Connect with us

ದೇಶ

ದಸರಾಗೆ ‘ಫೌಜಿ’ : ಪ್ರಭಾಸ್ ಹೊಸ ಅವತಾರಕ್ಕೆ ಫ್ಯಾನ್ಸ್ ಕೌತುಕ

Published

on

ಬೆಂಗಳೂರು: ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅಭಿನಯದ ‘ದಿ ರಾಜಾಸಾಬ್’ ಸಿನಿಮಾ ಜನವರಿ 9, 2026ರಂದು ತೆರೆಕಂಡು ಮಿಶ್ರ ಪ್ರತಿಕ್ರಿಯೆ ಪಡೆದ ಬಳಿಕ, ಇದೀಗ ನಟನ ಮುಂದಿನ ಚಿತ್ರಗಳ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಈ ಸಾಲಿನಲ್ಲಿ ಬಹು ನಿರೀಕ್ಷಿತ ಪ್ರಾಜೆಕ್ಟ್ ಎಂದರೆ ‘ಫೌಜಿ’.

ಹನು ರಾಘವಪುಡಿ ನಿರ್ದೇಶನದ ಪ್ಯಾನ್-ಇಂಡಿಯಾ ಸಿನಿಮಾ

‘ಫೌಜಿ’ ಸಿನಿಮಾವನ್ನು ಎಮೋಷನ್ ಮತ್ತು ಗಾಂಭೀರ್ಯಪೂರ್ಣ ಕಥನಕ್ಕೆ ಹೆಸರುವಾಸಿಯಾದ ಹನು ರಾಘವಪುಡಿ ನಿರ್ದೇಶಿಸುತ್ತಿದ್ದಾರೆ. ಟಿ-ಸೀರೀಸ್ (ಗುಲ್ಶನ್ ಕುಮಾರ್ ಮತ್ತು ಭೂಷಣ್ ಕುಮಾರ್) ಪ್ರಸ್ತುತಪಡಿಸುತ್ತಿರುವ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ. ತಯಾರಕರ ಅಧಿಕೃತ ಘೋಷಣೆಯಂತೆ, 2026ರ ದಸರಾ ಹಬ್ಬಕ್ಕೆ ಫೌಜಿ ಚಿತ್ರ ತೆರೆಗಪ್ಪಳಿಸಲಿದೆ.

ಫಸ್ಟ್ ಲುಕ್‌ಗೆ ಭರ್ಜರಿ ಪ್ರತಿಕ್ರಿಯೆ

ಫೌಜಿ ಚಿತ್ರದ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿದ್ದು, ಪ್ರಭಾಸ್ ಅವರ ಸಂಪೂರ್ಣ ಹೊಸ ಅವತಾರ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಯಾವುದೇ ವಿರಾಮವಿಲ್ಲದೇ ಚಿತ್ರದ ಚಿತ್ರೀಕರಣ ಮುಂದುವರಿಯಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ತಾರಾಬಳಗ ಮತ್ತು ತಾಂತ್ರಿಕ ತಂಡ

ಈ ಚಿತ್ರದಲ್ಲಿ ಇಮಾನ್ವಿ ನಾಯಕಿಯಾಗಿ ನಟಿಸುತ್ತಿದ್ದು, ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಜಯಪ್ರದಾ, ಭಾನು ಚಂದರ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಛಾಯಾಗ್ರಹಣ: ಸುದೀಪ್ ಚಟರ್ಜಿ, ಸಂಗೀತ: ವಿಶಾಲ್ ಚಂದ್ರಶೇಖರ್, ಸಂಕಲನ: ಕೋಟಗಿರಿ ವೆಂಕಟೇಶ್ವರ ರಾವ್, ವಿಎಫ್ಎಕ್ಸ್: ಆರ್‌ಸಿ ಕಮಲಾ ಕಣ್ಣನ್.

‘ಸ್ಪಿರಿಟ್’ ಮೇಲೂ ನಿರೀಕ್ಷೆ

ಇದೇ ವೇಳೆ, ಪ್ರಭಾಸ್ ನಟನೆಯ ‘ಸ್ಪಿರಿಟ್’ ಸಿನಿಮಾ 2027ರ ಮಾರ್ಚ್ 5ರಂದು ಬಿಡುಗಡೆಯಾಗಲಿದೆ. ಸಂದೀಪ್ ರೆಡ್ಡಿ ವಂಗಾ ನಿರ್ದೇಶನದ ಈ ಚಿತ್ರದಲ್ಲಿ ತ್ರಿಪ್ತಿ ದಿಮ್ರಿ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಒಟ್ಟಾರೆ, ಪ್ರಭಾಸ್ ಮುಂದಿನ ಸಿನಿಮಾಗಳ ಮೇಲೆ ಸಿನಿರಸಿಕರಲ್ಲಿ ಭಾರೀ ನಿರೀಕ್ಷೆಗಳಿವೆ.

ದೇಶ

ತಮಿಳುನಾಡು ಸರ್ಕಾರದ ಹೊಸ ಆದೇಶ: ಸರ್ಕಾರಿ ಶಾಲೆಗಳಲ್ಲಿ ರಾಜಕೀಯ ಚಟುವಟಿಕೆ ಸಂಪೂರ್ಣ ನಿಷೇಧ

Published

on

ಚೆನ್ನೈ: ತಮಿಳುನಾಡು (Tamil Nadu) ಸರ್ಕಾರವು ಸರ್ಕಾರಿ ಶಾಲೆಗಳ ಶೈಕ್ಷಣಿಕ ವಾತಾವರಣವನ್ನು ಕಾಪಾಡುವ ಉದ್ದೇಶದಿಂದ ಮಹತ್ವದ ಆದೇಶ ಹೊರಡಿಸಿದೆ. ಇನ್ನು ಮುಂದೆ ರಾಜ್ಯದ ಸರ್ಕಾರಿ ಶಾಲೆಗಳು (Government Schools) ಹಾಗೂ ತರಗತಿ ಕೊಠಡಿಗಳಲ್ಲಿ (Classrooms) ರಾಜಕೀಯ ಪಕ್ಷಗಳ ಕಾರ್ಯಕರ್ತರು ಮತ್ತು ಖಾಸಗಿ ವ್ಯಕ್ತಿಗಳ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ತಮಿಳುನಾಡು ಶಾಲಾ ಶಿಕ್ಷಣ ಸಚಿವ ರಾಜ್ ಮೋಹನ್ (Raj Mohan) ಹೊರಡಿಸಿರುವ ಸುತ್ತೋಲೆಯ ಪ್ರಕಾರ, ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಜನಪ್ರತಿನಿಧಿಗಳಿಗೆ ಮಾತ್ರ ಶಾಲಾ ಆವರಣ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತದೆ. ಉಳಿದ ಯಾವುದೇ ರಾಜಕೀಯ ಚಟುವಟಿಕೆ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಆವರಣವನ್ನು ಬಳಸಲು ಅವಕಾಶ ಇರುವುದಿಲ್ಲ.

ಹೊಸ ನಿಯಮಗಳ ಅನ್ವಯ, ಶಾಲಾ ತರಗತಿ ಕೊಠಡಿಗಳನ್ನು ಯಾವುದೇ ರಾಜಕೀಯ ನಾಯಕರು ಅಥವಾ ನಿರ್ದಿಷ್ಟ ವ್ಯಕ್ತಿಗಳ ಸನ್ಮಾನ, ಹೊಗಳಿಕೆ, ಪ್ರಶಂಸಾ ಕಾರ್ಯಕ್ರಮಗಳು ಅಥವಾ ಹುಟ್ಟುಹಬ್ಬದ ಆಚರಣೆಗಳಿಗೆ ಬಳಸುವುದನ್ನು ನಿಷೇಧಿಸಲಾಗಿದೆ. ಶಿಕ್ಷಣ ಸಂಸ್ಥೆಗಳು ಸಂಪೂರ್ಣವಾಗಿ ವಿದ್ಯಾರ್ಥಿಗಳ ಕಲಿಕೆ ಮತ್ತು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸೀಮಿತವಾಗಿರಬೇಕು ಎಂಬುದನ್ನು ಸರ್ಕಾರ ಪುನರುಚ್ಚರಿಸಿದೆ.

ಇದಲ್ಲದೆ, ಸರ್ಕಾರಿ ಶಾಲೆಗಳಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳು ರಾಜಕೀಯ ತಟಸ್ಥತೆಯನ್ನು ಕಾಯ್ದುಕೊಂಡು, ಶಿಕ್ಷಣ ಮತ್ತು ವಿದ್ಯಾರ್ಥಿಗಳ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳನ್ನಷ್ಟೇ ಒಳಗೊಂಡಿರಬೇಕು ಎಂದು ಸೂಚಿಸಲಾಗಿದೆ. ಈ ಆದೇಶದ ಅನುಷ್ಠಾನಕ್ಕಾಗಿ ಪಾಲಿಸಬೇಕಾದ ವಿವರವಾದ ಮಾರ್ಗಸೂಚಿಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಸರ್ಕಾರದ ಈ ಕ್ರಮವು ಶಾಲಾ ಆವರಣದಲ್ಲಿ ರಾಜಕೀಯ ಪ್ರಭಾವವನ್ನು ತಡೆಯುವ ಜೊತೆಗೆ, ವಿದ್ಯಾರ್ಥಿಗಳಿಗೆ ಶಾಂತ ಹಾಗೂ ತಟಸ್ಥ ಶೈಕ್ಷಣಿಕ ವಾತಾವರಣ ಒದಗಿಸುವ ಉದ್ದೇಶ ಹೊಂದಿದೆ.

Continue Reading

ದೇಶ

GBA ಚುನಾವಣೆ, ಒತ್ತುವರಿ ತೆರವು, ಮೋಡ ಬಿತ್ತನೆ: CM ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ

Published

on

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಹೊಸ ಮಹಾನಗರ ಪಾಲಿಕೆಗಳ ಚುನಾವಣೆಯನ್ನು ಆಗಸ್ಟ್ ತಿಂಗಳೊಳಗೆ ನಡೆಸುವ ವಿಚಾರದಲ್ಲಿ ಕೆಲವು ತಾಂತ್ರಿಕ ಸವಾಲುಗಳಿದ್ದು, ಸರ್ಕಾರವು ಸುಪ್ರೀಂ ಕೋರ್ಟ್ (Supreme Court) ನೀಡುವ ನಿರ್ದೇಶನಗಳಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯ ಪಾಲಿಕೆ ಚುನಾವಣೆಗಳಿಗೆ ಸರ್ಕಾರ ಅಗತ್ಯ ಸಿದ್ಧತೆ ನಡೆಸಿದೆ. ಆದರೆ ಚುನಾವಣಾ ಆಯೋಗ (Election Commission) ರಾಜ್ಯಾದ್ಯಂತ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯದಿಂದಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬ ಉಂಟಾಗಿದೆ ಎಂದು ವಿವರಿಸಿದರು.

ಸುಪ್ರೀಂ ಕೋರ್ಟ್ ಈ ಹಿಂದೆ ಆಗಸ್ಟ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ಸೂಚನೆ ನೀಡಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಗಡುವನ್ನು ಡಿಸೆಂಬರ್‌ವರೆಗೆ ವಿಸ್ತರಿಸುವಂತೆ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿಎಂ, “ನಾನು ಈ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಅಧಿಕಾರಿಗಳು ಮತ್ತು ನ್ಯಾಯಾಲಯದ ಪ್ರಕ್ರಿಯೆಯಂತೆ ಮುಂದಿನ ಕ್ರಮ ನಡೆಯಲಿದೆ” ಎಂದು ಹೇಳಿದರು.

ಇದೇ ವೇಳೆ, ಬೆಂಗಳೂರಿನಲ್ಲಿ ಸಂಚಾರಕ್ಕೆ ಅಡ್ಡಿಯಾಗಿರುವ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿಸಿದರು. ನಗರದಲ್ಲಿ ಸುಮಾರು 60,000 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಅವರಲ್ಲಿ 30,000 ಮಂದಿಗೆ ತಳ್ಳುಗಾಡಿ ಹಾಗೂ ವ್ಯಾಪಾರಕ್ಕೆ ಅಗತ್ಯ ವಾಹನಗಳನ್ನು ವಿತರಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

ಮುಖ್ಯ ರಸ್ತೆಗಳಲ್ಲಿ ಶಾಶ್ವತ ಶೆಡ್ ಅಥವಾ ಟೆಂಟ್‌ಗಳನ್ನು ನಿರ್ಮಿಸಲು ಸುಪ್ರೀಂ ಕೋರ್ಟ್ ನಿರ್ಬಂಧವಿದ್ದು, ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ನಡೆಸಬೇಕು ಎಂದು ಸಿಎಂ ಸ್ಪಷ್ಟಪಡಿಸಿದರು. ಜೊತೆಗೆ, ಮೋಡ ಬಿತ್ತನೆ, ಬೆಳಗಾವಿಗೆ ವಿಶೇಷ ಪ್ಯಾಕೇಜ್ ಹಾಗೂ ಮುಜರಾಯಿ ದೇವಸ್ಥಾನಗಳ ಹುಂಡಿ ಹಣದ ಭದ್ರತೆ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದರು.

Continue Reading

ದೇಶ

ಭಾರೀ ಮಳೆಯಿಂದ ಹಾವು ಸಾಕಾಣಿಕೆ ಕೇಂದ್ರಗಳು ಜಲಾವೃತ; ನಾಗರಹಾವು ಸೇರಿ 900 ಸರ್ಪಗಳು ಪರಾರಿ

Published

on

ಬೀಜಿಂಗ್: ಚೀನಾದ (China) ಗುವಾಂಗ್ಕ್ಸಿ (Guangxi) ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆ ಮತ್ತು ಪ್ರವಾಹದಿಂದ ಹೊಸ ಆತಂಕ ಎದುರಾಗಿದೆ. ಪ್ರವಾಹದ ನೀರಿನಿಂದ ಹಲವು ಹಾವು ಸಾಕಾಣಿಕೆ ಕೇಂದ್ರಗಳು (Snake Breeding Farms) ಹಾನಿಗೊಳಗಾಗಿದ್ದು, ಸುಮಾರು 900ಕ್ಕೂ ಹೆಚ್ಚು ಹಾವುಗಳು ತಪ್ಪಿಸಿಕೊಂಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪ್ರವಾಹದಿಂದ ಗುವಾಂಗ್ಕ್ಸಿ ಸುತ್ತಮುತ್ತಲಿನ ಹಲವು ಗ್ರಾಮಗಳು ಜಲಾವೃತವಾಗಿದ್ದು, ರಸ್ತೆಗಳು ಮತ್ತು ವಸತಿ ಪ್ರದೇಶಗಳು ನೀರಿನಿಂದ ಆವರಿಸಿವೆ. ಈ ನಡುವೆ, ನಾಗರಹಾವು ಸೇರಿದಂತೆ ವಿವಿಧ ಜಾತಿಯ ವಿಷಕಾರಿ ಹಾವುಗಳು ಪ್ರವಾಹದ ನೀರಿನಲ್ಲಿ ಈಜಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದರಿಂದ ಸ್ಥಳೀಯ ನಿವಾಸರಲ್ಲಿ ಭಾರೀ ಆತಂಕ ಮನೆಮಾಡಿದೆ.

ವರದಿಗಳ ಪ್ರಕಾರ, ಪ್ರವಾಹದ ಹೊಡೆತಕ್ಕೆ ಹಾವು ಸಾಕಾಣಿಕೆ ಕೇಂದ್ರಗಳ ಬೇಲಿಗಳು ಮತ್ತು ರಕ್ಷಣಾ ವ್ಯವಸ್ಥೆಗಳು ಹಾನಿಗೊಳಗಾದ ಪರಿಣಾಮ ಸರ್ಪಗಳು ಹೊರಬಂದಿವೆ. ಕೆಲವು ಗ್ರಾಮಗಳಲ್ಲಿ ಹಾವು ಕಡಿತದ ಘಟನೆಗಳು ವರದಿಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿಯೂ ಸ್ಥಳೀಯ ವರದಿಗಳಲ್ಲಿ ಉಲ್ಲೇಖವಾಗಿದೆ. ಆದರೆ ಈ ಸಾವಿನ ಬಗ್ಗೆ ಅಧಿಕಾರಿಗಳ ಅಧಿಕೃತ ದೃಢೀಕರಣಕ್ಕಾಗಿ ನಿರೀಕ್ಷಿಸಲಾಗುತ್ತಿದೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳೀಯ ಆಡಳಿತ ವಿಶೇಷ ಹಾವು ಹಿಡಿಯುವ ತಂಡಗಳನ್ನು ನಿಯೋಜಿಸಿದ್ದು, ಅಪಾಯದ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ. ಹಾವು ಕಡಿತಕ್ಕೊಳಗಾದವರಿಗೆ ತ್ವರಿತ ಚಿಕಿತ್ಸೆ ಒದಗಿಸಲು ತಾತ್ಕಾಲಿಕ ವೈದ್ಯಕೀಯ ಕೇಂದ್ರಗಳನ್ನೂ ಆರಂಭಿಸಲಾಗಿದೆ.

ಪ್ರವಾಹದ ಪರಿಸ್ಥಿತಿ ಮುಂದುವರಿದಿರುವ ಹಿನ್ನೆಲೆಯಲ್ಲಿ ಜನರು ನೀರು ನಿಂತಿರುವ ಪ್ರದೇಶಗಳಿಗೆ ತೆರಳದಂತೆ ಹಾಗೂ ಯಾವುದೇ ಹಾವು ಕಂಡುಬಂದರೆ ಸ್ವತಃ ಹಿಡಿಯಲು ಪ್ರಯತ್ನಿಸದೇ ತಕ್ಷಣ ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಆಡಳಿತ ಮನವಿ ಮಾಡಿದೆ.

Continue Reading

Trending