Connect with us

ದೇಶ

“ಯುದ್ದ ಬೇಡ…ಆದರೂ ರೆಡಿ” – ಇರಾನ್‌ ಖಡಕ್ ಸಂದೇಶ

Published

on

ವಾಷಿಂಗ್ಟನ್: ಅಮೆರಿಕಾ ಮತ್ತು ಇರಾನ್‌ ನಡುವೆ ಉದ್ವಿಗ್ನತೆ ಮತ್ತಷ್ಟು ಉಲ್ಬಣಗೊಂಡಿದೆ. ಜಿನಿವಾದಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆಗಳು ವಿಫಲವಾದ ಹಿನ್ನೆಲೆಯಲ್ಲಿ ಯುದ್ಧದ ಆತಂಕ ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿದೆ. ಈ ನಡುವೆ Donald Trump ನೇತೃತ್ವದ ಅಮೆರಿಕಾ ಆಡಳಿತ, ಪರಮಾಣು ಒಪ್ಪಂದ ಮಾಡಿಕೊಳ್ಳುವುದು ಇರಾನ್‌ಗೆ ಬುದ್ದಿವಂತಿಕೆಯ ನಡೆ ಎಂದು ಎಚ್ಚರಿಸಿದೆ.

ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ Karoline Leavitt ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿ, “ಟ್ರಂಪ್ ಆಡಳಿತದೊಂದಿಗೆ ಪರಮಾಣು ಒಪ್ಪಂದ ಮಾಡಿಕೊಳ್ಳುವುದು ಇರಾನ್‌ನ ಹಿತದಲ್ಲಿದೆ” ಎಂದರು. ಈ ಹೇಳಿಕೆ, ಅಮೆರಿಕಾ ಉಪಾಧ್ಯಕ್ಷ J. D. Vance ಇರಾನ್‌ ಟ್ರಂಪ್‌ ಹಾಕಿರುವ ಷರತ್ತುಗಳನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲ ಎಂದು ಹೇಳಿದ ಬೆನ್ನಲ್ಲೇ ಬಂದಿದೆ.

ಇದಕ್ಕೂ ನಡುವೆ ಅಮೆರಿಕಾ ಮಧ್ಯಪ್ರಾಚ್ಯದಲ್ಲಿ ತನ್ನ ಯುದ್ಧ ಸನ್ನಾಹವನ್ನು ಹೆಚ್ಚಿಸಿದ್ದು, 13 ಯುದ್ಧನೌಕೆಗಳು, ಏರ್‌ಕ್ರಾಫ್ಟ್‌ ಕಾರಿಯರ್ ಹಾಗೂ 50ಕ್ಕೂ ಅಧಿಕ ಫೈಟರ್ ಜೆಟ್‌ಗಳನ್ನು ನಿಯೋಜಿಸಿದೆ ಎಂಬ ವರದಿಗಳಿವೆ.

ಅಮೆರಿಕಾದ ಮಿತ್ರ ದೇಶ Israel ಕೂಡ ಯುದ್ಧಕ್ಕೆ ಸರ್ವಸನ್ನದ್ದವಾಗಿದ್ದು, ಪ್ರಧಾನಿ Benjamin Netanyahu ರಕ್ಷಣಾ ಪಡೆಗಳಿಗೆ ಎಚ್ಚರಿಕೆಯಿಂದ ಇರಲು ಸೂಚಿಸಿದ್ದಾರೆ ಎಂದು ವರದಿಯಾಗಿದೆ.

ಇದಕ್ಕೆ ಪ್ರತಿಯಾಗಿ ಇರಾನ್‌ನ ರಾಷ್ಟ್ರೀಯ ಭದ್ರತಾ ಮಂಡಳಿಯ ಮುಖ್ಯಸ್ಥ Ali Larijani “ನಾವು ಯುದ್ಧ ಬಯಸುವುದಿಲ್ಲ. ಆದರೆ ಯುದ್ಧ ಬಂದರೆ ತೀಕ್ಷ್ಣ ಪ್ರತಿಕ್ರಿಯೆ ನೀಡುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಜಾಗತಿಕ ಬಲಿಷ್ಠ ರಾಷ್ಟ್ರಗಳು ಈ ಬಿಕ್ಕಟ್ಟಿಗೆ ಕೈ ಹಾಕುತ್ತಿರುವ ಹಿನ್ನೆಲೆ, ಗಲ್ಫ್ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ದೇಶ

K. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ

Published

on

By

ಬೆಂಗಳೂರು: Bengaluru City University (ಬಿಸಿಯು) 5ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಕುಲಾಧಿಪತಿಗಳಾದ Thawar Chand Gehlot ಚಾಲನೆ ನೀಡಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ Dr. Binay Kumar Das, Defence Research and Development Organisation (ಡಿಆರ್‌ಡಿಒ) ಮಹಾ ನಿರ್ದೇಶಕರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಸಿಸ್ಟಮ್ಸ್) ಭಾಗವಹಿಸಿದ್ದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 6 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಂಗೀತ ನಿರ್ದೇಶಕ Arjun Janya, ಕ್ರಿಕೆಟರ್ Venkatesh Prasad, ಶಿಕ್ಷಣ ತಜ್ಞ T. K. Narayanappa, ಎಂಎಲ್ಸಿ K. Govindaraj, ಶಿಕ್ಷಣ ಕ್ಷೇತ್ರದ Mohan Alva ಹಾಗೂ ಕೈಗಾರಿಕೋದ್ಯಮಿ Bava Mohammed Farooq ಅವರಿಗೆ ರಾಜ್ಯಪಾಲರು ಗೌರವಿಸಿದರು.

ಉಪ ಚುನಾವಣೆ ಪ್ರಚಾರದ ಹಿನ್ನೆಲೆ, ಉನ್ನತ ಶಿಕ್ಷಣ ಸಚಿವ Dr. C. N. Ashwath Narayan ಗೈರಾಗಿದ್ದರು.

ಘಟಿಕೋತ್ಸವದಲ್ಲಿ 73 ಪ್ರಥಮ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಪ್ರಮಾಣಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಒಟ್ಟು 37,370 ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರದಾನವಾಗಿದ್ದು, 23 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ ನೀಡಲಾಯಿತು.

ವಿಶೇಷವಾಗಿ, ಸ್ನೇಹಾ ಟಿ (ಎಂಎಸ್‌ಸಿ ರಸಾಯನಶಾಸ್ತ್ರ) 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದು, ಅಭಿಷೇಕ್ ಶ್ರೀರಾಮ್ (ಬಿಕಾಂ) 3 ಚಿನ್ನದ ಪದಕ, ದಿವ್ಯಶ್ರೀ ಎಸ್ (ಬಿಬಿಎ) 3 ಚಿನ್ನದ ಪದಕ ಪಡೆದು ಗಮನಸೆಳೆದಿದ್ದಾರೆ.

ಗೌರವ ಡಾಕ್ಟರೇಟ್ ಪಡೆದ ಬಳಿಕ Arjun Janya ಅವರು ಮಾತನಾಡಿ, ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದರು.

Continue Reading

ಚುನಾವಣೆ

TN 2026 ಟೀಸರ್‌ಗೆ ರಾಜಕೀಯ ಕಿಚ್ಚು! ವಿಜಯ್ ಟಾರ್ಗೆಟ್ ಆರೋಪ – ತಮಿಳುನಾಡಿನಲ್ಲಿ ಬಿಗುವಿನ ವಾತಾವರಣ

Published

on

By

ಚೆನ್ನೈ: ಮುಂದಿನ ವಾರ ಬಿಡುಗಡೆಯಾಗಲಿರುವ ತಮಿಳು ಸಿನಿಮಾ TN 2026 – ತಂಗೈ ನಚ್ಚಥಿರಂ ಟೀಸರ್ ಏಪ್ರಿಲ್ 2ರಂದು ಬಿಡುಗಡೆಯಾದ ಬಳಿಕ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಟೀಸರ್‌ನಲ್ಲಿ ನಟ Nataraj (Natti) ಅಭಿನಯಿಸಿರುವ “ಗೋಲ್ಡನ್ ಸ್ಟಾರ್ ಗುಲ್ಕಂದ್ ಕುಮಾರ್” ಎಂಬ ಪಾತ್ರ ರಾಜಕೀಯಕ್ಕೆ ಪ್ರವೇಶಿಸುವುದನ್ನು ತೋರಿಸಲಾಗಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗಿದೆ.

ಟೀಸರ್ ವೈರಲ್ ಆದ ತಕ್ಷಣ, Tamilaga Vettri Kazhagam (ಟಿವಿಕೆ) ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ನಟ Vijay ಅವರನ್ನು ಗುರಿಯಾಗಿಸಿಕೊಂಡು ಟೀಸರ್ ರೂಪಿಸಲಾಗಿದೆ ಎಂಬುದು ಅವರ ಆರೋಪವಾಗಿದೆ.

ಟೀಸರ್‌ನಲ್ಲಿ ಗುಲ್ಕಂದ್ ಕುಮಾರ್ ಪಾತ್ರವು ಬಿಳಿ ಶರ್ಟ್ ಮತ್ತು ಖಾಕಿ ಪ್ಯಾಂಟ್ ಧರಿಸಿ, ವಿಜಯ್ ಅವರಂತೆಯೇ ‘ಸಾಲ್ಟ್ ಅಂಡ್ ಪೆಪ್ಪರ್’ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಜೊತೆಗೆ ಅವರ ನಡಿಗೆ ಮತ್ತು ಜನರತ್ತ ಕೈ ಬೀಸುವ ಶೈಲಿಯನ್ನು ಅನುಕರಿಸಿರುವುದು ವಿವಾದಕ್ಕೆ ಪ್ರಮುಖ ಕಾರಣವಾಗಿದೆ. ಅಲ್ಲದೆ, ನಟ Redin Kingsley ಅವರ ಪಾತ್ರವೊಂದು ವೇದಿಕೆಯಲ್ಲಿ “ಹೇ ಮೂವಿ-ಬಾಯ್…” ಎಂದು ಗೇಲಿ ಮಾಡುವ ಸಂಭಾಷಣೆ ಕೂಡ ಟೀಕೆಗೆ ಗುರಿಯಾಗಿದೆ.

ಟೀಸರ್ ಕೊನೆಯಲ್ಲಿ ಕೇಳಿಬರುವ “ಓಂ ಶಕ್ತಿ ಪರಾಶಕ್ತಿ” ಘೋಷಣೆ ಕೂಡ ವಿಜಯ್ ಇತ್ತೀಚೆಗೆ ರಾಜಕೀಯ ವೇದಿಕೆಯಲ್ಲಿ ಬಳಸಿದ ನುಡಿಗಟ್ಟನ್ನು ಹೋಲುತ್ತದೆ ಎನ್ನಲಾಗುತ್ತಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಟಿವಿಕೆ ನಾಯಕ Aadhav Arjun, “ಇದು ವಿಜಯ್ ವರ್ಚಸ್ಸಿಗೆ ಧಕ್ಕೆ ತರಲು Dravida Munnetra Kazhagam (ಡಿಎಂಕೆ) ಮತ್ತು ಬಿಜೆಪಿ ಜಂಟಿಯಾಗಿ ನಡೆಸಿದ ಪಿತೂರಿ” ಎಂದು ಆರೋಪಿಸಿದ್ದಾರೆ. ಜನರು ಇಂತಹ ಚಿತ್ರಗಳನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದೂ ಅವರು ಕಿಡಿಕಾರಿದ್ದಾರೆ.

Umapathy Ramaiah ನಿರ್ದೇಶನದ ಈ ಚಿತ್ರದಲ್ಲಿ Thambi Ramaiah, M. S. Bhaskar, Ilavarasu, Yashika Aannand ಸೇರಿದಂತೆ ಹಲವು ನಟರು ಅಭಿನಯಿಸಿದ್ದಾರೆ. ಏಪ್ರಿಲ್ 10ರಂದು ಬಿಡುಗಡೆಯಾಗಲಿರುವ ಈ ಚಿತ್ರ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡುತ್ತದೆಯೇ ಎಂಬ ಕುತೂಹಲ ಹೆಚ್ಚಾಗಿದೆ.

Continue Reading

ದೇಶ

ಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?

Published

on

ಬೆಂಗಳೂರು: ಹಳೆಯ ವಾಹನಗಳಿಗೆ ಹೈ ಸಿಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯವಲ್ಲ ಎಂಬ ಸುದ್ದಿಗಳು ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದರೂ, ಇದಕ್ಕೆ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಇಂತಹ ಸುದ್ದಿಗಳು ಸುಳ್ಳು ಎಂದು ಹೇಳಿ ಸಾರ್ವಜನಿಕರು ಯಾವುದೇ ವದಂತಿಗಳನ್ನು ನಂಬಬಾರದು ಎಂದು ಮನವಿ ಮಾಡಿದೆ.

ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 50ರಡಿ, ಕೇಂದ್ರ ಸರ್ಕಾರವು 2018 ಡಿಸೆಂಬರ್ 4ರಂದು ಅಧಿಸೂಚನೆ ಹೊರಡಿಸಿದ್ದು, 2019 ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಅನುಸರಿಸಿ, ಕರ್ನಾಟಕ ಸರ್ಕಾರವು 2023 ಆಗಸ್ಟ್ 17ರಂದು ಅಧಿಸೂಚನೆ ಹೊರಡಿಸಿ ರಾಜ್ಯದಲ್ಲಿಯೂ ಇದೇ ನಿಯಮವನ್ನು ಜಾರಿಗೆ ತಂದಿದೆ.

ಇದಕ್ಕೂ ನಡುವೆ, HSRP ಅಳವಡಿಕೆ ಸಂಬಂಧ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸರ್ಕಾರವು ಯಾವುದೇ ತರಾತುರಿ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿದೆ. ಆದರೆ, ಈ ಆದೇಶವು HSRP ಕಡ್ಡಾಯ ಆದೇಶವನ್ನು ರದ್ದುಪಡಿಸುವುದಿಲ್ಲ ಎಂಬುದು ಮುಖ್ಯ.

ಸಾರಿಗೆ ಇಲಾಖೆಯ ಪ್ರಕಾರ, ಹೈಕೋರ್ಟ್ ಆದೇಶದಿಂದ ಹೊಸ ಕ್ರಮಗಳನ್ನು ಕೈಗೊಳ್ಳಲು ಅಡ್ಡಿಯಿದ್ದರೂ, HSRP ಅಳವಡಿಕೆ ಕುರಿತ ಅಧಿಸೂಚನೆ ಇನ್ನೂ ಜಾರಿಯಲ್ಲಿಯೇ ಇದೆ. ಆದ್ದರಿಂದ, ಸಾರ್ವಜನಿಕರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ವದಂತಿಗಳಿಂದ ಗೊಂದಲಕ್ಕೀಡಾಗಬಾರದು ಎಂದು ಸಾರಿಗೆ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

Continue Reading

Trending