ಚುನಾವಣೆ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: ಮೈತ್ರಿ ಇಲ್ಲ, ಏಕಾಂಗಿಯಾಗಿ ಸ್ಪರ್ಧಿಸಲು ಕಾಂಗ್ರೆಸ್ ನಿರ್ಧಾರ
ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ಭರದ ಸಿದ್ಧತೆ ಆರಂಭಿಸಿವೆ. ಈ ಬೆಳವಣಿಗೆಯ ನಡುವೆ ಕಾಂಗ್ರೆಸ್ ಪಕ್ಷವು ಮಹತ್ವದ ತೀರ್ಮಾನ ಕೈಗೊಂಡಿದ್ದು, ಬಂಗಾಳದಲ್ಲಿ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳದೇ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಈ ನಿರ್ಧಾರವು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರೊಂದಿಗೆ ಸಭೆ ನಡೆಸಿದ್ದು, ಚುನಾವಣಾ ರಣತಂತ್ರವನ್ನು ಗಂಭೀರವಾಗಿ ಚರ್ಚಿಸಿದೆ. ಈ ಸಭೆಯಲ್ಲಿ ರಾಹುಲ್ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರ ಹಿರಿಯ ನಾಯಕರು ಭಾಗವಹಿಸಿದ್ದರು. ಪಕ್ಷ ಬಲವರ್ಧನೆ ಮತ್ತು ತಳಮಟ್ಟದ ಕಾರ್ಯಕರ್ತರನ್ನು ಸಶಕ್ತಗೊಳಿಸುವ ಉದ್ದೇಶದಿಂದ ಏಕಾಂಗಿ ಹೋರಾಟಕ್ಕೆ ಮುಂದಾಗಲಾಗಿದೆ ಎಂದು ತಿಳಿದುಬಂದಿದೆ.
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಸಿಪಿಎಂ ನೇತೃತ್ವದ ಎಡರಂಗ ಅಥವಾ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಜೊತೆ ಯಾವುದೇ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದಾರೆ.
ಸಭೆಯ ನಂತರ ಮಾತನಾಡಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಪಶ್ಚಿಮ ಬಂಗಾಳದ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್, ಹಿಂದಿನ ಮೈತ್ರಿ ಪ್ರಯೋಗಗಳು ಪಕ್ಷದ ತಳಮಟ್ಟದ ಸಂಘಟನೆಯನ್ನು ದುರ್ಬಲಗೊಳಿಸಿವೆ ಎಂದು ಹೇಳಿದರು. ಹೀಗಾಗಿ ರಾಜ್ಯದ ಎಲ್ಲಾ 294 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಅವರು ಘೋಷಿಸಿದರು.
ಈ ಸಭೆಯಲ್ಲಿ ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಸುವಾಂಕರ್ ಸರ್ಕಾರ್, ಮಾಜಿ ಅಧ್ಯಕ್ಷ ಹಾಗೂ ಐದು ಬಾರಿ ಲೋಕಸಭಾ ಸದಸ್ಯರಾದ ಅಧೀರ್ ರಂಜನ್ ಚೌಧರಿ ಮತ್ತು ರಾಜ್ಯದ ಏಕೈಕ ಕಾಂಗ್ರೆಸ್ ಸಂಸದ ಇಶಾ ಖಾನ್ ಚೌಧರಿ ಭಾಗವಹಿಸಿದ್ದರು. ಸಿ-ವೋಟರ್ ಸಮೀಕ್ಷೆಯಲ್ಲಿ ಬಿಜೆಪಿ ಜನಪ್ರಿಯತೆ ಹೆಚ್ಚಾಗಿದ್ದು, ಟಿಎಂಸಿಯ ಬೆಂಬಲ ಕುಸಿಯುತ್ತಿರುವುದು ಕಾಂಗ್ರೆಸ್‌ಗೆ ಹೊಸ ಅವಕಾಶ ನೀಡಿದೆ. ಆದರೆ ರಾಜ್ಯದಲ್ಲಿ ಕಾಂಗ್ರೆಸ್ ಶಕ್ತಿ ಸೀಮಿತವಾಗಿರುವುದರಿಂದ, ಈ ಏಕಾಂಗಿ ಹೋರಾಟದ ಫಲಿತಾಂಶ ರಾಜಕೀಯವಾಗಿ ಕುತೂಹಲ ಮೂಡಿಸಿದೆ.
ಚುನಾವಣೆ
Bhabanipur Shock: 700 ಮತದಾರರ ಬೂತ್‌ನಲ್ಲಿ ಮಮತಾ ಬ್ಯಾನರ್ಜಿ ಪಡೆದದ್ದು ಕೇವಲ 28 ಮತ!
ಕೋಲ್ಕತ್ತಾ: ಪಶ್ಚಿಮ ಬಂಗಾಳ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಮುಖ್ಯಮಂತ್ರಿ Mamata Banerjee ಅವರಿಗೆ ಭಾರೀ ಹಿನ್ನಡೆಯಾಗಿದೆ. ಟಿಎಂಸಿಯ ಭದ್ರಕೋಟೆ ಎಂದೇ ಗುರುತಿಸಿಕೊಂಡಿದ್ದ ಭವಾನಿಪುರ ಕ್ಷೇತ್ರದಲ್ಲಿ ಬಿಜೆಪಿ ನಾಯಕ Suvendu Adhikari ಐತಿಹಾಸಿಕ ಜಯ ಸಾಧಿಸಿದ್ದು, ಮಮತಾ ಬ್ಯಾನರ್ಜಿ ಅವರ ಸ್ವಂತ ವಾರ್ಡ್‌ನಲ್ಲಿಯೇ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ.
ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಬೂತ್‌ವಾರು ಅಂಕಿ-ಅಂಶಗಳ ಪ್ರಕಾರ, ಭವಾನಿಪುರ ಕ್ಷೇತ್ರದ 267 ಬೂತ್‌ಗಳ ಪೈಕಿ 207 ಬೂತ್‌ಗಳಲ್ಲಿ ಸುವೇಂದು ಅಧಿಕಾರಿ ಮುನ್ನಡೆ ಪಡೆದಿದ್ದಾರೆ. ಮಮತಾ ಬ್ಯಾನರ್ಜಿ ಅವರ ಕಾಲಿಘಾಟ್ ನಿವಾಸವಿರುವ ವಾರ್ಡ್ ನಂಬರ್ 73ರಲ್ಲಿ ಸುವೇಂದು ಅಧಿಕಾರಿ 8,932 ಮತಗಳನ್ನು ಪಡೆದರೆ, ಮಮತಾ ಬ್ಯಾನರ್ಜಿ ಕೇವಲ 4,284 ಮತಗಳಿಗೆ ಸೀಮಿತರಾಗಿದ್ದಾರೆ.
ಚುನಾವಣೆಗೆ ಮುನ್ನ Amit Shah ಬಿಜೆಪಿ ಕಾರ್ಯಕರ್ತರಿಗೆ “ಮಮತಾ ಬ್ಯಾನರ್ಜಿಯನ್ನು ಅವರದೇ ಕೋಟೆಯಲ್ಲಿ ಸೋಲಿಸಿ” ಎಂದು ಕರೆ ನೀಡಿದ್ದರು. ಇದೀಗ ಸುವೇಂದು ಅಧಿಕಾರಿ ಆ ಸವಾಲನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ ಎಂದು ಬಿಜೆಪಿ ಪಾಳಯದಲ್ಲಿ ಸಂಭ್ರಮ ವ್ಯಕ್ತವಾಗಿದೆ.
ಸುವೇಂದು ಅಧಿಕಾರಿಗೆ ದಕ್ಷಿಣ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಮೊದಲಿನಿಂದ ರಾಜಕೀಯ ನೆಲೆ ಕಡಿಮೆ ಇತ್ತು. ಆದರೂ ಕ್ಷೇತ್ರದಲ್ಲಿ ಶೇಕಡಾ 63 ಮತಗಳನ್ನು ಪಡೆದು ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಮತಾ ಬ್ಯಾನರ್ಜಿ ಕೇವಲ ಶೇಕಡಾ 30 ಮತಗಳನ್ನು ಪಡೆಯಲು ಮಾತ್ರ ಸಾಧ್ಯವಾಗಿದೆ.
ಇನ್ನು ಹಲವು ಬೂತ್‌ಗಳಲ್ಲಿ ಮಮತಾ ಬ್ಯಾನರ್ಜಿ 50 ಮತಗಳ ಗಡಿ ದಾಟಲೂ ವಿಫಲರಾಗಿರುವುದು ಟಿಎಂಸಿ ಪಾಳಯಕ್ಕೆ ದೊಡ್ಡ ಆಘಾತವಾಗಿದೆ. 2021ರ ಉಪಚುನಾವಣೆಯಲ್ಲಿ ಏಳು ವಾರ್ಡ್‌ಗಳಲ್ಲೂ ಗೆದ್ದಿದ್ದ ದೀದಿ, ಈ ಬಾರಿ ತಮ್ಮ ಹಿಡಿತವನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಮಮತಾ ಬ್ಯಾನರ್ಜಿ 58,812 ಮತಗಳನ್ನು ಪಡೆದರೆ, ಸುವೇಂದು ಅಧಿಕಾರಿ 73,917 ಮತಗಳನ್ನು ಪಡೆದು ಟಿಎಂಸಿ ಕೋಟೆಯನ್ನು ಧೂಳೀಪಟ ಮಾಡಿದ್ದಾರೆ.
ಚುನಾವಣೆ
ಜಿಬಿಎ ಚುನಾವಣೆಗೆ ಕೌಂಟ್‌ಡೌನ್ ಶುರು! ಜೂನ್‌ನಲ್ಲಿ ಡೇಟ್ ಫಿಕ್ಸ್
ಬೆಂಗಳೂರು: ಬಹುನಿರೀಕ್ಷಿತ Greater Bengaluru Authority (GBA) ಚುನಾವಣೆಗೆ ಕೊನೆಗೂ ಮುಹೂರ್ತ ಕೂಡಿಬಂದಿದೆ. ಜೂನ್ 14ರಿಂದ 24ರೊಳಗೆ ಚುನಾವಣಾ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ G. A. Sangreshi ಸೂಚನೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಇಂದು ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ Maheshwar Rao ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಆದರೆ ಜಿಬಿಎ ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಭೆಗೆ ಗೈರಾಗಿದ್ದರು.
ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿ.ಎ ಸಂಗ್ರೇಶಿ, “ರಾಜ್ಯ ಚುನಾವಣಾ ಆಯೋಗ ಮತ್ತು ಜಿಬಿಎ ಸಮಾಲೋಚನೆ ನಡೆಸಿ ದಿನಾಂಕ ನಿಗದಿಪಡಿಸುವುದು ಕಾನೂನುಬದ್ಧ ಪ್ರಕ್ರಿಯೆ. ಚುನಾವಣೆ ನಡೆಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳು ಪೂರ್ಣಗೊಂಡಿವೆ. ದಿನಾಂಕ ನಿಗದಿ ಮಾತ್ರ ಬಾಕಿಯಿದೆ” ಎಂದು ತಿಳಿಸಿದರು.
ಜನಗಣತಿ, ಮನೆ ಸಮೀಕ್ಷೆ ಸೇರಿದಂತೆ ಹಲವು ಆಡಳಿತಾತ್ಮಕ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆ ಸಮಯ ಪರಿಶೀಲಿಸಿ ದಿನಾಂಕ ಘೋಷಿಸುವಂತೆ ಜಿಬಿಎಗೆ ಸೂಚಿಸಲಾಗಿದೆ. ಆದರೆ ಜೂನ್ 30ರೊಳಗೆ ಚುನಾವಣೆ ದಿನಾಂಕ ನಿಗದಿಪಡಿಸಲೇಬೇಕು ಎಂದು ಆಯೋಗ ಸ್ಪಷ್ಟಪಡಿಸಿದೆ. ಈ ಕುರಿತು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಬೇಕಿರುವುದಾಗಿ ಆಯುಕ್ತರು ಹೇಳಿದರು.
ಇನ್ನೂ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ ರಾವ್ ಮಾತನಾಡಿ, ವಾರ್ಡ್ ವಿಂಗಡಣೆ, ಮತದಾರರ ಪಟ್ಟಿ ಹಾಗೂ ಮೀಸಲಾತಿ ಪ್ರಕ್ರಿಯೆಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು. ಚುನಾವಣಾ ಕಾರ್ಯಕ್ಕಾಗಿ RO, AERO ಮತ್ತು BLOಗಳ ನೇಮಕಾತಿಗೂ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಚುನಾವಣೆ
‘ನೀವು ಸೋತಿಲ್ಲ, ಗೆದ್ದಿದ್ದೀರಿ’ – ಮಮತಾ ಭೇಟಿ ಬಳಿಕ ಅಖಿಲೇಶ್ ಯಾದವ್ ಹೇಳಿಕೆ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಹೀನಾಯ ಸೋಲು ಅನುಭವಿಸಿದ ಬೆನ್ನಲ್ಲೇ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ Akhilesh Yadav ಕೋಲ್ಕತ್ತಾಗೆ ಭೇಟಿ ನೀಡಿ Mamata Banerjee ಅವರಿಗೆ ಬೆಂಬಲ ಸೂಚಿಸಿದ್ದಾರೆ.
ಗುರುವಾರ ಕಾಲಿಘಾಟ್‌ನಲ್ಲಿರುವ ಮಮತಾ ಬ್ಯಾನರ್ಜಿ ನಿವಾಸದಲ್ಲಿ ನಡೆದ ಭೇಟಿಯ ವೇಳೆ ಅಖಿಲೇಶ್ ಯಾದವ್, “ನೀವು ಸೋತಿಲ್ಲ, ಗೆದ್ದಿದ್ದೀರಿ” ಎಂದು ಹೇಳಿ ಮಮತಾಗೆ ಸನ್ಮಾನ ಸಲ್ಲಿಸಿದ್ದಾರೆ ಎನ್ನಲಾಗಿದೆ. ಜೊತೆಗೆ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಈ ವೇಳೆ ಮಾತನಾಡಿದ ಅಖಿಲೇಶ್ ಯಾದವ್, ಬಂಗಾಳದಲ್ಲಿ ಚುನಾವಣೆಗಳನ್ನು ಉತ್ತರ ಪ್ರದೇಶ ಮಾದರಿಯಲ್ಲಿ ನಡೆಸಲಾಗಿದ್ದು, ಬೆದರಿಕೆ ಹಾಗೂ ಕುತಂತ್ರದ ರಾಜಕಾರಣ ಬಳಸಲಾಗಿದೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ, ಚುನಾವಣಾ ಆಯೋಗ ಹಾಗೂ ಭೂಗತ ಶಕ್ತಿಗಳ ಸಂಚುಗಳಿಂದ ಚುನಾವಣೆ ಪ್ರಭಾವಿತವಾಗಿದೆ ಎಂದು ಆರೋಪಿಸಿದರು.
ಅಲ್ಲದೇ, ಮಮತಾ ಬ್ಯಾನರ್ಜಿ ಮತ್ತು Abhishek Banerjee ಅವರ ಸುರಕ್ಷತೆ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದು ಟೀಕಿಸಿದರು. ದೇಶದ ಪ್ರಜಾಪ್ರಭುತ್ವ ಶಕ್ತಿಗಳು ಒಂದಾಗಬೇಕೆಂದು ಕರೆ ನೀಡಿದರು.
ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ 294 ಸ್ಥಾನಗಳ ಪೈಕಿ ಟಿಎಂಸಿ ಕೇವಲ 80 ಸ್ಥಾನಗಳಲ್ಲಿ ಜಯ ಸಾಧಿಸಿತು. ಬಿಜೆಪಿ 207 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸಲು ಸಜ್ಜಾಗಿದೆ.
ಟಿಎಂಸಿ ಸೋಲಿನ ಬಳಿಕ ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ನಾಯಕರು ಮಮತಾ ಬ್ಯಾನರ್ಜಿ ಬೆಂಬಲಕ್ಕೆ ನಿಂತಿರುವುದು ಇದೀಗ ದೇಶದ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
-
ಕ್ರೀಡೆ6 hours agoಹಾಂಗ್ ಕಾಂಗ್ನಲ್ಲಿ ನಡೆಯುವ ಏಷ್ಯನ್ ಚಾಂಪಿಯನ್ಶಿಪ್ಗೆ ಕರ್ನಾಟಕದ ಇಬ್ಬರು ಆಯ್ಕೆ
-
ದೇಶ9 hours ago59 ವರ್ಷಗಳ ಬಳಿಕ ತಮಿಳುನಾಡು ಸಚಿವ ಸಂಪುಟಕ್ಕೆ ಕಾಂಗ್ರೆಸ್ ಎಂಟ್ರಿ! ಇಂದು ವಿಜಯ್ ಕ್ಯಾಬಿನೆಟ್ ವಿಸ್ತರಣೆ
-
ದೇಶ9 hours agoಬಿಜೆಪಿಗಿಂತ ವೇಗವಾಗಿ ಬೆಳೆದ ‘Cockroach Janta Party’!
-
ದೇಶ3 hours ago“ನಾವು ಯಾರೂ ಸುರಕ್ಷಿತರಲ್ಲ”: ಮುಂದಿನ ಮಹಾಮಾರಿಯ ಬಗ್ಗೆ ಜಾಗತಿಕ ವರದಿ ಆತಂಕ
-
ದೇಶ4 hours agoCockroach Janata Party ಖಾತೆ ತಡೆ: ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆ
-
ಅಪರಾಧ8 hours agoLatest : ನಿಪ್ಪಾಣಿಯಲ್ಲಿ ಆಶ್ರಯ ಮನೆ ಹಂಚಿಕೆ ವೇಳೆ ಗಲಾಟೆ: ಕಣ್ಣೀರಿಟ್ಟ ಶಾಸಕಿ ಶಶಿಕಲಾ ಜೊಲ್ಲೆ
-
ದೇಶ7 hours agoಮೆಲೊಡಿ ಟ್ರೆಂಡ್ಗೆ ಎಂಟ್ರಿ ಕೊಟ್ಟ ಬಾಲಿವುಡ್ ಜೋಡಿ: ಸೋನಾಕ್ಷಿ ವಿಡಿಯೋ ಸದ್ದು
-
ದೇಶ7 hours ago‘ಒಂದು ರಾಷ್ಟ್ರ, ಒಂದು ಚುನಾವಣೆ’ ಜಾರಿಯಾದರೆ ₹7 ಲಕ್ಷ ಕೋಟಿ ಉಳಿತಾಯ: ಜೆಪಿಸಿ ಸಮಿತಿ
