ದೇಶ
ಹೊಸಕೋಟೆಗೆ ಬಜೆಟ್ ಬಲ ಸಿಗುತ್ತಾ? ಮೆಟ್ರೋ, ನೀರಾವರಿ, ಒಳಚರಂಡಿ ಯೋಜನೆಗಳ ನಿರೀಕ್ಷೆ
ಹೊಸಕೋಟೆ: ಬೆಂಗಳೂರು ನಗರಕ್ಕೆ ಹೊಂದಿಕೊಂಡು ವೇಗವಾಗಿ ವಿಸ್ತರಿಸುತ್ತಿರುವ ಹೊಸಕೋಟೆ ತಾಲೂಕು ಮುಂದಿನ ರಾಜ್ಯ ಬಜೆಟ್ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ. ನೀರಾವರಿ, ಕೃಷಿ, ರಸ್ತೆ, ಮೆಟ್ರೋ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಬೇಕು ಎಂದು ಜನತೆ ಆಗ್ರಹಿಸುತ್ತಿದ್ದಾರೆ.
2 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಹೊಸಕೋಟೆ, ವಾಣಿಜ್ಯ ಹಾಗೂ ವಸತಿ ವಿಸ್ತಾರದಲ್ಲಿ ಮಹತ್ವ ಪಡೆದುಕೊಂಡಿದೆ. ಶಾಸಕರು ಈಗಾಗಲೇ ಮೆಟ್ರೋ ವಿಸ್ತರಣೆಗೆ ಹೆಜ್ಜೆಯಿಟ್ಟಿದ್ದು, ಕೆ.ಆರ್.ಪುರಂ ಮೂಲಕ ಹೊಸಕೋಟೆಗೆ ಮೆಟ್ರೋ ಸಂಪರ್ಕ ನೀಡುವ ಬಗ್ಗೆ ಬಿಎಂಆರ್‌ಸಿಎಲ್ ಅಧ್ಯಯನ ಆರಂಭಿಸಿದೆ. ಬಜೆಟ್‌ನಲ್ಲಿ ಆರ್ಥಿಕ ಮಂಜೂರು ಸಿಗುತ್ತದೆಯೇ ಎಂಬುದು ಕುತೂಹಲ.
ಗ್ರಾಮಾಂತರ ಪೊಲೀಸ್ ಠಾಣೆ ಬೇಡಿಕೆ
ಪ್ರಸ್ತುತ ಹೊಸಕೋಟೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 31 ವಾರ್ಡ್‌ಗಳು ಹಾಗೂ 15 ಸಾವಿರಕ್ಕೂ ಹೆಚ್ಚು ಹಳ್ಳಿಗಳ ಜನಸಂಖ್ಯೆ ಒಳಗೊಂಡಿದೆ. ಪ್ರತ್ಯೇಕ ಗ್ರಾಮಾಂತರ ಪೊಲೀಸ್ ಠಾಣೆ ತೆರೆಯುವಂತೆ ಶಾಸಕರು ಸದನದಲ್ಲಿ ಮನವಿ ಮಾಡಿದ್ದು, ಗೃಹ ಸಚಿವರು ಬಜೆಟ್‌ನಲ್ಲಿ ಸ್ಪಂದನೆ ಸಿಗುವ ಭರವಸೆ ನೀಡಿದ್ದಾರೆ.
ನೀರಾವರಿ ಮತ್ತು ಒಳಚರಂಡಿಗೆ ಒತ್ತು
ವಂಗಯ್ಯನ ಕೆರೆ ಏತ ನೀರಾವರಿ ಯೋಜನೆ ಅನುಷ್ಠಾನಗೊಂಡಿದ್ದರೂ ಸೂಲಿಬೆಲೆ ಹಾಗೂ ನಂದಗುಡಿ ಹೋಬಳಿಗಳ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಹೆಚ್ಚಿನ ಅನುದಾನ ಅಗತ್ಯವಿದೆ. ಜೊತೆಗೆ ₹100 ಕೋಟಿ ವೆಚ್ಚದ ಶಾಶ್ವತ ಒಳಚರಂಡಿ ಕಾಮಗಾರಿ ಮಂಜೂರಾಗಬೇಕು ಎಂಬುದು ನಾಗರಿಕರ ಬೇಡಿಕೆ.
ದೊಡ್ಡ ಅಮಾನಿಕೆರೆ ಪ್ರವಾಸಿ ತಾಣವಾಗುತ್ತದೆಯೇ?
ನಗರದ ದೊಡ್ಡ ಹಾಗೂ ಚಿಕ್ಕ ಅಮಾನಿಕೆರೆಗಳಲ್ಲಿ 200ಕ್ಕೂ ಹೆಚ್ಚು ಜೀವ ವೈವಿಧ್ಯ ಪ್ರಭೇದಗಳಿವೆ. ಇದನ್ನು ಪ್ರವಾಸಿ ಹಾಗೂ ಜೀವ ವೈವಿಧ್ಯ ತಾಣವಾಗಿ ಅಭಿವೃದ್ಧಿಪಡಿಸಬೇಕು ಎಂಬ ಅಭಿಲಾಷೆ ವ್ಯಕ್ತವಾಗಿದೆ.
🔹 ಬಜೆಟ್ ನಿರೀಕ್ಷೆಯ ಪ್ರಮುಖ ಅಂಶಗಳು:
- ಚೆನ್ನ ಬೈರೇಗೌಡ ಕ್ರೀಡಾಂಗಣ ಮೆಲ್ದರ್ಜೆ
- ಶಾಶ್ವತ ಒಳಚರಂಡಿ ಕಾಮಗಾರಿ
- ನೂತನ ನ್ಯಾಯಾಲಯ ಸಂಕೀರ್ಣ
- ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಮತ್ತು ಡಿಪೊ
- ಸರ್ಕಾರಿ ಮಹಿಳಾ ಪದವಿ ಕಾಲೇಜು
ಅಪರಾಧ
KANPUR ಲ್ಯಾಂಬೋರ್ಗಿನಿ ಅಪಘಾತ: ಕೆಕೆ ಮಿಶ್ರಾ ಪುತ್ರ ಶಿವಂ ಬಂಧನ
ಲಕ್ನೋ: ಕಾನ್ಪುರದಲ್ಲಿ ಇತ್ತೀಚೆಗೆ ನಡೆದ ಲ್ಯಾಂಬೋರ್ಗಿನಿ (Lamborghini Revuelto) ಕಾರು ಅಪಘಾತ ಪ್ರಕರಣದಲ್ಲಿ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನದ ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಕೋರ್ಟ್ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕಾನ್ಪುರದ ವಿಐಪಿ ರಸ್ತೆಯಲ್ಲಿ ಶಿವಂ ಮಿಶ್ರಾ ಚಲಾಯಿಸುತ್ತಿದ್ದ ಲ್ಯಾಂಬೋರ್ಗಿನಿ ರೆವೆಲ್ಟೊ ಕಾರು ಪಾದಚಾರಿಗಳು ಹಾಗೂ ಹಲವು ವಾಹನಗಳಿಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದರು. ಪ್ರತ್ಯಕ್ಷದರ್ಶಿಗಳ ಪ್ರಕಾರ, ಶಿವಂ ಮಿಶ್ರಾ ಕುಡಿದ ಮತ್ತಿನಲ್ಲಿ ಅತಿ ವೇಗದಲ್ಲಿ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.
ವೇಗವಾಗಿ ಬಂದ ಕಾರು ಮೊದಲು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು, ಬಳಿಕ ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಗುದ್ದಿತ್ತು. ಬೈಕ್ ಕಾರಿನ ಕೆಳಗೆ ಸಿಲುಕಿ ಕೆಲ ಅಂತರ ಎಳೆದುಕೊಂಡು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿತ್ತು. ಗಾಯಗೊಂಡವರಲ್ಲಿ ತೌಫಿಕ್ ಅಹ್ಮದ್ ಅವರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಇತರರಿಗೆ ಮೂಳೆ ಮುರಿತ ಉಂಟಾಗಿದೆ.
ಪ್ರಾರಂಭದಲ್ಲಿ ಕುಟುಂಬದ ವಕೀಲರು ಡ್ರೈವರ್ ಮೋಹನ್ ಕಾರು ಚಲಾಯಿಸುತ್ತಿದ್ದರೆಂದು ಹೇಳಿದ್ದರೂ, ಸಿಸಿಟಿವಿ ದೃಶ್ಯಾವಳಿ ಚಾಲಕನ ಸೀಟಿನಲ್ಲಿ ಶಿವಂ ಮಿಶ್ರಾ ಇದ್ದುದನ್ನು ಸ್ಪಷ್ಟಪಡಿಸಿದೆ. ಇ-ರಿಕ್ಷಾ ಚಾಲಕ ಮೊಹಮ್ಮದ್ ತೌಫೀಕ್ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ದೇಶ
LATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದರೂ, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿವೆ.
“ನಾನು ದೆಹಲಿಗೆ ಬಂದಿರೋದೇ ರಾಜಕಾರಣ ಮಾಡಲು. ಏನೂ ಮಾತನಾಡದೆ ಸುಮ್ಮನೆ ಹೋಗಲು ಸಾಧ್ಯವೇ?” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರೂಪೇಶ್ ಬಘೇಲ್ ಜೊತೆಗೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ ಅವರು, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳ ಚುನಾವಣಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆದಿದೆ ಎಂದರು. “ಎಲ್ಲಾ ವಿಚಾರಗಳನ್ನು ಮಾತನಾಡಲೇಬೇಕು. ಕಾಲವೇ ಎಲ್ಲಕ್ಕೂ ಉತ್ತರ ಕೊಡಲಿದೆ” ಎಂಬ ಅವರ ಮಾತುಗಳಿಗೆ ಹಲವು ಅರ್ಥಗಳು ನೀಡಲಾಗುತ್ತಿದೆ.
ಇದೇ ವೇಳೆ ಬಜೆಟ್ ಪೂರ್ವಸಿದ್ಧತಾ ಸಭೆಗೆ ಗೈರಾಗಿದ್ದ ಡಿಕೆಶಿ ದೆಹಲಿಗೆ ತೆರಳಿರುವುದು ಗಮನಾರ್ಹ. ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಂಡೇ ಅವರು ತೆರಳಿದ್ದಾರೆ ಎನ್ನಲಾಗಿದ್ದರೂ, ದೆಹಲಿಯ ರಾಜಕೀಯ ಚಟುವಟಿಕೆಗಳು ಕುತೂಹಲ ಹುಟ್ಟಿಸಿವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರಾ? ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಿಲ್ಲ.
ರಾಜ್ಯ ನಾಯಕತ್ವ ವಿಚಾರದಲ್ಲಿ ರಾಹುಲ್ ಗಾಂಧಿಯ ನಿರ್ಧಾರವೇ ಅಂತಿಮ ಎಂಬುದು ಕಾಂಗ್ರೆಸ್ ವಲಯದ ನಿಲುವು. ಇದೀಗ ಡಿಕೆಶಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಗಳೂ ಚರ್ಚೆಯಾಗುತ್ತಿವೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ತಿರುವು ಪಡೆಯುವ ಸೂಚನೆ ನೀಡಿದೆ.
ಅಪರಾಧ
BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ
ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.
ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.
ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.
-
ಬೆಂಗಳೂರು3 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ21 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ20 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ21 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ19 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ದೇಶ18 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ಅಪರಾಧ20 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
-
ದೇಶ21 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
