Connect with us

ರಾಜಕೀಯ

ಸಿ ಎಂ ಇಬ್ರಾಹಿಂ ಪಕ್ಷ ಬಿಡುವುದಿಲ್ಲ ಜಿಟಿಡಿ ಸ್ಪಷ್ಟನೆ

ಸಿ ಎಂ ಇಬ್ರಾಹಿಂ ಪಕ್ಷ ಬಿಡುವುದಿಲ್ಲ ಜಿಟಿಡಿ ಸ್ಪಷ್ಟನೆ
ಸಿ ಎಂ ಇಬ್ರಾಹಿಂ ಪಕ್ಷ ಬಿಡುವುದಿಲ್ಲ ಜಿಟಿಡಿ ಸ್ಪಷ್ಟನೆ

ವಿಜಯಪುರ: ಮುಂಬರುವ ಲೋಕಸಭೆ ಚುನಾವಣೆಗಾಗಿ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲು ಜೆಡಿಎಸ್ ರಾಜ್ಯಾಧ್ಯಾಕ್ಷ ಸಿ ಎಂ ಇಬ್ರಾಹಿಂ ವಿರೋಧವಿಲ್ಲ ಅವರು ಪಕ್ಷ ಬಿಡುವುದಿಲ್ಲ ಎಂದು ಜೆಡಿಎಸ್ ಶಾಸಕ ಜಿ ಟಿ ದೇವೇಗೌಡ ಹೇಳಿದ್ದಾರೆ
ಜೆಡಿಎಸ್ ವರಿಷ್ಟರಾದ ದೇವೇಗೌಡರ ಜೊತೆ ಇಬ್ರಾಹಿಂ ಮಾತನಾಡಿದ್ದಾರೆ, ಬಿಜೆಪಿ ಜತೆ ಮೈತ್ರಿಗೆ ವಿರೋಧವಿಲ್ಲ ಹೇಗೆ ಒಟ್ಟಾಗಿ ಹೋಗಬೇಕು ಅನ್ನೋದು ಸಿ ಎಂ ಇಬ್ರಾಹಿಂ ಸಲಹೆ ನೀಡಿದ್ದಾರೆ ಎಂದು ಹೇಳಿದ್ದಾರೆ, ಇದೇ ಸಂದರ್ಭದಲ್ಲಿ ಅವರು ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡುತ್ತ ನನಗೂ ಇನ್ನೂರು ಯುನಿಟ್, ಮಹಾದೇವಪ್ಪಾ ನಿನಗೂ ಇನ್ನೂರು ಯುನಿಟ್ ಎಂದು ಸಿದ್ದರಾಮಯ್ಯನವರು ಹೇಳಿದ್ದರು, ಆಯ್ಕೆಯಾದ ಮೇಲೆ 53 ಯುನಿಟ್ ಘೋಷಣೆ ಮಾಡಿದ್ದಾರೆ, ವಿದ್ಯುತ್ ಬಿಲ್ ಹೆಚ್ಚಿಸಿ, ರೈತರಿಗೆ ಏಳು ಗಂಟೆ ವಿದ್ಯತ್ ಕೊಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯ ಇದ್ದಾಗಲೇ ಅದೇಶ ಮಾಡಿದ್ದಾರೆ ಅದರೆ ಇದೀಗ ಎರಡು ಗಂಟೆ ಕರೆಂಟ್ ಇಲ್ಲವಾಗಿದೆ ಬರೀ ಸುಳ್ಳು ಹೇಳುವುದು ಆಗಿದ ಎಂದು ಆರೋಪಿಸಿದ್ದಾರೆ.

ದೇಶ

LATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದರೂ, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿವೆ.

“ನಾನು ದೆಹಲಿಗೆ ಬಂದಿರೋದೇ ರಾಜಕಾರಣ ಮಾಡಲು. ಏನೂ ಮಾತನಾಡದೆ ಸುಮ್ಮನೆ ಹೋಗಲು ಸಾಧ್ಯವೇ?” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರೂಪೇಶ್ ಬಘೇಲ್ ಜೊತೆಗೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ ಅವರು, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳ ಚುನಾವಣಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆದಿದೆ ಎಂದರು. “ಎಲ್ಲಾ ವಿಚಾರಗಳನ್ನು ಮಾತನಾಡಲೇಬೇಕು. ಕಾಲವೇ ಎಲ್ಲಕ್ಕೂ ಉತ್ತರ ಕೊಡಲಿದೆ” ಎಂಬ ಅವರ ಮಾತುಗಳಿಗೆ ಹಲವು ಅರ್ಥಗಳು ನೀಡಲಾಗುತ್ತಿದೆ.

ಇದೇ ವೇಳೆ ಬಜೆಟ್ ಪೂರ್ವಸಿದ್ಧತಾ ಸಭೆಗೆ ಗೈರಾಗಿದ್ದ ಡಿಕೆಶಿ ದೆಹಲಿಗೆ ತೆರಳಿರುವುದು ಗಮನಾರ್ಹ. ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಂಡೇ ಅವರು ತೆರಳಿದ್ದಾರೆ ಎನ್ನಲಾಗಿದ್ದರೂ, ದೆಹಲಿಯ ರಾಜಕೀಯ ಚಟುವಟಿಕೆಗಳು ಕುತೂಹಲ ಹುಟ್ಟಿಸಿವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರಾ? ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಿಲ್ಲ.

ರಾಜ್ಯ ನಾಯಕತ್ವ ವಿಚಾರದಲ್ಲಿ ರಾಹುಲ್ ಗಾಂಧಿಯ ನಿರ್ಧಾರವೇ ಅಂತಿಮ ಎಂಬುದು ಕಾಂಗ್ರೆಸ್ ವಲಯದ ನಿಲುವು. ಇದೀಗ ಡಿಕೆಶಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಗಳೂ ಚರ್ಚೆಯಾಗುತ್ತಿವೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ತಿರುವು ಪಡೆಯುವ ಸೂಚನೆ ನೀಡಿದೆ.

Continue Reading

ಅಪರಾಧ

BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ

ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.

ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.

ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.

Continue Reading

ದೇಶ

“ಉರ್ಕೆ ಉಂಡ್ರಾ?”: ಮಧುಗಿರಿಯಲ್ಲಿ ‘ಸಿಎಂ ಆಗಿ’ ಘೋಷಣೆಗೆ ಪರಮೇಶ್ವರ್ ತೆಲುಗಿನಲ್ಲಿ ತಿರುಗೇಟು

ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ “ಸಿಎಂ ಆಗಬೇಕು” ಎಂಬ ಘೋಷಣೆ ಕೇಳಿಬಂದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಭಿಮಾನಿಯೊಬ್ಬರು “ನೀವು ಸಿಎಂ ಆಗಬೇಕು” ಎಂದು ಕೂಗಿದ ಪ್ರಸಂಗ ನಡೆದಿದೆ.

ಭಾಷಣದ ಅಂತ್ಯದಲ್ಲಿ ಈ ಘೋಷಣೆ ಕೇಳಿಬಂದಾಗ, ಪರಮೇಶ್ವರ್ ಅವರು ಕ್ಷಣಮಾತ್ರ ನಿಂತು ಕಾರ್ಯಕರ್ತನ ಮಾತಿಗೆ ತೆಲುಗಿನಲ್ಲಿ ಪ್ರತಿಕ್ರಿಯಿಸಿದರು. “ಉರ್ಕೆ ಉಂಡ್ರ… ನೀನು ಸಿಎಂ ಅಂಟ?” ಎಂದು ಹೇಳಿ, “ನಾನು ಸಿಎಂ ಆಗಬೇಕಂತೆ… ಸುಮ್ಮನಿರು” ಎಂದು ಹಾಸ್ಯಭರಿತವಾಗಿ ಹೇಳಿ ಕಾರ್ಯಕರ್ತನ ಬಾಯಿ ಮುಚ್ಚಿಸಿದರು.

ಈ ದೃಶ್ಯ ಅಲ್ಲಿದ್ದ ಜನರಲ್ಲಿ ನಗೆರಸ ಮೂಡಿಸಿದ್ದು, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಾಜಕೀಯ ವಲಯದಲ್ಲೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಪರಮೇಶ್ವರ್ ಅವರ ಪ್ರತಿಕ್ರಿಯೆ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಭಿವೃದ್ಧಿ, ಮೂಲಸೌಕರ್ಯ ಬಲಪಡಿಸುವುದು ಮತ್ತು ಸಾರ್ವಜನಿಕ ಸೇವೆ ಸುಧಾರಣೆ ಕುರಿತು ಗೃಹ ಸಚಿವರು ಮಾತನಾಡಿದರು. ಆದರೆ “ಸಿಎಂ ಆಗಿ” ಘೋಷಣೆಯ ಘಟನೆ ಸಮಾರಂಭದ ಪ್ರಮುಖ ಹೈಲೈಟ್ ಆಗಿದೆ.

Continue Reading

Trending