ಬೆಂಗಳೂರು
ಡಿ.ಕೆ.ಶಿವಕುಮಾರ್: ಬೆಂಗಳೂರು ಕಂಬಳಕ್ಕೆ ಸರ್ಕಾರದಿಂದ 1 ಕೋಟಿ ಸಹಾಯಧನ
ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟ ಪುಷ್ಟವಾಗಿ ಬೆಳೆಸಿದ ಕೋಣಗಳನ್ನು ಹಸನಾಗಿ ಹದ ಮಾಡಿದ ಮಣ್ಣಿನ ಗದ್ದೆಯಲ್ಲಿ ಒಡಿಸುವ ಸ್ಪರ್ಧೆ,ತುಳು ಕೂಟಕ್ಕೆ 50 ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ನಗರದ ಅರಮನೆ ಮೈದಾನದಲ್ಲಿ ನವೆಂಬರ್ 24, 25 ಮತ್ತು 26ರಂದು ಕಂಬಳ ನಡೆಯಲಿದೆ. ಅದಕ್ಕಾಗಿ ಕಂಬಳ ಓಟಕ್ಕೆ ಕೆರೆಯನ್ನು ಸಿದ್ಧಪಡಿಸುವ ಕಾರ್ಯ ಆರಂಭಿಸಲಾಗಿದೆ. ನಗರದ ಅರಮನೆ ಮೈದಾನದಲ್ಲಿ ಬುಧವಾರ ‘ಬೆಂಗಳೂರು ಕಂಬಳ- ನಮ್ಮ ಕಂಬಳದ ಕರೆಪೂಜೆ’ ನೆರವೇರಿಸಿ ಮಾತನಾಡಿದ ಅವರು ‘ನಾಡಿನ ಹೆಮ್ಮೆಯ ಇತಿಹಾಸ, ದೇಶೀಯ ಹಾಗೂ ಐತಿಹಾಸಿಕವಾದ ಕಂಬಳಕ್ಕೆ ಹೆಚ್ಚಿನ ಸಹಕಾರ ನೀಡಲಾಗುವುದು. 20 ಕಂಬಳಗಳಿಗೆ ತಲಾ 5 ಲಕ್ಷ ರು.ನಂತೆ 1 ಕೋಟಿ ಸಹಾಯಧನ ನೀಡಲಾಗುವುದು. ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಜತೆ ಚರ್ಚೆ ನಡೆಸಲಾಗುವುದು’ ಎಂದು ಹೇಳಿದರು.
“ನಮ್ಮ ಸಂಸ್ಕೃತಿಯೇ ಈ ದೇಶದ ದೊಡ್ಡ ಆಸ್ತಿ. ದಕ್ಷಿಣ ಕನ್ನಡ ಜಿಲ್ಲೆ ಶ್ರೀಮಂತ ಜನಪದ ಆಚರಣೆಗಳನ್ನು ಹೊಂದಿದೆ. ಕಂಬಳ ಈ ಬಾರಿ ಬೆಂಗಳೂರಿನಲ್ಲಿ ನಡೆಯುವ ಕಾರಣ ಎರಡೂ ಜಿಲ್ಲೆಗಳ ಯುವಕರು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡುತ್ತಿದ್ದಾರೆ. ಈ ಐತಿಹಾಸಿಕ ಕಂಬಳ ಆಯೋಜನೆ ಮಾಡುತ್ತಿರುವುದಕ್ಕೆ ನಮ್ಮ ಸಹಕಾರ ಎಂದಿಗೂ ಇರುತ್ತದೆ ಎಂದಿದ್ದಾರೆ.