿಸುವುದು. ಈ ಆಸನವೇ ವೀರಭದ್ರಾಸನ. ಇದು ಸೈನಿಕನ ಹೆಸರಾಗಿದ್ದು, ಶಿವ ದೇವರ ಅವತಾರವೆಂದು ಪರಿಗಣಿಸಲಾಗಿದೆ. ಉಪನಿಷತ್‌ನಲ್ಲಿ ಇರುವಂತಹ ವೀರಭದ್ರ ಸೈನಿಕನ ಕಥೆಯು ನಮಗೆಲ್ಲರಿಗೂ ಜೀವನದಲ್ಲಿ ಒಂದು ಪಾಠವಾಗಿದೆ.ಮಾನಸಿಕ ಒತ್ತಡ ಹಾಗೂ ಖಿನ್ನತೆ ಹೋಗಲಾಡಿಸುವಲ್ಲಿ ಈ ಆಸನ ಬೆಸ್ಟ್.ವೀರ ಭದ್ರಾಸನವು ಒಂದು ಆಕರ್ಷಕ ಯೋಗ ಭಂಗಿಯಾಗಿದೆ. ಇದು ಯೋಗಾಭ್ಯಾಸಕ್ಕೆ ಸೌಂದರ್ಯ ಮತ್ತು ಆಕರ್ಷಣೆಯನ್ನು ನೀಡುವುದು.ವೀರ ಎಂದರೆ ಧೈರ್ಯ, ಭದ್ರ ಎಂದರೆ ಶುಭಕರ ಮತ್ತು ಆಸನ ಎಂದರೆ ಭಂಗಿ ಎಂಬ ಮೂರು ಪದಗಳಿಂದ ಮೂಡಿದ ಈ ಆಸನ ಹೆಸರಿಗೆ ತಕ್ಕಂತೆ ಧೈರ್ಯವಂತರಾಗಲು ಉತ್ತಮ ಶರೀರ ಹೊಂದಲು ನೆರವಾಗುತ್ತದೆ.ವಿಶೇಷವಾಗಿ ತೋಳು, ತೊಡೆ, ಭುಜ ಮತ್ತು ಬೆನ್ನಿನ ಸ್ನಾಯುಗಳನ್ನು ಹುರಿಗಟ್ಟಿಸುವ ಈ ಆಸನ ಅಪ್ರತಿಮ ವೀರ, ಶಿವನ ಅವತಾರ ವೀರಭದ್ರನ ಸ್ಮರಣಾರ್ಥವಾಗಿ ಇಡಲಾಗಿದೆ. ಶಿವನ ಶಕ್ತಿ ಮತ್ತು ಸ್ಥೈರ್ಯವನ್ನು ಪಡೆಯಲು ಸಹಾ ಈ ಆಸನ ಪ್ರೇರಣೆ ನೀಡಬಲ್ಲುದು.

ವೀರಭದ್ರಾಸನ ಮಾಡುವ ವಿಧಾನ:
ಕಾಲುಗಳನ್ನು 3-4 ಅಡಿ ಅಗಲವಾಗಿಸಿಕೊಂಡು ನೇರವಾಗಿ ನಿಲ್ಲಿ.
ಬಲದ ಕಾಲನ್ನು 90 ಡಿಗ್ರಿ ಮತ್ತು ಎಡ ಕಾಲನ್ನು 15 ಡಿಗ್ರಿಯಲ್ಲಿ ಇಡಬೇಕು.
ಬಲಕಾಲಿನ ಹಿಂಗಾಲು ಎಡಕಾಲಿನ ಪಾದದ ಮಧ್ಯಭಾಗಕ್ಕೆ ನೇರವಾಗಿರಬೇಕು.
ಅಂಗೈಯು ಪರಸ್ಪರ ಎದುರಾಗುವಂತೆ ನೀವು ಎರಡು ಕೈಗಳನ್ನು ಹಾಗೆ ಮೇಲಕ್ಕೆತ್ತಿಕೊಳ್ಳಿ.
ಉಸಿರನ್ನು ಬಿಡಿ ಮತ್ತು ಬಲದ ಮೊಣಕಾಲನ್ನು ಬಗ್ಗಿಸಿ
ಮೊಣಕಾಲುಗಳು ಹಿಂಗಾಲನ್ನು ಹಿಂದಿಕ್ಕಿ ಹೋಗದಂತೆ ನೋಡಿಕೊಳ್ಳಿ.
ತಲೆಯನ್ನು ನೇರವಾಗಿಸಿಕೊಂಡು ಬಲಕ್ಕೆ ನೋಡಿ.
ಇದೇ ಭಂಗಿಯಲ್ಲಿ ನೀವು ಕೈಗಳನ್ನು ಆಗಿ ಎಳೆದುಕೊಳ್ಳಿ.
ಶ್ರೋಣಿಯನ್ನು ನೀವು ಕೆಳಗೆ ಒತ್ತಲು ಪ್ರಯತ್ನಿಸಿ.
ಯೋಧನ ಭಂಗಿಯಲ್ಲಿ ನೀವು ಇರಬೇಕು.
ನೀವು ನಗುತ್ತಿರುವ ಯೋಧನಂತೆ ನಗುತ್ತಲಿರಿ.
ಕೆಳಗೆ ಬಾಗಿದಂತೆ ಉಸಿರಾಡಿ, ಉಸಿರು ಬಿಡಿ ಮತ್ತು ಮೇಲೆ ಬನ್ನಿ.
ಎರಡು ಬದಿಯಿಂದ ಕೈಗಳನ್ನು ಕೆಳಗೆ ತಂದು ಉಸಿರನ್ನು ಬಿಡಿ.
ಈ ಭಂಗಿಯನ್ನು ಈಗ ಎಡದ ಬದಿಗೂ ನೀವು ಮಾಡಬೇಕು.

ವೀರಭದ್ರಾಸನದ ಅನುಕೂಲಗಳು:
ಇದು ಕೈಗಳು, ಕಾಲುಗಳು ಮತ್ತು ಬೆನ್ನಿನ ಕೆಳಭಾಗದ ಸ್ನಾಯುಗಳನ್ನು ಬಲಪಡಿಸುವುದು.
ದೇಹದಲ್ಲಿ ಸಮತೋಲನ ಸುಧಾರಿಸುವುದು ಮತ್ತು ತ್ರಾನ ಹೆಚ್ಚಿಸುವುದು.
ಜಡ ಮತ್ತು ಕುಳಿತು ಕೆಲಸ ಮಾಡುವವರಿಗೆ ಲಾಭಕಾರಿ.
ಭುಜಗಳಿಗೆ ಇದು ತುಂಬಾ ಲಾಭಕಾರಿ.
ತುಂಬಾ ಕಡಿಮೆ ಸಮಯದಲ್ಲಿ ಇದು ಭುಜದಲ್ಲಿನ ಒತ್ತಡ ಕಡಿಮೆ ಮಾಡುವುದು.
ಇದು ಧೈರ್ಯ ಮತ್ತು ಶಾಂತಿ ಉಂಟು ಮಾಡುವುದು.

ಎಚ್ಚರಿಕೆ:
ಇತ್ತೀಚೆಗೆ ಬೆನ್ನಿನ ಸಮಸ್ಯೆ ಅಥವಾ ದೀರ್ಘಾವಧಿ ಅನಾರೋಗ್ಯಕ್ಕೆ ಒಳಗಾಗಿದ್ದರೆ ಆಗ ನೀವು ವೈದ್ಯರ ಸಲಹೆ ಪಡೆದು ವೀರಭದ್ರಾಸನವನ್ನು ಮಾಡಿ.
ಅಧಿಕ ರಕ್ತದೊತ್ತಡ ಇರುವವರು ಇದನ್ನು ಮಾಡಬಾರದು.
ಎರಡು ಮತ್ತು ಮೂರನೇ ತ್ರೈಮಾಸಿಕದಲ್ಲಿ ಇರುವ ಗರ್ಭಿಣಿಯರಿಗೆ ಇದು ತುಂಬಾ ನೆರವಾಗುವುದು. ಗೋಡೆಗೆ ಸನಿಹದಲ್ಲಿ ನಿಂತುಕೊಂಡು ಇದನ್ನು ಅಭ್ಯಾಸ ಮಾಡಿದರೆ ಒಳ್ಳೆಯದು. ಯಾಕೆಂದರೆ ಇದು ಬಲ ನೀಡುವುದು. ವೈದ್ಯರ ಸಲಹೆ ಪಡೆದ ಬಳಿಕ ನೀವು ಈ ಯೋಗ ಮಾಡಿ.
ನೀವು ಅತಿಸಾರ ಅಥವಾ ಇತ್ತೀಚೆಗೆ ಅತಿಸಾರಕ್ಕೆ ಒಳಗಾಗಿದ್ದರೆ ನೀವು ಈ ಆಸನ ಮಾಡಲು ಹೋಗಬೇಡಿ.
ಮೊಣಕಾಲಿನ ನೋವು, ಸಂಧಿವಾತ ಇದ್ದರೆ ಆಗ ಮೊಣಕಾಲಿನಲ್ಲಿ ಬಲಕ್ಕೆ ಏನಾದರೂ ಬಳಸಿಕೊಳ್ಳಿ.

ಆರೋಗ್ಯ

Meditation Benefits : ಮಾನಸಿಕ ಆರೋಗ್ಯ ಕಾಪಾಡಲು ಧ್ಯಾನ ಯಾಕೆ ಅಗತ್ಯ ಗೊತ್ತಾ?

Published

on

ಧ್ಯಾನ (Meditation) ಇತ್ತೀಚಿನ ದಿನಗಳಲ್ಲಿ ಕೇವಲ ಆಧ್ಯಾತ್ಮಿಕ ಅಭ್ಯಾಸವಾಗಿಯೇ ಉಳಿದಿಲ್ಲ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಅತ್ಯುತ್ತಮ ವಿಧಾನವಾಗಿಯೂ ಪರಿಗಣಿಸಲಾಗುತ್ತಿದೆ. ಇಂದಿನ ಬ್ಯುಸಿ ಜೀವನಶೈಲಿ, ಕೆಲಸದ ಒತ್ತಡ, ಕುಟುಂಬದ ಜವಾಬ್ದಾರಿ ಮತ್ತು ಹಣಕಾಸಿನ ಚಿಂತೆಗಳಿಂದ ಅನೇಕರು ಮಾನಸಿಕವಾಗಿ ಕುಗ್ಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರತಿದಿನ ಕೇವಲ 10 ನಿಮಿಷ ಧ್ಯಾನ ಮಾಡುವ ಅಭ್ಯಾಸ ಜೀವನದಲ್ಲಿ ದೊಡ್ಡ ಬದಲಾವಣೆಯನ್ನು ತರಬಹುದು ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಧ್ಯಾನ ಮಾಡುವುದರಿಂದ ದೇಹದಲ್ಲಿ ಉತ್ಪತ್ತಿಯಾಗುವ ಕಾರ್ಟಿಸೋಲ್ ಹಾರ್ಮೋನ್ ಮಟ್ಟ ಕಡಿಮೆಯಾಗುತ್ತದೆ. ಇದರಿಂದ ಒತ್ತಡ, ಆತಂಕ ಮತ್ತು ಮಾನಸಿಕ ಅಶಾಂತಿ ಕಡಿಮೆಯಾಗಲು ಸಹಾಯವಾಗುತ್ತದೆ. ಜೊತೆಗೆ ಕೆಲಸದ ಮೇಲೆ ಏಕಾಗ್ರತೆ ಹೆಚ್ಚಾಗಿ, ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವೂ ಉತ್ತಮಗೊಳ್ಳುತ್ತದೆ.

ನಿತ್ಯ ಧ್ಯಾನ ಮಾಡುವವರು ಭಾವನಾತ್ಮಕವಾಗಿ ಹೆಚ್ಚು ಸಮತೋಲನದಲ್ಲಿರುತ್ತಾರೆ. ಮನೆಯ ಸಮಸ್ಯೆಗಳು, ಕೆಲಸದ ಒತ್ತಡ ಅಥವಾ ಹಣಕಾಸಿನ ಗೊಂದಲಗಳ ನಡುವೆಯೂ ಮನಸ್ಸನ್ನು ಶಾಂತವಾಗಿಟ್ಟುಕೊಳ್ಳಲು ಧ್ಯಾನ ಸಹಕಾರಿಯಾಗುತ್ತದೆ. ಕೋಪ ಕಡಿಮೆಯಾಗುವುದರ ಜೊತೆಗೆ ಸಕಾರಾತ್ಮಕ ಚಿಂತನೆಗಳು ಹೆಚ್ಚಾಗುತ್ತವೆ.

ಆರೋಗ್ಯದ ದೃಷ್ಟಿಯಿಂದಲೂ ಧ್ಯಾನ ಬಹಳ ಪ್ರಯೋಜನಕಾರಿ. ನಿಯಮಿತ ಧ್ಯಾನದಿಂದ ರಕ್ತದೊತ್ತಡ ನಿಯಂತ್ರಣದಲ್ಲಿರಲು ಸಹಾಯವಾಗುತ್ತದೆ. ಹೃದಯದ ರಕ್ತಪರಿಚಲನೆ ಸುಧಾರಿಸಿ ದೇಹದ ಶಕ್ತಿ ಕುಂದುವುದನ್ನು ತಡೆಯುತ್ತದೆ. ಹೀಗಾಗಿ ಪ್ರತಿದಿನ ಕೆಲ ನಿಮಿಷ ಧ್ಯಾನ ಮಾಡುವ ಅಭ್ಯಾಸ ಬೆಳೆಸಿಕೊಳ್ಳುವುದು ದೈಹಿಕ ಮತ್ತು ಮಾನಸಿಕ ಆರೋಗ್ಯ ಎರಡಕ್ಕೂ ಉತ್ತಮ ಎಂದು ವೈದ್ಯರು ಸಲಹೆ ನೀಡಿದ್ದಾರೆ.

Continue Reading

ಆರೋಗ್ಯ

WHO ಎಚ್ಚರಿಕೆ ಬಳಿಕ ಭಾರತದಲ್ಲೂ ಮುನ್ನೆಚ್ಚರಿಕೆ ಕ್ರಮ; ವಿಜಯವಾಡದಲ್ಲಿ ಕ್ಯಾಂಪ್

Published

on

ವಿಜಯವಾಡ: ಜಾಗತಿಕ ಮಟ್ಟದಲ್ಲಿ ಎಬೋಲಾ ವೈರಸ್‌ ಕುರಿತ ಆತಂಕ ಹೆಚ್ಚುತ್ತಿರುವ ಬೆನ್ನಲ್ಲೇ, ಆಂಧ್ರ ಪ್ರದೇಶ ಆರೋಗ್ಯ ಇಲಾಖೆ ವಿಜಯವಾಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಎಬೋಲಾ ತಪಾಸಣಾ ಶಿಬಿರ ಆರಂಭಿಸಿದೆ. ಸಿಂಗಾಪುರದಿಂದ ಆಗಮಿಸುವ ಪ್ರಯಾಣಿಕರ ಮೇಲೆ ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ.

ಆಂಧ್ರ ಸರ್ಕಾರ ನಿಯೋಜಿಸಿರುವ ವೈದ್ಯಕೀಯ ತಂಡಗಳು ಪ್ರಯಾಣಿಕರ ದೇಹದ ಉಷ್ಣಾಂಶ ಪರೀಕ್ಷೆ, ಆರೋಗ್ಯ ಲಕ್ಷಣಗಳ ಪರಿಶೀಲನೆ ಹಾಗೂ ಶಂಕಿತ ಸೋಂಕಿನ ಗುರುತು ಪತ್ತೆ ಕಾರ್ಯ ನಡೆಸುತ್ತಿವೆ. ಜ್ವರ, ವಾಂತಿ, ದೌರ್ಬಲ್ಯ ಅಥವಾ ರಕ್ತಸ್ರಾವದಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಮಾಹಿತಿ ನೀಡುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಇದು ಕೇವಲ ಮುನ್ನೆಚ್ಚರಿಕಾ ಕ್ರಮವಾಗಿದ್ದು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ವಿಶ್ವ ಆರೋಗ್ಯ ಸಂಸ್ಥೆ (WHO) ಹೊರಡಿಸಿರುವ ಆರೋಗ್ಯ ಎಚ್ಚರಿಕೆ ಹಿನ್ನೆಲೆಯಲ್ಲಿ ನಿಗಾ ಕ್ರಮ ಬಲಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ನಡುವೆ ಮಾಜಿ WHO ಮುಖ್ಯ ವಿಜ್ಞಾನಿ Soumya Swaminathan ಭಾರತವು ಎಬೋಲಾ ವಿರುದ್ಧದ ಸಂಶೋಧನೆ, ಲಸಿಕೆ ಅಭಿವೃದ್ಧಿ ಹಾಗೂ ರೋಗ ಪತ್ತೆ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಮಹತ್ವದ ಪಾತ್ರ ವಹಿಸಬಹುದು ಎಂದು ಹೇಳಿದ್ದಾರೆ. WHO ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಸಹಯೋಗದೊಂದಿಗೆ ಭಾರತ ಹೆಚ್ಚಿನ ಸಂಶೋಧನೆ ಕೈಗೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಸ್ತುತ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯ ಹಾಗೂ ಉಗಾಂಡಾದ ಕೆಲವು ಭಾಗಗಳಲ್ಲಿ ಎಬೋಲಾ ಸೋಂಕು ಹೆಚ್ಚಳ ಕಂಡುಬಂದಿದೆ. WHO ಮಹಾನಿರ್ದೇಶಕ Tedros Adhanom Ghebreyesus ನೀಡಿರುವ ಮಾಹಿತಿಯಂತೆ, ಕಾಂಗೋದಲ್ಲಿ ಈಗಾಗಲೇ 101 ಪ್ರಕರಣಗಳು ದೃಢಪಟ್ಟಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಇನ್ನೂ ನೂರಾರು ಶಂಕಿತ ಪ್ರಕರಣಗಳ ತನಿಖೆ ನಡೆಯುತ್ತಿದೆ.

ಎಬೋಲಾ ವೈರಸ್‌ನ ‘ಬುಂಡಿಬುಗ್ಯೋ’ ರೂಪಾಂತರಿ ತಳಿಯು ಪತ್ತೆ ಹಾಗೂ ಚಿಕಿತ್ಸೆ ಕಾರ್ಯಕ್ಕೆ ಸವಾಲು ಎಸೆದಿರುವುದರಿಂದ ಜಾಗತಿಕ ಆರೋಗ್ಯ ಸಂಸ್ಥೆಗಳು ಎಚ್ಚರಿಕೆಯಿಂದ ಪರಿಸ್ಥಿತಿಯನ್ನು ಗಮನಿಸುತ್ತಿವೆ.

Continue Reading

ಆರೋಗ್ಯ

ಇನ್ಸುಲಿನ್‌ಗೆ ಗುಡ್‌ಬೈ? ಸಕ್ಕರೆ ನಿಯಂತ್ರಣಕ್ಕೆ ಬಂದಿದೆ ‘ಓಬೆಡಾ’ ಮಾತ್ರೆ!

Published

on

ಬೆಂಗಳೂರು: ಜಾಗತಿಕ ಖ್ಯಾತಿಯ ಔಷಧ ತಯಾರಿಕಾ ಸಂಸ್ಥೆಯಾದ Dr. Reddy’s Laboratories ಭಾರತದಲ್ಲಿ ಟೈಪ್-2 ಮಧುಮೇಹ ರೋಗಿಗಳಿಗಾಗಿ ‘ಓಬೆಡಾ’ (Obeda) ಎಂಬ ಹೊಸ ಮಾತ್ರೆಯನ್ನು ಬಿಡುಗಡೆ ಮಾಡಿದೆ. ಈ ಹೊಸ ಔಷಧವು ‘ಓರಲ್ ಸೆಮಾಗ್ಲುಟೈಡ್ ಬಯೋಸಿಮಿಲರ್’ ರೂಪದಲ್ಲಿದ್ದು, ಬಾಯಿಯ ಮೂಲಕ ಸೇವಿಸಬಹುದಾದ ಮಧುಮೇಹ ನಿಯಂತ್ರಣ ಟ್ಯಾಬ್ಲೆಟ್ ಆಗಿದೆ.

ಇತ್ತೀಚೆಗೆ ಇದೇ ಸಂಸ್ಥೆ ಭಾರತ ಮತ್ತು ಕೆನಡಾದಲ್ಲಿ ಸೆಮಾಗ್ಲುಟೈಡ್ ಇಂಜೆಕ್ಷನ್ ಬಿಡುಗಡೆ ಮಾಡಿದ್ದರೆ, ಇದೀಗ ಅದೇ ಔಷಧಿಯನ್ನು ಮಾತ್ರೆಯ ರೂಪದಲ್ಲಿ ಪರಿಚಯಿಸುವ ಮೂಲಕ ರೋಗಿಗಳಿಗೆ ಹೆಚ್ಚು ಸುಲಭ ಮತ್ತು ಅನುಕೂಲಕರ ಚಿಕಿತ್ಸೆಯನ್ನು ಒದಗಿಸಲು ಮುಂದಾಗಿದೆ.

ಭಾರತದಲ್ಲಿ ಮಧುಮೇಹದ ಆತಂಕಕಾರಿ ಚಿತ್ರಣ

Indian Council of Medical Research ನಡೆಸಿದ ‘ಇಂಡಿಯಾಬ್’ ಅಧ್ಯಯನದ ಪ್ರಕಾರ, ಭಾರತದಲ್ಲಿ 10.1 ಕೋಟಿಗೂ ಅಧಿಕ ವಯಸ್ಕರು ಮಧುಮೇಹದಿಂದ ಬಳಲುತ್ತಿದ್ದಾರೆ. ಜೊತೆಗೆ ಸುಮಾರು 13.6 ಕೋಟಿ ಜನರು ಪ್ರೀ-ಡಯಾಬಿಟಿಕ್ ಸ್ಥಿತಿಯಲ್ಲಿದ್ದು, ಭವಿಷ್ಯದಲ್ಲಿ ಮಧುಮೇಹಕ್ಕೆ ತುತ್ತಾಗುವ ಅಪಾಯ ಎದುರಿಸುತ್ತಿದ್ದಾರೆ. ದೇಶದಲ್ಲಿ ಹೆಚ್ಚುತ್ತಿರುವ ಹೊಟ್ಟೆ ಬೊಜ್ಜು ಮತ್ತು ಜೀವನಶೈಲಿ ಬದಲಾವಣೆಗಳು ಮಧುಮೇಹ ಪ್ರಕರಣಗಳನ್ನು ಮತ್ತಷ್ಟು ಹೆಚ್ಚಿಸುತ್ತಿವೆ.

‘ಓಬೆಡಾ’ ಮಾತ್ರೆ ಹೇಗೆ ಕೆಲಸ ಮಾಡುತ್ತದೆ?

‘ಓಬೆಡಾ’ ಔಷಧವು ಜಿಎಲ್‌ಪಿ-1 ಆರ್‌ಎ (GLP-1 RA) ವರ್ಗಕ್ಕೆ ಸೇರಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ವೈದ್ಯರ ಸಲಹೆಯಂತೆ ಆಹಾರ ನಿಯಂತ್ರಣ ಮತ್ತು ವ್ಯಾಯಾಮದ ಜೊತೆಗೆ ಈ ಮಾತ್ರೆಯನ್ನು ಸೇವಿಸಿದರೆ:

  • ರಕ್ತದಲ್ಲಿನ ಗ್ಲೂಕೋಸ್ ಮಟ್ಟ ನಿಯಂತ್ರಣಕ್ಕೆ ಬರುತ್ತದೆ
  • ತೂಕ ಇಳಿಕೆಗೆ ಸಹಕಾರಿ
  • ದೀರ್ಘಕಾಲೀನ ಮಧುಮೇಹ ಸಂಬಂಧಿತ ಸಮಸ್ಯೆಗಳ ಅಪಾಯ ಕಡಿಮೆಯಾಗುತ್ತದೆ
  • HbA1c ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ

ಕ್ಲಿನಿಕಲ್ ಟ್ರಯಲ್‌ನಲ್ಲಿ ಯಶಸ್ಸು

Central Drugs Standard Control Organisation ಅನುಮತಿಯೊಂದಿಗೆ 288 ಮಧುಮೇಹ ರೋಗಿಗಳ ಮೇಲೆ ನಡೆದ ಮೂರನೇ ಹಂತದ ಕ್ಲಿನಿಕಲ್ ಪರೀಕ್ಷೆಗಳಲ್ಲಿ ‘ಓಬೆಡಾ’ ಉತ್ತಮ ಫಲಿತಾಂಶ ನೀಡಿದೆ ಎಂದು ಕಂಪನಿ ತಿಳಿಸಿದೆ. ರಕ್ತದಲ್ಲಿನ ಸಕ್ಕರೆ ನಿಯಂತ್ರಣ, ತೂಕ ಇಳಿಕೆ ಹಾಗೂ ಸುರಕ್ಷಿತ ಬಳಕೆಯಲ್ಲಿ ಈ ಔಷಧ ಪರಿಣಾಮಕಾರಿ ಎಂಬುದು ದೃಢಪಟ್ಟಿದೆ.

ಬೆಲೆ ಎಷ್ಟು?

‘ಓಬೆಡಾ’ ದಿನಕ್ಕೊಮ್ಮೆ ಸೇವಿಸುವ ಮಾತ್ರೆಯಾಗಿದ್ದು, ಮೂರು ವಿಭಿನ್ನ ಸಾಮರ್ಥ್ಯಗಳಲ್ಲಿ ಲಭ್ಯವಿದೆ:

  • 3 mg – ₹99
  • 7 mg – ₹135
  • 14 mg – ₹225

ಕಂಪನಿ ಹೇಳಿದ್ದೇನು?

M. V. Ramana ಮಾತನಾಡಿ, “ಮಧುಮೇಹ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಸುಧಾರಿತ ಚಿಕಿತ್ಸೆ ನೀಡುವುದು ನಮ್ಮ ಉದ್ದೇಶ. ಪ್ರತಿಯೊಬ್ಬ ರೋಗಿಯ ಆರೋಗ್ಯ ಸ್ಥಿತಿ ವಿಭಿನ್ನವಾಗಿರುವುದರಿಂದ ಅವರಿಗೆ ಸೂಕ್ತ ಆಯ್ಕೆಯನ್ನು ಒದಗಿಸುವುದು ನಮ್ಮ ಆದ್ಯತೆ” ಎಂದು ತಿಳಿಸಿದ್ದಾರೆ.

1984ರಲ್ಲಿ ಸ್ಥಾಪನೆಯಾದ Dr. Reddy’s Laboratories ಜಠರ, ಹೃದಯ, ಮಧುಮೇಹ, ಕ್ಯಾನ್ಸರ್ ಮತ್ತು ಚರ್ಮರೋಗ ಚಿಕಿತ್ಸಾ ಕ್ಷೇತ್ರದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಮುಖ ಫಾರ್ಮಾ ಕಂಪನಿಯಾಗಿ ಗುರುತಿಸಿಕೊಂಡಿದೆ.

Continue Reading

Trending